ಇವಿ ಸ್ಕೂಟರ್ ಜೊತೆಗೆ ವಾಣಿಜ್ಯ ಬಳಕೆಯ ಎಲೆಕ್ಟ್ರಿಕ್ ವಾಹನಗಳನ್ನು ಸಹ ನಿರ್ಮಾಣ ಮಾಡಲಿದೆ ಓಲಾ

ದೇಶದ ಮುಂಚೂಣಿ ಕ್ಯಾಬ್ ಸೇವಾ ಕಂಪನಿಯಾದ ಓಲಾ ಮೊದಲ ಬಾರಿಗೆ ಆಟೋ ಉದ್ಯಮದಲ್ಲಿ ಹೊಸ ಅದೃಷ್ಠದ ಪರೀಕ್ಷೆ ಮುಂದಾಗಿದ್ದು, ಮೊದಲ ಹಂತದಲ್ಲೇ ಓಲಾ ಕಂಪನಿಯು ಭಾರೀ ಪ್ರಮಾಣದ ಹೂಡಿಕೆಯೊಂದಿಗೆ ಎಲೆಕ್ಟ್ರಿಕ್ ವಾಹನಗಳ ಉತ್ಪಾದನೆಗೆ ಸಿದ್ದವಾಗುತ್ತಿದೆ.

ಇವಿ ಸ್ಕೂಟರ್ ಜೊತೆಗೆ ವಾಣಿಜ್ಯ ಬಳಕೆಯ ಎಲೆಕ್ಟ್ರಿಕ್ ವಾಹನಗಳನ್ನು ಸಹ ನಿರ್ಮಾಣ ಮಾಡಲಿದೆ ಓಲಾ

ದೇಶಿಯ ಮಾರುಕಟ್ಟೆಯಲ್ಲಿ ಈಗಾಗಲೇ ಎಲೆಕ್ಟ್ರಿಕ್ ಸ್ಕೂಟರ್‌ಗಳನ್ನು ನೇದರ್ಲ್ಯಾಂಡ್ ಮೂಲದ ಕಂಪನಿಯೊಂದಿಗೆ ಸಹಭಾಗಿತ್ವದ ಯೋಜನೆ ಅಡಿ ಮುಂಬರುವ 2021ರಿಂದ ಮಾರಾಟ ಮಾಡುವ ಸುಳಿವು ನೀಡಿರುವ ಓಲಾ ಕಂಪನಿಯು ಹಂತ-ಹಂತವಾಗಿ ವಾಣಿಜ್ಯ ಬಳಕೆಯ ನಾಲ್ಕು ಚಕ್ರದ ಕಾರ್ಗೊ ಎಲೆಕ್ಟ್ರಿಕ್ ವಾಹನಗಳನ್ನು ಸಹ ನಿರ್ಮಾಣ ಮಾಡುವ ಯೋಜನೆಯಲ್ಲಿದ್ದು, ಈ ಮೂಲಕ ವಾಹನ ಉತ್ಪಾದನೆಯಲ್ಲಿ ಹೊಸ ಸಂಚಲನ ಸೃಷ್ಠಿಸುವ ತವಕದಲ್ಲಿದೆ.

ಇವಿ ಸ್ಕೂಟರ್ ಜೊತೆಗೆ ವಾಣಿಜ್ಯ ಬಳಕೆಯ ಎಲೆಕ್ಟ್ರಿಕ್ ವಾಹನಗಳನ್ನು ಸಹ ನಿರ್ಮಾಣ ಮಾಡಲಿದೆ ಓಲಾ

ಎಲೆಕ್ಟಿಕ್ ಸ್ಕೂಟರ್ ಮಾದರಿಯೊಂದಿಗೆ ವಿವಿಧ ಮಾದರಿಯ ಎಲೆಕ್ಟ್ರಿಕ್ ವಾಹನಗಳನ್ನು ಸಹ ಅಭಿವೃದ್ದಿಗೊಳಿಸುವ ಬಗ್ಗೆ ಕಂಪನಿಯ ವಾಣಿಜ್ಯ ವ್ಯವಹಾರಗಳ ಸಭೆಯಲ್ಲಿ ಮಾತನಾಡಿರುವ ಓಲಾ ಸಹಸಂಸ್ಥಾಪಕ ಮತ್ತು ಸಿಇಒ ಭಾವಿಶ್ ಅಗರವಾಲ್ ಅವರು ಭವಿಷ್ಯದ ವಾಹನ ಉದ್ಯಮದಲ್ಲಿ ಓಲಾ ಕಂಪನಿಯು ವಿವಿಧ ಎಲೆಕ್ಟ್ರಿಕ್ ಮಾದರಿಯೊಂದಿಗೆ ಹೊಸ ಭರವಸೆ ಮೂಡಿಸಲಿದೆ ಎಂದಿದ್ದಾರೆ.

ಇವಿ ಸ್ಕೂಟರ್ ಜೊತೆಗೆ ವಾಣಿಜ್ಯ ಬಳಕೆಯ ಎಲೆಕ್ಟ್ರಿಕ್ ವಾಹನಗಳನ್ನು ಸಹ ನಿರ್ಮಾಣ ಮಾಡಲಿದೆ ಓಲಾ

ಹೀಗಾಗಿ ಎಲೆಕ್ಟ್ರಿಕ್ ಸ್ಕೂಟರ್ ಮಾದರಿಯೊಂದಿಗೆ ವಾಣಿಜ್ಯ ವಹಿವಾಟು ನಿರ್ವಹಣೆಗಾಗಿ ನಾಲ್ಕು ಚಕ್ರಗಳ ಸಣ್ಣ ಗಾತ್ರದ ಎಲೆಕ್ಟ್ರಿಕ್ ವಾಹನಗಳನ್ನು ಸಿದ್ದಪಡಿಸುವುದು ಬಹುತೇಕ ಖಚಿತವಾಗಿದ್ದು, ಹೊಸ ಇವಿ ವಾಹನಗಳನ್ನು ಪೂರ್ಣ ಪ್ರಮಾಣದಲ್ಲಿ ಭಾರತದಲ್ಲೇ ಸಿದ್ದಪಡಿಸುವ ಗುರಿಹೊಂದಿದೆ.

ಇವಿ ಸ್ಕೂಟರ್ ಜೊತೆಗೆ ವಾಣಿಜ್ಯ ಬಳಕೆಯ ಎಲೆಕ್ಟ್ರಿಕ್ ವಾಹನಗಳನ್ನು ಸಹ ನಿರ್ಮಾಣ ಮಾಡಲಿದೆ ಓಲಾ

ಹೆಚ್ಚುತ್ತಿರುವ ಇಂಧನ ಬೆಲೆಗಳ ಪರಿಣಾಮ ಪರಿಸರ ಸ್ನೇಹಿ ಎಲೆಕ್ಟ್ರಿಕ್ ವಾಹನಗಳ ಬಳಕೆಯ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ಹಲವಾರು ಆಟೋ ಕಂಪನಿಗಳು ವಿವಿಧ ಮಾದರಿಯ ಎಲೆಕ್ಟ್ರಿಕ್ ವಾಹನ ಮಾದರಿಗಳನ್ನು ಪರಿಚಯಿಸುತ್ತಿವೆ. ಹೊಸ ಮಾದರಿಯ ಎಲೆಕ್ಟ್ರಿಕ್ ವಾಹನಗಳ ಉತ್ಪಾದನೆಯಲ್ಲಿ ಈಗಾಗಲೇ ಸಾಂಪ್ರಾದಾಯಿಕ ವಾಹನಗಳನ್ನು ಮಾರಾಟ ಮಾಡುತ್ತಿರುವ ಕಂಪನಿಗಳಿಂತಲೂ ಸ್ಟಾರ್ಟ್ ಅಪ್ ಕಂಪನಿಗಳೇ ಹೆಚ್ಟಿನ ಮಟ್ಟದಲ್ಲಿ ಗ್ರಾಹಕರ ಗಮನಸೆಳೆಯುವಲ್ಲಿ ಯಶಸ್ವಿಯಾಗುತ್ತಿದ್ದು, ಈಗಾಗಲೇ ಹಲವಾರು ಸ್ಟಾರ್ಟ್-ಅಪ್ ಕಂಪನಿಗಳು ವಿವಿಧ ಮಾದರಿಯ ಇವಿ ವಾಹನಗಳನ್ನು ಮಾರಾಟ ಮಾಡುವ ಮೂಲಕ ಮುನ್ನಡೆ ಸಾಧಿಸುತ್ತಿವೆ.

ಇವಿ ಸ್ಕೂಟರ್ ಜೊತೆಗೆ ವಾಣಿಜ್ಯ ಬಳಕೆಯ ಎಲೆಕ್ಟ್ರಿಕ್ ವಾಹನಗಳನ್ನು ಸಹ ನಿರ್ಮಾಣ ಮಾಡಲಿದೆ ಓಲಾ

ಈ ನಿಟ್ಟಿನಲ್ಲಿ ಹೊಸ ಪಯತ್ನಕ್ಕೆ ಕೈ ಹಾಕಿರುವ ದೇಶದ ಅತಿ ದೊಡ್ಡ ಕ್ಯಾಬ್ ಸೇವಾ ಕಂಪನಿಯಾದ ಓಲಾ ಕೂಡಾ ಇದೀಗ ಆಟೋ ಉತ್ಪಾದನಾ ಉದ್ಯಮದಲ್ಲಿ ಭಾರೀ ಪ್ರಮಾಣದ ಹೂಡಿಕೆ ಮಾಡುತ್ತಿದ್ದು, ಹೊಸ ವಾಹನ ಉತ್ಪಾದನಾ ಘಟಕಕ್ಕಾಗಿ ವಿವಿಧ ರಾಜ್ಯಗಳಲ್ಲಿ ಒಟ್ಟು 100 ಏಕರೆ ಭೂಸ್ವಾಧೀನ ಪ್ರಕ್ರಿಯೆಗೆ ಪ್ರಸ್ತಾಪ ಸಲ್ಲಿಸಿದೆ.

ಇವಿ ಸ್ಕೂಟರ್ ಜೊತೆಗೆ ವಾಣಿಜ್ಯ ಬಳಕೆಯ ಎಲೆಕ್ಟ್ರಿಕ್ ವಾಹನಗಳನ್ನು ಸಹ ನಿರ್ಮಾಣ ಮಾಡಲಿದೆ ಓಲಾ

ಶೀಘ್ರದಲ್ಲೇ ಉತ್ಪಾದನಾ ಘಟಕ ಎಲ್ಲಿ ನಿರ್ಮಾಣವಾಗಲಿದೆ ಎನ್ನುವ ಮಾಹಿತಿಯನ್ನು ಪ್ರಕಟಿಸಲಿರುವ ಓಲಾ ಕಂಪನಿಯು ನೇದರ್ಲ್ಯಾಂಡ್ ಮೂಲದ ಎಟರ್ಗೋ ಎನ್ನುವ ಎಲೆಕ್ಟ್ರಿಕ್ ವಾಹನ ಉತ್ಪಾದನಾ ಕಂಪನಿಯೊಂದಿಗೆ ಸಹಭಾಗಿತ್ವಕ್ಕೆ ಸಹಿ ಹಾಕಿದೆ.

MOST READ: 2020ರ ಅವಧಿಯಲ್ಲಿ ಬಿಡುಗಡೆಯಾದ ಪ್ರಮುಖ ಹತ್ತು ಕಾರುಗಳಿವು..!

ಇವಿ ಸ್ಕೂಟರ್ ಜೊತೆಗೆ ವಾಣಿಜ್ಯ ಬಳಕೆಯ ಎಲೆಕ್ಟ್ರಿಕ್ ವಾಹನಗಳನ್ನು ಸಹ ನಿರ್ಮಾಣ ಮಾಡಲಿದೆ ಓಲಾ

ಓಲಾ ಕಂಪನಿಯು ಹೊಸ ವಾಹನ ಉತ್ಪಾದನಾ ಘಟಕದಲ್ಲಿ ವಾರ್ಷಿಕವಾಗಿ 20 ಲಕ್ಷ ಯುನಿಟ್ ಉತ್ಪಾದನೆ ಮಾಡುವ ಗುರಿಹೊಂದಿದ್ದು, ಹೊಸ ವಾಹನಗಳ ಅಭಿವೃದ್ದಿ, ತಂತ್ರಜ್ಞಾನವನ್ನು ಎಟರ್ಗೋ ನಿರ್ವಹಣೆ ಮಾಡಲಿದ್ದರೆ ಓಲಾ ಕಂಪನಿಯು ಘಟಕದ ನಿರ್ವಹಣೆ, ಮಾರುಕಟ್ಟೆ ನಿರ್ವಹಣೆಯ ಜವಾಬ್ದಾರಿ ವಹಿಸಿಕೊಳ್ಳಲಿದೆ.

ಇವಿ ಸ್ಕೂಟರ್ ಜೊತೆಗೆ ವಾಣಿಜ್ಯ ಬಳಕೆಯ ಎಲೆಕ್ಟ್ರಿಕ್ ವಾಹನಗಳನ್ನು ಸಹ ನಿರ್ಮಾಣ ಮಾಡಲಿದೆ ಓಲಾ

ಇನ್ನು ಎಟರ್ಗೋ ಕಂಪನಿಯು ಈಗಾಗಲೇ ಯುರೋಪಿನ ಪ್ರಮುಖ ಮಾರುಕಟ್ಟೆಯಲ್ಲಿ ಭಾರೀ ಜನಪ್ರಿಯತೆಯೊಂದಿಗೆ ವಿವಿಧ ಎಲೆಕ್ಟ್ರಿಕ್ ಸ್ಕೂಟರ್ ಮಾದರಿಗಳನ್ನು ಮಾರಾಟಮಾಡುತ್ತಿದ್ದು, ಸುಧಾರಿತ ತಂತ್ರಜ್ಞಾನ ಪ್ರೇರಣೆ ಹೊಂದಿರುವ ಆ್ಯಪ್‌ಸ್ಕೂಟರ್ ಮಾದರಿಯನ್ನು ಭಾರತದಲ್ಲೂ ಬಿಡುಗಡೆ ಮಾಡಲು ಸಿದ್ದತೆ ನಡೆಸಲಾಗುತ್ತಿದೆ.

ಇವಿ ಸ್ಕೂಟರ್ ಜೊತೆಗೆ ವಾಣಿಜ್ಯ ಬಳಕೆಯ ಎಲೆಕ್ಟ್ರಿಕ್ ವಾಹನಗಳನ್ನು ಸಹ ನಿರ್ಮಾಣ ಮಾಡಲಿದೆ ಓಲಾ

ಎಟರ್ಗೋ ಆ್ಯಪ್‌ಸ್ಕೂಟರ್ ಮಾದರಿಯು ಪ್ರತಿ ಚಾರ್ಜ್‌ಗೆ ಗರಿಷ್ಠ 240 ಕಿ.ಮೀ ಮೈಲೇಜ್ ಹಿಂದಿರುಗಿಸಲಿದ್ದು, ತೆಗೆದುಹಾಕಬಹುದಾದ ಬ್ಯಾಟರಿ ಸೌಲಭ್ಯದೊಂದಿಗೆ ಕೇವಲ 3 ಗಂಟೆಗಳಲ್ಲಿ ಸಂಪೂರ್ಣವಾಗಿ ಚಾರ್ಜ್ ಮಾಡಬಹುದಾಗಿದೆ.

MOST READ: ಪ್ರತಿ ಚಾರ್ಜ್‌ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿ..!

ಇವಿ ಸ್ಕೂಟರ್ ಜೊತೆಗೆ ವಾಣಿಜ್ಯ ಬಳಕೆಯ ಎಲೆಕ್ಟ್ರಿಕ್ ವಾಹನಗಳನ್ನು ಸಹ ನಿರ್ಮಾಣ ಮಾಡಲಿದೆ ಓಲಾ

ಜೊತೆಗೆ ಸಿಟಿ ರೈಡಿಂಗ್‌ಗಾಗಿ ಅತ್ಯುತ್ತಮ ವಿನ್ಯಾಸ ಪಡೆದುಕೊಂಡಿರುವ ಎಟರ್ಗೋ ಆ್ಯಪ್‌ಸ್ಕೂಟರ್ ಮಾದರಿಯು ಕನೆಕ್ಟೆಡ್ ಫೀಚರ್ಸ್‌ನೊಂದಿಗೆ ಗರಿಷ್ಠ ಸುರಕ್ಷತೆ ಒದಗಿಸಲಿದ್ದು, ಪ್ರತಿ ಗಂಟೆಗೆ 45 ಕಿ.ಮೀ ಟಾಪ್ ಸ್ಪೀಡ್‌ನೊಂದಿಗೆ ಅತ್ಯುತ್ತಮ ರೈಡಿಂಗ್ ಅನುಭವ ಒದಗಿಸಲಿದೆ.

ಇವಿ ಸ್ಕೂಟರ್ ಜೊತೆಗೆ ವಾಣಿಜ್ಯ ಬಳಕೆಯ ಎಲೆಕ್ಟ್ರಿಕ್ ವಾಹನಗಳನ್ನು ಸಹ ನಿರ್ಮಾಣ ಮಾಡಲಿದೆ ಓಲಾ

ಇದೇ ಎಲೆಕ್ಟ್ರಿಕ್ ಸ್ಕೂಟರ್ ಮಾದರಿಯನ್ನೇ ಇದೀಗ ಓಲಾ ಕಂಪನಿಯು ಸಹಭಾಗೀತ್ವದ ಯೋಜನೆ ಅಡಿ ಭಾರತದಲ್ಲೇ ನಿರ್ಮಾಣ ಮಾಡಿ ಮಾರಾಟ ಮಾಡಲಿದ್ದು, ಮಾಹಿತಿಗಳ ಓಲಾ ಹೊಸ ಸ್ಕೂಟರ್ ಮಾದರಿಯು 2021ರ ಆರಂಭದಲ್ಲಿ ಅನಾವರಣಗೊಳಿಸುವ ಸಾಧ್ಯತೆಗಳಿವೆ ಎನ್ನಲಾಗಿದೆ.

More from DriveSpark

Article Published On: Tuesday, December 8, 2020, 19:17 [IST]
English summary
OLA is planning to foray into small electric four-wheeler vehicle segment. Read in Kannada.
Read more on ಓಲಾ ola
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+