ಕರೋನಾ ವೈರಸ್ ವಿರುದ್ಧದ ಹೋರಾಟಕ್ಕೆ ರಾಜ್ಯ ಸರ್ಕಾರಕ್ಕೆ ಸಹಾಯ ಹಸ್ತ ಚಾಚಿದ ಓಲಾ

ಚೀನಾದಿಂದ ಹರಡಲಾರಂಭಿಸಿದ ಕರೋನಾ ವೈರಸ್‌ ಇಂದು ಜಗತ್ತಿನಾದ್ಯಂತ ಆತಂಕವನ್ನು ಸೃಷ್ಟಿಸುತ್ತಿದೆ. ಈಗಾಗಲೇ ನಮ್ಮ ರಾಜ್ಯಕ್ಕೂ ಕಾಲಿಟ್ಟಿರುವ ಕರೋನಾ ವೈರಸ್‌ ಆತಂಕವನ್ನು ಹುಟ್ಟಿಸಿದೆ.

ಕರೋನಾ ವೈರಸ್ ವಿರುದ್ಧದ ಹೋರಾಟಕ್ಕೆ ರಾಜ್ಯ ಸರ್ಕಾರಕ್ಕೆ ಸಹಾಯ ಹಸ್ತ ಚಾಚಿದ ಓಲಾ

ರಾಜ್ಯ ಸರ್ಕಾರವು ಕೂಡ ಕರೋನಾ ವೈರಸ್​ ನಿಯಂತ್ರಣಕ್ಕೆ ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳುತ್ತಿದೆ. ಈ ನಡುವೆ ಕರೋನ ವೈರಸ್ ವಿರುದ್ಧದ ರಾಜ್ಯ ಸರ್ಕಾರ ಹೋರಾಟಕ್ಕೆ ಓಲಾ ಸಹಾಯ ಹಸ್ತ ಚಾಚಿದೆ. ರಾಜ್ಯದಲ್ಲಿ ವೈದರು ಸಂಚರಿಸಲು ಮತ್ತು ತುರ್ತು ಆರೋಗ್ಯ ಸೇವೆಗಳಿಗೆ ಓಲಾದ 500 ಕಾರುಗಳನ್ನು ನೀಡಲಿದೆ. ಈ ವಿಚಾರವನ್ನು ಉಪಮುಖ್ಯಮಂತ್ರಿ ಡಾ. ಸಿಎನ್​ ಅಶ್ವತ್ಥ್​ ನಾರಾಯಣ್ ಅವರು ಟ್ವೀಟ್ ಮಾಡುವ ಮೂಲಕ ಖಚಿತ ಪಡಿಸಿದ್ದಾರೆ.

ಕರೋನಾ ವೈರಸ್ ವಿರುದ್ಧದ ಹೋರಾಟಕ್ಕೆ ರಾಜ್ಯ ಸರ್ಕಾರಕ್ಕೆ ಸಹಾಯ ಹಸ್ತ ಚಾಚಿದ ಓಲಾ

ಓಲಾ ಕ್ಯಾಬ್ ವೈದರು, ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಮತ್ತು ವೈದಕೀಯ ಉಪಕರಣಗಳನ್ನು ಸಾಗಿಸಲು ಬಳಸಲಾಗುತ್ತದೆ. ಬೆಂಗಳೂರು, ಮಂಗಳೂರು, ಮೈಸೂರು, ಬೆಳಗಾವಿ ಹಾಗೂ ಹುಬ್ಬಳ್ಳಿ-ಧಾರವಾಡ ಜಿಲ್ಲೆಗಳಲ್ಲಿ ಈ ಓಲಾ ಕಾರುಗಳು ಸೇವೆಗೆ ಲಭ್ಯವಿರಲಿದೆ.

ಕರೋನಾ ವೈರಸ್ ವಿರುದ್ಧದ ಹೋರಾಟಕ್ಕೆ ರಾಜ್ಯ ಸರ್ಕಾರಕ್ಕೆ ಸಹಾಯ ಹಸ್ತ ಚಾಚಿದ ಓಲಾ

ದೇಶಾದ್ಯಂತ ಲಾಕ್‌ಡೌನ್ ಆಗಿರುವುದರಿಂದ ಓಲಾ ಕ್ಯಾಬ್‍ಗಳು ತಮ್ಮ ಸೇವೆಯನ್ನು ಸ್ಥಗಿತಗೊಳಿಸಲಾಗಿತ್ತು. ಆದರೆ ಇದೀಗ ಕರೋನಾ ಎಂಬ ಮಹಾಮಾರಿ ಸೋಂಕಿನ ವಿರುದ್ದ ಹೋರಾಟಕ್ಕೆ ರಾಜ್ಯ ಸರ್ಕಾರದ ಜೊತೆ ಕೈ ಜೋಡಿಸಿದೆ.

ಕರೋನಾ ವೈರಸ್ ವಿರುದ್ಧದ ಹೋರಾಟಕ್ಕೆ ರಾಜ್ಯ ಸರ್ಕಾರಕ್ಕೆ ಸಹಾಯ ಹಸ್ತ ಚಾಚಿದ ಓಲಾ

ಈ ವಿಷಯದ ಬಗ್ಗೆ ಉಪಮುಖ್ಯಮಂತ್ರಿ ಡಾ. ಸಿಎನ್​ ಅಶ್ವತ್ಥ್​ ನಾರಾಯಣ್ ಅವರು ಟ್ವೀಟ್ ಮಾಡುವ ಮೂಲಕ ಓಲಾ ಸಂಸ್ಥೆ ಮತ್ತು ಕಂಪನಿಯ ಸಿಇಒ ಭವಿಷ್​ ಅಗರ್​ವಾಲ್ ಅವರಿಗೆ ಧನ್ಯವಾದ ತಿಳಿಸಿದ್ದಾರೆ. ಅಲ್ಲದೇ ಕರೋನಾ ವಿರುದ್ದದ ಹೋರಾಟಕ್ಕೆ ಓಲಾದ 500 ಕಾರುಗಳನ್ನು ಬಳಕೆ ಮಾಡಿಕೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ.

ಕರೋನಾ ವೈರಸ್ ವಿರುದ್ಧದ ಹೋರಾಟಕ್ಕೆ ರಾಜ್ಯ ಸರ್ಕಾರಕ್ಕೆ ಸಹಾಯ ಹಸ್ತ ಚಾಚಿದ ಓಲಾ

ಅಲ್ಲದೇ ಓಲಾ ಚಾಲಕರಿಗೆ ನೆರವಾಗುವ ಉದ್ದೇಶದಿಂದ ಓಲಾ ಕಂಪನಿಯು ಓಲಾ ಫೌಂಡೇಶನ್ ಅಡಿಯಲ್ಲಿ ಸಹಾಯ ಹಸ್ತ ಚಾಚಲು ಮುಂದಾಗಿದೆ. ಇದರನ್ವಯ ಓಲಾ ಫೌಂಡೇಶನ್ ಡ್ರೈವ್ ದಿ ಡ್ರೈವರ್ ಫಂಡ್ ಕಾರ್ಯಕ್ರಮವನ್ನು ಆರಂಭಿಸಿದೆ.

MOST READ: ಬಿಎಸ್-6 ಎಂಜಿನ್‍‍ನಲ್ಲಿ ಬಿಡುಗಡೆಯಾಯ್ತು 2020ರ ಹ್ಯುಂಡೈ ವೆರ್ನಾ ಫೇಸ್‌ಲಿಫ್ಟ್ ಕಾರು

ಕರೋನಾ ವೈರಸ್ ವಿರುದ್ಧದ ಹೋರಾಟಕ್ಕೆ ರಾಜ್ಯ ಸರ್ಕಾರಕ್ಕೆ ಸಹಾಯ ಹಸ್ತ ಚಾಚಿದ ಓಲಾ

ಈ ಅಭಿಯಾನದಡಿಯಲ್ಲಿ ಓಲಾ ಗ್ರೂಪ್ ಹಾಗೂ ಅದರಲ್ಲಿ ಹೂಡಿಕೆ ಮಾಡಿರುವವರು ಓಲಾದ ಆಟೋ ರಿಕ್ಷಾ, ಕ್ಯಾಬ್ ಚಾಲಕರಿಗೆ ಸಹಾಯ ಮಾಡಲಿದ್ದಾರೆ. ಓಲಾ ಗ್ರೂಪ್ ಈ ನಿಧಿಗೆ ರೂ.20 ಕೋಟಿಗಳನ್ನು ನೀಡಲಿದೆ. ಓಲಾ ಕಂಪನಿಯ ಸಿಇಒ ಹಾಗೂ ಸಹ ಸಂಸ್ಥಾಪಕರಾದ ಭನಿಶ್ ಅಗರ್‌ವಾಲ್ ರವರು ಇದರ ಬಗ್ಗೆ ಟ್ವೀಟ್ ಮಾಡಿ ಮಾಹಿತಿ ನೀಡಿದ್ದಾರೆ.

MOST READ: ಡೀಸೆಲ್ ಕಾರುಗಳ ಬದಲಿಗೆ ಪೆಟ್ರೋಲ್ ಕಾರುಗಳತ್ತ ಗ್ರಾಹಕರ ಒಲವು

ಕರೋನಾ ವೈರಸ್ ವಿರುದ್ಧದ ಹೋರಾಟಕ್ಕೆ ರಾಜ್ಯ ಸರ್ಕಾರಕ್ಕೆ ಸಹಾಯ ಹಸ್ತ ಚಾಚಿದ ಓಲಾ

ಈ ನಿಧಿಯನ್ನು ತಕ್ಷಣಕ್ಕೆ ನೆರವು ನೀಡಲು ಬಳಸಲಾಗುವುದು. ಕಂಪನಿಯ ಚಾಲಕರು ಹಾಗೂ ಅವರ ಕುಟುಂಬಗಳಿಗೆ ಉಚಿತ ವೈದ್ಯಕೀಯ ಸೌಲಭ್ಯ ಸಹ ನೀಡಲಾಗುತ್ತದೆ.

MOST READ: ಬಿಎಸ್-6 ಎಂಜಿನ್‍‍ನಲ್ಲಿ ಬಿಡುಗಡೆಯಾಯ್ತು ಮಹೀಂದ್ರಾ ಬೊಲೆರೊ

ಕರೋನಾ ವೈರಸ್ ವಿರುದ್ಧದ ಹೋರಾಟಕ್ಕೆ ರಾಜ್ಯ ಸರ್ಕಾರಕ್ಕೆ ಸಹಾಯ ಹಸ್ತ ಚಾಚಿದ ಓಲಾ

ಒಟ್ಟಿನಲ್ಲಿ ಕರೋನಾ ಎಂಬ ಮಹಾಮರಿಯ ವಿರುದ್ದ ಹೋರಾಡಲು ಹಲವಾರು ಖಾಸಗಿ ಸಂಸ್ಥೆಗಳು ಸರ್ಕಾರದ ಜೊತೆ ಕೈ ಜೋಡಿಸಿದೆ. ಬೆಂಗಳೂರು ಮೂಲದ ಓಲಾ ಸಂಸ್ಥೆಯು ರಾಜ್ಯ ಸರ್ಕಾರದ ಜೊತೆ ಕೈ ಜೋಡಿಸಿರುವುದು ಉತ್ತಮ ಬೆಳವಣಿಗೆಯಾಗಿದೆ.

Most Read Articles

Kannada
English summary
Coronavirus Pandemic: Ola Cabs Offers Transport Services To Doctors In Karnataka. Read in Kannada.
Story first published: Tuesday, March 31, 2020, 19:53 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X