ಲಾಕ್‌ಡೌನ್ ಸಂಕಷ್ಟ- ಆಟೋ ಚಾಲಕರಿಗೆ ಆಹಾರ ಧಾನ್ಯಗಳ ಕಿಟ್ ವಿತರಿಸಿದ ಪಿಯಾಜಿಯೊ

ಕರೋನಾ ವೈರಸ್ ಅಟ್ಟಹಾಸ ಭಾರತ ಸೇರಿ ವಿಶ್ವದ ಹಲವು ರಾಷ್ಟ್ರಗಳ ಆರ್ಥಿಕ ಪರಿಸ್ಥಿತಿ ಶೋಚನೀಯ ಸ್ಥಿತಿ ತಲುಪಿದ್ದು, ಆಟೋ ಉತ್ಪಾದನಾ ಕಂಪನಿಗಳು ಸಹ ಭಾರೀ ನಷ್ಟ ಅನುಭವಿಸಿವೆ. ಆದರೂ ಕೂಡಾ ಲಾಕ್‌ಡೌನ್‌ನಿಂದ ತೊಂದರೆ ಅನುಭವಿಸಿವರಿಗೆ ಆಹಾರ ಮತ್ತು ವೈದ್ಯಕೀಯ ಸೌಲಭ್ಯಗಳನ್ನು ಒದಗಿಸುವ ಮಾನವೀಯತೆ ಮೆರೆದಿವೆ.

ಲಾಕ್‌ಡೌನ್ ಸಂಕಷ್ಟ- ಆಟೋ ಚಾಲಕರಿಗೆ ಆಹಾರ ಧಾನ್ಯಗಳ ಕಿಟ್ ವಿತರಿಸಿದ ಪಿಯಾಜಿಯೊ

ಕರೋನಾ ವೈರಸ್ ವಿರುದ್ಧ ಹೋರಾಟಕ್ಕಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ದೇಣಿಗೆ ಸಂಗ್ರಹ ಅಭಿಯಾನಕ್ಕೆ ಸ್ಪಂದಿಸಿದ ಆಟೋ ಕಂಪನಿಗಳು ಭಾರೀ ಪ್ರಮಾಣದ ದೇಣಿಗೆ ನೀಡಿರುವುದಲ್ಲದೆ ಬಡವರ ಸಂಕಷ್ಟಕ್ಕೂ ಸ್ಪಂದಿಸುವ ಮೂಲಕ ಆಹಾರ ಮತ್ತು ವೈದ್ಯಕೀಯ ಸೌಲಭ್ಯಗಳನ್ನು ಪೂರೈಕೆ ಮಾಡಿವೆ. ಸಂಕಷ್ಟದ ಸಮಯದಲ್ಲೂ ಸರ್ಕಾರದ ಜೊತೆ ನಿಂತಿರುವುದಲ್ಲದೆ ವೈದ್ಯಕೀಯ ಉಪಕರಣಗಳ ತಯಾರಿಕೆಗೂ ಚಾಲನೆ ನೀಡಿವೆ.

ಲಾಕ್‌ಡೌನ್ ಸಂಕಷ್ಟ- ಆಟೋ ಚಾಲಕರಿಗೆ ಆಹಾರ ಧಾನ್ಯಗಳ ಕಿಟ್ ವಿತರಿಸಿದ ಪಿಯಾಜಿಯೊ

ವೈರಸ್ ವಿರುದ್ಧ ಹೋರಾಟಕ್ಕಾಗಿ ಅಗತ್ಯವಿರುವ ಟೆಸ್ಟಿಂಗ್ ಕಿಟ್, ವೆಂಟಿಲೇಟರ್ ಮತ್ತು ಐಸಿಯು ಯುನಿಟ್‌ಗೆ ಅಗತ್ಯವಿರುವ ತಾಂತ್ರಿಕ ಸೌಲಭ್ಯಗಳನ್ನು ದೇಣಿಗೆ ನೀಡಿದ್ದು, ಲಾಕ್‌ಡೌನ್‌ನಿಂದ ಸಂಕಷ್ಟಕ್ಕೆ ಸಿಲುಕಿದ ಕೂಲಿ ಕಾರ್ಮಿಕರಿಗೂ ಸಹಾಯ ಮಾಡಿವೆ.

ಲಾಕ್‌ಡೌನ್ ಸಂಕಷ್ಟ- ಆಟೋ ಚಾಲಕರಿಗೆ ಆಹಾರ ಧಾನ್ಯಗಳ ಕಿಟ್ ವಿತರಿಸಿದ ಪಿಯಾಜಿಯೊ

ಪಿಯಾಜಿಯೊ ಕೂಡಾ ದೇಶಾದ್ಯಂತ ವಿವಿಧ ರಾಜ್ಯಗಳಲ್ಲಿ ಆಟೋ ಚಾಲಕರ ಸಂಕಷ್ಟಕ್ಕೆ ಸ್ಪಂದಿಸಿದ್ದಲ್ಲದೆ ಇದುವರೆಗೆ 11 ಸಾವಿರ ಅಗತ್ಯ ಆಹಾರ ಸಾಮಾಗ್ರಿಗಳನ್ನು ಹೊಂದಿರುವ ಕಿಟ್ ವಿತರಣೆ ಮಾಡಿದ್ದು, ಬಾರಾಮತಿಯಲ್ಲಿರುವ ಆಟೋ ರಿಕ್ಷಾ ಉತ್ಪಾದನಾ ಘಟಕದ ಬಳಿ ಬರೋಬ್ಬರಿ 1 ಸಾವಿರ ಕೂಲಿ ಕಾರ್ಮಿಕರಿಗಾಗಿ ವಸತಿ ವ್ಯವಸ್ಥೆಯನ್ನು ಸಹ ಕಲ್ಪಿಸಿ ಕೊಟ್ಟಿತ್ತು.

ಲಾಕ್‌ಡೌನ್ ಸಂಕಷ್ಟ- ಆಟೋ ಚಾಲಕರಿಗೆ ಆಹಾರ ಧಾನ್ಯಗಳ ಕಿಟ್ ವಿತರಿಸಿದ ಪಿಯಾಜಿಯೊ

ಲಾಕ್‌ಡೌನ್ ಸಂದರ್ಭದಲ್ಲಿ ಊರಿಗೂ ತೆರಳಲಾಗದೆ ಪರದಾಡುತ್ತಿದ್ದ ಕಾರ್ಮಿಕರಿಗೆ ವಸತಿ ಸೌಲಭ್ಯ ಕಲ್ಪಿಸಿದ್ದ ಪಿಯಾಜಿಯೊ ಕಂಪನಿಯು ಸುರಕ್ಷತೆಗೆ ಬೇಕಾದ ಮಾಸ್ಕ್, ಹ್ಯಾಂಡ್ ಸ್ಯಾನಿಟೈಜರ್ ಮತ್ತು ಹ್ಯಾಂಡ್ ಗ್ಲೌಸ್ ವಿತರಣೆ ಮಾಡಿತ್ತು.

MOST READ: ಸ್ಕ್ರ್ಯಾಪಿಂಗ್ ನೀತಿ ಜಾರಿಗೆ ಅಂತಿಮ ಸಿದ್ದತೆ- ಆಟೋ ಉದ್ಯಮದಲ್ಲಿ ಹೊಸ ಸಂಚಲನ..

ಲಾಕ್‌ಡೌನ್ ಸಂಕಷ್ಟ- ಆಟೋ ಚಾಲಕರಿಗೆ ಆಹಾರ ಧಾನ್ಯಗಳ ಕಿಟ್ ವಿತರಿಸಿದ ಪಿಯಾಜಿಯೊ

ಪಿಯಾಜಿಯೊ ಕಂಪನಿಯು ಪುಣೆ ಬಳಿಯಿರುವ ಬಾರಾಮತಿಯಲ್ಲಿ ಆಟೋ ರಿಕ್ಷಾ ಉತ್ಪಾದನಾ ಘಟಕವನ್ನು ಹೊಂದಿದ್ದು, ಬಡವರಿಗೆ ಆಹಾರ ಪೊಟ್ಟಣಗಳ ಜೊತೆಗೆ ಪುಣೆಯಲ್ಲಿ ಕರೋನಾ ವೈರಸ್ ತಗುಲಿದ ರೋಗಿಗಳಿಗೆ ಚಿಕಿತ್ಸೆ ನೀಡಲಾಗುತ್ತಿರುವ ಸರ್ಕಾರಿ ಆಸ್ಪತ್ರೆಯೊಂದನ್ನು ಉನ್ನತೀಕರಿಸಲು ಸಹ ಹಣಕಾಸಿನ ಸಹಕಾರ ನೀಡಿದೆ.

ಲಾಕ್‌ಡೌನ್ ಸಂಕಷ್ಟ- ಆಟೋ ಚಾಲಕರಿಗೆ ಆಹಾರ ಧಾನ್ಯಗಳ ಕಿಟ್ ವಿತರಿಸಿದ ಪಿಯಾಜಿಯೊ

ಸಂಕಷ್ಟದ ಸಮಯದಲ್ಲೂ ಸರ್ಕಾರ ಮತ್ತು ಬಡವರ ಸಂಕಷ್ಟಕ್ಕೆ ಸ್ಪಂದಿಸಿರುವ ಆಟೋ ಕಂಪನಿಗಳು ಸಾರ್ವಜನಿಕರಿಗೆ ಮೆಚ್ಚುಗೆಗೆ ಪಾತ್ರವಾಗಿದ್ದು, ವಾಹನ ಉತ್ಪಾದನೆ ಇಲ್ಲದ ಸಂದರ್ಭದಲ್ಲಿ ವೈದ್ಯಕೀಯ ಉಪಕರಣಗಳನ್ನು ಸಿದ್ದಪಡಿಸಿ ವೈರಸ್ ವಿರುದ್ಧ ಹೋರಾಟದಲ್ಲಿ ಭಾಗಿಯಾಗಿದ್ದನ್ನು ಯಾರು ಮರೆಯುವಂತಿಲ್ಲ.

MOST READ: ಕಾರು ಖರೀದಿ ಮಾಡುವ ಕರೋನಾ ವಾರಿಯರ್ಸ್‌ಗೆ ಭರ್ಜರಿ ಆಫರ್ ನೀಡಿದ ಟಾಟಾ

ಲಾಕ್‌ಡೌನ್ ಸಂಕಷ್ಟ- ಆಟೋ ಚಾಲಕರಿಗೆ ಆಹಾರ ಧಾನ್ಯಗಳ ಕಿಟ್ ವಿತರಿಸಿದ ಪಿಯಾಜಿಯೊ

ಇನ್ನು ಮಾಹಾಮಾರಿ ಕರೋನಾ ವೈರಸ್ ದಾಳಿಯು ಇಡೀ ವಿಶ್ವವನ್ನೇ ವ್ಯಾಪಿಸಿದ್ದು, ಇದುವರೆಗೆ 60 ಲಕ್ಷ ಜನರಲ್ಲಿ ಸೋಂಕು ಕಾಣಿಸಿಕೊಂಡಿರುವುದಲ್ಲದೆ 3.67 ಲಕ್ಷ ಜನ ಪ್ರಾಣಕಳೆದುಕೊಂಡಿದ್ದಾರೆ. ಸೋಂಕಿತರಲ್ಲಿ ಇದುವರೆಗೆ ಸುಮಾರು 26.72 ಲಕ್ಷ ಜನ ಗುಣಮುಖರಾಗಿದ್ದು, ಶೇ.2 ರಷ್ಟು ಸೋಂಕು ಪಿಡಿತರ ಸ್ಥಿತಿ ಶೋಚನೀಯವಾಗಿದೆ.

Most Read Articles

Kannada
English summary
Piaggio Donates Ration Kits To Auto Rickshaw Drivers. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X