ಸ್ಪಾಟ್ ಟೆಸ್ಟ್​ನಲ್ಲಿ ಕಾಣಿಸಿಕೊಂಡ ನಿಸ್ಸಾನ್ ಮ್ಯಾಗ್ನೆಟ್ ಕಾಂಪ್ಯಾಕ್ಟ್ ಎಸ್‍ಯುವಿ

ನಿಸ್ಸಾನ್ ಕಂಪನಿಯು ಹೊಸ ಮ್ಯಾಗ್ನೆಟ್ ಸಬ್-4 ಮೀಟರ್ ಎಸ್‍ಯುವಿಯನ್ನು ಭಾರತೀಯ ಮಾರುಕಟ್ಟೆಯಲ್ಲಿ ಶೀಘ್ರದಲ್ಲೇ ಬಿಡುಗಡೆಗೊಳಿಸಲಿದೆ. ಈ ಹೊಸ ನಿಸ್ಸಾನ್ ಮ್ಯಾಗ್ನೆಟ್ ಕಾಂಪ್ಯಾಕ್ಟ್ ಎಸ್‍ಯುವಿಯು ಭಾರತದಲ್ಲಿ ಮತ್ತೊಮ್ಮೆ ಸ್ಪಾಟ್ ಟೆಸ್ಟ್ ಅನ್ನು ನಡೆಸಿದೆ.

ಸ್ಪಾಟ್ ಟೆಸ್ಟ್​ನಲ್ಲಿ ಕಾಣಿಸಿಕೊಂಡ ನಿಸ್ಸಾನ್ ಮ್ಯಾಗ್ನೆಟ್ ಕಾಂಪ್ಯಾಕ್ಟ್ ಎಸ್‍ಯುವಿ

ನಿಸ್ಸಾನ್ ಕಂಪನಿಯು ಮ್ಯಾಗ್ನೆಟ್ ಕಾಂಪ್ಯಾಕ್ಟ್ ಎಸ್‍ಯುವಿಯನ್ನು ಸಂಪೂರ್ಣವಾಗಿ ಮರೆಮಾಚಿ ಸ್ಪಾಟ್ ಟೆಸ್ಟ್ ಅನ್ನು ನಡೆಸಿದೆ. ಈ ಮ್ಯಾಗ್ನೆಟ್ ಎಸ್‍ಯುವಿಯು ಸ್ಪಾಟ್ ಟೆಸ್ಟ್ ನಡೆಸುತ್ತಿರುವುದನ್ನು ರಶ್ಲೇನ್ ಬಹಿರಂಗಪಡಿಸಿದೆ. ಮ್ಯಾಗ್ನೆಟ್ ಎಸ್‍ಯುವಿಯು ನಿಸ್ಸಾನ್ ಬ್ರ್ಯಾಂಡ್‌ನ ಸಿಗ್ನೇಚರ್ ಹೆಡ್‌ಲ್ಯಾಂಪ್, ಕ್ರೋಮ್ ಆಕಾರದ ಗ್ರಿಲ್ , ಎದ್ದು ಕಾಣುವ ಕ್ರೀಸ್ ಲೈನ್‌ಗಳನ್ನು ಹೊಂದಿದೆ. ಈ ಮ್ಯಾಗ್ನೆಟ್ ಎಸ್‍ಯುವಿಯಲ್ಲಿ ಎಲ್ಇಡಿ ಡಿಆರ್‌ಎಲ್ ಗಳನ್ನು ಹೊಂದಿದೆ. ಇನ್ನು ಈ ಎಸ್‍ಯುವಿಯಲ್ಲಿ ಅಲಾಯ್ ವ್ಹೀಲ್ ಮತ್ತು ರೂಫ್ ಇಂಟಿಗ್ರೇಟೆಡ್ ಸ್ಪಾಯ್ಲರ್ ಅನ್ನು ಒಳಗೊಂಡಿದೆ.

ಸ್ಪಾಟ್ ಟೆಸ್ಟ್​ನಲ್ಲಿ ಕಾಣಿಸಿಕೊಂಡ ನಿಸ್ಸಾನ್ ಮ್ಯಾಗ್ನೆಟ್ ಕಾಂಪ್ಯಾಕ್ಟ್ ಎಸ್‍ಯುವಿ

ಈ ನಿಸ್ಸಾನ್ ಮ್ಯಾಗ್ನೆಟ್ ಎಸ್‍ಯುವಿಯು ಆಕರ್ಷಕ ಲುಕ್ ಅನ್ನು ಹೊಂದಿದೆ. ಈ ಎಸ್‍ಯುವಿಯ ಇಂಟಿರಿಯರ್ ನಲ್ಲಿ ಹಲವಾರು ಫೀಚರುಗಳನ್ನು ಹೊಂದಿರಲಿದೆ. ಈ ಎಸ್‍ಯುವಿಯಲ್ಲಿ ಅತ್ಯಾಧುನಿಕ ಕನೆಕ್ಟಿವಿಟಿ ಫೀಚರುಗಳನ್ನು ಹೊಂದಿರಬಹುದು ಎಂದು ನಿರೀಕ್ಷಿಸುತ್ತೇವೆ.

MOST READ: ಸ್ಪಾಟ್ ಟೆಸ್ಟ್​ನಲ್ಲಿ ಕಾಣಿಸಿಕೊಂಡ ಟೊಯೊಟಾ ಫಾರ್ಚೂನರ್ ಫೇಸ್‌ಲಿಫ್ಟ್‌

ಸ್ಪಾಟ್ ಟೆಸ್ಟ್​ನಲ್ಲಿ ಕಾಣಿಸಿಕೊಂಡ ನಿಸ್ಸಾನ್ ಮ್ಯಾಗ್ನೆಟ್ ಕಾಂಪ್ಯಾಕ್ಟ್ ಎಸ್‍ಯುವಿ

ಈ ಎಸ್‍ಯುವಿಯ ಇಂಟಿರಿಯರ್ ನಲ್ಲಿ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಂ, ಇನ್ಸ್ ಟ್ರೂಮೆಂಟ್ ಕನ್ಸೋಲ್‌ನಲ್ಲಿ ಎಂಐಡಿ, ಮಲ್ಟಿ-ಫಂಕ್ಷನ್ ಸ್ಟೀಯರಿಂಗ್, ಆಟೋಮ್ಯಾಟಿಕ್ ಕ್ಲೈಮೆಂಟ್ ಕಂಟ್ರೋಲ್ ಅನ್ನು ಹೊಂದಿರಲಿದೆ.

ಸ್ಪಾಟ್ ಟೆಸ್ಟ್​ನಲ್ಲಿ ಕಾಣಿಸಿಕೊಂಡ ನಿಸ್ಸಾನ್ ಮ್ಯಾಗ್ನೆಟ್ ಕಾಂಪ್ಯಾಕ್ಟ್ ಎಸ್‍ಯುವಿ

ರೆನಾಲ್ಟ್ ನಿಸ್ಸಾನ್ ಅನ್ನು ಮಾಡ್ಯುಲರ್ ಪ್ಲಾಟ್‌ಫಾರ್ಮ್ ಅನ್ನು ಆಧರಿಸಿ ತಯಾರಿಸಲಾಗಿದೆ. ಇದೇ ಪ್ಲಾಟ್‌ಫಾರ್ಮ್ ಅನ್ನು ಆಧರಿಸಿ ಹೊಸ ರೆನಾಲ್ಟ್ ಕಿಂಗರ್ ಎಸ್‍ಯುವಿಯನ್ನು ಕೂಡ ಉತ್ಪಾದಿಸಲಾಗುತ್ತದೆ.

MOST READ: ಭಾರತಕ್ಕೆ ಲಗ್ಗೆ ಇಡಲಿದೆ ಹೊಸ ಹೋಂಡಾ ಹೆಚ್‌ಆರ್-ವಿ ಎಸ್‍ಯುವಿ

ಸ್ಪಾಟ್ ಟೆಸ್ಟ್​ನಲ್ಲಿ ಕಾಣಿಸಿಕೊಂಡ ನಿಸ್ಸಾನ್ ಮ್ಯಾಗ್ನೆಟ್ ಕಾಂಪ್ಯಾಕ್ಟ್ ಎಸ್‍ಯುವಿ

ಹೊಸ ಸಬ್-4 ಮೀಟರ್ ನಿಸ್ಸಾನ್ ಕಾಂಪ್ಯಾಕ್ಟ್ ಎಸ್‍‍ಯುವಿ ಪೆಟ್ರೋಲ್ ಎಂಜಿನ್ ಅನ್ನು ಅಳವಡಿಸಬಹುದು. ಟರ್ಬೋಚಾರ್ಜ್ಡ್ 1 ಲೀಟರ್ 3 ಸಿಲಿಂಡರ್ ಪೆಟ್ರೋಲ್ ಎಂಜಿನ್ ಅನ್ನು ಶೀಘ್ರದಲ್ಲೇ ರೆನಾಲ್ಟ್ ಟ್ರೈಬರ್ ಕಾಂಪ್ಯಾಕ್ಟ್ ಎಂಪಿವಿಯಲ್ಲಿ ಕೂಡ ಅಳವಡಿಸಲಿದೆ. ಇದೇ ಎಂಜಿನ್ ಅನ್ನು ನಿಸ್ಸಾನ್ ಮ್ಯಾಗ್ನೆಟ್ ಎಸ್‍ಯುವಿಗೆ ಅಳವಡಿಸಬಹುದು.

ಸ್ಪಾಟ್ ಟೆಸ್ಟ್​ನಲ್ಲಿ ಕಾಣಿಸಿಕೊಂಡ ನಿಸ್ಸಾನ್ ಮ್ಯಾಗ್ನೆಟ್ ಕಾಂಪ್ಯಾಕ್ಟ್ ಎಸ್‍ಯುವಿ

ಈ ಎಂಜಿನ್ ಸುಮಾರು 80-100 ಬಿಹೆಚ್‍ಪಿ ಪವರ್ ಮತ್ತು 150-200 ಎನ್‍ಎಂ ಟಾರ್ಕ್ ಅನ್ನು ಉತ್ಪಾದಿಸಬಹುದು. ಈ ಎಂಜಿನ್‍‍ನೊಂದಿಗೆ ಮ್ಯಾನುವಲ್ ಮತ್ತು ಆಟೋಮ್ಯಾಟಿಕ್ ಗೇರ್‍‍ಬಾಕ್ಸ್ ಅನ್ನು ಅಳವಡಿಸಲಿದೆ.

MOST READ: ಜನಪ್ರಿಯ ಮಾರುತಿ ಸುಜುಕಿ ಕಾರುಗಳ ಮೇಲೆ ಭರ್ಜರಿ ರಿಯಾಯಿತಿ

ಸ್ಪಾಟ್ ಟೆಸ್ಟ್​ನಲ್ಲಿ ಕಾಣಿಸಿಕೊಂಡ ನಿಸ್ಸಾನ್ ಮ್ಯಾಗ್ನೆಟ್ ಕಾಂಪ್ಯಾಕ್ಟ್ ಎಸ್‍ಯುವಿ

ನಿಸ್ಸಾನ್ ಕಂಪನಿಯು ಈ ಹೊಸ ಮ್ಯಾಗ್ನೆಟ್ ಎಸ್‍ಯುವಿಯನ್ನು ಈ ವರ್ಷದ ಅಂತ್ಯದಲ್ಲಿ ಅಥವಾ ಮುಂದಿನ ವರ್ಷದ ಆರಂಭದಲ್ಲಿ ಭಾರತದಲ್ಲಿ ಬಿಡುಗಡೆಗೊಳಿಸಬಹುದು. ಈ ಎಸ್‍ಯುವಿಯನ್ನು ಭಾರತದಲ್ಲಿ ಸ್ಪರ್ಧಾತ್ಮಕ ಬೆಲೆಯಲ್ಲಿ ಬಿಡುಗಡೆಗೊಳಿಸಬಹುದು ಎಂದು ನಿರೀಕ್ಷಿಸುತ್ತೇವೆ.

ಸ್ಪಾಟ್ ಟೆಸ್ಟ್​ನಲ್ಲಿ ಕಾಣಿಸಿಕೊಂಡ ನಿಸ್ಸಾನ್ ಮ್ಯಾಗ್ನೆಟ್ ಕಾಂಪ್ಯಾಕ್ಟ್ ಎಸ್‍ಯುವಿ

ಇನ್ನು ಹೊಸ ನಿಸ್ಸಾನ್ ಮ್ಯಾಗ್ನೆಟ್ ಭಾರತೀಯ ಮಾರುಕಟ್ಟೆಯಲ್ಲಿ ಮಾರುತಿ ಸುಜುಕಿ ಬ್ರಿಝಾ, ಹ್ಯುಂಡೈ ವೆನ್ಯೂ, ಫೋರ್ಡ್ ಇಕೋಸ್ಪೋರ್ಟ್, ಟಾಟಾ ನೆಕ್ಸಾನ್ ಮತ್ತು ಮಹೀಂದ್ರಾ ಎಕ್ಸ್‌ಯುವಿ 300 ಕಾಂಪ್ಯಾಕ್ಟ್ ಎಸ್‍ಯುವಿಗಳಿಗೆ ಪೈಪೋಟಿಯನ್ನು ನೀಡುತ್ತದೆ.

Most Read Articles

Kannada
English summary
Nissan Magnite spied again – Reveals new Alloy Wheels, Rear Spoiler. Read In Kannada.
Story first published: Wednesday, July 29, 2020, 19:20 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X