ಡಿಜೈರ್ ಕಾರಿಗೆ ಪೈಪೋಟಿಯಾಗಿ ಹೊಸ ಕಂಪ್ಯಾಕ್ಟ್ ಸೆಡಾನ್ ಬಿಡುಗಡೆ ಮಾಡಲಿದೆ ನಿಸ್ಸಾನ್
ಕಾರು ಮಾರಾಟದಲ್ಲಿ ಹೊಸ ಬದಲಾವಣೆಗೆ ಕಾರಣವಾಗುತ್ತಿರುವ ನಿಸ್ಸಾನ್ ಕಂಪನಿಯು ಮುಂಬರುವ ದಿನಗಳಲ್ಲಿ ಹಲವು ಹೊಸ ಕಾರು ಮಾದರಿಗಳನ್ನು ಬಿಡುಗಡೆ ಮಾಡುವ ಯೋಜನೆಯಲ್ಲಿದ್ದು, ಕಂಪ್ಯಾಕ್ಟ್ ಸೆಡಾನ್ ಮಾದರಿಗಳಲ್ಲಿ ಅಗ್ರಸ್ಥಾನದಲ್ಲಿರುವ ಮಾರುತಿ ಸುಜುಕಿ ಡಿಜೈರ್ ಕಾರಿಗೆ ಪೈಪೋಟಿಯಾಗಿ ಹೊಸ ಕಾರು ಬಿಡುಗಡೆ ಮಾಡಲಿದೆ.

ಸದ್ಯ ಭಾರತದಲ್ಲಿ ನಿಸ್ಸಾನ್ ಕಂಪನಿ ಪ್ರಯಾಣಿಕ ಕಾರು ಮಾರಾಟ ಕೇವಲ ಒಂದೇ ಒಂದು ಕಾರು ಮಾದರಿಯ ಮಾರಾಟವನ್ನು ಹೊಂದಿದ್ದು, ಶೀಘ್ರದಲ್ಲೇ ಕಂಪ್ಯಾಕ್ಟ್ ಎಸ್‌ಯುವಿ ಜೊತೆಗೆ ಕಂಪ್ಯಾಕ್ಟ್ ಸೆಡಾನ್ ಮಾದರಿಯನ್ನು ಸಹ ಬಿಡುಗಡೆ ಮಾಡುವ ಯೋಜನೆ ರೂಪಿಸಲಾಗಿದೆ. ಕಿಕ್ಸ್ ಕಾರಿನ ನಂತರ ಹಲವು ಹೊಸ ಕಾರು ಮಾದರಿಗಳನ್ನು ಭಾರತದಲ್ಲಿ ಬಿಡುಗಡೆ ಮಾಡಲಿರುವ ನಿಸ್ಸಾನ್ ಸದ್ಯ ರೆನಾಲ್ಟ್ ಜೊತೆಗೂಡಿ ಹೊಸ ಎಂಜಿನ್ ಮಾದರಿಯನ್ನು ವಿವಿಧ ಕಾರು ಮಾದರಿಗಳಿಗಾಗಿ ಅಭಿವೃದ್ದಿಪಡಿಸಿದೆ.

ಸಹಭಾಗಿತ್ವ ಯೋಜನೆ ಅಡಿ ನಿರ್ಮಾಣ ಮಾಡಲಾದ ಎಂಜಿನ್‌ಗಳನ್ನು ರೆನಾಲ್ಟ್ ಮತ್ತು ನಿಸ್ಸಾನ್ ಎರಡು ಕಂಪನಿಗಳು ಬಳಕೆ ಮಾಡಲಿದ್ದು, ಉಭಯ ಕಂಪನಿಗಳು ಡೀಸೆಲ್ ಕಾರುಗಳನ್ನು ಸ್ಥಗಿತಗೊಳಿಸಿ ಸಂಪೂರ್ಣವಾಗಿ ಪೆಟ್ರೋಲ್ ಮತ್ತು ಹೈಬ್ರಿಡ್ ಕಾರುಗಳ ಅಭಿವೃದ್ದಿಯತ್ತ ಯೋಜನೆ ರೂಪಿಸಿದೆ.

ಕಂಪ್ಯಾಕ್ಟ್ ಸೆಡಾನ್ ಕಾರು ಸದ್ಯ ಮಾರುಕಟ್ಟೆಯಲ್ಲಿರುವ ಮಾರುತಿ ಸುಜುಕಿ ಡಿಜೈರ್, ಹೋಂಡಾ ಅಮೇಜ್, ಹ್ಯುಂಡೈ ಔರಾ ಕಾರುಗಳಿಗೆ ಪೈಪೋಟಿಯಾಗಿ ಬಿಡುಗಡೆಯಾಗಲಿದ್ದು, ಮುಂಬರುವ ದಿನಗಳಲ್ಲಿ ಬಿಡುಗಡೆಯಾಗಲಿರುವ ಮ್ಯಾಗ್ನೆಟ್ ಕಂಪ್ಯಾಕ್ಟ್ ಎಸ್‌ಯುವಿ ಎಂಜಿನ್ ಪಡೆದುಕೊಳ್ಳಬಹುದಾಗಿದೆ.

ಕಂಪ್ಯಾಕ್ಟ್ ಸೆಡಾನ್ ಬಿಡುಗಡೆಗೂ ಮುನ್ನ ಬಹುನೀರಿಕ್ಷಿತ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯಾದ ಮ್ಯಾಗ್ನೆಟ್ ಕಾರು ರಸ್ತೆಗಿಳಿಯಲಿದ್ದು, ಹೊಸ ಕಾರುಗಳು ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ.7 ಲಕ್ಷದಿಂದ ರೂ.10 ಲಕ್ಷ ಬೆಲೆ ಅಂತರದಲ್ಲಿ ಬಿಡುಗಡೆಯಾಗಲಿವೆ.

ಸದ್ಯಕ್ಕೆ ವಿಶ್ವಾದ್ಯಂತ ಆತಂಕ ಸೃಷ್ಠಿಸಿರುವ ಕರೋನಾ ವೈರಸ್ ಹಾವಳಿಯಿಂದಾಗಿ ಆಟೋ ಉದ್ಯಮಕ್ಕೆ ಸಂಕಷ್ಟಕ್ಕೆ ಸಿಲುಕಿದ್ದು, ಆಟೋ ಉತ್ಪಾದನೆ ಮತ್ತು ಮಾರಾಟದಲ್ಲಿ ಸಾಕಷ್ಟು ಕುಸಿತ ಕಂಡಿದೆ. ಜೊತೆಗೆ ಹಲವಾರು ಹೊಸ ವಾಹನಗಳ ಬಿಡುಗಡೆಯು ಮುಂದೂಡಿಕೆಯಾಗಿದ್ದು, ನಿಸ್ಸಾನ್ ಕೂಡಾ ತನ್ನ ಹೊಸ ಕಾರು ಮಾದರಿಗಳ ಬಿಡುಗಡೆಯನ್ನು ತಾತ್ಕಲಿಕವಾಗಿ ಮುಂದೂಡಿಕೆ ಮಾಡಿದೆ.
MOST READ: ರೂ.5 ಲಕ್ಷಕ್ಕಿಂತ ಕಡಿಮೆ ಬೆಲೆಯ ಜನಪ್ರಿಯ ಕಾರುಗಳಿವು

ಇದೇ ವರ್ಷ ಅಗಸ್ಟ್ ಆರಂಭದಲ್ಲಿ ಹೊಸ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯಾದ ಮ್ಯಾಗ್ನೆಟ್ ಕಾರನ್ನು ಬಿಡುಗಡೆಯ ಯೋಜನೆಯಲ್ಲಿದ್ದ ನಿಸ್ಸಾನ್ ಕಂಪನಿಗೆ ಕರೋನಾ ಮಹಾಮಾರಿ ಬ್ರೇಕ್ ಹಾಕಿದ್ದು, ಸದ್ಯದ ಪರಿಸ್ಥಿತಿಯಲ್ಲಿ ಕಾರು ಮಾರಾಟವು ಕುಸಿದಿರುವ ಹಿನ್ನಲೆಯಲ್ಲಿ ಹೊಸ ಕಾರು ಬಿಡುಗಡೆಯನ್ನು ತಾತ್ಕಾಲಿಕವಾಗಿ ಮುಂದೂಡಿಕೆ ಮಾಡಲಾಗಿದೆ.

ನಿಸ್ಸಾನ್ ಕಂಪನಿಯು ಬಿಡುಗಡೆ ಮಾಡಲಿರುವ ಹೊಸ ಕಂಪ್ಯಾಕ್ಟ್ ಎಸ್‌ಯುವಿ ಕಾರು ಆಕರ್ಷಕ ಬೆಲೆಯೊಂದಿಗೆ ಬಿಡುಗಡೆಯಾಗುವ ಸುಳಿವು ನೀಡಿದ್ದು, ಗ್ರಾಹಕರನ್ನು ಸೆಳೆಯಲು ಸಿದ್ದವಾಗಿರುವ ಹೊಸ ಕಾರಿನ ತಾಂತ್ರಿಕ ಅಂಶಗಳು ಈಗಾಗಲೇ ಬಹಿರಂಗವಾಗಿವೆ.
MOST READ: ಕಾರು ಖರೀದಿ ಮಾಡುವ ಕರೋನಾ ವಾರಿಯರ್ಸ್‌ಗೆ ಭರ್ಜರಿ ಆಫರ್ ನೀಡಿದ ಟಾಟಾ

ಸದ್ಯಕ್ಕೆ EM2 ಕೋಡ್ ನೆಮ್ ಆಧಾರದ ಮೇಲೆ ಹೊಸ ಕಾರಿನ ಟೀಸರ್ ಅನ್ನು ಬಿಡುಗಡೆ ಮಾಡಲಾಗಿದ್ದು, ಹೊಸ ಕಾರಿನ ಅಧಿಕೃತ ಹೆಸರನ್ನು 'ಮ್ಯಾಗ್ನೆಟ್' ಎಂದು ಕರೆಯಲಾಗಿದೆ. ಹೊಸ ಕಾರು ಸದ್ಯ ಮಾರುಕಟ್ಟೆಯಲ್ಲಿ ಜನಪ್ರಿಯವಾಗಿರುವ ಮಾರುತಿ ಬ್ರೆಝಾ, ಹ್ಯುಂಡೈ ವೆನ್ಯೂ, ಟಾಟಾ ನೆಕ್ಸಾನ್, ಮಹೀಂದ್ರಾ ಎಕ್ಸ್‌ಯುವಿ 300 ಮಾದರಿಗಳಿಗೆ ಪೈಪೋಟಿಯಾಗಿ ಬಿಡುಗಡೆಯಾಗಲಿದೆ.


Click it and Unblock the Notifications