Just In
- 11 hrs ago
ಬಿಡುಗಡೆಗೆ ಸಜ್ಜಾದ ಹೊಸ ಡುಕಾಟಿ ಸ್ಕ್ರ್ಯಾಂಬ್ಲರ್ ಬೈಕುಗಳು
- 11 hrs ago
ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಬಹುನೀರಿಕ್ಷಿತ ಫೋರ್ಸ್ ನ್ಯೂ ಜನರೇಷನ್ ಗೂರ್ಖಾ
- 11 hrs ago
ಸೀಮನ್ಸ್ ಕಂಪನಿಯ ಜೊತೆಗೂಡಿ ಆಧುನಿಕ ಎಲೆಕ್ಟ್ರಿಕ್ ವಾಹನ ಉತ್ಪಾದನಾ ಘಟಕವನ್ನು ಅಭಿವೃದ್ದಿಪಡಿಸಲಿದೆ ಓಲಾ
- 12 hrs ago
ಹೊಸ ವಿನ್ಯಾಸದ ಡ್ಯುಯಲ್ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ ಮಾಡಿದ ಒಕಿನಾವ
Don't Miss!
- News
ಶಿವಮೊಗ್ಗದಲ್ಲಿ ಸ್ಫೋಟ; ಮೃತಪಟ್ಟವರಿಗೆ ಸಂತಾಪ ಸೂಚಿಸಿದ ಮೋದಿ
- Movies
ಸ್ಯಾಂಡಲ್ ವುಡ್ ಸುಂದರಿಯರು; ಅಪರೂಪದ ಫೋಟೋ ಹಂಚಿಕೊಂಡ ಮಾಲಾಶ್ರೀ, ಶ್ರುತಿ
- Lifestyle
ಶುಕ್ರವಾರದ ರಾಶಿಫಲ: ಮೇಷ-ಮೀನದವರೆಗಿನ ದಿನ ಭವಿಷ್
- Sports
ಐಎಸ್ಎಲ್: ಈಸ್ಟ್ ಬೆಂಗಾಲ್ ಅಜೇಯ ನಡೆಗೆ ಬೆಸ್ಟ್ ಮುಂಬೈ ಸವಾಲು
- Finance
ಬಜೆಟ್ 2021: ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ಜನವರಿ 30ರಂದು ಸರ್ವ ಪಕ್ಷಗಳ ಸಭೆ
- Education
BMRCL Recruitment 2021: ಸೀನಿಯರ್ ಅರ್ಬನ್ ಮತ್ತು ಟ್ರಾನ್ಸ್ ಪೋರ್ಟ್ ಪ್ಲಾನರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಸಣ್ಣ ಕಾರುಗಳಲ್ಲಿ ಡೀಸೆಲ್ ಎಂಜಿನ್ ಕುರಿತು ಮಹತ್ವದ ನಿರ್ಧಾರ ಪ್ರಕಟಿಸಿದ ಮಾರುತಿ ಸುಜುಕಿ
ಬಿಎಸ್-6 ಎಮಿಷನ್ ಜಾರಿಗೂ ಮುನ್ನವೇ ತನ್ನ ಪ್ರಮುಖ ಕಾರುಗಳಲ್ಲಿನ ಡೀಸೆಲ್ ಎಂಜಿನ್ ಆಯ್ಕೆಯನ್ನು ತೆಗೆದುಹಾಕಿರುವ ಮಾರುತಿ-ಸುಜುಕಿಯು ಭವಿಷ್ಯದಲ್ಲೂ ಯಾವುದೇ ಕಾರಣಕ್ಕೂ ಹೊಸ ಡೀಸೆಲ್ ಎಂಜಿನ್‌ಗಳನ್ನು ಸೇರ್ಪಡೆಗೊಳಿಸದಿರಲು ನಿರ್ಧರಿಸಿದೆ.

ಏಪ್ರಿಲ್ 1ರಿಂದ ಕಡ್ಡಾಯವಾಗಿ ಜಾರಿಗೆ ಬಂದಿರುವ ಹೊಸ ಎಮಿಷನ್ ಪ್ರಕಾರ ಡೀಸೆಲ್ ಕಾರುಗಳ ಮಾರಾಟದಲ್ಲಿ ಮಹತ್ವದ ಬದಲಾವಣೆ ಪರಿಚಯಿಸಿರುವ ಮಾರುತಿ ಸುಜುಕಿ ಕಂಪನಿಯು ಕಡಿಮೆ ಸಾಮರ್ಥ್ಯದ ಡೀಸೆಲ್ ಕಾರುಗಳ ಮಾರಾಟಕ್ಕೆ ಗುಡ್‌ಬೈ ಹೇಳಿದ್ದು, ಕೇವಲ ಪೆಟ್ರೋಲ್, ಪೆಟ್ರೋಲ್ ಹೈಬ್ರಿಡ್ ಮತ್ತು ಆಯ್ದ ಕಾರು ಮಾದರಿಗಳಲ್ಲಿ ಸಿಎನ್‌ಜಿ ಎಂಜಿನ್ ಆಯ್ಕೆಯನ್ನು ನೀಡುವ ಮೂಲಕ ಡೀಸೆಲ್ ಎಂಜಿನ್ ಮಾರಾಟವನ್ನೇ ಸ್ಥಗಿತಗೊಳಿಸಿದೆ.

ಪ್ರಸ್ತುತ ಮಾರುಕಟ್ಟೆಯಲ್ಲಿ ಮಾರುತಿ ಸುಜುಕಿ ನಿರ್ಮಾಣದ ಒಂದೇ ಒಂದು ಕಾರು ಮಾದರಿಯಲ್ಲೂ ಡೀಸೆಲ್ ಎಂಜಿನ್ ಖರೀದಿಗೆ ಲಭ್ಯವಿಲ್ಲದಿರುವುದೇ ಇದಕ್ಕೆ ಪ್ರಮುಖ ಕಾರಣವಾಗಿದ್ದು, ಭವಿಷ್ಯದಲ್ಲೂ ಡೀಸೆಲ್ ಎಂಜಿನ್ ಆಯ್ಕೆ ನೀಡುವುದು ಅನುಮಾನವೆನ್ನಲಾಗಿದೆ.

ಸದ್ಯ ಭಾರತ ಸೇರಿದಂತೆ ವಿಶ್ವದ ಪ್ರಮುಖ ರಾಷ್ಟ್ರಗಳು ಎಲೆಕ್ಟ್ರಿಕ್ ಕಾರುಗಳ ಬಳಕೆಯನ್ನು ಹೆಚ್ಚಿಸುವುದಕ್ಕಾಗಿ ಪೆಟ್ರೋಲ್ ಮತ್ತು ಡೀಸೆಲ್ ಎಂಜಿನ್ ವಾಹನಗಳ ತಗ್ಗಿಸಲು ಹಲವು ಕಠಿಣ ನಿಯಮಗಳನ್ನು ಜಾರಿಗೆ ತರಲಾಗುತ್ತಿದ್ದು, ಇದರ ಪರಿಣಾಮವೇ ಹಲವು ಡೀಸೆಲ್ ಕಾರು ಮಾದರಿಗಳು ಮಾರುಕಟ್ಟೆಯಿಂದ ಈಗಾಗಲೇ ಸ್ಥಗಿತಗೊಂಡಿವೆ.

ಹೀಗಾಗಿ ನಿಧಾನವಾಗಿ ಡೀಸೆಲ್ ಮತ್ತು ಪೆಟ್ರೋಲ್ ವಾಹನಗಳನ್ನು ತಗ್ಗಿಸುತ್ತಿರುವ ಬಹುತೇಕ ವಾಹನ ಉತ್ಪಾದನಾ ಕಂಪನಿಗಳು ಪೆಟ್ರೋಲ್ ಹೈಬ್ರಿಡ್, ಸಿಎನ್‌ಜಿ ಮತ್ತು ಎಲೆಕ್ಟ್ರಿಕ್ ಕಾರುಗಳನ್ನು ಹೆಚ್ಚಿಸುತ್ತಿದ್ದು, ಮಾಲಿನ್ಯಕ್ಕೆ ಪ್ರಮುಖ ಕಾರಣವಾಗಿರುವ ಡೀಸೆಲ್ ಎಂಜಿನ್‌ಗಳ ಉತ್ಪಾದನೆ ಗುಡ್‌ಬೈ ಹೇಳಿವೆ.

ಮಾರುತಿ ಸುಜುಕಿಯು ಕೂಡಾ ನಿಧಾನವಾಗಿ ಡೀಸೆಲ್ ಎಂಜಿನ್ ಮಾರಾಟವನ್ನು ಕೈಬಿಟ್ಟಿದ್ದು, ಪೆಟ್ರೋಲ್, ಸ್ಮಾರ್ಟ್ ಹೈಬ್ರಿಡ್ ಪ್ರೇರಿತ ಪೆಟ್ರೋಲ್ ಮತ್ತು ಸಿಎನ್‌ಜಿ ಕಾರುಗಳನ್ನು ಮಾತ್ರವೇ ಮಾರಾಟ ಮಾಡುತ್ತಿದ್ದು, ಕೆಲವು ಮಾಹಿತಿಗಳ ಪ್ರಕಾರ ಎಂಟ್ರಿ ಲೆವೆಲ್ ಕಾರುಗಳನ್ನು ಹೊರತುಪಡಿಸಿ ಹೈಎಂಡ್ ಮಾದರಿಗಳಾದ ಎಸ್-ಕ್ರಾಸ್, ಎರ್ಟಿಗಾ, ಡಿಜೈರ್ ಮತ್ತು ಸಿಯಾಜ್ ಕಾರುಗಳಿಗಾಗಿ ಮಾತ್ರವೇ ಹೊಸದಾಗಿ ಅಭಿವೃದ್ದಿಗೊಳಿಸಲಾದ 1.5-ಲೀಟರ್ ಡೀಸೆಲ್ ಎಂಜಿನ್ ನೀಡಬಹುದಾದ ಸಾಧ್ಯತೆಗಳಿವೆ ಎನ್ನಲಾಗಿದೆ.
MOST READ: ಪ್ರತಿ ಚಾರ್ಜ್‌ಗೆ 480 ಕಿ.ಮೀ ಮೈಲೇಜ್ ನೀಡುವ ಎಲೆಕ್ಟ್ರಿಕ್ ಎಸ್‌ಯುವಿ ಬಿಡುಗಡೆ ಮಾಡಲಿದೆ ನಿಸ್ಸಾನ್

ಆದರೆ ಆಲ್ಟೋ 800, ಇಕೋ, ಆಲ್ಟೋ ಕೆ10, ಎಸ್-ಪ್ರೆಸ್ಸೊ, ವ್ಯಾಗನ್ಆರ್, ಇಗ್ನಿಸ್, ಸೆಲೆರಿಯೊ, ಸ್ವಿಫ್ಟ್, ಬಲೆನೊ, ವಿಟಾರಾ ಬ್ರೆಝಾ ಕಾರುಗಳಲ್ಲಿ ಪೆಟ್ರೋಲ್ ಮತ್ತು ಸಿಎನ್‌ಜಿ ಹೊರತುಪಡಿಸಿ ಯಾವುದೇ ಕಾರಣಕ್ಕೂ ಇನ್ಮುಂದೆ ಡೀಸೆಲ್ ಎಂಜಿನ್ ಸೇರ್ಪಡೆ ಮಾಡದಿರಲು ನಿರ್ಧರಿಸಿದೆ ಎನ್ನಲಾಗಿದೆ.

ಆಲ್ಟೊ, ಸೆಲೆರಿಯೊ, ವ್ಯಾಗನ್ಆರ್ ಮತ್ತು ಎರ್ಟಿಗಾ ಕಾರುಗಳಲ್ಲಿ ಈಗಾಗಲೇ ಡೀಸೆಲ್ ಎಂಜಿನ್ ಕಾರುಗಳಿಂತೂ ಹೆಚ್ಚು ಮೈಲೇಜ್ ನೀಡುವ ಸಿಎನ್‌ಜಿ ಮಾದರಿಗಳನ್ನು ಪರಿಚಯಿಸಲಾಗಿದ್ದು, ಮುಂಬರುವ ದಿನಗಳಲ್ಲಿ ಪ್ರತಿ ಕಾರು ಮಾದರಿಯಲ್ಲೂ ಸಿಎನ್‌ಜಿ ಆವೃತ್ತಿಗಳನ್ನು ಮಾರಾಟ ಮಾಡಲಿದೆ.
MOST READ: ರೂ.5 ಲಕ್ಷಕ್ಕಿಂತ ಕಡಿಮೆ ಬೆಲೆಯ ಜನಪ್ರಿಯ ಕಾರುಗಳಿವು

ಜೊತೆಗೆ ಪೆಟ್ರೋಲ್ ಹೈಬ್ರಿಡ್ ಮಾದರಿಗಳು ಮಾರುತಿ ಸುಜುಕಿ ಹೊಸ ಕಾರುಗಳ ಪ್ರಮುಖ ಆಕರ್ಷಣೆಯಾಗುತ್ತಿದ್ದು, ಭವಿಷ್ಯ ದೃಷ್ಠಿಯಿಂದ ಹೆಬ್ರಿಡ್ ಕಾರುಗಳ ಜೊತೆ ಜೊತೆಗೆ ಎಲೆಕ್ಟ್ರಿಕ್ ಕಾರುಗಳನ್ನು ಸಹ ಮಾರುತಿ ಸುಜುಕಿಯು ಬಿಡುಗಡೆ ಮಾಡಲಿದೆ.