ಅಲ್ ವ್ಹೀಲ್ ಡ್ರೈವ್ ಸಿಸ್ಟಂ ಹೊಂದಿಲ್ಲ ಫೋಕ್ಸ್‌ವ್ಯಾಗನ್ ಹೊಸ ಎಸ್‌ಯುವಿ
ಫೋಕ್ಸ್‌ವ್ಯಾಗನ್ ಸಂಸ್ಥೆಯು ಟೈಗನ್ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯನ್ನು ದೆಹಲಿ ಆಟೋ ಎಕ್ಸ್‌ಪೋದಲ್ಲಿ ಪ್ರದರ್ಶಿಸಿತ್ತು. ಶೀಘ್ರದಲ್ಲೇ ಫೋಕ್ಸ್‌ವ್ಯಾಗನ್ ಸಂಸ್ಥೆಯು ಟೈಗನ್ ಕಂಪ್ಯಾಕ್ಟ್ ಎಸ್‌ಯುವಿಯನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲಿದೆ.

ಟೈಗನ್ ಎಸ್‍ಯುವಿಯು ಆಲ್-ವ್ಹೀಲ್-ಡ್ರೈವ್ ಸಿಸ್ಟಂ ಅನ್ನು ಹೊಂದಿರುವುದಿಲ್ಲ ಎಂದು ಕಾರ್ ಅಂಡ್ ಬೈಕ್ ವರದಿ ಮಾಡಿದೆ. ಈ ಎಸ್‍ಯುವಿಯು ಕೇವಲ 2ಡಬ್ಲ್ಯೂಡಿ ಆಯ್ಕೆಯನ್ನು ಮಾತ್ರ ಹೊಂದಿರುತ್ತದೆ. ಈ ಎಸ್‍ಯುವಿಯು 1.0 ಲೀಟರ್ ಟಿಎಸ್‌ಐ ಪೆಟ್ರೋಲ್ ಎಂಜಿನ್ ಅನ್ನು ಹೊಂದಿರಲಿದೆ. ಈ ಎಂಜಿನ್ ಬಿಹೆಚ್‌ಪಿ ಪವರ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್ ನೊಂದಿಗೆ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಮತ್ತು ಮ್ಯಾನುವಲ್ ಗೇರ್‌ಬಾಕ್ಸ್ ಆಯ್ಕೆಯನ್ನು ಹೊಂದಿರುತ್ತದೆ.

ಇದರೊಂದಿಗೆ ಟೈಗನ್ ಕಾರಿನಲ್ಲಿ 1.5 ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ ಅಳವಡಿಸಲಿದೆ. ಈ ಎಂಜಿನ್ 5-ಸ್ಪಿಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಯೊಂದಿಗೆ 130-ಬಿಹೆಚ್‍ಪಿ ಪವರ್ ಉತ್ಪಾದಿಸುತ್ತದೆ. ಈ ಎಸ್‍ಯುವಿಯನ್ನು ಡೀಸೆಲ್ ಎಂಜಿನ್‍ನಲ್ಲಿ ಬಿಡುಗಡೆಗೊಳಿಸುವುದಿಲ್ಲ.
MOST READ: ಅನಾವರಣಗೊಂಡ ಹೊಸ ಟೊಯೊಟಾ ಹ್ಯಾರಿಯರ್ ಎಸ್ಯುವಿ

ಈ ಮಧ್ಯಮ ಗಾತ್ರದ ಎಸ್‍ಯುವಿ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿರುವ ಎಸ್‍ಯುವಿಗಳಿಗಿಂತ ಹೆಚ್ಚಿನ ಪ್ರಮಾಣದ ಗ್ರೌಂಡ್ ಕ್ಲಿಯರೆನ್ಸ್ ಹಾಗೂ ಹೆಚ್ಚುವರಿ ವ್ಹೀಲ್‍ಬೇಸ್ ಅನ್ನು ಹೊಂದಿರಲಿದೆ.

ಈ ಹೊಸ ಎಸ್‍ಯುವಿಯು ಫೋಕ್ಸ್‌ವ್ಯಾಗನ್‍ನಲ್ಲಿರುವಂತಹ ಡಿಸೈನ್ ಫೀಚರ್‍ಗಳನ್ನು ಹೊಂದಿದೆ. ಈ ಫೀಚರ್‍ಗಳಲ್ಲಿ ಎಲ್‍ಇಡಿ ಟೇಲ್ ಲೈಟ್ ಹಾಗೂ ಎಲ್‍ಇಡಿ ಲೈಟ್ ಬಾರ್‍ಗಳು ಸೇರಿವೆ.
MOST READ: ಹೊಸ ವಿನ್ಯಾಸದೊಂದಿಗೆ ಬಿಡುಗಡೆಯಾಗಲಿದೆ ಸ್ಕೋಡಾ ಸೂಪರ್ಬ್ ಫೇಸ್‌ಲಿಫ್ಟ್

ಆಕರ್ಷಕವಾಗಿರುವ ಈ ಎಸ್‍ಯುವಿಯ ಇಂಟಿರಿಯರ್ ಅಡ್ವಾನ್ಸ್ ಟೆಕ್ನಿಕಲ್ ಫೀಚರ್‍ಗಳಾದ ಟಚ್ ಸ್ಕ್ರೀನ್ ಇನ್ಫೋಟೆನ್‍ಮೆಂಟ್ ಸಿಸ್ಟಂ ಹಾಗೂ ಡಿಜಿಟಲ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್‍ಗಳನ್ನು ಹೊಂದಿದೆ.

ಇನ್ನು ಈ ಹೊಸ ಎಸ್‍ಯುವಿಯನ್ನು ಫೋಕ್ಸ್‌ವ್ಯಾಗನ್‍ನ ಇಂಡಿಯಾ 2.0 ಯೋಜನೆಯಡಿ ಸ್ಕೋಡಾ ಸಹಭಾಗಿತ್ವದೊಂದಿಗೆ ಉತ್ಪಾದನೆ ಮಾಡಲಿದೆ, ಹೊಸ ಯೋಜನೆಗಾಗಿ ಭಾರತದಲ್ಲಿ ಬರೋಬ್ಬರಿ ರೂ.7,900 ಕೋಟಿ ಬಂಡವಾಳ ಹೂಡಿಕೆ ಮಾಡಲಾಗುತ್ತದೆ.
MOST READ: ಇತಿಹಾಸದ ಪುಟ ಸೇರಿದ ಫೋಕ್ಸ್‌ವ್ಯಾಗನ್ ಎಮಿಯೊ ಕಾರು

ಹೊಸ ಟೈಗನ್ ಎಸ್‍ಯುವಿ ಕಾರು ಸದ್ಯ ಮಾರುಕಟ್ಟೆಯಲ್ಲಿ ಜನಪ್ರಿಯವಾಗುತ್ತಿರುವ ಕಿಯಾ ಸೆಲ್ಟೊಸ್, ಹ್ಯುಂಡೈ ಕ್ರೆಟಾ ಹಾಗೂ ಎಂಜಿ ಹೆಕ್ಟರ್ ಕಾರುಗಳಿಗೆ ಪೈಪೋಟಿ ನೀಡಲಿದೆ, ಹೊಸ ಎಂಕ್ಯೂಬಿ ಎ0 ಪ್ಲಾಟ್‍ಫಾರಂನಡಿಯಲ್ಲಿ ಈ ಕಾರು ಅಭಿವೃದ್ದಿಪಡಿಸಲಾಗುತ್ತದೆ.

ಫೋಕ್ಸ್‌ವ್ಯಾಗನ್ ಮತ್ತು ಸ್ಕೋಡಾ ಮುಂದಿನ ಎರಡು ವರ್ಷಗಳಲ್ಲಿ 2.0 ಯೋಜನೆಯಡಿಯಲ್ಲಿ ಹಲವು ಹೊಸ ಕಾರುಗಳನ್ನು ಬಿಡುಗಡೆಗೊಳಿಸಲಿವೆ. ಈ ಟೈಗಾನ್ ಎಸ್‍ಯುವಿಯು ಭಾರತೀಯ ಮಾರುಕಟ್ಟೆಯಲ್ಲಿ ಮುಂದಿನ ವರ್ಷ ಬಿಡುಗಡೆಯಾಗಲಿದೆ.


Click it and Unblock the Notifications








