ಹ್ಯುಂಡೈ ವೆನ್ಯೂ ಪ್ರತಿಸ್ಪರ್ಧಿ ನಿಸ್ಸಾನ್ ಮ್ಯಾಗ್ನೆಟ್ ಕಾರು ಅನಾವರಣ
ಜಪಾನ್ ಆಟೋ ದಿಗ್ಗಜ ಕಂಪನಿ ನಿಸ್ಸಾನ್ ಮೋಟಾರ್ಸ್ ತನ್ನ ಬಹುನೀರಿಕ್ಷಿತ ಮ್ಯಾಗ್ನೆಟ್ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯನ್ನು ಭಾರತದಲ್ಲಿ ಅನಾವರಣಗೊಳಿಸಿದ್ದು, ಹೊಸ ಕಾರು ಕಂಪ್ಯಾಕ್ಟ್ ಎಸ್‌ಯುವಿ ಮಾರಾಟದಲ್ಲಿ ಭರ್ಜರಿ ಪೈಪೋಟಿ ನೀಡುವ ತವಕದಲ್ಲಿದೆ.

ನಿಸ್ಸಾನ್ ಗ್ಲೊಬಲ್ ಕಂಪನಿಯು ಭಾರತ ಸೇರಿದಂತೆ ಅಂತರ್‌ರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ಹೊಸದಾಗಿ 12 ಹೊಸ ಕಾರುಗಳನ್ನು ಬಿಡುಗಡೆಗೆ ಸಿದ್ದವಾಗಿದ್ದು, ಕಂಪನಿಯು ಬಿಡುಗಡೆ ಮಾಡಲಿರುವ ಹೊಸ ಕಾರುಗಳಲ್ಲಿ ಸಾಮಾನ್ಯ ಮಾದರಿಗಳ ಜೊತೆಗೆ ಎಲೆಕ್ಟ್ರಿಕ್ ಕಾರು ಆವೃತ್ತಿಗಳು ಸಹ ಸೇರಿವೆ. ಎಲೆಕ್ಟ್ರಿಕ್ ಕಾರು ಮಾದರಿಗಳು ಭಾರತದಲ್ಲಿ ಸದ್ಯಕ್ಕೆ ಬಿಡುಗಡೆವಾಗುದಿಲ್ಲವಾದರೂ ಮ್ಯಾಗ್ನೆಟ್ ಕಾನ್ಸೆಪ್ಟ್ ಕಾರು ಮಾತ್ರ 2020ರ ಕೊನೆಯಲ್ಲಿ ರಸ್ತೆಗಿಳಿಯುವುದು ಬಹುತೇಕ ಖಚಿತವಾಗಿದೆ.

ಹೊಸ ಕಂಪ್ಯಾಕ್ಟ್ ಎಸ್‌ಯುವಿ ಕಾರಿನ ಬಿಡುಗಡೆ ಕುರಿತಾಗಿ ಈಗಾಗಲೇ ನಿಸ್ಸಾನ್ ಇಂಡಿಯಾ ಕಂಪನಿಯು ವಿವಿಧ ಮಾದರಿಯ ರೋಡ್ ಟೆಸ್ಟಿಂಗ್ ಪ್ರಕ್ರಿಯೆಗಳನ್ನು ಕೈಗೊಂಡಿದ್ದು, ಅನಾವರಣಗೊಂಡಿರುವ ಕಾನ್ಸೆಪ್ಟ್ ಮಾದರಿಯು ಗ್ರಾಹಕರ ಆಯ್ಕೆಯಲ್ಲಿ ಹೊಸ ಸಂಚಲನ ಮೂಡಿಸಲಿದೆ.

ಸದ್ಯಕ್ಕೆ ಹೊಸ ಕಾರನ್ನು EM2 ಕೋಡ್ ನೆಮ್ ಆಧಾರದ ಮೇಲೆ ರೋಡ್ ಟೆಸ್ಟಿಂಗ್ ಮಾಡಲಾಗುತ್ತಿದ್ದು, ಹೊಸ ಕಾರಿನ ಅಧಿಕೃತ ಹೆಸರನ್ನು 'ಮ್ಯಾಗ್ನೆಟ್' ಎಂದು ಕರೆಯಲಾಗಿದೆ. ಹೆಸರಿಗೆ ತಕ್ಕಂತೆ ಬಲಿಷ್ಠ ಹೊರ ನೋಟ ಹೊಂದಿರುವ ಹೊಸ ಕಾರು ಕಟಿಂಗ್ಎಡ್ಜ್ ವಿನ್ಯಾಸ ಹೊಂದಿದೆ.

ಜೊತೆಗೆ ನಿಸ್ಸಾನ್ ಕಂಪನಿಯು ತನ್ನ ಸಾಂಪ್ರದಾಯಿಕ ಲೋಗೊದಲ್ಲೂ ಬದಲಾವಣೆ ತಂದಿದ್ದು, ಹೊಸ ಲೊಗೊ ಮಾದರಿಯನ್ನು ಮೊದಲ ಬಾರಿಗೆ ಮ್ಯಾಗ್ನೆಟ್ ಕಂಪ್ಯಾಕ್ಟ್ ಎಸ್‌ಯುವಿ ಮೂಲಕ ಆಟೋ ಉದ್ಯಮದಲ್ಲಿ ಮತ್ತಷ್ಟು ಆಕರ್ಷಣೆ ಕಾರಣವಾಗಲಿದೆ.

ಇನ್ನು ಹೊಸ ಕಾರಿನ ಅನಾವರಣ ಹೊರತುಪಡಿಸಿ ಕಾರಿನ ಕುರಿತಾದ ಯಾವುದೇ ತಾಂತ್ರಿಕ ಮಾಹಿತಿಗಳನ್ನು ಬಿಟ್ಟುಕೊಡದ ನಿಸ್ಸಾನ್ ಕಂಪನಿಯು ಶೀಘ್ರದಲ್ಲೇ ಉತ್ಪಾದನಾ ಆವೃತ್ತಿಯೊಂದಿಗೆ ಮತ್ತಷ್ಟು ಮಾಹಿತಿ ಹಂಚಿಕೊಳ್ಳುವ ಸಾಧ್ಯತೆಗಳಿವೆ.

ಮಾಹಿತಿಗಳ ಪ್ರಕಾರ, ಹೊಸ ಕಾರು ಕಿಕ್ಸ್ ಎಸ್‌ಯುವಿ ಮಾದರಿಗಿಂತಲೂ ಕೆಳದರ್ಜೆಯ ಕಾರು ಮಾದರಿಯಾಗಿ ಮಾರಾಟಗೊಳ್ಳಲಿರುವ ಹೊಸ ಮ್ಯಾಗ್ನೆಟ್ ಕಾರು ಪೆಟ್ರೋಲ್ ಎಂಜಿನ್‌ನಲ್ಲಿ ಮಾತ್ರವೇ ಖರೀದಿಗೆ ಲಭ್ಯವಿರಲಿದೆ.

ಬಿಎಸ್-6 ನಿಯಮ ಜಾರಿ ನಂತರ ಡೀಸೆಲ್ ಕಾರುಗಳ ಮಾರಾಟದಲ್ಲಿ ಭಾರೀ ಬದಲಾವಣೆ ಮಾಡಲಾಗಿದ್ದು, ಹೈ ಎಂಡ್ ಕಾರುಗಳಲ್ಲಿ ಹೊರತುಪಡಿಸಿ ಸಣ್ಣ ಮತ್ತು ಮಧ್ಯಮ ಗಾತ್ರದ ಕಾರುಗಳಲ್ಲಿ ಕೇವಲ ಪೆಟ್ರೋಲ್ ಎಂಜಿನ್ ಆಯ್ಕೆಯನ್ನು ಮಾತ್ರವೇ ನೀಡಲಾಗುತ್ತಿದೆ.
MOST READ: ಪ್ರತಿ ಚಾರ್ಜ್‌ಗೆ 480 ಕಿ.ಮೀ ಮೈಲೇಜ್ ನೀಡುವ ಎಲೆಕ್ಟ್ರಿಕ್ ಎಸ್‌ಯುವಿ ಬಿಡುಗಡೆ ಮಾಡಲಿದೆ ನಿಸ್ಸಾನ್

ಇದಕ್ಕಾಗಿ ಸಹಭಾಗಿತ್ವದ ಯೋಜನೆ ಅಡಿ ರೆನಾಲ್ಟ್ ಜೊತೆಗೂಡಿರುವ ನಿಸ್ಸಾನ್ ಕಂಪನಿಯು ಮತ್ತಷ್ಟು ಹೊಸ ಪೆಟ್ರೋಲ್ ಎಂಜಿನ್‌ಗಳ ಅಭಿವೃದ್ದಿಗೆ ಚಾಲನೆ ನೀಡಿದ್ದು, ಹೊಸದಾಗಿ ನಿರ್ಮಾಣ ಮಾಡಲಾಗುತ್ತಿರುವ 1.0-ಲೀಟರ್ ಟರ್ಬೋ ಪೆಟ್ರೋಲ್ ಎಂಜಿನ್ ಅನ್ನು ಎರಡೂ ಕಂಪನಿಗಳು ಬಳಕೆ ಮಾಡಿಕೊಳ್ಳಲಿವೆ.

ಹೊಸದಾಗಿ ಅಭಿವೃದ್ದಿಗೊಳಿಸಲಾಗುತ್ತಿರವ 1.0-ಲೀಟರ್ ಟರ್ಬೋ ಪೆಟ್ರೋಲ್ ಎಂಜಿನ್ ಮಾದರಿಯು ನಿಸ್ಸಾನ್ ಮ್ಯಾಗ್ನೆಟ್ ಜೊತೆ ರೆನಾಲ್ಟ್ ಟ್ರೈಬರ್ ಕಾರಿನಲ್ಲೂ ಬಳಕೆಯಾಗಲಿದ್ದು, ಹೊಸ ಕಾರು ಪ್ರತಿಸ್ಪರ್ಧಿ ಕಾರುಗಳಿಂತಲೂ ಆಕರ್ಷಕ ಬೆಲೆಯೊಂದಿಗೆ ಬಿಡುಗಡೆಯಾಗಲಿದೆ.
MOST READ: ರೂ.5 ಲಕ್ಷಕ್ಕಿಂತ ಕಡಿಮೆ ಬೆಲೆಯ ಜನಪ್ರಿಯ ಕಾರುಗಳಿವು

ಹೊಸ ಕಾರು ಮಾರುತಿ ಬ್ರೆಝಾ, ಹ್ಯುಂಡೈ ವೆನ್ಯೂ, ಟಾಟಾ ನೆಕ್ಸಾನ್, ಮಹೀಂದ್ರಾ ಎಕ್ಸ್‌ಯುವಿ 300 ಮಾದರಿಗಳಿಗೆ ಭರ್ಜರಿ ಪೈಪೋಟಿ ನೀಡಲಿದ್ದು, ವರ್ಷಾಂತ್ಯದಲ್ಲಿ ಬಿಡುಗಡೆಯಾಗಲಿರುವ ಹೊಸ ಮ್ಯಾಗ್ನೆಟ್ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ. 6.50 ಲಕ್ಷದಿಂದ ರೂ. 9 ಲಕ್ಷ ಬೆಲೆ ಹೊಂದುವ ಸಾಧ್ಯತೆಗಳಿವೆ.


Click it and Unblock the Notifications