ಕಂಪ್ಯಾಕ್ಟ್ ಎಸ್‌ಯುವಿ ಕಾರುಗಳಿಗೆ ಭರ್ಜರಿ ಪೈಪೋಟಿ ನೀಡಲಿರುವ ನಿಸ್ಸಾನ್ ಮ್ಯಾಗ್ನೆಟ್ ವಿಶೇಷತೆ ಏನು?

ಜಪಾನ್ ಕಾರು ಉತ್ಪಾದನಾ ಕಂಪನಿ ನಿಸ್ಸಾನ್ ತನ್ನ ಬಹುನೀರಿಕ್ಷಿತ ಕಾರು ಮಾದರಿಯಾದ ಮ್ಯಾಗ್ನೆಟ್ ಕಾನ್ಸೆಪ್ಟ್ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯನ್ನು ಭಾರತ ಸೇರಿದಂತೆ ವಿಶ್ವದ ಪ್ರಮುಖ ಮಾರುಕಟ್ಟೆಗಳಿಗೆ ಪರಿಚಯಿಸುವ ಸಿದ್ದತೆಯಲ್ಲಿದ್ದು, ಹೊಸ ಕಾರು ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯಲ್ಲೇ ಹಲವು ವಿಶೇಷ ಸೌಲಭ್ಯಗಳೊಂದಿಗೆ ರಸ್ತೆಗಳಿಯಲಿದೆ.

ನಿಸ್ಸಾನ್ ಮ್ಯಾಗ್ನೆಟ್ ಕಂಪ್ಯಾಕ್ಟ್ ಎಸ್‌ಯುವಿ ವಿಶೇಷತೆ ಏನು?

ಮ್ಯಾಗ್ನೆಟ್ ಕಂಪ್ಯಾಕ್ಟ್ ಎಸ್‌ಯುವಿ ಕಾರು ಮಾದರಿಯನ್ನು ಸದ್ಯ ಅನಾವರಣಗೊಳಿಸಿರುವ ನಿಸ್ಸಾನ್ ಕಂಪನಿಯು ಶೀಘ್ರದಲ್ಲೇ ಹೊಸ ಕಾರನ್ನು ಅಧಿಕೃತವಾಗಿ ಬಿಡುಗಡೆ ಮಾಡಲಿದ್ದು, ಬೆಲೆ ಮತ್ತು ತಾಂತ್ರಿಕ ವಿಭಾಗದಲ್ಲಿ ಗಮನಸೆಳೆಯಲಿರುವ ಹೊಸ ಕಾರು ಸದ್ಯ ಮಾರುಕಟ್ಟೆಯಲ್ಲಿರುವ ಹ್ಯುಂಡೈ ವೆನ್ಯೂ ಸೇರಿದಂತೆ ಮಾರುತಿ ಸುಜುಕಿ ಬ್ರೆಝಾ, ಟಾಟಾ ನೆಕ್ಸಾನ್, ಮಹೀಂದ್ರಾ ಎಕ್ಸ್‌ಯುವಿ300 ಕಾರುಗಳಿಗೆ ಭರ್ಜರಿಯಾಗಿ ಪೈಪೋಟಿ ನೀಡುವ ತವಕದಲ್ಲಿದೆ ಎನ್ನಬಹುದು.

ನಿಸ್ಸಾನ್ ಮ್ಯಾಗ್ನೆಟ್ ಕಂಪ್ಯಾಕ್ಟ್ ಎಸ್‌ಯುವಿ ವಿಶೇಷತೆ ಏನು?

ನಿಸ್ಸಾನ್ ಗ್ಲೊಬಲ್ ಕಂಪನಿಯು ಭಾರತ ಸೇರಿದಂತೆ ಅಂತರ್‌ರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ಹೊಸದಾಗಿ 12 ಹೊಸ ಕಾರುಗಳನ್ನು ಬಿಡುಗಡೆಗೆ ಸಿದ್ದವಾಗಿದ್ದು, ಕಂಪನಿಯು ಬಿಡುಗಡೆ ಮಾಡಲಿರುವ ಹೊಸ ಕಾರುಗಳಲ್ಲಿ ಸಾಮಾನ್ಯ ಮಾದರಿಗಳ ಜೊತೆಗೆ ಎಲೆಕ್ಟ್ರಿಕ್ ಕಾರು ಆವೃತ್ತಿಗಳು ಸಹ ಸೇರಿವೆ.

ನಿಸ್ಸಾನ್ ಮ್ಯಾಗ್ನೆಟ್ ಕಂಪ್ಯಾಕ್ಟ್ ಎಸ್‌ಯುವಿ ವಿಶೇಷತೆ ಏನು?

ಎಲೆಕ್ಟ್ರಿಕ್ ಕಾರು ಮಾದರಿಗಳು ಭಾರತದಲ್ಲಿ ಸದ್ಯಕ್ಕೆ ಬಿಡುಗಡೆವಾಗುವುದಿಲ್ಲವಾದರೂ ಮ್ಯಾಗ್ನೆಟ್ ಕಾನ್ಸೆಪ್ಟ್ ಕಾರು ಮಾತ್ರ 2020ರ ಕೊನೆಯಲ್ಲಿ ರಸ್ತೆಗಿಳಿಯುವುದು ಬಹುತೇಕ ಖಚಿತವಾಗಿದ್ದು, ಭಾರತದಲ್ಲಿ ಸದ್ಯ ಬಿಡುಗಡೆಗಾಗಿ ವಿವಿಧ ಹಂತದ ರೋಡ್ ಟೆಸ್ಟಿಂಗ್ ಪ್ರಕ್ರಿಯೆಗಳನ್ನು ಕೈಗೊಂಡಿದೆ.

ನಿಸ್ಸಾನ್ ಮ್ಯಾಗ್ನೆಟ್ ಕಂಪ್ಯಾಕ್ಟ್ ಎಸ್‌ಯುವಿ ವಿಶೇಷತೆ ಏನು?

ಸದ್ಯಕ್ಕೆ ಹೊಸ ಕಾರನ್ನು ಭಾರತದಲ್ಲಿ EM2 ಕೋಡ್ ನೆಮ್ ಆಧಾರದ ಮೇಲೆ ರೋಡ್ ಟೆಸ್ಟಿಂಗ್ ಮಾಡಲಾಗುತ್ತಿದ್ದು, ಹೊಸ ಕಾರಿನ ಅಧಿಕೃತ ಹೆಸರನ್ನು 'ಮ್ಯಾಗ್ನೆಟ್' ಎಂದು ಕರೆಯಲಾಗಿದೆ. ಹೆಸರಿಗೆ ತಕ್ಕಂತೆ ಬಲಿಷ್ಠ ಹೊರ ನೋಟ ಹೊಂದಿರುವ ಹೊಸ ಕಾರು ಕಟಿಂಗ್ಎಡ್ಜ್ ವಿನ್ಯಾಸ ಹೊಂದಿದೆ.

ನಿಸ್ಸಾನ್ ಮ್ಯಾಗ್ನೆಟ್ ಕಂಪ್ಯಾಕ್ಟ್ ಎಸ್‌ಯುವಿ ವಿಶೇಷತೆ ಏನು?

ಹೊಸ ಕಾರಿನ ಅನಾವರಣ ಹೊರತುಪಡಿಸಿ ಕಾರಿನ ಕುರಿತಾದ ಯಾವುದೇ ತಾಂತ್ರಿಕ ಮಾಹಿತಿಗಳನ್ನು ಬಿಟ್ಟುಕೊಡದ ನಿಸ್ಸಾನ್ ಕಂಪನಿಯು ಶೀಘ್ರದಲ್ಲೇ ಉತ್ಪಾದನಾ ಆವೃತ್ತಿಯೊಂದಿಗೆ ಮತ್ತಷ್ಟು ಮಾಹಿತಿ ಹಂಚಿಕೊಳ್ಳುವ ಸಾಧ್ಯತೆಗಳಿವೆ.

MOST READ: ರೂ.5 ಲಕ್ಷಕ್ಕಿಂತ ಕಡಿಮೆ ಬೆಲೆಯ ಜನಪ್ರಿಯ ಕಾರುಗಳಿವು

ನಿಸ್ಸಾನ್ ಮ್ಯಾಗ್ನೆಟ್ ಕಂಪ್ಯಾಕ್ಟ್ ಎಸ್‌ಯುವಿ ವಿಶೇಷತೆ ಏನು?

ಹೊಸ ಕಾರು ಕಿಕ್ಸ್ ಎಸ್‌ಯುವಿ ಮಾದರಿಗಿಂತಲೂ ಕೆಳದರ್ಜೆಯ ಕಾರು ಮಾದರಿಯಾಗಿ ಮಾರಾಟಗೊಳ್ಳಲಿದ್ದು, ಹೊಸ ಕಾರಿನಲ್ಲಿ ರೆನಾಲ್ಟ್ ಜೊತೆಗೂಡಿ ಅಭಿವೃದ್ದಿಗೊಳಿಸಲಾಗಿರುವ 1.0-ಲೀಟರ್ ಟರ್ಬೋ ಪೆಟ್ರೋಲ್ ಎಂಜಿನ್ ಅನ್ನು ಬಳಕೆ ಮಾಡಲಾಗುತ್ತಿದೆ.

ನಿಸ್ಸಾನ್ ಮ್ಯಾಗ್ನೆಟ್ ಕಂಪ್ಯಾಕ್ಟ್ ಎಸ್‌ಯುವಿ ವಿಶೇಷತೆ ಏನು?

ಹೊಸದಾಗಿ ಅಭಿವೃದ್ದಿಗೊಳಿಸಲಾಗಿರುವ 1.0-ಲೀಟರ್ ಟರ್ಬೋ ಪೆಟ್ರೋಲ್ ಎಂಜಿನ್ ಮಾದರಿಯು ನಿಸ್ಸಾನ್ ಮ್ಯಾಗ್ನೆಟ್ ಕಾರಿನಲ್ಲಿ ಮಾತ್ರವಲ್ಲದೇ ರೆನಾಲ್ಟ್ ಟ್ರೈಬರ್ ಟರ್ಬೋ ವರ್ಷನ್ ಮತ್ತು ಕಿಗರ್ ಕಾರಿನಲ್ಲೂ ಬಳಕೆಯಾಗಲಿದ್ದು, ಹೊಸ ಕಾರು ಪ್ರತಿಸ್ಪರ್ಧಿ ಕಾರುಗಳಿಂತಲೂ ಆಕರ್ಷಕ ಬೆಲೆಯೊಂದಿಗೆ ಬಿಡುಗಡೆಯಾಗಲಿದೆ.

MOST READ: ಪ್ರತಿ ಚಾರ್ಜ್‌ಗೆ 480 ಕಿ.ಮೀ ಮೈಲೇಜ್ ನೀಡುವ ಎಲೆಕ್ಟ್ರಿಕ್ ಎಸ್‌ಯುವಿ ಬಿಡುಗಡೆ ಮಾಡಲಿದೆ ನಿಸ್ಸಾನ್

ನಿಸ್ಸಾನ್ ಮ್ಯಾಗ್ನೆಟ್ ಕಂಪ್ಯಾಕ್ಟ್ ಎಸ್‌ಯುವಿ ವಿಶೇಷತೆ ಏನು?

ಹೊಸ ಕಾರನ್ನು ಇದೇ ವರ್ಷಾಂತ್ಯದೊಳಗೆ ಬಿಡುಗಡೆಗೊಳಿಸಲು ಯತ್ನಿಸುತ್ತಿರುವ ನಿಸ್ಸಾನ್ ಕಂಪನಿಯು ರೋಡ್ ಟೆಸ್ಟಿಂಗ್ ಪ್ರಕ್ರಿಯೆಯನ್ನು ತೀವ್ರಗೊಳಿಸಿದ್ದು, ದೆಹಲಿ ಎಕ್ಸ್‌ಶೋರೂಂ ಪ್ರಕಾರ ಹೊಸ ಕಾರು ಆರಂಭಿಕವಾಗಿ ರೂ. 6.50 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 9 ಲಕ್ಷ ಬೆಲೆ ಹೊಂದುವ ಸಾಧ್ಯತೆಗಳಿವೆ.

More from DriveSpark

Article Published On: Saturday, July 18, 2020, 19:12 [IST]
English summary
Top Things To Know About Nissan Magnite. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+