Just In
Don't Miss!
- News
ಹುಣಸೋಡು ಸ್ಪೋಟದ ಸುತ್ತ ಒಂದು ನೋಟ: ಸಿಎಂ ಯಡಿಯೂರಪ್ಪ ಭೇಟಿ
- Sports
'ಭಾರತೀಯರಿಗೆ ಹೋಲಿಸಿದರೆ ಯುವ ಆಸೀಸ್ ಇನ್ನೂ ಪ್ರೈಮರಿ ಶಾಲೆಯಲ್ಲಿದೆ'
- Lifestyle
ಕೊಲೆಸ್ಟ್ರಾಲ್ ಹೆಚ್ಚಾಗಿದೆಯೇ? ಈ ಆಹಾರ ಸೇವಿಸಿ
- Education
RITES Limited Recruitment 2021: ವಿವಿಧ 9 ಹುದ್ದೆಗಳಿಗೆ ಅರ್ಜಿ ಆಹ್ವಾನ
- Movies
ದುಬಾರಿ ವಿವಾಹ; ವರುಣ್ ಧವನ್ ಮದುವೆ ನಡೆಯುತ್ತಿರುವ ಐಷಾರಾಮಿ ಹೋಟೆಲ್ ಗೆ ಇಷ್ಟೊಂದು ಖರ್ಚು ಮಾಡುತ್ತಿದ್ದಾರಾ?
- Finance
ಬಜೆಟ್ 2021: ಜ. 23ರಂದು ಹಲ್ವಾ ಕಾರ್ಯಕ್ರಮ- ಇದೇನು, ಎತ್ತ?
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಬಹಿರಂಗಗೊಂಡ ಓಲಾ ಎಲೆಕ್ಟ್ರಿಕ್ ಆಟೋ ಮಾದರಿ ಚಿತ್ರ
ಜನಪ್ರಿಯ ಕ್ಯಾಬ್ ಸೇವಾ ಸಂಸ್ಥೆಯಾದ ಓಲಾ ಶೀಘ್ರದಲ್ಲೇ ಎಲೆಕ್ಟ್ರಿಕ್ ವಾಹನಗಳನ್ನು ತಯಾರಿಸಲಿದೆ ಎಂದು ವದಂತಿಗಳಾಗಿವೆ. ಇದಕ್ಕೆ ಪುಷ್ಟಿ ನೀಡುವಂತೆ ಓಲಾ ಕಂಪನಿಯು ಹಲವು ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ.

ಕಂಪನಿಯು ಇತ್ತೀಚೆಗಷ್ಟೇ ತನ್ನ ಹೊಸ ಎಲೆಕ್ಟ್ರಿಕ್ ವಾಹನ ಉತ್ಪಾದನಾ ಕಂಪನಿಗೆ ಸಿಇಒ ಅವರನ್ನು ನೇಮಿಸಿದೆ. ಇದರ ಬೆನ್ನಲ್ಲೇ ಓಲಾ ಶೀಘ್ರದಲ್ಲೇ ಎಲೆಕ್ಟ್ರಿಕ್ ಸ್ಕೂಟರ್'ಗಳ ಜೊತೆಗೆ ಎಲೆಕ್ಟ್ರಿಕ್ ಕಾರುಗಳನ್ನು ಉತ್ಪಾದಿಸಲಿದೆ ಎಂದು ವರದಿಯಾಗಿದೆ. ಈಗ ಓಲಾ ಕಂಪನಿಯ ಎಲೆಕ್ಟ್ರಿಕ್ ರಿಕ್ಷಾಗಳ ಬಗ್ಗೆಯೂ ಮಾಹಿತಿ ಬಿಡುಗಡೆಯಾಗಿದೆ. ಓಲಾ ಕಂಪನಿಯು ಶೀಘ್ರದಲ್ಲೇ ಇ-ಆಟೋ ಉತ್ಪಾದನೆಯಲ್ಲಿ ತೊಡಗಿಸಿಕೊಳ್ಳುವ ಸಾಧ್ಯತೆಗಳಿವೆ.

ಗಾಡಿವಾಡಿ ಇಂಗ್ಲಿಷ್ ಪತ್ರಿಕೆಯು ಓಲಾ ಕಂಪನಿಯ ಹೊಸ ಎಲೆಕ್ಟ್ರಿಕ್ ಆಟೋ ಹೇಗಿರಲಿದೆ ಎಂಬ ಮಾಹಿತಿಯನ್ನು ಪ್ರಕಟಿಸಿದೆ. ಓಲಾ ಕಂಪನಿಯು ಕ್ಯಾಬ್ ಸೇವೆಯಲ್ಲಿ ತೊಡಗಿಸಿ ಕೊಂಡಿರುವ ಕಾರಣಕ್ಕೆ ಮುಂಬರುವ ದಿನಗಳಲ್ಲಿ ಹೊಸ ಎಲೆಕ್ಟ್ರಿಕ್ ಕಾರುಗಳನ್ನು ಬಿಡುಗಡೆಗೊಳಿಸಲಿದೆ.
MOSTREAD: ಟ್ರ್ಯಾಕ್ಟರ್‌ಗಳ ಹಿಂಭಾಗದಲ್ಲಿ ದೊಡ್ಡ ಗಾತ್ರದ ಟಯರ್‌ಗಳಿರಲು ಕಾರಣಗಳಿವು

ಈಗ ಓಲಾ ಕಂಪನಿಯ ಉದ್ದೇಶಿತ ಎಲೆಕ್ಟ್ರಿಕ್ ಆಟೋದ ಮಾದರಿ ಚಿತ್ರಗಳನ್ನು ಇಂಟರ್ ನೆಟ್ ನಲ್ಲಿ ಪ್ರಕಟಿಸಲಾಗಿದೆ. ಓಲಾ ಕಂಪನಿಯ ಹೊಸ ಎಲೆಕ್ಟ್ರಿಕ್ ಆಟೋ ಮಹೀಂದ್ರಾ ಕಂಪನಿಯ ಟ್ರಿಯೋ ಇ-ಆಟೊಗೆ ಪೈಪೋಟಿ ನೀಡುವ ನಿರೀಕ್ಷೆಗಳಿವೆ.

ಈಗ ಇಂಟರ್ ನೆಟ್ ನಲ್ಲಿ ಬಿಡುಗಡೆಯಾಗಿರುವ ಮಾದರಿ ಫೋಟೋದ ಮೂಲಕ ಇದು ದೃಢಪಟ್ಟಿದೆ. ಶೀಘ್ರದಲ್ಲೇ ಉತ್ಪಾದನೆಯಾಗಲಿರುವ ಈ ಎಲೆಕ್ಟ್ರಿಕ್ ಆಟೋ ಮಾರುಕಟ್ಟೆಯಲ್ಲಿರುವ ಸಾಮಾನ್ಯ ಆಟೊಗಳಿಗಿಂತ ಭಿನ್ನವಾಗಿ ಕಾಣುತ್ತದೆ.
MOSTREAD: ಚಿಕ್ಕ ಜಾಗದಲ್ಲಿ ದೊಡ್ಡ ಕಾರನ್ನು ಪಾರ್ಕ್ ಮಾಡಿದ ಅಪ್ರತಿಮ ಚಾಲಕನನ್ನು ಸನ್ಮಾನಿಸಿದ ಟೊಯೊಟಾ ಡೀಲರ್

ಎಲೆಕ್ಟ್ರಿಕ್ ಆಟೋ ಆಗಿರುವುದರಿಂದ ರೂಫ್ ಮೇಲೆ ಸೋಲಾರ್ ಪ್ಯಾನೆಲ್ ಅಳವಡಿಸಬೇಕಿದೆ. ಇದರಿಂದ ಚಾರ್ಜಿಂಗ್ ಸ್ಟೇಷನ್ ಅಗತ್ಯವಿಲ್ಲದೇ ಕಾರಿನ ಬ್ಯಾಟರಿಗಳನ್ನು ಚಾರ್ಜ್ ಮಾಡಲು ಸಾಧ್ಯವಾಗಲಿದೆ. ಈಗ ಬಿಡುಗಡೆಯಾಗಿರುವ ಮಾದರಿ ಚಿತ್ರವನ್ನು ಗಮನಿಸಿದರೆ ಈ ಆಟೋದಲ್ಲಿ ಇನ್ನೂ ಹೆಚ್ಚಿನ ಫೀಚರ್'ಗಳಿರುವ ಸಾಧ್ಯತೆಗಳಿವೆ.

ಕಂಪನಿಯು ಈ ಆಟೋದ ಬೆಲೆ, ಬ್ಯಾಟರಿ ಹಾಗೂ ವ್ಯಾಪ್ತಿಯ ಬಗೆಗಿನ ಮಾಹಿತಿಯನ್ನು ಬಿಡುಗಡೆಗೊಳಿಸಿಲ್ಲ. ಓಲಾ ಎಲೆಕ್ಟ್ರಿಕ್ ಆಟೋವನ್ನು 2021 ಅಥವಾ 2022ರಲ್ಲಿ ಬಿಡುಗಡೆಗೊಳಿಸುವ ನಿರೀಕ್ಷೆಗಳಿವೆ.
MOSTREAD: ಲಾಕ್‌ಡೌನ್ ನಿಂದ ಕೆಲಸ ಕಳೆದುಕೊಂಡವ ಇಂದು ವಿಶ್ವ ವಿಖ್ಯಾತ ವ್ಯಕ್ತಿ

ಓಲಾ ಕಂಪನಿಯ ಎಲೆಕ್ಟ್ರಿಕ್ ಸ್ಕೂಟರ್'ಗಳು ಶೀಘ್ರದಲ್ಲಿಯೇ ಬಿಡುಗಡೆಯಾಗುವ ಸಾಧ್ಯತೆಗಳಿವೆ ಎಂದು ವರದಿಗಳು ತಿಳಿಸಿವೆ. ಓಲಾ ಕಂಪನಿಯು ಭಾರತದಲ್ಲಿ ಕ್ಯಾಬ್ ಸೇವೆಯಲ್ಲಿ ಯಶಸ್ಸನ್ನು ಪಡೆದಂತೆಯೇ ಎಲೆಕ್ಟ್ರಿಕ್ ವಾಹನಗಳಲ್ಲಿಯೂ ಯಶಸ್ಸನ್ನು ಪಡೆಯುವ ನಿರೀಕ್ಷೆಗಳಿವೆ.
ಗಮನಿಸಿ: ಕೆಲವು ಫೋಟೋಗಳನ್ನು ರೆಫರೆನ್ಸ್'ಗಾಗಿ ಬಳಸಲಾಗಿದೆ.