ಬಿಡುಗಡೆಯ ಸನಿಹದಲ್ಲಿ ನಿಸ್ಸಾನ್ ಮ್ಯಾಗ್ನೈಟ್ ಕಂಪ್ಯಾಕ್ಟ್ ಎಸ್‌ಯುವಿ

ಮ್ಯಾಗ್ನೈಟ್ ಕಂಪ್ಯಾಕ್ಟ್ ಎಸ್‌ಯುವಿ ಬಿಡುಗಡೆಗಾಗಿ ನಿಸ್ಸಾನ್ ಕಂಪನಿಯು ಅಂತಿಮ ಹಂತದ ಸಿದ್ದತೆ ನಡೆಸುತ್ತಿದ್ದು, ಹೊಸ ಕಾರು ಬಿಡುಗಡೆಗೂ ಮುನ್ನ ನಮ್ಮ ಬೆಂಗಳೂರಿನ ಹೊರವಲಯದಲ್ಲಿ ಅಂತಿಮ ಹಂತದ ರೋಡ್ ಟೆಸ್ಟಿಂಗ್ ಪ್ರಕ್ರಿಯೆಗಳನ್ನು ಪೂರ್ಣಗೊಳಿಸುತ್ತಿದೆ.

ಬಿಡುಗಡೆಯ ಸನಿಹದಲ್ಲಿ ನಿಸ್ಸಾನ್ ಮ್ಯಾಗ್ನೈಟ್ ಕಂಪ್ಯಾಕ್ಟ್ ಎಸ್‌ಯುವಿ

ಸಬ್ ಫೋರ್ ಮೀಟರ್ ಕಂಪ್ಯಾಕ್ಟ್ ಎಸ್‌ಯುವಿ ಕಾರು ಮಾದರಿಯಲ್ಲೇ ವಿಶೇಷ ತಾಂತ್ರಿಕ ಸೌಲಭ್ಯಗಳನ್ನು ಪಡೆದುಕೊಳ್ಳಲಿರುವ ನಿಸ್ಸಾನ್ ಮ್ಯಾಗ್ನೈಟ್ ಕಾರು ಶೀಘ್ರದಲ್ಲೇ ಉತ್ಪಾದನಾ ಮಾದರಿಯೊಂದಿಗೆ ಅನಾವರಣಗೊಳ್ಳಲಿದ್ದು, ಕಿಕ್ಸ್ ಕಾರಿನ ನಂತರ ಮ್ಯಾಗ್ನೈಟ್ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯನ್ನು ವಿಶೇಷ ತಾಂತ್ರಿಕ ಸೌಲಭ್ಯಗಳೊಂದಿಗೆ ಬಿಡುಗಡೆ ಮಾಡುತ್ತಿರುವ ನಿಸ್ಸಾನ್ ಕಂಪನಿಯು ಹೊಸ ಕಾರಿನ ಮೇಲೆ ಭಾರೀ ನೀರಿಕ್ಷೆಯಿಟ್ಟುಕೊಂಡಿದೆ.

ಬಿಡುಗಡೆಯ ಸನಿಹದಲ್ಲಿ ನಿಸ್ಸಾನ್ ಮ್ಯಾಗ್ನೈಟ್ ಕಂಪ್ಯಾಕ್ಟ್ ಎಸ್‌ಯುವಿ

ಹೊಸ ಕಾರಿನಲ್ಲಿ ಪ್ರತಿ ಸ್ಪರ್ಧಿ ಕಾರುಗಳಿಗೆ ಪೈಪೋಟಿಯಾಗಿ ಹಲವು ವಿಶೇಷ ತಾಂತ್ರಿಕ ಸೌಲಭ್ಯಗಳನ್ನು ಅಳವಡಿಸಲಾಗಿದ್ದು, ಭಾರತೀಯ ಗ್ರಾಹಕರ ಬೇಡಿಕೆಯೆಂತೆ ಬಜೆಟ್ ಬೆಲೆಯಲ್ಲಿ ಅತ್ಯುತ್ತಮ ಮಾದರಿಯೊಂದನ್ನು ಸಿದ್ದಪಡಿಸುತ್ತಿದೆ.

ಬಿಡುಗಡೆಯ ಸನಿಹದಲ್ಲಿ ನಿಸ್ಸಾನ್ ಮ್ಯಾಗ್ನೈಟ್ ಕಂಪ್ಯಾಕ್ಟ್ ಎಸ್‌ಯುವಿ

ಹೊಸ ಕಾರಿನಲ್ಲಿ ಫ್ಲ್ಯಾಟ್ ಬಾಟಮ್ ಸ್ಟೀರಿಂಗ್ ಜೊತೆ ಮಲ್ಟಿ ಫಂಕ್ಷನ್ ಕೀ ಹೊಂದಿದ್ದು, ಸೆಂಟರ್ ಆರ್ಮ್ ರೆಸ್ಟ್, ಅರಾಮದಾಯಕವಾದ ಆಸನ ಸೌಲಭ್ಯ, ಡ್ಯುಯಲ್ ಟೋನ್ ಡ್ಯಾಶ್‌ಬೋರ್ಡ್, 8-ಇಂಚಿನ ಟಚ್‌ಸ್ಕ್ರೀನ್ ಇನ್ಪೋಟೈನ್‌ಮೆಂಟ್, ಹಿಂಭಾಗ ಆಸನದಲ್ಲೂ ಸೆಂಟರ್ ಆರ್ಮ್ ರೆಸ್ಟ್, ಕಪ್ ಹೋಲ್ಡರ್, ರಿಯರ್ ಎಸಿ ವೆಂಟ್ಟ್ ಸೌಲಭ್ಯವನ್ನು ಹೊಂದಿದೆ.

ಬಿಡುಗಡೆಯ ಸನಿಹದಲ್ಲಿ ನಿಸ್ಸಾನ್ ಮ್ಯಾಗ್ನೈಟ್ ಕಂಪ್ಯಾಕ್ಟ್ ಎಸ್‌ಯುವಿ

ಕಾನ್ಸೆಪ್ಟ್ ಮಾದರಿಯಲ್ಲೇ ಉತ್ಪಾದನಾ ಆವೃತ್ತಿಯನ್ನು ಬಿಡುಗಡೆ ಮಾಡುವ ಸುಳಿವು ನೀಡಿರುವ ನಿಸ್ಸಾನ್ ಕಂಪನಿಯು ಸದ್ಯ ಮಾರುಕಟ್ಟೆಯಲ್ಲಿರುವ ಹ್ಯುಂಡೈ ವೆನ್ಯೂ ಸೇರಿದಂತೆ ಮಾರುತಿ ಸುಜುಕಿ ಬ್ರೆಝಾ, ಟಾಟಾ ನೆಕ್ಸಾನ್, ಮಹೀಂದ್ರಾ ಎಕ್ಸ್‌ಯುವಿ300 ಕಾರುಗಳಿಗೆ ಭರ್ಜರಿಯಾಗಿ ಪೈಪೋಟಿ ನೀಡುವ ತವಕದಲ್ಲಿದೆ.

ಬಿಡುಗಡೆಯ ಸನಿಹದಲ್ಲಿ ನಿಸ್ಸಾನ್ ಮ್ಯಾಗ್ನೈಟ್ ಕಂಪ್ಯಾಕ್ಟ್ ಎಸ್‌ಯುವಿ

ಸದ್ಯಕ್ಕೆ ಹೊಸ ಕಾರನ್ನು ಭಾರತದಲ್ಲಿ EM2 ಕೋಡ್ ನೆಮ್ ಆಧಾರದ ಮೇಲೆ ರೋಡ್ ಟೆಸ್ಟಿಂಗ್ ಮಾಡಲಾಗುತ್ತಿದ್ದು, ಹೊಸ ಕಾರಿನ ಅಧಿಕೃತ ಹೆಸರನ್ನು 'ಮ್ಯಾಗ್ನೈಟ್' ಎಂದು ಕರೆಯಲಾಗಿದೆ. ಹೆಸರಿಗೆ ತಕ್ಕಂತೆ ಬಲಿಷ್ಠ ಹೊರ ನೋಟ ಹೊಂದಿರುವ ಹೊಸ ಕಾರು ಕಟಿಂಗ್ಎಡ್ಜ್ ವಿನ್ಯಾಸವನ್ನು ಹೊಂದಿದೆ.

MOST READ: ಪ್ರತಿ ಚಾರ್ಜ್‌ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿ..!

ಬಿಡುಗಡೆಯ ಸನಿಹದಲ್ಲಿ ನಿಸ್ಸಾನ್ ಮ್ಯಾಗ್ನೈಟ್ ಕಂಪ್ಯಾಕ್ಟ್ ಎಸ್‌ಯುವಿ

ಹೊಸ ಕಾರು ಕಿಕ್ಸ್ ಎಸ್‌ಯುವಿ ಮಾದರಿಗಿಂತಲೂ ಕೆಳದರ್ಜೆಯ ಕಾರು ಮಾದರಿಯಾಗಿ ಮಾರಾಟಗೊಳ್ಳಲಿದ್ದು, ಹೊಸ ಕಾರಿನಲ್ಲಿ ರೆನಾಲ್ಟ್ ಜೊತೆಗೂಡಿ ಅಭಿವೃದ್ದಿಗೊಳಿಸಲಾಗಿರುವ 1.0-ಲೀಟರ್ ಟರ್ಬೋ ಪೆಟ್ರೋಲ್ ಎಂಜಿನ್ ಅನ್ನು ಬಳಕೆ ಮಾಡಲಾಗುತ್ತಿದೆ.

ಬಿಡುಗಡೆಯ ಸನಿಹದಲ್ಲಿ ನಿಸ್ಸಾನ್ ಮ್ಯಾಗ್ನೈಟ್ ಕಂಪ್ಯಾಕ್ಟ್ ಎಸ್‌ಯುವಿ

ಹೊಸದಾಗಿ ಅಭಿವೃದ್ದಿಗೊಳಿಸಲಾಗಿರುವ 1.0-ಲೀಟರ್ ಟರ್ಬೋ ಪೆಟ್ರೋಲ್ ಎಂಜಿನ್ ಮಾದರಿಯು ನಿಸ್ಸಾನ್ ಮ್ಯಾಗ್ನೆೈಟ್ ಕಾರಿನಲ್ಲಿ ಮಾತ್ರವಲ್ಲದೇ ರೆನಾಲ್ಟ್ ಟ್ರೈಬರ್ ಟರ್ಬೋ ವರ್ಷನ್ ಮತ್ತು ಕಿಗರ್ ಕಾರಿನಲ್ಲೂ ಬಳಕೆಯಾಗಲಿದ್ದು, ಹೊಸ ಕಾರು ಪ್ರತಿಸ್ಪರ್ಧಿ ಕಾರುಗಳಿಂತಲೂ ಆಕರ್ಷಕ ಬೆಲೆಯೊಂದಿಗೆ ಬಿಡುಗಡೆಯಾಗಲಿದೆ.

MOST READ: ರೂ.5 ಲಕ್ಷಕ್ಕಿಂತ ಕಡಿಮೆ ಬೆಲೆಯ ಜನಪ್ರಿಯ ಕಾರುಗಳಿವು

ಬಿಡುಗಡೆಯ ಸನಿಹದಲ್ಲಿ ನಿಸ್ಸಾನ್ ಮ್ಯಾಗ್ನೈಟ್ ಕಂಪ್ಯಾಕ್ಟ್ ಎಸ್‌ಯುವಿ

ಹೊಸ ಕಾರನ್ನು ಇದೇ ವರ್ಷಾಂತ್ಯದೊಳಗೆ ಬಿಡುಗಡೆಗೊಳಿಸಲು ಯತ್ನಿಸುತ್ತಿರುವ ನಿಸ್ಸಾನ್ ಕಂಪನಿಯು ರೋಡ್ ಟೆಸ್ಟಿಂಗ್ ಪ್ರಕ್ರಿಯೆಯನ್ನು ತೀವ್ರಗೊಳಿಸಿದ್ದು, ದೆಹಲಿ ಎಕ್ಸ್‌ಶೋರೂಂ ಪ್ರಕಾರ ಹೊಸ ಕಾರು ಆರಂಭಿಕವಾಗಿ ರೂ. 6.50 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 9 ಲಕ್ಷ ಬೆಲೆ ಹೊಂದುವ ಸಾಧ್ಯತೆಗಳಿವೆ.

Most Read Articles

Kannada
English summary
Nissan Magnite Spied Testing Details. Read in Kannada.
Story first published: Friday, September 18, 2020, 11:09 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X