ವಿಮಾನಯಾನ ಸೇವೆಗಳನ್ನು ರದ್ದುಪಡಿಸಿದ ಕೇಂದ್ರ ಸರ್ಕಾರ

ಕರೋನಾ ವೈರಸ್ ಹರಡದಂತೆ ತಡೆಯಲು ಕೇಂದ್ರ ಸರ್ಕಾರವು ದೇಶಿಯ ಹಾಗೂ ಅಂತರರಾಷ್ಟ್ರೀಯ ವಿಮಾನಗಳನ್ನು ಮೇ 31ರವರೆಗೆ ಸ್ಥಗಿತಗೊಳಿಸಿದೆ. ನಾಲ್ಕನೇ ಹಂತದ ಲಾಕ್‌ಡೌನ್ ಅನ್ನು ಮೇ 18ರಿಂದ ಮೇ 31ರವರೆಗೆ ಘೋಷಿಸಲಾಗಿದೆ. ಅಗತ್ಯ ಸೇವೆಯ ಹಾಗೂ ತುರ್ತು ಸೇವೆಯ ವಿಮಾನಗಳು ಮೊದಲಿನಂತೆ ಕಾರ್ಯನಿರ್ವಹಿಸಲಿವೆ.

ವಿಮಾನಯಾನ ಸೇವೆಗಳನ್ನು ರದ್ದುಪಡಿಸಿದ ಕೇಂದ್ರ ಸರ್ಕಾರ

ವಿಮಾನ ಸೇವೆಗಳನ್ನು ಪುನರಾರಂಭಿಸಲು ಕೇಂದ್ರ ಸರ್ಕಾರವು ಅಂತಿಮ ಹಂತದ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ ಎಂದು ಸರ್ಕಾರದ ಉನ್ನತ ಮೂಲಗಳು ಬಹಿರಂಗಪಡಿಸಿವೆ. ಪ್ರಯಾಣಿಕರು ವಿಮಾನಗಳಿಂದ ಕೆಳಗಿಳಿದ ನಂತರ ಅವರನ್ನು ಕ್ವಾರಂಟೈನ್ ಮಾಡುವ ಬಗ್ಗೆ ಗೊಂದಲವುಂಟಾಗಿರುವುದರಿಂದ ಕಾರ್ಯಾಚರಣೆ ಪುನರಾರಂಭವು ವಿಳಂಬವಾಗಿದೆ. ಮಾರ್ಚ್ 25ರ ರಾಷ್ಟ್ರವ್ಯಾಪಿ ಲಾಕ್‌ಡೌನ್ ನಂತರ ಎಲ್ಲಾ ದೇಶಿಯ ಹಾಗೂ ಅಂತರರಾಷ್ಟ್ರೀಯ ವಿಮಾನಗಳನ್ನು ರದ್ದುಪಡಿಸಲಾಗಿದೆ.

ವಿಮಾನಯಾನ ಸೇವೆಗಳನ್ನು ರದ್ದುಪಡಿಸಿದ ಕೇಂದ್ರ ಸರ್ಕಾರ

ವಿಮಾನಯಾನ ಸೇವೆಗಳನ್ನು ಮೇ 17ರಿಂದ ಪುನರಾರಂಭಿಸುವ ನಿರೀಕ್ಷೆಯಿತ್ತು, ಆದರೆ ಹೆಚ್ಚುತ್ತಿರುವ ಕರೋನಾ ಸೋಂಕಿನ ಪ್ರಕರಣಗಳ ಕಾರಣಕ್ಕೆ ಮೇ 31ರವರೆಗೆ ವಿಮಾನಯಾನ ಸೇವೆಗಳನ್ನು ರದ್ದುಗೊಳಿಸಲು ನಿರ್ಧರಿಸಲಾಗಿದೆ. ವಿಮಾನಯಾನ ಇಲಾಖೆಯು ಸ್ಟ್ಯಾಂಡರ್ಡ್ ಆಪರೇಟಿಂಗ್ ಪ್ರೊಸೀಜರ್ ಬಿಡುಗಡೆಗೊಳಿಸಿದೆ.

MOSTREAD: ಕರೋನಾ ವೈರಸ್ ಎಫೆಕ್ಟ್: ಭಾರೀ ಪ್ರಮಾಣದಲ್ಲಿ ಕುಸಿದ ಇಂಧನ ಮಾರಾಟ

ವಿಮಾನಯಾನ ಸೇವೆಗಳನ್ನು ರದ್ದುಪಡಿಸಿದ ಕೇಂದ್ರ ಸರ್ಕಾರ

ಇದರನ್ವಯ ಪ್ರಯಾಣಿಕರಿಗೆ ಹಾಗೂ ವಿಮಾನ ನಿಲ್ದಾಣದ ನೌಕರರಿಗೆ ಅಗತ್ಯ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ. ವಿಮಾನ ನಿಲ್ದಾಣ ಪ್ರಾಧಿಕಾರವು ಪ್ರಯಾಣಿಕರನ್ನು ಪರೀಕ್ಷೆಗೆ ಒಳಪಡಿಸಲು ಎಲ್ಲಾ ವಿಮಾನ ನಿಲ್ದಾಣಗಳಲ್ಲಿ ಥರ್ಮಲ್ ಸ್ಕ್ರೀನಿಂಗ್ ಡಿವೈಸ್ ಹಾಗೂ ಅಲ್ಟ್ರಾ ವಯೊಲೆಟ್ ಸ್ಕ್ಯಾನರ್‌ಗಳನ್ನು ಅಳವಡಿಸಿದೆ. ಜೊತೆಗೆ ವಿಮಾನ ನಿಲ್ದಾಣವನ್ನು ಸ್ವಚ್ವಗೊಳಿಸುವ ವ್ಯವಸ್ಥೆಯನ್ನು ಮಾಡಿದೆ.

ವಿಮಾನಯಾನ ಸೇವೆಗಳನ್ನು ರದ್ದುಪಡಿಸಿದ ಕೇಂದ್ರ ಸರ್ಕಾರ

ವಿದೇಶದಲ್ಲಿರುವ ಭಾರತೀಯರನ್ನು ಕರೆತರಲು ಏರ್ ಇಂಡಿಯಾ ನಡೆಸುತ್ತಿರುವ ವಂದೇ ಭಾರತ್ ಮಿಷನ್ ಅಡಿಯಲ್ಲಿ ಮೊದಲ ಐದು ದಿನಗಳಲ್ಲಿ 6,037 ಭಾರತೀಯರನ್ನು ಮರಳಿ ಕರೆತರಲಾಗಿದೆ. 12 ದೇಶಗಳಲ್ಲಿ ಸಿಲುಕಿದ್ದ 15,000 ಭಾರತೀಯರನ್ನು ಕರೆತರಲು ಮೇ 7ರಿಂದ ಮೇ 14ರವರೆಗೆ ಒಟ್ಟು 64 ವಿಮಾನಗಳ ಹಾರಾಟವನ್ನು ನಡೆಸಲಾಗಿತ್ತು.

MOSTREAD: ರಾಷ್ಟ್ರೀಯ ಹೆದ್ದಾರಿ ನಿರ್ಮಾಣದಲ್ಲಿ ಹೊಸ ದಾಖಲೆ ಬರೆದ ಕೇಂದ್ರ ಸರ್ಕಾರ

ವಿಮಾನಯಾನ ಸೇವೆಗಳನ್ನು ರದ್ದುಪಡಿಸಿದ ಕೇಂದ್ರ ಸರ್ಕಾರ

ವಂದೇ ಭಾರತ್ ಮಿಷನ್‌‍ನ ಎರಡನೇ ಹಂತವನ್ನು ಮೇ 16ರಿಂದ 22ರವರೆಗೆ ನಡೆಸಲಾಗುವುದು. ಈ ಹಂತದಲ್ಲಿ ಉಕ್ರೇನ್, ಕಿರ್ಗಿಸ್ತಾನ್, ಅರ್ಮೇನಿಯಾ, ಬೆಲಾರಸ್, ಜಾರ್ಜಿಯಾ, ಕಜಕಿಸ್ತಾನ್, ನೈಜೀರಿಯಾದ 31 ದೇಶಗಳಲ್ಲಿರುವ ಭಾರತೀಯರನ್ನು ಕರೆತರಲಾಗುವುದು. ಎರಡನೇ ಹಂತದಲ್ಲಿ 31 ದೇಶಗಳಿಗೆ 149 ವಿಮಾನಗಳು ಪ್ರಯಾಣಿಸಲಿವೆ.

ವಿಮಾನಯಾನ ಸೇವೆಗಳನ್ನು ರದ್ದುಪಡಿಸಿದ ಕೇಂದ್ರ ಸರ್ಕಾರ

ಗೃಹ ಇಲಾಖೆಯ ಮಾರ್ಗಸೂಚಿಗಳ ಪ್ರಕಾರ ಪ್ರಯಾಣಿಕರು ಅರ್ಹತೆ ಇದ್ದರೆ ಮಾತ್ರ ವಿಮಾನದ ಟಿಕೆಟ್ ಬುಕ್ಕಿಂಗ್ ಮಾಡಬಹುದು. ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ಆರೋಗ್ಯವನ್ನು ಪರಿಶೀಲಿಸಲಾಗುವುದು ಎಂದೂ ಹೇಳಲಾಗಿದೆ. ವಿಮಾನ ನಿಲ್ದಾಣದಲ್ಲಿ ಥರ್ಮಲ್ ಸ್ಕ್ಯಾನಿಂಗ್ ಕಡ್ಡಾಯವಾಗಿರಲಿದ್ದು, ಯಾವುದೇ ಆರೋಗ್ಯ ಸಮಸ್ಯೆ ಇಲ್ಲದಿದ್ದರೆ ಮಾತ್ರ ಪ್ರಯಾಣಕ್ಕೆ ಅವಕಾಶ ನೀಡಲಾಗುತ್ತದೆ.

Most Read Articles

Kannada
English summary
Domestic international Passenger flights services suspended till 31st May. Read in Kannada.
Story first published: Monday, May 18, 2020, 17:25 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Drivespark sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Drivespark website. However, you can change your cookie settings at any time. Learn more