ಅನಾವರಣಗೊಳ್ಳಲು ಸಜ್ಜಾದ ಅತಿ ಹೆಚ್ಚು ಮೈಲೇಜ್ ನೀಡುವ ಪ್ರವೈಗ್ ಎಲೆಕ್ಟ್ರಿಕ್ ಕಾರು
ಹೊಸ ಮಾದರಿಯ ಎಲೆಕ್ಟ್ರಿಕ್ ವಾಹನ ಉತ್ಪನ್ನಗಳಿಗೆ ಮಾರುಕಟ್ಟೆಯಲ್ಲಿ ಬೇಡಿಕೆ ಹೆಚ್ಚುತ್ತಿದ್ದು, ಹಲವಾರು ಸ್ಟಾರ್ಟ್ಅಪ್ ಕಂಪನಿಗಳು ವಿವಿಧ ಮಾದರಿಯ ಎಲೆಕ್ಟ್ರಿಕ್ ವಾಹನಗಳನ್ನು ಸಿದ್ದಪಡಿಸುತ್ತಿವೆ. ನಮ್ಮ ಬೆಂಗಳೂರು ಮೂಲದ ಸ್ಟಾರ್ಟ್ ಅಪ್ ಕಂಪನಿಯೊಂದು ಕೂಡಾ ವಿಶೇಷ ಎಲೆಕ್ಟ್ರಿಕ್ ಕಾರು ಮಾದರಿಯನ್ನು ಸಿದ್ದಪಡಿಸಿದ್ದು, ಮೈಲೇಜ್ ವಿಚಾರವಾಗಿ ಗ್ರಾಹಕರ ಆಕರ್ಷಣೆಗೆ ಕಾರಣವಾಗಿದೆ.

ಹೊಸ ಮಾದರಿಯ ಎಲೆಕ್ಟ್ರಿಕ್ ವಾಹನ ಉತ್ಪಾದನೆಯಲ್ಲಿ ಭಾರೀ ಸಂಚಲನಕ್ಕೆ ಕಾರಣವಾಗುತ್ತಿರುವ ಬೆಂಗಳೂರು ಮೂಲದ ಹಲವು ಸ್ಟಾಟ್ಅಪ್ ಎಲೆಕ್ಟ್ರಿಕ್ ವಾಹನ ಉತ್ಪಾದನಾ ಕಂಪನಿಗಳು ಜಾಗತಿಕ ಮಾರುಕಟ್ಟೆಯಲ್ಲಿನ ಬೇಡಿಕೆ ಪೂರೈಸುವ ತವಕದಲ್ಲಿದ್ದು, ವಿಶೇಷ ಮಾದರಿಯ ಎಲೆಕ್ಟ್ರಿಕ್ ಕಾರು ಉತ್ಪಾದನೆ ಮಾಡಿರುವ ಪ್ರವೈಗ್ ಡೈಮಾನಿಕ್ ಕಂಪನಿಯು ಸಹ ವಿಶ್ವದ ಪ್ರಮುಖ ಉತ್ಪಾದನಾ ಕಂಪನಿಗಳಿಗೆ ಪೈಪೋಟಿ ನೀಡಲು ಸಿದ್ದವಾಗಿದೆ.

ಪ್ರವೈಗ್ ಡೈಮಾನಿಕ್ ಕಂಪನಿಯು ನಿರ್ಮಾಣ ಮಾಡಿರುವ ವಿಶೇಷ ವಿನ್ಯಾಸದ ಎಕ್ಸ್ಟಿಷನ್ ಎಂಕೆ1 ಎಲೆಕ್ಟ್ರಿಕ್ ಸೆಡಾನ್ ಮಾದರಿಯ ಹಲವು ವಿಶೇಷತೆಗಳಿಗೆ ಕಾರಣವಾಗಿದ್ದು, ಹೊಸ ಕಾರು ಮುಂದಿನ ತಿಂಗಳು ಅನಾವರಣಗೊಳ್ಳಲಿದೆ.

ಮೆಲ್ನೋಟಕ್ಕೆ ಎಕ್ಸ್ಟಿಷನ್ ಎಂಕೆ1 ಎಲೆಕ್ಟ್ರಿಕ್ ಕಾರು ಮಾದರಿಯು ಟೆಸ್ಲಾ ಕಾರಿನಂತೆ ಕಂಡರೂ ವಿಭಿನ್ನ ತಾಂತ್ರಿಕ ಅಂಶಗಳೊಂದಿಗೆ ಅಭಿವೃದ್ದಿಗೊಂಡಿದ್ದು, ಗ್ರಾಹಕರ ಬೇಡಿಕೆಯೆಂತೆ ವಿವಿಧ ಬ್ಯಾಟರಿ ಪ್ಯಾಕ್ ಆಫರ್ ನೀಡಲಿದೆ.

ಹೈ ಎಂಡ್ ಮಾದರಿಯು ಪ್ರತಿ ಚಾರ್ಜ್‌ಗೆ ಗರಿಷ್ಠ 504ಕಿ.ಮೀ ಮೈಲೇಜ್ ಹಿಂದಿರುಗಿಸಲಿದ್ದು, ಸಾಮಾನ್ಯ ಕಾರುಗಳಂತೆ ಎಕ್ಸ್ಟಿಷನ್ ಎಂಕೆ1 ಎಲೆಕ್ಟ್ರಿಕ್ ಕಾರು ಕೂಡಾ ಫರ್ಪಾಮೆನ್ಸ್‌ನಲ್ಲೂ ಗಮನಸೆಳೆಯಲಿದೆ. ಇದಕ್ಕಾಗಿಯೇ ಹೊಸ ಕಾರಿನಲ್ಲಿ ವಿವಿಧ ಡ್ರೈವ್ ಮೊಡ್‌ಗಳನ್ನು ನೀಡಲಾಗಿದ್ದು, 201.5-ಬಿಎಚ್‌ಪಿ ಉತ್ಪಾದನೆಯೊಂದಿಗೆ ಗಂಟೆಗೆ ಗರಿಷ್ಠ 196 ಕಿ.ಮೀ ವೇಗ ಪಡೆದುಕೊಳ್ಳುವ ವೈಶಿಷ್ಟ್ಯತೆ ಹೊಂದಿದೆ.

ಹೊಸ ಕಾರಿನ ಹೈ ಎಂಡ್ ಮಾದರಿಯಲ್ಲಿ 96kWh ಲೀ-ಅಯಾನ್ ಬ್ಯಾಟರಿ ಪ್ಯಾಕ್ ಪಡೆದುಕೊಳ್ಳಲಿದ್ದು, ಫಾಸ್ಟ್ ಚಾರ್ಜಿಂಗ್ ಮೂಲಕ ಕೇವಲ 30 ನಿಮಿಷಗಳಲ್ಲಿ ಗರಿಷ್ಠ ಶೇ.80ರಷ್ಟು ಬ್ಯಾಟರಿ ಚಾರ್ಜ್ ಮಾಡಬಹುದಾಗಿದೆ.

ಹಾಗೆಯೇ ಹೊಸ ಹೊರಭಾಗದ ವಿನ್ಯಾಸವು ಸಹ ಸೆಡಾನ್ ಕಾರು ಪ್ರಿಯರ ಆಕರ್ಷಣೆಗೆ ಕಾರಣವಾಗಿದ್ದು, ಕಾನ್ಸೆಪ್ಟ್ ಮಾದರಿಯನ್ನು ಟೂ ಡೋರ್ ಕೂಪೆ ಮಾದರಿಯಲ್ಲಿ ಸಿದ್ದಪಡಿಸಲಾಗಿದೆ. ಆದರೆ ಉತ್ಪಾದನಾ ಆವೃತ್ತಿಯು ಫೋರ್ ಡೋರ್ ಮಾದರಿಯಾಗಿರಲಿದ್ದು, ಭಾರತೀಯ ಕಾರು ಖರೀದಿದಾರರ ಅಭಿರುಚಿಗೆ ತಕ್ಕಂತೆ ಹೊಸ ಕಾರನ್ನು ಸಿದ್ದಪಡಿಸಲಾಗಿದೆ.
MOST READ: ಬಿಡುಗಡೆಗೆ ಸಿದ್ದವಾದ ಹೋಂಡಾದ ಮೊದಲ ಎಲೆಕ್ಟ್ರಿಕ್ ಕಾರು

ಹೊಸ ಕಾರಿನ ಮೈಲೇಜ್ ಮಾಹಿತಿ ಹೊರತಾಗಿ ತಾಂತ್ರಿಕ ಅಂಶಗಳ ಮಾಹಿತಿಯು ಶೀಘ್ರದಲ್ಲೇ ಅಧಿಕೃತ ವೆಬ್‌ಸೈಟ್ ಮೂಲಕ ಬಹಿರಂಗ ಪಡಿಸಲಾಗುತ್ತಿದ್ದು, ಕಾನ್ಸೆಪ್ಟ್ ಮಾದರಿಯಲ್ಲೇ ಉತ್ಪಾದನಾ ಆವೃತ್ತಿಯು ಸಹ ಸಿದ್ದಪಡಿಸಿದ್ದೆ ಆದಲ್ಲಿ ಹೊಸ ಕಾರು ದೇಶಿಯ ಆಟೋ ಉದ್ಯಮದಲ್ಲಿ ದೊಡ್ಡ ಸಂಚಲನ ಉಂಟು ಮಾಡುವುದರಲ್ಲಿ ಎರಡು ಮಾತಿಲ್ಲ.

ಹಾಗೆಯೇ ಹೊಸ ಕಾರಿನ ಬೆಲೆಯು ಕೂಡಾ ಎಲೆಕ್ಟ್ರಿಕ್ ಕಾರಿನ ಭವಿಷ್ಯವನ್ನು ನಿರ್ಧರಿಸಿದ್ದು, ದೇಶಿಯ ಮಾರುಕಟ್ಟೆಯಲ್ಲೇ ಪೂರ್ಣ ಪ್ರಮಾಣದಲ್ಲಿ ಸಿದ್ದವಾಗುತ್ತಿರುವುದರಿಂದ ಕಾರಿನ ಬೆಲೆಯು ಆಕರ್ಷಕವಾಗಿರಲಿದೆ ಎನ್ನಲಾಗುತ್ತಿದೆ.
MOST READ: ಪ್ರತಿ ಚಾರ್ಜ್‌ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿ..!

ಸದ್ಯ ಅನಾವರಣಗೊಳ್ಳಲಿರುವ ಪ್ರವೈಗ್ ಡೈಮಾನಿಕ್ ನಿರ್ಮಾಣದ ಎಕ್ಸ್ಟಿಷನ್ ಎಂಕೆ1 ಎಲೆಕ್ಟ್ರಿಕ್ ಸೆಡಾನ್ ಕಾರು ಮಾದರಿಯು 2021ರ ಆರಂಭದಲ್ಲಿ ಖರೀದಿಗೆ ಲಭ್ಯವಾಗಲಿದ್ದು, ಟೆಸ್ಲಾ ಮಾದರಿಯಲ್ಲೇ ಈ ಕಾರು ಕೂಡಾ ದೇಶಿಯ ಮಾರುಕಟ್ಟೆಯಲ್ಲಿ ಭರ್ಜರಿ ಬೇಡಿಕೆ ಪಡೆದುಕೊಳ್ಳುವ ವಿಶ್ವಾಸದಲ್ಲಿದೆ.


Click it and Unblock the Notifications