Just In
Don't Miss!
- Movies
'ದೀಪ್ ಸಿಧು ಜೊತೆ ನನಗೆ ಯಾವುದೇ ಸಂಬಂಧವಿಲ್ಲ': ಸಂಸದ, ನಟ ಸನ್ನಿ ಡಿಯೋಲ್ ಸ್ಪಷ್ಟನೆ
- News
ಭಾರತದಲ್ಲಿ ಬೇಕಾದಷ್ಟು ಲಸಿಕೆಯಿದೆ, ಆದರೆ... ಸಮಸ್ಯೆ ಬೇರೆಯೇ ಆಗಿದೆ
- Finance
ಬಜೆಟ್ 2021: ಸ್ಟ್ಯಾಂಡರ್ಡ್ ಡಿಡಕ್ಷನ್ ರು. 1 ಲಕ್ಷಕ್ಕೆ ಹೆಚ್ಚಳ ನಿರೀಕ್ಷೆ
- Sports
ಬೈರ್ಸ್ಟೋವ್ಗೆ 2 ಪಂದ್ಯಗಳ ವಿಶ್ರಾಂತಿ ನೀಡಿರುವುದನ್ನು ಸಮರ್ಥಿಸಿದ ಇಂಗ್ಲೆಂಡ್ ಕೋಚ್
- Education
WCD Chitradurga Recruitment 2021: ಅಂಗನವಾಡಿಯಲ್ಲಿ 129 ಹುದ್ದೆಗಳಿಗೆ ಅರ್ಜಿ ಆಹ್ವಾನ
- Lifestyle
ಗರ್ಭಾವಸ್ಥೆಯಲ್ಲಿ ಥೈರಾಯ್ಡ್ ಸಮಸ್ಯೆ: ಇದರ ಅಪಾಯಗಳೇನು, ತಡೆಗಟ್ಟುವುದು ಹೇಗೆ?
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಸಾರ್ವಜನಿಕವಾಗಿ ಮೊದಲ ಬಾರಿಗೆ ರೋಡ್ ಟೆಸ್ಟಿಂಗ್ ನಡೆಸಿದ ಪ್ರವೈಗ್ ಎಲೆಕ್ಟ್ರಿಕ್ ಕಾರು
ಭಾರತೀಯ ಆಟೋ ಉದ್ಯಮದಲ್ಲಿ ಹೊಸ ಸಂಚಲನ ಸೃಷ್ಠಿಸಲಿರುವ ಪ್ರವೈಗ್ ಡೈನಾಮಿಕ್ ಆಟೋ ಕಂಪನಿಯು ವಿಶೇಷ ವಿನ್ಯಾಸದ ಎಲೆಕ್ಟ್ರಿಕ್ ಕಾರು ಮಾದರಿಯನ್ನು ಬಿಡುಗಡೆಗೊಳಿಸಲು ಅಂತಿಮ ಹಂತದ ಸಿದ್ದತೆ ನಡೆಸಿದ್ದು, ಹೊಸ ಎಲೆಕ್ಟ್ರಿಕ್ ಕಾರನ್ನು ಮೊದಲ ಬಾರಿಗೆ ಸಾರ್ವಜನಿಕ ರಸ್ತೆಗಳಲ್ಲಿ ರೋಡ್ ಟೆಸ್ಟಿಂಗ್ ನಡೆಸುತ್ತಿರುವುದು ಕಂಡುಬಂದಿದೆ.

ಬೆಂಗಳೂರು ಮೂಲದ ಪ್ರವೈಗ್ ಡೈನಾಮಿಕ್ ಕಂಪನಿಯು ಈ ತಿಂಗಳ ಆರಂಭದಲ್ಲಿ ಹೊಸ ಎಲೆಕ್ಟ್ರಿಕ್ ಕಾರಿನ ಫೋಟೋಟೈಪ್ ಆವೃತ್ತಿಯನ್ನು ಅನಾವರಣಗೊಳಿಸುವ ಮೂಲಕ ಆಟೋ ಉದ್ಯಮದಲ್ಲಿ ಹೊಸ ಭರವಸೆ ಹುಟ್ಟುಹಾಕಿದ್ದು, ಎಕ್ಸ್ಟಿಷನ್ ಎಂಕೆ1 ಎಲೆಕ್ಟ್ರಿಕ್ ಸೆಡಾನ್ ಮಾದರಿಯನ್ನು ಸುಧಾರಿತ ತಂತ್ರಜ್ಞಾನ ಪ್ರೇರಣೆಯೊಂದಿಗೆ ಅಭಿವೃದ್ದಿಗೊಳಿಸಿ ಬಿಡುಗಡೆ ಮಾಡಲಾಗುತ್ತಿದೆ.

ಆರಂಭಿಕವಾಗಿ ಬೆಂಗಳೂರು ಮತ್ತು ದೆಹಲಿಯಲ್ಲಿ ಹೊಸ ಎಕ್ಸ್ಟಿಷನ್ ಎಂಕೆ1 ಎಲೆಕ್ಟ್ರಿಕ್ ಕಾರನ್ನು ಬಿಡುಗಡೆ ಮಾಡಲು ನಿರ್ಧರಿಸಿರುವ ಪ್ರವೈಗ್ ಡೈನಾಮಿಕ್ ಕಂಪನಿಯು ದೆಹಲಿಯಲ್ಲಿ ಮೊದಲ ಬಾರಿಗೆ ಹೊಸ ಕಾರಿನ ರೋಡ್ ಟೆಸ್ಟಿಂಗ್ ನಡೆಸುತ್ತಿರುವುದು ಕಂಡುಬಂದಿದ್ದು, ಹೊಸ ಕಾರು 2021ರ ಆರಂಭದಲ್ಲಿ ಉತ್ಪಾದನಾ ಆವೃತ್ತಿಯೊಂದಿಗೆ ಪ್ರದರ್ಶನಗೊಳ್ಳಲಿದೆ.

ಉತ್ಪಾದನಾ ಕಾರು ಆವೃತ್ತಿಯು ಫೋಟೋಟೈಪ್ ಮಾದರಿಗಿಂತಲೂ ತುಸು ಬದಲಾವಣೆಗಳನ್ನು ಪಡೆದುಕೊಳ್ಳಲಿದ್ದು, ಪ್ರೀಮಿಯಂ ಫೀಚರ್ಸ್‌ಗಳು ಮತ್ತು ಬ್ಯಾಟರಿ ಪ್ಯಾಕ್ ಸೌಲಭ್ಯಗಳು ಕಾನ್ಸೆಪ್ಟ್ ಮಾದರಿಯಲ್ಲೇ ಮುಂದುವರಿಯಲಿವೆ.

ಪ್ರವೈಗ್ ಡೈನಾಮಿಕ್ ಕಂಪನಿಯ ಎಕ್ಸ್ಟಿಷನ್ ಎಂಕೆ1 ಎಲೆಕ್ಟ್ರಿಕ್ ಕಾರು ಮಾದರಿಯು ಮೆಲ್ನೋಟಕ್ಕೆ ಟೆಸ್ಲಾ ಕಾರಿನಂತೆ ಕಂಡರೂ ವಿಭಿನ್ನ ತಾಂತ್ರಿಕ ಅಂಶಗಳೊಂದಿಗೆ ಅಭಿವೃದ್ದಿಗೊಂಡಿದ್ದು, ಗ್ರಾಹಕರ ಬೇಡಿಕೆಯೆಂತೆ ವಿವಿಧ ಬ್ಯಾಟರಿ ಪ್ಯಾಕ್ ಜೋಡಣೆ ಹೊಂದಿರಲಿವೆ. ಎಕ್ಸ್ಟಿಷನ್ ಎಂಕೆ1 ಹೈ ಎಂಡ್ ಕಾರು ಮಾದರಿಯು ಪ್ರತಿ ಚಾರ್ಜ್‌ಗೆ ಗರಿಷ್ಠ 504ಕಿ.ಮೀ ಮೈಲೇಜ್ ಹಿಂದಿರುಗಿಸಲಿದ್ದು, ಸಾಮಾನ್ಯ ಕಾರುಗಳಂತೆ ಎಕ್ಸ್ಟಿಷನ್ ಎಂಕೆ1 ಎಲೆಕ್ಟ್ರಿಕ್ ಕಾರು ಕೂಡಾ ಫರ್ಪಾಮೆನ್ಸ್‌ನಲ್ಲೂ ಗಮನಸೆಳೆಯಲಿದೆ.

ಹೀಗಾಗಿ ಗ್ರಾಹಕರ ಬೇಡಿಕೆಯಲ್ಲಿ ಮುಂಚೂಣಿ ಸಾಧಿಸಲಿರುವ ಪ್ರವೈಗ್ ಕಂಪನಿಯು ವಾರ್ಷಿಕವಾಗಿ 2,500 ಯುನಿಟ್ ಉತ್ಪಾದನಾ ಗುರಿಹೊಂದಿದ್ದು, ಹೂಡಿಕೆದಾರರ ಆಧಾರದ ಮೇಲೆ ಕಾರು ಉತ್ಪಾದನಾ ಪ್ರಮಾಣವು ಮತ್ತಷ್ಟು ಹೆಚ್ಚಳವಾಗಲಿದೆ.

ಎಲೆಕ್ಟ್ರಿಕ್ ಕಾರು ಮಾದರಿಗಳಲ್ಲೇ ವಿಶೇಷ ತಾಂತ್ರಿಕ ಅಂಶಗಳನ್ನು ಹೊಂದಿರುವ ಹೊಸ ಕಾರು ಬೆಲೆಯಲ್ಲೂ ಗಮನಸೆಳೆಯಲಿದ್ದು, 96kWh ಲೀ-ಅಯಾನ್ ಬ್ಯಾಟರಿ ಪ್ಯಾಕ್ ಪಡೆದುಕೊಳ್ಳಲಿದ್ದು, ಫಾಸ್ಟ್ ಚಾರ್ಜಿಂಗ್ ಮೂಲಕ ಕೇವಲ 30 ನಿಮಿಷಗಳಲ್ಲಿ ಗರಿಷ್ಠ ಶೇ.80ರಷ್ಟು ಬ್ಯಾಟರಿ ಚಾರ್ಜ್ ಮಾಡಬಹುದಾಗಿದೆ.

ಹಾಗೆಯೇ ಹೊಸ ಕಾರಿನಲ್ಲಿ ವಿವಿಧ ಡ್ರೈವ್ ಮೊಡ್‌ಗಳನ್ನು ನೀಡಲಾಗಿದ್ದು, 201.5-ಬಿಎಚ್‌ಪಿ ಉತ್ಪಾದನೆಯೊಂದಿಗೆ ಗಂಟೆಗೆ ಗರಿಷ್ಠ 196 ಕಿ.ಮೀ ಟಾಪ್ ಸ್ಪೀಡ್ ಪಡೆದುಕೊಳ್ಳುವ ವೈಶಿಷ್ಟ್ಯತೆ ಹೊಂದಿದೆ.
MOST READ: ಪ್ರತಿ ಚಾರ್ಜ್‌ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿ..!

ಇದರೊಂದಿಗೆ ಹೊಸ ಕಾರಿನ ಹೊರಭಾಗದ ವಿನ್ಯಾಸವು ಸಹ ಸೆಡಾನ್ ಕಾರು ಪ್ರಿಯರ ಆಕರ್ಷಣೆಗೆ ಕಾರಣವಾಗಿದ್ದು, ಕಾನ್ಸೆಪ್ಟ್ ಮಾದರಿಯನ್ನು ಟೂ ಡೋರ್ ಕೂಪೆ ಮಾದರಿಯಲ್ಲಿ ಸಿದ್ದಪಡಿಸಲಾಗಿದೆ. ಆದರೆ ಉತ್ಪಾದನಾ ಆವೃತ್ತಿಯು ಫೋರ್ ಡೋರ್ ಮಾದರಿಯಾಗಿರಲಿದ್ದು, ಭಾರತೀಯ ಕಾರು ಖರೀದಿದಾರರ ಅಭಿರುಚಿಗೆ ತಕ್ಕಂತೆ ಹೊಸ ಕಾರನ್ನು ಸಿದ್ದಪಡಿಸಲಾಗುತ್ತಿದೆ.

ಹೊಸ ಕಾರಿನ ಕಾನ್ಸೆಪ್ಟ್ ಮಾದರಿಯೊಂದಿಗೆ ಮೈಲೇಜ್ ಮಾಹಿತಿಯ ಹೊರತಾಗಿ ಒಳಭಾಗದ ತಾಂತ್ರಿಕ ಅಂಶಗಳನ್ನು ಮುಂಬರುವ ದಿನಗಳಲ್ಲಿ ಅನಾವರಣಗೊಳಿಸಲಿದ್ದು, ಕಾನ್ಸೆಪ್ಟ್ ಮಾದರಿಯಲ್ಲಿನ ವಿನ್ಯಾಸವನ್ನೇ ಉತ್ಪಾದನಾ ಆವೃತ್ತಿಯಲ್ಲೂ ಉಳಿಸಿಕೊಳ್ಳುವ ಸುಳಿವು ನೀಡಿದೆ.
MOST READ: 2020ರ ಅವಧಿಯಲ್ಲಿ ಬಿಡುಗಡೆಯಾದ ಪ್ರಮುಖ ಹತ್ತು ಕಾರುಗಳಿವು..!

ಎಕ್ಸ್ಟಿಷನ್ ಎಂಕೆ1 ಎಲೆಕ್ಟ್ರಿಕ್ ಸೆಡಾನ್ ಕಾರಿನ ಉತ್ಪಾದನಾ ಮಾದರಿಯನ್ನು 2021ರ ಆರಂಭದಲ್ಲಿ ಅನಾವರಣಗೊಳಿಸುವ ಸಾಧ್ಯತೆಗಳಿದ್ದು, 5 ಸ್ಟಾರ್ ಸೇಫ್ಟಿ ರೇಟಿಂಗ್ಸ್ ಮೂಲಕ ದೇಶಿಯ ಮಾರುಕಟ್ಟೆಯಲ್ಲಿ ಭರ್ಜರಿ ಬೇಡಿಕೆ ಪಡೆದುಕೊಳ್ಳುವ ವಿಶ್ವಾಸದಲ್ಲಿದೆ.
Image Courtesy: Car Crazy India/Facebook