ರೋಡ್ ಟೆಸ್ಟಿಂಗ್‌ನಲ್ಲಿ ಕಂಡುಬಂದ ನಿಸ್ಸಾನ್ ಹೊಸ ಮ್ಯಾಗ್ನೆಟ್ ಕಂಪ್ಯಾಕ್ಟ್ ಎಸ್‌ಯುವಿ
ನಿಸ್ಸಾನ್ ಕಂಪನಿಯು ತನ್ನ ಬಹುನೀರಿಕ್ಷಿತ ಮ್ಯಾಗ್ನೆಟ್ ಕಾನ್ಸೆಪ್ಟ್ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯನ್ನು ಭಾರತದಲ್ಲಿ ಅನಾವರಣಗೊಳಿಸಿದ್ದು, ಹೊಸ ಕಾರಿನ ಅಧಿಕೃತ ಬಿಡುಗಡೆಗೂ ಮುನ್ನ ರೋಡ್ ಟೆಸ್ಟಿಂಗ್ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಲಾಗುತ್ತಿದೆ.

ನಿಸ್ಸಾನ್ ಗ್ಲೊಬಲ್ ಕಂಪನಿಯು ಭಾರತ ಸೇರಿದಂತೆ ಅಂತರ್‌ರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ಹೊಸದಾಗಿ 12 ಹೊಸ ಕಾರುಗಳನ್ನು ಬಿಡುಗಡೆಗೆ ಸಿದ್ದವಾಗಿದ್ದು, ಕಂಪನಿಯು ಬಿಡುಗಡೆ ಮಾಡಲಿರುವ ಹೊಸ ಕಾರುಗಳಲ್ಲಿ ಸಾಮಾನ್ಯ ಮಾದರಿಗಳ ಜೊತೆಗೆ ಎಲೆಕ್ಟ್ರಿಕ್ ಕಾರು ಆವೃತ್ತಿಗಳು ಸಹ ಸೇರಿವೆ. ಎಲೆಕ್ಟ್ರಿಕ್ ಕಾರು ಮಾದರಿಗಳು ಭಾರತದಲ್ಲಿ ಸದ್ಯಕ್ಕೆ ಬಿಡುಗಡೆವಾಗುದಿಲ್ಲವಾದರೂ ಮ್ಯಾಗ್ನೆಟ್ ಕಾನ್ಸೆಪ್ಟ್ ಕಾರು ಮಾತ್ರ 2020ರ ಕೊನೆಯಲ್ಲಿ ರಸ್ತೆಗಿಳಿಯುವುದು ಬಹುತೇಕ ಖಚಿತವಾಗಿದೆ.

ಹೊಸ ಕಂಪ್ಯಾಕ್ಟ್ ಎಸ್‌ಯುವಿ ಕಾರಿನ ಬಿಡುಗಡೆ ಕುರಿತಾಗಿ ಈಗಾಗಲೇ ನಿಸ್ಸಾನ್ ಇಂಡಿಯಾ ಕಂಪನಿಯು ವಿವಿಧ ಮಾದರಿಯ ರೋಡ್ ಟೆಸ್ಟಿಂಗ್ ಪ್ರಕ್ರಿಯೆಗಳನ್ನು ಕೈಗೊಂಡಿದ್ದು, ಅನಾವರಣಗೊಂಡಿರುವ ಕಾನ್ಸೆಪ್ಟ್ ಮಾದರಿಯು ಗ್ರಾಹಕರ ಆಯ್ಕೆಯಲ್ಲಿ ಹೊಸ ಸಂಚಲನ ಮೂಡಿಸಲಿದೆ.
ಸದ್ಯಕ್ಕೆ ಹೊಸ ಕಾರನ್ನು EM2 ಕೋಡ್ ನೆಮ್ ಆಧಾರದ ಮೇಲೆ ರೋಡ್ ಟೆಸ್ಟಿಂಗ್ ಮಾಡಲಾಗುತ್ತಿದ್ದು, ಹೊಸ ಕಾರಿನ ಅಧಿಕೃತ ಹೆಸರನ್ನು 'ಮ್ಯಾಗ್ನೆಟ್' ಎಂದು ಕರೆಯಲಾಗಿದೆ. ಹೆಸರಿಗೆ ತಕ್ಕಂತೆ ಬಲಿಷ್ಠ ಹೊರ ನೋಟ ಹೊಂದಿರುವ ಹೊಸ ಕಾರು ಕಟಿಂಗ್ಎಡ್ಜ್ ವಿನ್ಯಾಸ ಹೊಂದಿದೆ.

ಹೊಸ ಕಾರಿನ ಅನಾವರಣ ಹೊರತುಪಡಿಸಿ ಕಾರಿನ ಕುರಿತಾದ ಯಾವುದೇ ತಾಂತ್ರಿಕ ಮಾಹಿತಿಗಳನ್ನು ಬಿಟ್ಟುಕೊಡದ ನಿಸ್ಸಾನ್ ಕಂಪನಿಯು ಶೀಘ್ರದಲ್ಲೇ ಉತ್ಪಾದನಾ ಆವೃತ್ತಿಯೊಂದಿಗೆ ಮತ್ತಷ್ಟು ಮಾಹಿತಿ ಹಂಚಿಕೊಳ್ಳುವ ಸಾಧ್ಯತೆಗಳಿವೆ.
MOST READ: ರೂ.5 ಲಕ್ಷಕ್ಕಿಂತ ಕಡಿಮೆ ಬೆಲೆಯ ಜನಪ್ರಿಯ ಕಾರುಗಳಿವು

ಹೊಸ ಕಾರು ಕಿಕ್ಸ್ ಎಸ್‌ಯುವಿ ಮಾದರಿಗಿಂತಲೂ ಕೆಳದರ್ಜೆಯ ಕಾರು ಮಾದರಿಯಾಗಿ ಮಾರಾಟಗೊಳ್ಳಲಿದ್ದು, ಹೊಸ ಕಾರಿನಲ್ಲಿ ರೆನಾಲ್ಟ್ ಜೊತೆಗೂಡಿ ಅಭಿವೃದ್ದಿಗೊಳಿಸಲಾಗಿರುವ 1.0-ಲೀಟರ್ ಟರ್ಬೋ ಪೆಟ್ರೋಲ್ ಎಂಜಿನ್ ಅನ್ನು ಬಳಕೆ ಮಾಡಲಾಗುತ್ತಿದೆ.

ಹೊಸದಾಗಿ ಅಭಿವೃದ್ದಿಗೊಳಿಸಲಾಗಿರುವ 1.0-ಲೀಟರ್ ಟರ್ಬೋ ಪೆಟ್ರೋಲ್ ಎಂಜಿನ್ ಮಾದರಿಯು ನಿಸ್ಸಾನ್ ಮ್ಯಾಗ್ನೆಟ್ ಕಾರಿನಲ್ಲಿ ಮಾತ್ರವಲ್ಲದೇ ರೆನಾಲ್ಟ್ ಟ್ರೈಬರ್ ಟರ್ಬೋ ವರ್ಷನ್ ಮತ್ತು ಕಿಗರ್ ಕಾರಿನಲ್ಲೂ ಬಳಕೆಯಾಗಲಿದ್ದು, ಹೊಸ ಕಾರು ಪ್ರತಿಸ್ಪರ್ಧಿ ಕಾರುಗಳಿಂತಲೂ ಆಕರ್ಷಕ ಬೆಲೆಯೊಂದಿಗೆ ಬಿಡುಗಡೆಯಾಗಲಿದೆ.
MOST READ: ಪ್ರತಿ ಚಾರ್ಜ್‌ಗೆ 480 ಕಿ.ಮೀ ಮೈಲೇಜ್ ನೀಡುವ ಎಲೆಕ್ಟ್ರಿಕ್ ಎಸ್‌ಯುವಿ ಬಿಡುಗಡೆ ಮಾಡಲಿದೆ ನಿಸ್ಸಾನ್

ಹೊಸ ಕಾರು ಮಾರುತಿ ಬ್ರೆಝಾ, ಹ್ಯುಂಡೈ ವೆನ್ಯೂ, ಟಾಟಾ ನೆಕ್ಸಾನ್, ಮಹೀಂದ್ರಾ ಎಕ್ಸ್‌ಯುವಿ 300 ಮಾದರಿಗಳಿಗೆ ಭರ್ಜರಿ ಪೈಪೋಟಿ ನೀಡಲಿದ್ದು, ವರ್ಷಾಂತ್ಯದಲ್ಲಿ ಬಿಡುಗಡೆಯಾಗಲಿರುವ ಹೊಸ ಮ್ಯಾಗ್ನೆಟ್ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ. 6.50 ಲಕ್ಷದಿಂದ ರೂ. 9 ಲಕ್ಷ ಬೆಲೆ ಹೊಂದುವ ಸಾಧ್ಯತೆಗಳಿವೆ.


Click it and Unblock the Notifications








