ಸ್ಥಗಿತವಾಗಲಿದೆ 4ನೇ ತಲೆಮಾರಿನ ಹೋಂಡಾ ಸಿಟಿ ಕಾರು

ಹೋಂಡಾ ಇಂಡಿಯಾ ಕಂಪನಿಯು ಹೊಸ ತಲೆಮಾರಿನ ಸಿಟಿ ಸೆಡಾನ್ ಅನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲು ಸಜ್ಜಾಗಿದೆ. ಪ್ರಸ್ತುತ ತಲೆಮಾರಿನ ಹೋಂಡಾ ಸಿಟಿ ಕಾರನ್ನು ಭಾರತೀಯ ಮಾರುಕಟ್ಟೆಯಲ್ಲಿ ಹೊಸ ಮಾದರಿಯೊಂದಿಗೆ ಮಾರಾಟ ಮಾಡಲಾಗುವುದು ಎಂದು ಕಂಪನಿಯು ಈ ಹಿಂದೆ ತಿಳಿಸಿತು.

ಸ್ಥಗಿತವಾಗಲಿದೆ 4ನೇ ತಲೆಮಾರಿನ ಹೋಂಡಾ ಸಿಟಿ ಕಾರು

ಆದರೆ ಇದೀಗ ಹೊಸ ವರದಿಗಳ ಪ್ರಕಾರ ಪ್ರಸ್ತುತ 4ನೇ ತಲೆಮಾರಿನ ಸಿಟಿ ಸೆಡಾನ್ ಅನ್ನು ಮುಂಬರುವ ತಿಂಗಳುಗಳಲ್ಲಿ ಸ್ಥಗಿತಗೊಳಿಸಬಹುದು. ಪ್ರಸ್ತುತ ತಲೆಮಾರಿನ ಹೋಂಡಾ ಸಿಟಿ ಕಾರುಗಳ ಸ್ಟಾಕ್ ಖಾಲಿಯಾಗುವವರೆಗೆ ಮಾತ್ರ ಮಾರಾಟ ಮಾಡಲಾಗುತ್ತದೆ. ನಂತರದಲ್ಲಿ ಈ ಹೋಂಡಾ ಸಿಟಿ ಕಾರನ್ನು ಸ್ಥಗಿತಗೊಳಿಸಲಾಗುತ್ತದೆ. ಸಧ್ಯ ಮಾರುಕಟ್ಟೆಯಲ್ಲಿರುವ ಹೋಂಡಾ ಸಿಟಿ ಕಾರು 1.5-ಲೀಟರ್ ಪೆಟ್ರೋಲ್ ಎಂಜಿನ್‌ ಅನ್ನು ಹೊಂದಿದೆ.

ಸ್ಥಗಿತವಾಗಲಿದೆ 4ನೇ ತಲೆಮಾರಿನ ಹೋಂಡಾ ಸಿಟಿ ಕಾರು

ಈ ಎಂಜಿನ್ 118 ಬಿಹೆಚ್‍ಪಿ ಪವರ್ ಮತ್ತು 145 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್ ನೊಂದಿಗೆ ಮ್ಯಾನುವಲ್ ಮತ್ತು ಸಿವಿಟಿ ಗೇರ್ ಬಾಕ್ಸ್ ಅನ್ನು ಜೋಡಿಸಲಾಗಿದೆ.

MOST READ: ಭರ್ಜರಿಯಾಗಿ ಮಾರಾಟವಾಯ್ತು ಫೋಕ್ಸ್‌ವ್ಯಾಗನ್ ಟಿ-ರಾಕ್ ಎಸ್‍ಯುವಿ

ಸ್ಥಗಿತವಾಗಲಿದೆ 4ನೇ ತಲೆಮಾರಿನ ಹೋಂಡಾ ಸಿಟಿ ಕಾರು

ಭಾರತದಲ್ಲಿ ಕರೋನಾ ಭೀತಿಯಿಂದ ದೇಶಾದ್ಯಂತ ಲಾಕ್‍ಡೌನ್ ಮುಂದುವರಿಸಿರುವುದರಿಂದ ಹೊಸ ಹೋಂಡಾ ಸಿಟಿ ಕಾರಿನ ಬಿಡುಗಡೆಯು ಮತ್ತಷ್ಟು ತಡವಾಗಿದೆ. ಆದರೆ ಈ ಹೊಸ ಕಾರನ್ನು ಭಾರತೀಯ ಮಾರುಕಟ್ಟೆಯಲಿ ಈ ತಿಂಗಳು ಬಿಡುಗಡೆಗೊಳಿಸುವ ಸಾದ್ಯತೆಗಳಿದೆ.

ಸ್ಥಗಿತವಾಗಲಿದೆ 4ನೇ ತಲೆಮಾರಿನ ಹೋಂಡಾ ಸಿಟಿ ಕಾರು

ಹೊಸ ಹೋಂಡಾ ಸಿಟಿ 4,549 ಎಂಎಂ ಉದ್ದ, 1,748 ಎಂಎಂ ಅಗಲ, 1,489 ಎಂಎಂ ಎತ್ತರ ಮತ್ತು 2,600 ಎಂಎಂ ವ್ಹೀಲ್ ಬೇಸ್ ಅನ್ನು ಹೊಂದಿದೆ. 2020ರ ಹೋಂಡಾ ಸಿಟಿ ಪ್ರಸ್ತುತ ಮಾದರಿಗಿಂತ ಹೆಚ್ಚು ಉದ್ದ ಮತ್ತು ಅಗಲವನ್ನು ಹೊಂದಿದೆ.

MOST READ: ಕರೋನಾ ಭೀತಿಯಿಂದ ಪಾತಾಳಕ್ಕೆ ಕುಸಿತ ಮಾರುತಿ ಸುಜುಕಿ ಕಾರುಗಳ ಮಾರಾಟ

ಸ್ಥಗಿತವಾಗಲಿದೆ 4ನೇ ತಲೆಮಾರಿನ ಹೋಂಡಾ ಸಿಟಿ ಕಾರು

ಹೊಸ ಹೋಂಡಾ ಸಿಟಿ ಕಾರಿನಲ್ಲಿ 1.5 ಎಲ್ ಐ-ವಿಟಿಇಸಿ ಡಿಒಹೆಚ್‌ಸಿ ಪೆಟ್ರೋಲ್ ಎಂಜಿನ್ ಅನ್ನು ಅಳವಡಿಸಿದೆ. ಈ ಎಂಜಿನ್ 600 ಆರ್‌ಪಿಎಂನಲ್ಲಿ 121 ಬಿಹೆಚ್‌ಪಿ ಪವರ್ ಮತ್ತು 4,300 ಆರ್‌ಪಿಎಂನಲ್ಲಿ 145 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್ ನೊಂದಿಗೆ 6-ಸ್ಪೀಡ್ ಮ್ಯಾನುವಲ್ ಮತ್ತು ಹೊಸ 7-ಸ್ಪೀಡ್ ಆಟೋಮ್ಯಾಟಿಕ್ ಸಿವಿಟಿ ಗೇರ್‌ಬಾಕ್ಸ್ ಅನ್ನು ಜೋಡಿಸಲಾಗಿದೆ.

ಸ್ಥಗಿತವಾಗಲಿದೆ 4ನೇ ತಲೆಮಾರಿನ ಹೋಂಡಾ ಸಿಟಿ ಕಾರು

ಇದರಲ್ಲಿ ಮ್ಯಾನುವಲ್ ಆವೃತಿಯು ಪ್ರತಿ ಲೀಟರ್‌ಗೆ 17.8 ಕಿ.ಮೀ ಮೈಲೇಜ್ ಅನ್ನು ನೀಡುತ್ತದೆ. ಇನ್ನು ಆಟೋಮ್ಯಾಟಿಕ್ ಆವೃತಿಯು ಪ್ರತಿ ಲೀಟರ್‌ಗೆ 18.4 ಕಿ.ಮೀ ಮೈಲೇಜ್ ಅನ್ನು ನೀಡುತ್ತದೆ.

MOST READ: 400 ಕಿ.ಮೀ ಮೈಲೇಜ್ ನೀಡಲಿದೆ ಈ ಐಷಾರಾಮಿ ಎಲೆಕ್ಟ್ರಿಕ್ ಕಾರು

ಸ್ಥಗಿತವಾಗಲಿದೆ 4ನೇ ತಲೆಮಾರಿನ ಹೋಂಡಾ ಸಿಟಿ ಕಾರು

ಇನ್ನು ಹೊಸ ಹೋಂಡಾ ಸಿಟಿ ಕಾರಿನಲ್ಲಿ 1.5-ಲೀಟರ್ ಡೀಸೆಲ್ ಎಂಜಿನ್ ಅನ್ನು ಅಳವಡಿಸಿದೆ. ಈ ಎಂಜಿನ್ 99 ಬಿಹೆಚ್‍ಪಿ ಪವರ್ ಮತ್ತು 200 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್ ಅನ್ನು 6-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ಗೆ ಜೋಡಿಸಲಾಗುತ್ತದೆ. ಈ ಎಂಜಿನ್ ಪ್ರತಿ ಲೀಟರ್‌ಗೆ 24.1 ಕಿ.ಮೀ ಮೈಲೇಜ್ ಅನ್ನು ನೀಡುತ್ತದೆ.

ಸ್ಥಗಿತವಾಗಲಿದೆ 4ನೇ ತಲೆಮಾರಿನ ಹೋಂಡಾ ಸಿಟಿ ಕಾರು

2020ರ ಹೋಂಡಾ ಸಿಟಿ ಕಾರು ಭಾರತೀಯ ಮಾರುಕಟ್ಟೆಯಲ್ಲಿ ಇದೇ ತಿಂಗಳು ಬಿಡುಗಡೆಯಾಗಲಿದೆ ಎಂದು ನಿರೀಕ್ಷಿಸುತ್ತೇವೆ. 2020ರ ಹೋಂಡಾ ಸಿಟಿ ಭಾರತದ ಮಾರುಕಟ್ಟೆಯಲ್ಲಿ ಬಿಡುಗಡೆಯಾದ ಬಳಿಕ ಮಾರುತಿ ಸಿಯಾಜ್, ಟೊಯೊಟಾ ಯಾರಿಸ್ ಮತ್ತು ಹ್ಯುಂಡೈ ವರ್ನಾ ಕಾರುಗಳಿಗೆ ಪೈಪೋಟಿ ನೀಡುತ್ತದೆ.

More from DriveSpark

Article Published On: Friday, June 19, 2020, 20:44 [IST]
English summary
Current (4th-Generation) Honda City Sedan To Be Discontinued: Here Are The Details. Read In Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+