ಪ್ರತಿ ಚಾರ್ಜ್‌ಗೆ 504 ಕಿ.ಮೀ ಮೈಲೇಜ್‌ನೊಂದಿಗೆ ಹೊಸ ಸಂಚಲನ ಮೂಡಿಸಲಿದೆ ಪ್ರವೈಗ್ ಇವಿ ಕಾರು

ಬೆಂಗಳೂರು ಮೂಲದ ಪ್ರವೈಗ್ ಡೈನಾಮಿಕ್ ಕಂಪನಿಯು ತನ್ನ ಮೊದಲ ಎಲೆಕ್ಟ್ರಿಕ್ ಕಾರು ಮಾದರಿಯ ಕಾನ್ಸೆಪ್ಟ್ ಆವೃತ್ತಿಯನ್ನು ಅನಾವರಣಗೊಳಿಸುವ ಮೂಲಕ ಹೊಸ ಸಂಚಲನಕ್ಕೆ ಕಾರಣವಾಗಿದ್ದು, ಹೊಸ ಇವಿ ಕಾರಿನ ಮೂಲಕ ಭಾರೀ ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಲ್ಲಿದೆ.

ಪ್ರತಿ ಚಾರ್ಜ್‌ಗೆ 504 ಕಿ.ಮೀ ಮೈಲೇಜ್‌ನೊಂದಿಗೆ ಹೊಸ ಸಂಚಲನ ಮೂಡಿಸಲಿದೆ ಪ್ರವೈಗ್ ಇವಿ ಕಾರು

ಹೊಸ ಮಾದರಿಯ ಎಲೆಕ್ಟ್ರಿಕ್ ವಾಹನ ಉತ್ಪನ್ನಗಳಿಗೆ ಮಾರುಕಟ್ಟೆಯಲ್ಲಿ ಬೇಡಿಕೆ ಹೆಚ್ಚುತ್ತಿದ್ದು, ಹಲವಾರು ಸ್ಟಾರ್ಟ್ಅಪ್ ಕಂಪನಿಗಳು ವಿವಿಧ ಮಾದರಿಯ ಹೊಸ ಎಲೆಕ್ಟ್ರಿಕ್ ವಾಹನಗಳನ್ನು ಸಿದ್ದಪಡಿಸುತ್ತಿದ್ದು, ನಮ್ಮ ಬೆಂಗಳೂರು ಮೂಲದ ಪ್ರವೈಗ್ ಡೈನಾಮಿಕ್ ಕೂಡಾ ವಿಶೇಷ ವಿನ್ಯಾಸದ ಎಕ್ಸ್ಟಿಷನ್ ಎಂಕೆ1 ಎಲೆಕ್ಟ್ರಿಕ್ ಸೆಡಾನ್ ಮಾದರಿಯನ್ನು ಸುಧಾರಿತ ತಂತ್ರಜ್ಞಾನ ಪ್ರೇರಣೆಯೊಂದಿಗೆ ಅಭಿವೃದ್ದಿಗೊಳಿಸಿ ಕಾನ್ಸೆಪ್ಟ್ ಆವೃತ್ತಿಯನ್ನು ಮೊದಲ ಬಾರಿಗೆ ಸಾರ್ವಜನಿಕವಾಗಿ ಪ್ರದರ್ಶನಗೊಳಿಸಿದೆ.

ಪ್ರತಿ ಚಾರ್ಜ್‌ಗೆ 504 ಕಿ.ಮೀ ಮೈಲೇಜ್‌ನೊಂದಿಗೆ ಹೊಸ ಸಂಚಲನ ಮೂಡಿಸಲಿದೆ ಪ್ರವೈಗ್ ಇವಿ ಕಾರು

ಕಾನ್ಸೆಪ್ಟ್ ಮಾದರಿಯ ಉತ್ಪಾದನಾ ಆವೃತ್ತಿಯಲ್ಲಿ ತುಸು ಬದಲಾವಣೆಗಳನ್ನು ಪಡೆದುಕೊಳ್ಳಲಿದ್ದು, ಪ್ರೀಮಿಯಂ ಫೀಚರ್ಸ್‌ಗಳು ಮತ್ತು ಬ್ಯಾಟರಿ ಪ್ಯಾಕ್ ಸೌಲಭ್ಯಗಳು ಕಾನ್ಸೆಪ್ಟ್ ಮಾದರಿಯಲ್ಲೇ ಮುಂದುವರಿಯಲಿವೆ.

ಪ್ರತಿ ಚಾರ್ಜ್‌ಗೆ 504 ಕಿ.ಮೀ ಮೈಲೇಜ್‌ನೊಂದಿಗೆ ಹೊಸ ಸಂಚಲನ ಮೂಡಿಸಲಿದೆ ಪ್ರವೈಗ್ ಇವಿ ಕಾರು

ಪ್ರವೈಗ್ ಡೈನಾಮಿಕ್ ಕಂಪನಿಯ ಎಕ್ಸ್ಟಿಷನ್ ಎಂಕೆ1 ಎಲೆಕ್ಟ್ರಿಕ್ ಕಾರು ಮಾದರಿಯು ಮೆಲ್ನೋಟಕ್ಕೆ ಟೆಸ್ಲಾ ಕಾರಿನಂತೆ ಕಂಡರೂ ವಿಭಿನ್ನ ತಾಂತ್ರಿಕ ಅಂಶಗಳೊಂದಿಗೆ ಅಭಿವೃದ್ದಿಗೊಂಡಿದ್ದು, ಗ್ರಾಹಕರ ಬೇಡಿಕೆಯೆಂತೆ ವಿವಿಧ ಬ್ಯಾಟರಿ ಪ್ಯಾಕ್ ಜೋಡಣೆ ಹೊಂದಿರಲಿವೆ.

ಪ್ರತಿ ಚಾರ್ಜ್‌ಗೆ 504 ಕಿ.ಮೀ ಮೈಲೇಜ್‌ನೊಂದಿಗೆ ಹೊಸ ಸಂಚಲನ ಮೂಡಿಸಲಿದೆ ಪ್ರವೈಗ್ ಇವಿ ಕಾರು

ಎಕ್ಸ್ಟಿಷನ್ ಎಂಕೆ1 ಹೈ ಎಂಡ್ ಕಾರು ಮಾದರಿಯು ಪ್ರತಿ ಚಾರ್ಜ್‌ಗೆ ಗರಿಷ್ಠ 504ಕಿ.ಮೀ ಮೈಲೇಜ್ ಹಿಂದಿರುಗಿಸಲಿದ್ದು, ಸಾಮಾನ್ಯ ಕಾರುಗಳಂತೆ ಎಕ್ಸ್ಟಿಷನ್ ಎಂಕೆ1 ಎಲೆಕ್ಟ್ರಿಕ್ ಕಾರು ಕೂಡಾ ಫರ್ಪಾಮೆನ್ಸ್‌ನಲ್ಲೂ ಗಮನಸೆಳೆಯಲಿದೆ. ಹೀಗಾಗಿ ಗ್ರಾಹಕರ ಬೇಡಿಕೆಯಲ್ಲಿ ಮುಂಚೂಣಿ ಸಾಧಿಸಲಿರುವ ಪ್ರವೈಗ್ ಕಂಪನಿಯು ವಾರ್ಷಿಕವಾಗಿ 2500 ಯುನಿಟ್ ಉತ್ಪಾದನಾ ಗುರಿಹೊಂದಿದ್ದು, ಹೂಡಿಕೆದಾರರ ಆಧಾರದ ಮೇಲೆ ಕಾರು ಉತ್ಪಾದನಾ ಪ್ರಮಾಣವು ಮತ್ತಷ್ಟು ಹೆಚ್ಚಳವಾಗಲಿದೆ.

ಪ್ರತಿ ಚಾರ್ಜ್‌ಗೆ 504 ಕಿ.ಮೀ ಮೈಲೇಜ್‌ನೊಂದಿಗೆ ಹೊಸ ಸಂಚಲನ ಮೂಡಿಸಲಿದೆ ಪ್ರವೈಗ್ ಇವಿ ಕಾರು

ಎಲೆಕ್ಟ್ರಿಕ್ ಕಾರು ಮಾದರಿಗಳಲ್ಲೇ ವಿಶೇಷ ತಾಂತ್ರಿಕ ಅಂಶಗಳನ್ನು ಹೊಂದಿರುವ ಹೊಸ ಕಾರು ಬೆಲೆಯಲ್ಲೂ ಗಮನಸೆಳೆಯಲಿದ್ದು, 96kWh ಲೀ-ಅಯಾನ್ ಬ್ಯಾಟರಿ ಪ್ಯಾಕ್ ಪಡೆದುಕೊಳ್ಳಲಿದ್ದು, ಫಾಸ್ಟ್ ಚಾರ್ಜಿಂಗ್ ಮೂಲಕ ಕೇವಲ 30 ನಿಮಿಷಗಳಲ್ಲಿ ಗರಿಷ್ಠ ಶೇ.80ರಷ್ಟು ಬ್ಯಾಟರಿ ಚಾರ್ಜ್ ಮಾಡಬಹುದಾಗಿದೆ.

ಪ್ರತಿ ಚಾರ್ಜ್‌ಗೆ 504 ಕಿ.ಮೀ ಮೈಲೇಜ್‌ನೊಂದಿಗೆ ಹೊಸ ಸಂಚಲನ ಮೂಡಿಸಲಿದೆ ಪ್ರವೈಗ್ ಇವಿ ಕಾರು

ಹಾಗೆಯೇ ಹೊಸ ಕಾರಿನಲ್ಲಿ ವಿವಿಧ ಡ್ರೈವ್ ಮೊಡ್‌ಗಳನ್ನು ನೀಡಲಾಗಿದ್ದು, 201.5-ಬಿಎಚ್‌ಪಿ ಉತ್ಪಾದನೆಯೊಂದಿಗೆ ಗಂಟೆಗೆ ಗರಿಷ್ಠ 196 ಕಿ.ಮೀ ಟಾಪ್ ಸ್ಪೀಡ್ ಪಡೆದುಕೊಳ್ಳುವ ವೈಶಿಷ್ಟ್ಯತೆ ಹೊಂದಿದೆ.

MOST READ: ಬಿಡುಗಡೆಗೆ ಸಿದ್ದವಾದ ಹೋಂಡಾದ ಮೊದಲ ಎಲೆಕ್ಟ್ರಿಕ್ ಕಾರು

ಪ್ರತಿ ಚಾರ್ಜ್‌ಗೆ 504 ಕಿ.ಮೀ ಮೈಲೇಜ್‌ನೊಂದಿಗೆ ಹೊಸ ಸಂಚಲನ ಮೂಡಿಸಲಿದೆ ಪ್ರವೈಗ್ ಇವಿ ಕಾರು

ಇದರೊಂದಿಗೆ ಹೊಸ ಕಾರಿನ ಹೊರಭಾಗದ ವಿನ್ಯಾಸವು ಸಹ ಸೆಡಾನ್ ಕಾರು ಪ್ರಿಯರ ಆಕರ್ಷಣೆಗೆ ಕಾರಣವಾಗಿದ್ದು, ಕಾನ್ಸೆಪ್ಟ್ ಮಾದರಿಯನ್ನು ಟೂ ಡೋರ್ ಕೂಪೆ ಮಾದರಿಯಲ್ಲಿ ಸಿದ್ದಪಡಿಸಲಾಗಿದೆ. ಆದರೆ ಉತ್ಪಾದನಾ ಆವೃತ್ತಿಯು ಫೋರ್ ಡೋರ್ ಮಾದರಿಯಾಗಿರಲಿದ್ದು, ಭಾರತೀಯ ಕಾರು ಖರೀದಿದಾರರ ಅಭಿರುಚಿಗೆ ತಕ್ಕಂತೆ ಹೊಸ ಕಾರನ್ನು ಸಿದ್ದಪಡಿಸಲಾಗುತ್ತಿದೆ.

ಪ್ರತಿ ಚಾರ್ಜ್‌ಗೆ 504 ಕಿ.ಮೀ ಮೈಲೇಜ್‌ನೊಂದಿಗೆ ಹೊಸ ಸಂಚಲನ ಮೂಡಿಸಲಿದೆ ಪ್ರವೈಗ್ ಇವಿ ಕಾರು

ಹೊಸ ಕಾರಿನ ಕಾನ್ಸೆಪ್ಟ್ ಮಾದರಿಯೊಂದಿಗೆ ಮೈಲೇಜ್ ಮಾಹಿತಿಯ ಹೊರತಾಗಿ ಒಳಭಾಗದ ತಾಂತ್ರಿಕ ಅಂಶಗಳನ್ನು ಮುಂಬರುವ ದಿನಗಳಲ್ಲಿ ಅನಾವರಣಗೊಳಿಸಲಿದ್ದು, ಕಾನ್ಸೆಪ್ಟ್ ಮಾದರಿಯಲ್ಲಿನ ವಿನ್ಯಾಸವನ್ನೇ ಉತ್ಪಾದನಾ ಆವೃತ್ತಿಯಲ್ಲೂ ಉಳಿಸಿಕೊಳ್ಳುವ ಸುಳಿವು ನೀಡಿದೆ.

MOST READ: 2020ರ ಅವಧಿಯಲ್ಲಿ ಬಿಡುಗಡೆಯಾದ ಪ್ರಮುಖ ಹತ್ತು ಕಾರುಗಳಿವು..!

ಪ್ರತಿ ಚಾರ್ಜ್‌ಗೆ 504 ಕಿ.ಮೀ ಮೈಲೇಜ್‌ನೊಂದಿಗೆ ಹೊಸ ಸಂಚಲನ ಮೂಡಿಸಲಿದೆ ಪ್ರವೈಗ್ ಇವಿ ಕಾರು

ಎಕ್ಸ್ಟಿಷನ್ ಎಂಕೆ1 ಎಲೆಕ್ಟ್ರಿಕ್ ಸೆಡಾನ್ ಕಾರಿನ ಉತ್ಪಾದನಾ ಮಾದರಿಯನ್ನು 2021ರ ಆರಂಭದಲ್ಲಿ ಅನಾವರಣಗೊಳಿಸುವ ಸಾಧ್ಯತೆಗಳಿದ್ದು, 5 ಸ್ಟಾರ್ ಸೇಫ್ಟಿ ರೇಟಿಂಗ್ಸ್ ಮೂಲಕ ದೇಶಿಯ ಮಾರುಕಟ್ಟೆಯಲ್ಲಿ ಭರ್ಜರಿ ಬೇಡಿಕೆ ಪಡೆದುಕೊಳ್ಳುವ ವಿಶ್ವಾಸದಲ್ಲಿದೆ. ಆದರೆ ಹೊಸ ಕಾರಿನ ಬೆಲೆ ನಿಗದಿ ಆಧಾರದ ಮೇಲೆ ಕಾರಿನ ಬೇಡಿಕೆ ನಿರ್ಧಾರವಾಗಲಿದ್ದು, ಎಕ್ಸ್‌ಶೋರೂಂ ಪ್ರಕಾರ ರೂ.16 ಲಕ್ಷದಿಂದ ರೂ.20 ಲಕ್ಷದೊಳಗೆ ಖರೀದಿಗೆ ಲಭ್ಯವಾದಲ್ಲಿ ಮಾತ್ರ ಹೊಸ ಕಾರು ಎಲ್ಲಾ ವರ್ಗದ ಕಾರು ಖರೀದಿದಾರರನ್ನು ಸೆಳೆಯುವಲ್ಲಿ ಯಶಸ್ವಿಯಾಗಲಿದೆ.

Most Read Articles

Kannada
English summary
Pravaig dynamics to make 2,500 electric cars per year. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X