ಲಾಕ್‌ಡೌನ್ ಎಫೆಕ್ಟ್: ಸರಕು ಸಾಗಣೆ ವಾಹನಗಳ ಸಂಚಾರಕ್ಕೆ ಅವಕಾಶ ನೀಡಲು ಸೂಚಿಸಿದ ಕೇಂದ್ರ ಸಚಿವ

ಲಾಕ್‌ಡೌನ್ ಜಾರಿಯಲ್ಲಿರುವ ಈ ಸಂದರ್ಭದಲ್ಲಿ ಅಗತ್ಯ ವಸ್ತುಗಳನ್ನು ಸಾಗಿಸುವ ವಾಹನಗಳ ಅಂತರರಾಜ್ಯ ಸಂಚಾರಕ್ಕೆ ಅನುಕೂಲವಾಗುವಂತೆ ಕೂಡಲೇ ಕ್ರಮ ಕೈಗೊಳ್ಳಬೇಕೆಂದು ಕೇಂದ್ರ ಸಾರಿಗೆ ಹಾಗೂ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಮಂಗಳವಾರ ರಾಜ್ಯ ಸರ್ಕಾರಗಳಿಗೆ ಸೂಚನೆ ನೀಡಿದ್ದಾರೆ.

ಲಾಕ್‌ಡೌನ್ ಎಫೆಕ್ಟ್: ಸರಕು ಸಾಗಣೆ ವಾಹನಗಳ ಸಂಚಾರಕ್ಕೆ ಅವಕಾಶ ನೀಡಲು ಸೂಚಿಸಿದ ಕೇಂದ್ರ ಸಚಿವ

ಇದರ ಜೊತೆಗೆ ರಸ್ತೆ ನಿರ್ಮಾಣಕ್ಕಾಗಿ ಭೂಸ್ವಾಧೀನವನ್ನು ತ್ವರಿತಗೊಳಿಸುವಂತೆ ಹಾಗೂ ರೂ.25 ಸಾವಿರ ಕೋಟಿ ಹಣವನ್ನು ಬಳಸಿಕೊಳ್ಳುವಂತೆ ಗಡ್ಕರಿರವರು ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಸೂಚಿಸಿದ್ದಾರೆ. ರಾಜ್ಯ ಸಾರಿಗೆ ಸಚಿವರೊಂದಿಗೆ ನಡೆಸಿದ ವೀಡಿಯೊ ಕಾನ್ಫರೆನ್ಸ್‌ನಲ್ಲಿ ಗಡ್ಕರಿರವರು ಆರ್ಥಿಕ ಸ್ಥಿತಿಯನ್ನು ಮತ್ತೆ ಸರಿ ದಾರಿಗೆ ತರುವುದರ ಜೊತೆಗೆ ಸೌಲಭ್ಯಗಳನ್ನು ಸುಧಾರಿಸಲು ರಾಜ್ಯಗಳ ಸಹಕಾರವನ್ನು ಕೋರಿದ್ದಾರೆ.

ಲಾಕ್‌ಡೌನ್ ಎಫೆಕ್ಟ್: ಸರಕು ಸಾಗಣೆ ವಾಹನಗಳ ಸಂಚಾರಕ್ಕೆ ಅವಕಾಶ ನೀಡಲು ಸೂಚಿಸಿದ ಕೇಂದ್ರ ಸಚಿವ

ಎಲ್ಲಾ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ತಕ್ಷಣವೇ ಕ್ರಮ ಕೈಗೊಳ್ಳುವಂತೆ ಸೂಚಿಸಿರುವ ನಿತಿನ್ ಗಡ್ಕರಿರವರು, ಇದರಿಂದಾಗಿ ಅಂತರರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳ ಗಡಿಯಲ್ಲಿ ಲಾರಿಗಳು ಹಾಗೂ ಟ್ರಕ್‌ಗಳಿಗೆ ಉಂಟಾಗಿರುವ ನಿರ್ಬಂಧ ಶೀಘ್ರದಲ್ಲಿಯೇ ಕೊನೆಯಾಗಬಹುದೆಂಬ ವಿಶ್ವಾಸದಲ್ಲಿದ್ದಾರೆ.

MOSTREAD: ಕರೋನಾ ವೈರಸ್ ಎಫೆಕ್ಟ್: ಭಾರೀ ಪ್ರಮಾಣದಲ್ಲಿ ಕುಸಿದ ಇಂಧನ ಮಾರಾಟ

ಲಾಕ್‌ಡೌನ್ ಎಫೆಕ್ಟ್: ಸರಕು ಸಾಗಣೆ ವಾಹನಗಳ ಸಂಚಾರಕ್ಕೆ ಅವಕಾಶ ನೀಡಲು ಸೂಚಿಸಿದ ಕೇಂದ್ರ ಸಚಿವ

ಈ ಸಭೆಯಲ್ಲಿ ಮಾತನಾಡಿದ ಗಡ್ಕರಿರವರು, ಸಚಿವರುಗಳು ಈ ವಿಷಯದಲ್ಲಿ ಮಧ್ಯಪ್ರವೇಶಿಸಿ ಸ್ಥಳೀಯ ಅಥವಾ ಜಿಲ್ಲಾಡಳಿತದ ಮೂಲಕ ನಿರ್ಣಯಗಳನ್ನು ತೆಗೆದುಕೊಳ್ಳಬೇಕು ಎಂದು ಹೇಳಿದರು. ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳುವುದರ ಜೊತೆಗೆ, ಮಾಸ್ಕ್ ಧರಿಸುವುದು ಹಾಗೂ ಸ್ಯಾನಿಟೈಜರ್‌ ಬಳಕೆಯ ಬಗ್ಗೆಯೂ ಅವರು ಹೇಳಿದರು.

ಲಾಕ್‌ಡೌನ್ ಎಫೆಕ್ಟ್: ಸರಕು ಸಾಗಣೆ ವಾಹನಗಳ ಸಂಚಾರಕ್ಕೆ ಅವಕಾಶ ನೀಡಲು ಸೂಚಿಸಿದ ಕೇಂದ್ರ ಸಚಿವ

ಕಾರ್ಖಾನೆಗಳ ಕಾರ್ಮಿಕರು ಕನಿಷ್ಠ ಒಂದು ಮೀಟರ್ ಅಂತರವನ್ನು ಕಾಯ್ದುಕೊಳ್ಳಬೇಕು, ಜೊತೆಗೆ ಮಾಸ್ಕ್ ಹಾಗೂ ಸ್ಯಾನಿಟೈಜರ್‌ಗಳನ್ನು ಬಳಸಬೇಕೆಂದು ನಿತಿನ್ ಗಡ್ಕರಿರವರು ಹೇಳಿದರು.

MOSTREAD: ರಾಷ್ಟ್ರೀಯ ಹೆದ್ದಾರಿ ನಿರ್ಮಾಣದಲ್ಲಿ ಹೊಸ ದಾಖಲೆ ಬರೆದ ಕೇಂದ್ರ ಸರ್ಕಾರ

ಲಾಕ್‌ಡೌನ್ ಎಫೆಕ್ಟ್: ಸರಕು ಸಾಗಣೆ ವಾಹನಗಳ ಸಂಚಾರಕ್ಕೆ ಅವಕಾಶ ನೀಡಲು ಸೂಚಿಸಿದ ಕೇಂದ್ರ ಸಚಿವ

ಧಾಬಾ ಹಾಗೂ ಹೋಟೆಲ್‌ಗಳಂತಹ ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರವನ್ನು ಅನುಸರಿಸುವ ಮೂಲಕ, ಕಾರ್ಮಿಕರಿಗೆ ಊಟ ನೀಡಿ ಸ್ವಚ್ವತೆಯನ್ನು ಕಾಪಾಡಬೇಕು ಎಂದು ಅವರು ಹೇಳಿದರು.

ಲಾಕ್‌ಡೌನ್ ಎಫೆಕ್ಟ್: ಸರಕು ಸಾಗಣೆ ವಾಹನಗಳ ಸಂಚಾರಕ್ಕೆ ಅವಕಾಶ ನೀಡಲು ಸೂಚಿಸಿದ ಕೇಂದ್ರ ಸಚಿವ

ಗ್ರಾಮೀಣ ಪ್ರದೇಶದಲ್ಲಿ ಮೊಬೈಲ್ ಅಪ್ಲಿಕೇಶನ್ ಆಧಾರಿತ ದ್ವಿಚಕ್ರ ವಾಹನ ಟ್ಯಾಕ್ಸಿ ಸೇವೆಯನ್ನು ಆರಂಭಿಸಬೇಕೆಂದು ರಾಜ್ಯ ಸಾರಿಗೆ ಸಚಿವರಿಗಳಿಗೆ ಗಡ್ಕರಿರವರು ಸೂಚಿಸಿದರು.

Article Published On: Wednesday, April 29, 2020, 16:56 [IST]
English summary
Nitin Gadkari requests essential good transport between states to be allowed. Read in kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+