ಮ್ಯಾಗ್ನೆಟ್ ಕಾರು ಬಿಡುಗಡೆಗೂ ಮುನ್ನ ಮತ್ತೊಂದು ಟೀಸರ್ ಅನಾವರಣ
ನಿಸ್ಸಾನ್ ಗ್ಲೊಬಲ್ ಕಂಪನಿಯು ಅಂತರ್‌ರಾಷ್ಟ್ರೀಯ ಮಾರುಕಟ್ಟೆಗಳಿಗಾಗಿ ವಿವಿಧ ಮಾದರಿಯ 12 ಹೊಸ ಕಾರುಗಳನ್ನು ಬಿಡುಗಡೆಗೊಳಿಸಲು ಸಜ್ಜಾಗುತ್ತಿದ್ದು, ಭಾರತದಲ್ಲಿ ಬಿಡುಗಡೆಯಾಗಲಿರುವ ಮ್ಯಾಗ್ನೆಟ್ ಕಂಪ್ಯಾಕ್ಟ್ ಎಸ್‌ಯುವಿ ಕಾರಿನ ಮತ್ತೊಂದು ಟೀಸರ್ ಬಿಡುಗಡೆ ಮಾಡಿದೆ.

ಅಂತರ್‌ರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ಮುಂದಿನ 18 ತಿಂಗಳ ಅವಧಿಯಲ್ಲಿ ಬಿಡುಗಡೆಯಾಗಲಿರುವ ಹೊಸ 12 ಕಾರುಗಳಲ್ಲಿ ಮ್ಯಾಗ್ನೆಟ್ ಕಂಪ್ಯಾಕ್ಟ್ ಎಸ್‌ಯುವಿ ಕಾರು ಕೂಡಾ ಒಂದಾಗಿದ್ದು, ಹೊಸ ಕಾರಿನ ಕಾರಿನ ಬಿಡುಗಡೆ ಕುರಿತಾಗಿ ಈಗಾಗಲೇ ನಿಸ್ಸಾನ್ ಇಂಡಿಯಾ ಕಂಪನಿಯು ವಿವಿಧ ಮಾದರಿಯ ರೋಡ್ ಟೆಸ್ಟಿಂಗ್ ಪ್ರಕ್ರಿಯೆಗಳನ್ನು ಕೈಗೊಂಡಿದೆ. ಹೊಸ ಕಾರು ಮುಂಬರುವ ಕೆಲವೇ ದಿನಗಳಲ್ಲಿ ಮಾರುಕಟ್ಟೆ ಪ್ರವೇಶಿಸಲಿದ್ದು, ಗ್ರಾಹಕರ ಆಯ್ಕೆಯಲ್ಲಿ ಹೊಸ ಸಂಚಲನ ಮೂಡಿಸಲಿದೆ.
ನಿಸ್ಸಾನ್ ಕಂಪನಿಯು ಬಿಡುಗಡೆ ಮಾಡಲಿರುವ ಹೊಸ ಕಂಪ್ಯಾಕ್ಟ್ ಎಸ್‌ಯುವಿ ಕಾರು ಆಕರ್ಷಕ ಬೆಲೆಯೊಂದಿಗೆ ಬಿಡುಗಡೆಯಾಗುವ ಸುಳಿವು ನೀಡಿದ್ದು, ಗ್ರಾಹಕರನ್ನು ಸೆಳೆಯಲು ಸಿದ್ದವಾಗಿರುವ ಹೊಸ ಕಾರಿನ ತಾಂತ್ರಿಕ ಅಂಶಗಳು ಈಗಾಗಲೇ ಬಹಿರಂಗವಾಗಿವೆ.

ಸದ್ಯಕ್ಕೆ ಹೊಸ ಕಾರನ್ನು EM2 ಕೋಡ್ ನೆಮ್ ಆಧಾರದ ಮೇಲೆ ರೋಡ್ ಟೆಸ್ಟಿಂಗ್ ಮಾಡಲಾಗಿದ್ದು, ಹೊಸ ಕಾರಿನ ಅಧಿಕೃತ ಹೆಸರನ್ನು 'ಮ್ಯಾಗ್ನೆಟ್' ಎಂದು ಕರೆಯಲಾಗಿದೆ. ಮಾರುತಿ ಬ್ರೆಝಾ, ಹ್ಯುಂಡೈ ವೆನ್ಯೂ, ಟಾಟಾ ನೆಕ್ಸಾನ್, ಮಹೀಂದ್ರಾ ಎಕ್ಸ್‌ಯುವಿ 300 ಮಾದರಿಗಳಿಗೆ ಪೈಪೋಟಿಯಾಗಿ ಈ ಕಾರು ಬಿಡುಗಡೆಯಾಗಲಿದ್ದು, ಬೆಲೆ ವಿಚಾರದಲ್ಲೂ ಪ್ರತಿಸ್ಪರ್ಧಿ ಕಾರುಗಳಿಗಳಿಂತಲೂ ಉತ್ತಮವಾಗಿದೆ.

ಮಾರುಕಟ್ಟೆಯಲ್ಲಿರುವ ಕಿಕ್ಸ್ ಎಸ್‌ಯುವಿ ಮಾದರಿಗಿಂತಲೂ ಕೆಳದರ್ಜೆಯ ಕಾರು ಮಾದರಿಯಾಗಿ ಮಾರಾಟಗೊಳ್ಳಲಿರುವ ಹೊಸ ಮ್ಯಾಗ್ನೆಟ್ ಕಾರು ಪೆಟ್ರೋಲ್ ಎಂಜಿನ್‌ನಲ್ಲಿ ಮಾತ್ರವೇ ಖರೀದಿಗೆ ಲಭ್ಯವಿರಲಿದೆ.

ಬಿಎಸ್-6 ನಿಯಮ ಜಾರಿ ನಂತರ ಡೀಸೆಲ್ ಕಾರುಗಳ ಮಾರಾಟದಲ್ಲಿ ಭಾರೀ ಬದಲಾವಣೆ ಮಾಡಲಾಗಿದ್ದು, ಹೈ ಎಂಡ್ ಕಾರುಗಳಲ್ಲಿ ಹೊರತುಪಡಿಸಿ ಸಣ್ಣ ಮತ್ತು ಮಧ್ಯಮ ಗಾತ್ರದ ಕಾರುಗಳಲ್ಲಿ ಕೇವಲ ಪೆಟ್ರೋಲ್ ಎಂಜಿನ್ ಆಯ್ಕೆಯನ್ನು ಮಾತ್ರವೇ ನೀಡಲಾಗುತ್ತಿದೆ.

ಇದಕ್ಕಾಗಿ ಸಹಭಾಗಿತ್ವದ ಯೋಜನೆ ಅಡಿ ನಿಸ್ಸಾನ್ ಜೊತೆಗೂಡಿರುವ ರೆನಾಲ್ಟ್ ಕಂಪನಿಯು ಮತ್ತಷ್ಟು ಹೊಸ ಪೆಟ್ರೋಲ್ ಎಂಜಿನ್‌ಗಳ ಅಭಿವೃದ್ದಿಗೆ ಚಾಲನೆ ನೀಡಿದ್ದು, ಹೊಸದಾಗಿ ನಿರ್ಮಾಣ ಮಾಡಲಾಗುತ್ತಿರುವ 1.0-ಲೀಟರ್ ಟರ್ಬೋ ಪೆಟ್ರೋಲ್ ಎಂಜಿನ್ ಅನ್ನು ಎರಡೂ ಕಂಪನಿಗಳು ಬಳಕೆ ಮಾಡಿಕೊಳ್ಳಲಿವೆ.
MOST READ: ಸ್ಕ್ರ್ಯಾಪಿಂಗ್ ನೀತಿ ಜಾರಿಗೆ ಅಂತಿಮ ಸಿದ್ದತೆ- ಆಟೋ ಉದ್ಯಮದಲ್ಲಿ ಹೊಸ ಸಂಚಲನ..

ರೆನಾಲ್ಟ್ ಹೊಚ್ಚ ಹೊಸ ಕಿಗರ್ ಮತ್ತು ನಿಸ್ಸಾನ್ ಮ್ಯಾಗ್ನೆಟ್ ಕಂಪ್ಯಾಕ್ಟ್ ಎಸ್‌ಯುವಿ ಕಾರಿನಲ್ಲಿ ಒಂದೇ ಮಾದರಿಯ 1.0-ಲೀಟರ್ ಟರ್ಬೋ ಪೆಟ್ರೋಲ್ ಎಂಜಿನ್ ಆಯ್ಕೆಗೆ ಲಭ್ಯವಾಗಲಿದ್ದು, ಉತ್ತಮ ಎಂಜಿನ್ ಪರ್ಫಾಮೆನ್ಸ್‌ನೊಂದಿಗೆ ಇಂಧನ ದಕ್ಷತೆಯಲ್ಲೂ ಗಮನಸೆಳಲಿವೆ.

ಇನ್ನು ಹೊಸ ಮ್ಯಾಗ್ನೆಟ್ ಕಾರಿನಲ್ಲಿ ಫುಲ್ ಎಲ್‌ಇಡಿ ಹೆಡ್‌ಲ್ಯಾಂಪ್ ಮತ್ತು ಎಲ್ಇಡಿ ಟೈಲ್‌ಲೈಟ್, ಸನ್‌ರೂಫ್ ಸೇರಿದಂತೆ ಹಲವು ಕಾರ್ ಕನೆಕ್ಟ್ ಫೀಚರ್ಸ್‌ಗಳನ್ನು ನೀಡಲಾಗುತ್ತಿದ್ದು, ಕಿಕ್ಸ್ ಮಾದರಿಯಲ್ಲಿನ ಕೆಲವು ಫೀಚರ್ಸ್‌ಗಳನ್ನು ಸಹ ಹೊಸ ಕಾರಿನ ಹೊರಭಾಗದ ವಿನ್ಯಾಸಗಳಲ್ಲಿ ಅಳವಡಿಸಲಾಗಿದೆ.
MOST READ: ಲಾಕ್‌ಡೌನ್ ವಿನಾಯ್ತಿ ನಂತರ ಮೊದಲ ಬಾರಿಗೆ ನೆಕ್ಸಾನ್ ಇವಿ ವಿತರಣೆ ಪುನಾರಂಭಿಸಿದ ಟಾಟಾ

ಬಿಡುಗಡೆಯ ಅವಧಿ ಮತ್ತು ಬೆಲೆ(ಅಂದಾಜು)
ಮಾಹಿತಿಗಳ ಪ್ರಕಾರ, ನಿಸ್ಸಾನ್ ಹೊಸ ಮ್ಯಾಗ್ನೆಟ್ ಕಾರು ಮುಂದಿನ ಅಗಸ್ಟ್ ಹೊತ್ತಿಗೆ ಖರೀದಿಗೆ ಲಭ್ಯವಾಗಲಿದ್ದು, ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 6 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ.9 ಲಕ್ಷದೊಳಗೆ ಬಿಡುಗಡೆ ಮಾಡುವ ಸಾಧ್ಯತೆಗಳಿವೆ.


Click it and Unblock the Notifications