ಆಟೋ ಎಕ್ಸ್ ಪೋದಲ್ಲಿ ಅನಾವರಣಗೊಳ್ಳಲಿದೆ ಓರಾ ಆರ್ 1 ಎಲೆಕ್ಟ್ರಿಕ್ ಕಾರು

ವಾಹನಗಳು ಮಾನವರ ಅಗತ್ಯಗಳಾಗಿ ಬದಲಾಗಿವೆ. ವಾಹನಗಳಿಲ್ಲದೇ ಮನುಷ್ಯರ ಜೀವನವೇ ಇಲ್ಲವೆನ್ನುವಷ್ಟರ ಮಟ್ಟಿಗೆ ವಾಹನಗಳು ಮನುಷ್ಯರ ಜೀವನದ ಭಾಗವಾಗಿ ಬಿಟ್ಟಿವೆ. ಇದರ ಜೊತೆಗೆ ಈ ವಾಹನಗಳು ಹೊರ ಸೂಸುವ ಹೊಗೆಯಿಂದಾಗಿ ವಾಯು ಮಾಲಿನ್ಯ ಪ್ರಮಾಣವು ವಿಪರೀತವಾಗಿ ಏರಿಕೆಯಾಗಿ ಮಾನವನ ಪ್ರಾಣಕ್ಕೆ ಮಾರಕವಾಗುತ್ತಿವೆ.

ಆಟೋ ಎಕ್ಸ್ ಪೋದಲ್ಲಿ ಅನಾವರಣಗೊಳ್ಳಲಿದೆ ಓರಾ ಆರ್ 1 ಎಲೆಕ್ಟ್ರಿಕ್ ಕಾರು

ನಿರ್ದಿಷ್ಟವಾಗಿ ಹೇಳಬೇಕೆಂದರೆ ಡೀಸೆಲ್ - ಪೆಟ್ರೋಲ್ ವಾಹನಗಳಿಂದ ವಿಪರೀತ ವಾಯುಮಾಲಿನ್ಯ ಉಂಟಾಗುತ್ತಿದೆ. ಈ ಕಾರಣಕ್ಕಾಗಿ ಕೇಂದ್ರ ಸರ್ಕಾರವು ಎಲೆಕ್ಟ್ರಿಕ್ ವಾಹನಗಳ ಬಳಕೆಗೆ ಹೆಚ್ಚು ಉತ್ತೇಜನ ನೀಡುತ್ತಿದೆ. ಇನ್ನು ವಾಹನ ತಯಾರಕ ಕಂಪನಿಗಳೂ ಸಹ ಎಲೆಕ್ಟ್ರಿಕ್ ವಾಹನಗಳ ಉತ್ಪಾದನೆಯಲ್ಲಿ ಹಿಂದೆ ಬಿದ್ದಿಲ್ಲ.

ಆಟೋ ಎಕ್ಸ್ ಪೋದಲ್ಲಿ ಅನಾವರಣಗೊಳ್ಳಲಿದೆ ಓರಾ ಆರ್ 1 ಎಲೆಕ್ಟ್ರಿಕ್ ಕಾರು

ಭಾರತದಲ್ಲಿ ಮಾತ್ರವಲ್ಲದೇ ಪ್ರಪಂಚದ್ಯಾಂತ ಬಹುತೇಕ ಎಲ್ಲಾ ದೇಶಗಳಲ್ಲೂ ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಉತ್ತೇಜಿಸಲಾಗುತ್ತಿದೆ. ಎಲೆಕ್ಟ್ರಿಕ್ ವಾಹನಗಳು ಪರಿಸರ ಸ್ನೇಹಿ ಮಾತ್ರವಲ್ಲದೇ ಕಡಿಮೆ ಮೆಂಟೆನೆನ್ಸ್ ಹೊಂದಿರುತ್ತವೆ.

ಆಟೋ ಎಕ್ಸ್ ಪೋದಲ್ಲಿ ಅನಾವರಣಗೊಳ್ಳಲಿದೆ ಓರಾ ಆರ್ 1 ಎಲೆಕ್ಟ್ರಿಕ್ ಕಾರು

ಈ ಕಾರಣಕ್ಕೆ ವಾಹನ ತಯಾರಕ ಕಂಪನಿಗಳು ಎಲೆಕ್ಟ್ರಿಕ್ ವಾಹನಗಳನ್ನು ಅಭಿವೃದ್ಧಿಪಡಿಸಿ ಗ್ರಾಹಕರನ್ನು ಆಕರ್ಷಿಸುತ್ತಿವೆ. ಇದೇ ರೀತಿ ಚೀನಾದ ಬಹುದೊಡ್ಡ ಕಾರು ತಯಾರಕ ಕಂಪನಿಯಾದ ಗ್ರೇಟ್ ವಾಲ್ ಮೋಟಾರ್ಸ್ ಸಹ ಎಲೆಕ್ಟ್ರಿಕ್ ವಾಹನ ಮಾರುಕಟ್ಟೆಗೆ ಕಾಲಿಟ್ಟಿದೆ.

ಆಟೋ ಎಕ್ಸ್ ಪೋದಲ್ಲಿ ಅನಾವರಣಗೊಳ್ಳಲಿದೆ ಓರಾ ಆರ್ 1 ಎಲೆಕ್ಟ್ರಿಕ್ ಕಾರು

ಗ್ರೇಟ್ ವಾಲ್ ಮೋಟಾರ್ಸ್ ಪ್ರಪಂಚದಲ್ಲಿರುವ ಬೇರೆ ಎಲೆಕ್ಟ್ರಿಕ್ ಕಾರುಗಳಿಗಿಂತ ಕಡಿಮೆ ಬೆಲೆಯಲ್ಲಿ ಎಲೆಕ್ಟ್ರಿಕ್ ಕಾರುಗಳನ್ನು ಮಾರಾಟ ಮಾಡಲಿದೆ. ಈ ಕಂಪನಿಯು ಭಾರತದಲ್ಲಿಯೂ ಸಹ ಎಲೆಕ್ಟ್ರಿಕ್ ಕಾರುಗಳನ್ನು ಬಿಡುಗಡೆಗೊಳಿಸಲು ಮುಂದಾಗಿದೆ.

ಆಟೋ ಎಕ್ಸ್ ಪೋದಲ್ಲಿ ಅನಾವರಣಗೊಳ್ಳಲಿದೆ ಓರಾ ಆರ್ 1 ಎಲೆಕ್ಟ್ರಿಕ್ ಕಾರು

ಈ ಕುರಿತು ಗ್ರೇಟ್ ವಾಲ್ ಮೋಟಾರ್ಸ್ ತನ್ನ ಅಧಿಕೃತ ಟ್ವಿಟರ್ ಪೇಜಿನಲ್ಲಿ ಪೋಸ್ಟ್ ಮಾಡಿದೆ. ಮುಂದಿನ ತಿಂಗಳು ದೆಹಲಿಯಲ್ಲಿ ನಡೆಯಲಿರುವ 2020ರ ಆಟೋ ಎಕ್ಸ್ ಪೋದಲ್ಲಿ ತನ್ನ ಎಲೆಕ್ಟ್ರಿಕ್ ಕಾರ್ ಅನ್ನು ಅನಾವರಣಗೊಳಿಸುವುದಾಗಿ ತಿಳಿಸಿದೆ.

ಆಟೋ ಎಕ್ಸ್ ಪೋದಲ್ಲಿ ಅನಾವರಣಗೊಳ್ಳಲಿದೆ ಓರಾ ಆರ್ 1 ಎಲೆಕ್ಟ್ರಿಕ್ ಕಾರು

ಈ ಎಲೆಕ್ಟ್ರಿಕ್ ಕಾರ್ ಅನ್ನು ಶೀಘ್ರದಲ್ಲೇ ಬಿಡುಗಡೆಗೊಳಿಸಲಾಗುವುದು. ಈ ಎಲೆಕ್ಟ್ರಿಕ್ ಕಾರು ಪ್ರಪಂಚದ ಅಗ್ಗದ ಎಲೆಕ್ಟ್ರಿಕ್ ಕಾರ್ ಆಗಿರಲಿದೆ. ಸದ್ಯಕ್ಕೆ ಮಾರುಕಟ್ಟೆಯಲ್ಲಿರುವ ಎಲೆಕ್ಟ್ರಿಕ್ ಕಾರುಗಳ ಬೆಲೆ ದುಬಾರಿಯಾಗಿದೆ. ಗ್ರಾಹಕರು ಅಗ್ಗದ ಬೆಲೆಯ ಎಲೆಕ್ಟ್ರಿಕ್ ಕಾರುಗಳಿಗೆ ಎದುರು ನೋಡುತ್ತಿದ್ದಾರೆ.

ಆಟೋ ಎಕ್ಸ್ ಪೋದಲ್ಲಿ ಅನಾವರಣಗೊಳ್ಳಲಿದೆ ಓರಾ ಆರ್ 1 ಎಲೆಕ್ಟ್ರಿಕ್ ಕಾರು

ಎಲೆಕ್ಟ್ರಿಕ್ ವಾಹನಗಳನ್ನು ಖರೀದಿಸುವವರಿಗೆ ಕೇಂದ್ರ ಸರ್ಕಾರವು ನೀಡುತ್ತಿರುವ ಸಬ್ಸಿಡಿಯು ಸಹ ಅಷ್ಟೊಂದು ಪ್ರಯೋಜನಕಾರಿಯಾಗಿಲ್ಲ. ಈ ಹಿನ್ನೆಲೆಯಲ್ಲಿ ಗ್ರೇಟ್ ವಾಲ್ ಮೋಟಾರ್ಸ್ ತನ್ನ ಅಗ್ಗದ ಬೆಲೆಯ ಓರಾ ಎಲೆಕ್ಟ್ರಿಕ್ ಕಾರ್ ಅನ್ನು ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲು ಮುಂದಾಗಿದೆ.

ಆಟೋ ಎಕ್ಸ್ ಪೋದಲ್ಲಿ ಅನಾವರಣಗೊಳ್ಳಲಿದೆ ಓರಾ ಆರ್ 1 ಎಲೆಕ್ಟ್ರಿಕ್ ಕಾರು

ಓರಾ ಆರ್ 1 ಹೆಸರಿನ ಈ ಎಲೆಕ್ಟ್ರಿಕ್ ಕಾರ್ ಅನ್ನು ಚೀನಾದಲ್ಲಿ ಮಾರಾಟ ಮಾಡಲಾಗುತ್ತಿದೆ. ಓರಾ ಬ್ರಾಂಡಿನಡಿಯಲ್ಲಿ ಆರ್ 1, ಆರ್ 2 ಹಾಗೂ ಐಕ್ಯೂ ಮಾದರಿಗಳನ್ನು ಬಿಡುಗಡೆಗೊಳಿಸಲಾಗಿದೆ. ಈ ಪೈಕಿ ಆರ್ 1 ಹಾಗೂ ಆರ್ 2 ಮಾದರಿಗಳನ್ನು ಮಾರಾಟ ಮಾಡಲಾಗುತ್ತಿದೆ.

ಆಟೋ ಎಕ್ಸ್ ಪೋದಲ್ಲಿ ಅನಾವರಣಗೊಳ್ಳಲಿದೆ ಓರಾ ಆರ್ 1 ಎಲೆಕ್ಟ್ರಿಕ್ ಕಾರು

ಕಂಪನಿಯು ಮುಂಬರುವ ದಿನಗಳಲ್ಲಿ ಐಕ್ಯೂ ಮಾದರಿಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಮಾರಾಟ ಮಾಡಲು ಬಯಸಿದೆ. ಗ್ರೇಟ್ ವಾಲ್ ಕಂಪನಿಯು ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲು ಬಯಸಿರುವ ಆರ್ 1 ಎಲೆಕ್ಟ್ರಿಕ್ ಕಾರು ಅಗ್ಗದ ಬೆಲೆಯ ಜೊತೆಗೆ ಹೆಚ್ಚು ಪರಿಣಾಮಕಾರಿಯಾದ ಎಲೆಕ್ಟ್ರಿಕ್ ಕಾರ್ ಆಗಿರಲಿದೆ.

ಆಟೋ ಎಕ್ಸ್ ಪೋದಲ್ಲಿ ಅನಾವರಣಗೊಳ್ಳಲಿದೆ ಓರಾ ಆರ್ 1 ಎಲೆಕ್ಟ್ರಿಕ್ ಕಾರು

ಈ ಕಾರ್ ಅನ್ನು ಒಂದು ಬಾರಿ ಪೂರ್ತಿಯಾಗಿ ಚಾರ್ಜ್ ಮಾಡಿದರೆ 351 ಕಿ.ಮೀವರೆಗೂ ಚಲಿಸಲಿದೆ. ಈ ಕಾರಿನಲ್ಲಿ 35 ಕಿ.ವ್ಯಾ ಎಲೆಕ್ಟ್ರಿಕ್ ಮೋಟರ್ ಅಳವಡಿಸಲಾಗಿದೆ. ಟಾಟಾ ಕಂಪನಿಯು ಬಿಡುಗಡೆಗೊಳಿಸಲಿರುವ ನೆಕ್ಸಾನ್ ಎಲೆಕ್ಟ್ರಿಕ್ ಕಾರು ಒಂದು ಬಾರಿ ಪೂರ್ತಿಯಾಗಿ ಚಾರ್ಜ್ ಮಾಡಿದ ನಂತರ 300 ಕಿ.ಮೀವರೆಗೂ ಚಲಿಸಲಿದೆ.

ಆಟೋ ಎಕ್ಸ್ ಪೋದಲ್ಲಿ ಅನಾವರಣಗೊಳ್ಳಲಿದೆ ಓರಾ ಆರ್ 1 ಎಲೆಕ್ಟ್ರಿಕ್ ಕಾರು

ಓರಾ ಆರ್ 1 ಎಲೆಕ್ಟ್ರಿಕ್ ಕಾರು ನೆಕ್ಸಾನ್ ಎಲೆಕ್ಟ್ರಿಕ್ ಕಾರಿಗಿಂತ 51 ಕಿ.ಮೀ ಹೆಚ್ಚು ದೂರವನ್ನು ಕ್ರಮಿಸಲಿದೆ. ಅಧಿಕೃತ ವರದಿಗಳ ಪ್ರಕಾರ ಈ ಎಲೆಕ್ಟ್ರಿಕ್ ಕಾರಿನ ಬೆಲೆಯು ರೂ.6 ಲಕ್ಷದಿಂದ ರೂ.9 ಲಕ್ಷಗಳವರೆಗೆ ಇರಲಿದೆ.

ಆಟೋ ಎಕ್ಸ್ ಪೋದಲ್ಲಿ ಅನಾವರಣಗೊಳ್ಳಲಿದೆ ಓರಾ ಆರ್ 1 ಎಲೆಕ್ಟ್ರಿಕ್ ಕಾರು

ಚೀನಾದಲ್ಲಿ ಮಾರಾಟವಾಗುತ್ತಿರುವ ಓರಾ ಆರ್ 1 ಎಲೆಕ್ಟ್ರಿಕ್ ಕಾರುಗಳ ಬೆಲೆ 59,800 ರಿಂದ 77,800 ಯುವಾನ್‍‍ಗಳಾಗಿದೆ. ಗ್ರೇಟ್ ವಾಲ್ ಮೋಟಾರ್ಸ್ ಈ ಚಿಕ್ಕ ಎಲೆಕ್ಟ್ರಿಕ್ ಕಾರಿನ ಜೊತೆಯಲ್ಲಿ ದೊಡ್ಡ ಕಾರುಗಳನ್ನೂ ಸಹ ಬಿಡುಗಡೆಗೊಳಿಸಲಿದೆ.

ಆಟೋ ಎಕ್ಸ್ ಪೋದಲ್ಲಿ ಅನಾವರಣಗೊಳ್ಳಲಿದೆ ಓರಾ ಆರ್ 1 ಎಲೆಕ್ಟ್ರಿಕ್ ಕಾರು

ಟಾಟಾ ಕಂಪನಿಯ ಹ್ಯಾರಿಯರ್ ಎಸ್‍‍ಯುವಿಗೆ ಪೈಪೋಟಿ ನೀಡಲು ಹವಾಲ್ ಎಸ್‍‍ಯುವಿ ಬಿಡುಗಡೆಯಾಗಲಿದೆ. ಈ ಎಸ್‍‍ಯುವಿಯು ಸಹ ಮಾರುಕಟ್ಟೆಯಲ್ಲಿರುವ ಎಸ್‍‍ಯುವಿಗಳಿಗಿಂತ ಕಡಿಮೆ ಬೆಲೆಯನ್ನು ಹೊಂದಿರಲಿದೆ. ಈ ಎಸ್‍‍ಯುವಿಯು ಹಲವಾರು ಪ್ರೀಮಿಯಂ ಫೀಚರ್‍‍ಗಳನ್ನು ಹೊಂದಿರಲಿದೆ.

ಆಟೋ ಎಕ್ಸ್ ಪೋದಲ್ಲಿ ಅನಾವರಣಗೊಳ್ಳಲಿದೆ ಓರಾ ಆರ್ 1 ಎಲೆಕ್ಟ್ರಿಕ್ ಕಾರು

ಈ ಎಸ್‍‍ಯುವಿ ಟಾಟಾ ಹ್ಯಾರಿಯರ್‍‍ಗೆ ಮಾತ್ರವಲ್ಲದೇ, ಸದ್ಯಕ್ಕೆ ದೇಶಿಯ ಮಾರುಕಟ್ಟೆಯಲ್ಲಿ ಹೆಚ್ಚು ಮಾರಾಟವಾಗುತ್ತಿರುವ ಎಂಜಿ ಹೆಕ್ಟರ್‍‍ಗೂ ಪೈಪೋಟಿ ನೀಡಲಿದೆ. ಗ್ರೇಟ್ ವಾಲ್ ಮೋಟಾರ್ಸ್ ಸದ್ಯಕ್ಕೆ ಹವಾಲ್ ಹೆಚ್ 6 ಎಸ್‍ಯುವಿಯನ್ನು ಪರೀಕ್ಷಿಸುತ್ತಿದೆ. ಈ ಎಸ್‍‍ಯುವಿಯನ್ನು ಸಹ ಸದ್ಯದಲ್ಲೇ ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲಿದೆ.

Most Read Articles

Kannada
English summary
India's cheapest electric car to be launched soon - Read in Kannada
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X