ಮುಂಬರುವ ಅಗಸ್ಟ್ ಅಂತ್ಯಕ್ಕೆ ಬಿಡುಗಡೆಯಾಗಲಿದೆ ನಿಸ್ಸಾನ್ ಮ್ಯಾಗ್ನೆಟ್

ನಿಸ್ಸಾನ್ ಮತ್ತು ರೆನಾಲ್ಟ್ ಕಂಪನಿಗಳು ಭಾರತದಲ್ಲಿ ಹೊಸ ಮಾದರಿಯ ಕಾರುಗಳ ಉತ್ಪಾದನೆಗಾಗಿ ಭಾರೀ ಪ್ರಮಾಣದ ಹೂಡಿಕೆ ಮಾಡುತ್ತಿದ್ದು, ಶೀಘ್ರದಲ್ಲೇ ಹೊಸ ಮಾದರಿಯ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯೊಂದನ್ನು ಬಿಡುಗಡೆ ಮಾಡುವ ಯೋಜನೆಯಲ್ಲಿದೆ.

ಮುಂಬರುವ ಅಗಸ್ಟ್ ಅಂತ್ಯಕ್ಕೆ ಬಿಡುಗಡೆಯಾಗಲಿದೆ ನಿಸ್ಸಾನ್ ಮ್ಯಾಗ್ನೆಟ್

ನಿಸ್ಸಾನ್ ಕಂಪನಿಯು ಬಿಡುಗಡೆ ಮಾಡಲಿರುವ ಹೊಸ ಕಂಪ್ಯಾಕ್ಟ್ ಎಸ್‌ಯುವಿ ಕಾರು ಆಕರ್ಷಕ ಬೆಲೆಯೊಂದಿಗೆ ಬಿಡುಗಡೆಯಾಗುವ ಸುಳಿವು ನೀಡಿದ್ದು, ಗ್ರಾಹಕರನ್ನು ಸೆಳೆಯಲು ಸಿದ್ದವಾಗಿರುವ ಹೊಸ ಕಾರಿನ ತಾಂತ್ರಿಕ ಅಂಶಗಳು ಈಗಾಗಲೇ ಬಹಿರಂಗವಾಗಿವೆ. ಸದ್ಯಕ್ಕೆ EM2 ಕೋಡ್ ನೆಮ್ ಆಧಾರದ ಮೇಲೆ ಹೊಸ ಕಾರಿನ ಟೀಸರ್ ಅನ್ನು ಬಿಡುಗಡೆ ಮಾಡಲಾಗಿದ್ದು, ಹೊಸ ಕಾರಿನ ಅಧಿಕೃತ ಹೆಸರನ್ನು 'ಮ್ಯಾಗ್ನೆಟ್' ಎಂದು ಕರೆಯಲಾಗಿದೆ.

ಮುಂಬರುವ ಅಗಸ್ಟ್ ಅಂತ್ಯಕ್ಕೆ ಬಿಡುಗಡೆಯಾಗಲಿದೆ ನಿಸ್ಸಾನ್ ಮ್ಯಾಗ್ನೆಟ್

ಹೊಸ ಕಾರು ಸದ್ಯ ಮಾರುಕಟ್ಟೆಯಲ್ಲಿ ಜನಪ್ರಿಯವಾಗಿರುವ ಮಾರುತಿ ಬ್ರೆಝಾ, ಹ್ಯುಂಡೈ ವೆನ್ಯೂ, ಟಾಟಾ ನೆಕ್ಸಾನ್, ಮಹೀಂದ್ರಾ ಎಕ್ಸ್‌ಯುವಿ 300 ಮಾದರಿಗಳಿಗೆ ಪೈಪೋಟಿಯಾಗಿ ಬಿಡುಗಡೆಯಾಗಲಿದ್ದು, ಬೆಲೆ ವಿಚಾರದಲ್ಲೂ ಪ್ರತಿಸ್ಪರ್ಧಿ ಕಾರುಗಳಿಗಳಿಂತಲೂ ಉತ್ತಮವಾಗಿದೆ.

ಮುಂಬರುವ ಅಗಸ್ಟ್ ಅಂತ್ಯಕ್ಕೆ ಬಿಡುಗಡೆಯಾಗಲಿದೆ ನಿಸ್ಸಾನ್ ಮ್ಯಾಗ್ನೆಟ್

ಮಾರುಕಟ್ಟೆಯಲ್ಲಿರುವ ಕಿಕ್ಸ್ ಎಸ್‌ಯುವಿ ಮಾದರಿಗಿಂತಲೂ ಕೆಳದರ್ಜೆಯ ಕಾರು ಮಾದರಿಯಾಗಿ ಮಾರಾಟಗೊಳ್ಳಲಿರುವ ಹೊಸ ಮ್ಯಾಗ್ನೆಟ್ ಕಾರು ಪೆಟ್ರೋಲ್ ಎಂಜಿನ್‌ನಲ್ಲಿ ಮಾತ್ರವೇ ಖರೀದಿಗೆ ಲಭ್ಯವಿರಲಿದೆ.

MOST READ: ಕಾರು ಖರೀದಿ ಮಾಡುವ ಕರೋನಾ ವಾರಿಯರ್ಸ್‌ಗೆ ಭರ್ಜರಿ ಆಫರ್ ನೀಡಿದ ಟಾಟಾ

ಮುಂಬರುವ ಅಗಸ್ಟ್ ಅಂತ್ಯಕ್ಕೆ ಬಿಡುಗಡೆಯಾಗಲಿದೆ ನಿಸ್ಸಾನ್ ಮ್ಯಾಗ್ನೆಟ್

ಬಿಎಸ್-6 ನಿಯಮ ಜಾರಿ ನಂತರ ಡೀಸೆಲ್ ಕಾರುಗಳ ಮಾರಾಟದಲ್ಲಿ ಭಾರೀ ಬದಲಾವಣೆ ಮಾಡಲಾಗಿದ್ದು, ಹೈ ಎಂಡ್ ಕಾರುಗಳಲ್ಲಿ ಹೊರತುಪಡಿಸಿ ಸಣ್ಣ ಮತ್ತು ಮಧ್ಯಮ ಗಾತ್ರದ ಕಾರುಗಳಲ್ಲಿ ಕೇವಲ ಪೆಟ್ರೋಲ್ ಎಂಜಿನ್‌ ಆಯ್ಕೆಯನ್ನು ಮಾತ್ರವೇ ನೀಡಲಾಗುತ್ತಿದೆ.

ಮುಂಬರುವ ಅಗಸ್ಟ್ ಅಂತ್ಯಕ್ಕೆ ಬಿಡುಗಡೆಯಾಗಲಿದೆ ನಿಸ್ಸಾನ್ ಮ್ಯಾಗ್ನೆಟ್

ಇದಕ್ಕಾಗಿ ಸಹಭಾಗಿತ್ವದ ಯೋಜನೆ ಅಡಿ ನಿಸ್ಸಾನ್ ಜೊತೆಗೂಡಿರುವ ರೆನಾಲ್ಟ್ ಕಂಪನಿಯು ಮತ್ತಷ್ಟು ಹೊಸ ಪೆಟ್ರೋಲ್ ಎಂಜಿನ್‌ಗಳ ಅಭಿವೃದ್ದಿಗೆ ಚಾಲನೆ ನೀಡಿದ್ದು, ಹೊಸದಾಗಿ ನಿರ್ಮಾಣ ಮಾಡಲಾಗುತ್ತಿರುವ 1.0-ಲೀಟರ್ ಟರ್ಬೋ ಪೆಟ್ರೋಲ್ ಎಂಜಿನ್ ಅನ್ನು ಎರಡೂ ಕಂಪನಿಗಳು ಬಳಕೆ ಮಾಡಿಕೊಳ್ಳಲಿವೆ.

MOST READ: ಸ್ಕ್ರ್ಯಾಪಿಂಗ್ ನೀತಿ ಜಾರಿಗೆ ಅಂತಿಮ ಸಿದ್ದತೆ- ಆಟೋ ಉದ್ಯಮದಲ್ಲಿ ಹೊಸ ಸಂಚಲನ..

ಮುಂಬರುವ ಅಗಸ್ಟ್ ಅಂತ್ಯಕ್ಕೆ ಬಿಡುಗಡೆಯಾಗಲಿದೆ ನಿಸ್ಸಾನ್ ಮ್ಯಾಗ್ನೆಟ್

ರೆನಾಲ್ಟ್ ಹೊಚ್ಚ ಹೊಸ ಕಿಗರ್‌ ಮತ್ತು ನಿಸ್ಸಾನ್ ಮ್ಯಾಗ್ನೆಟ್ ಕಂಪ್ಯಾಕ್ಟ್ ಎಸ್‌ಯುವಿ ಕಾರಿನಲ್ಲಿ ಒಂದೇ ಮಾದರಿಯ 1.0-ಲೀಟರ್ ಟರ್ಬೋ ಪೆಟ್ರೋಲ್ ಎಂಜಿನ್ ಆಯ್ಕೆಗೆ ಲಭ್ಯವಾಗಲಿದ್ದು, ಉತ್ತಮ ಎಂಜಿನ್ ಪರ್ಫಾಮೆನ್ಸ್‌ನೊಂದಿಗೆ ಇಂಧನ ದಕ್ಷತೆಯಲ್ಲೂ ಗಮನಸೆಳಲಿವೆ.

ಮುಂಬರುವ ಅಗಸ್ಟ್ ಅಂತ್ಯಕ್ಕೆ ಬಿಡುಗಡೆಯಾಗಲಿದೆ ನಿಸ್ಸಾನ್ ಮ್ಯಾಗ್ನೆಟ್

ಇನ್ನು ಹೊಸ ಮ್ಯಾಗ್ನೆಟ್ ಕಾರಿನಲ್ಲಿ ಫುಲ್ ಎಲ್‌ಇಡಿ ಹೆಡ್‌ಲ್ಯಾಂಪ್ ಮತ್ತು ಎಲ್ಇಡಿ ಟೈಲ್‌ಲೈಟ್, ಸನ್‌ರೂಫ್ ಸೇರಿದಂತೆ ಹಲವು ಕಾರ್ ಕನೆಕ್ಟ್ ಫೀಚರ್ಸ್‌ಗಳನ್ನು ನೀಡಲಾಗುತ್ತಿದ್ದು, ಕಿಕ್ಸ್ ಮಾದರಿಯಲ್ಲಿನ ಕೆಲವು ಫೀಚರ್ಸ್‌ಗಳನ್ನು ಸಹ ಹೊಸ ಕಾರಿನ ಹೊರಭಾಗದ ವಿನ್ಯಾಸಗಳಲ್ಲಿ ಅಳವಡಿಸಲಾಗಿದೆ.

MOST READ: ಲಾಕ್‌ಡೌನ್‌ನಿಂದ ತತ್ತರಿಸಿರುವ ಆಟೋ ಕಂಪನಿಗಳಿಗೆ ಇದೀಗ ಮತ್ತೊಂದು ಸಂಕಷ್ಟ

ಮುಂಬರುವ ಅಗಸ್ಟ್ ಅಂತ್ಯಕ್ಕೆ ಬಿಡುಗಡೆಯಾಗಲಿದೆ ನಿಸ್ಸಾನ್ ಮ್ಯಾಗ್ನೆಟ್

ಬಿಡುಗಡೆಯ ಅವಧಿ ಮತ್ತು ಬೆಲೆ(ಅಂದಾಜು)

ಮಾಹಿತಿಗಳ ಪ್ರಕಾರ, ನಿಸ್ಸಾನ್ ಹೊಸ ಮ್ಯಾಗ್ನೆಟ್ ಕಾರು ಮುಂದಿನ ಅಗಸ್ಟ್ ಹೊತ್ತಿಗೆ ಖರೀದಿಗೆ ಲಭ್ಯವಾಗಲಿದ್ದು, ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ.6 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ.9 ಲಕ್ಷದೊಳಗೆ ಬಿಡುಗಡೆ ಮಾಡುವ ಸಾಧ್ಯತೆಗಳಿವೆ.

Most Read Articles

Kannada
English summary
Nissan Magnite Launch Expected In 2020 August. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X