ಅತಿ ಹೆಚ್ಚು ಮೈಲೇಜ್ ನೀಡುವ ಪ್ರವೈಗ್ ಎಕ್ಸ್ಟಿಷನ್ ಎಂಕೆ1 ಎಲೆಕ್ಟ್ರಿಕ್ ಸೆಡಾನ್ ಅನಾವರಣ

ಪ್ರವೈಗ್ ಡೈಮಾನಿಕ್ ಕಂಪನಿಯು ತನ್ನ ಮೊದಲ ಎಲೆಕ್ಟ್ರಿಕ್ ಕಾರು ಮಾದರಿಯಾದ ಎಕ್ಸ್ಟಿಷನ್ ಎಂಕೆ1 ಇವಿ ಸೆಡಾನ್ ಕಾರು ಮಾದರಿಯನ್ನು ಅನಾವರಣಗೊಳಿಸಿದ್ದು, ಹೊಸ ಕಾರಿನ ಮಾರಾಟಕ್ಕೆ ಶೀಘ್ರದಲ್ಲೇ ಚಾಲನೆ ನೀಡುವ ಸುಳಿವು ನೀಡಿದೆ.

ಅತಿ ಹೆಚ್ಚು ಮೈಲೇಜ್ ನೀಡುವ ಪ್ರವೈಗ್ ಎಕ್ಸ್ಟಿಷನ್ ಎಂಕೆ1 ಎಲೆಕ್ಟ್ರಿಕ್ ಸೆಡಾನ್ ಅನಾವರಣ

ಹೊಸ ಮಾದರಿಯ ಎಲೆಕ್ಟ್ರಿಕ್ ವಾಹನ ಉತ್ಪನ್ನಗಳಿಗೆ ಮಾರುಕಟ್ಟೆಯಲ್ಲಿ ಬೇಡಿಕೆ ಹೆಚ್ಚುತ್ತಿದ್ದು, ಹಲವಾರು ಸ್ಟಾರ್ಟ್ಅಪ್ ಕಂಪನಿಗಳು ವಿವಿಧ ಮಾದರಿಯ ಹೊಸ ಎಲೆಕ್ಟ್ರಿಕ್ ವಾಹನಗಳನ್ನು ಸಿದ್ದಪಡಿಸುತ್ತಿದ್ದು, ನಮ್ಮ ಬೆಂಗಳೂರು ಮೂಲದ ಪ್ರವೈಗ್ ಡೈನಾಮಿಕ್ ಕೂಡಾ ವಿಶೇಷ ವಿನ್ಯಾಸದ ಎಕ್ಸ್ಟಿಷನ್ ಎಂಕೆ1 ಎಲೆಕ್ಟ್ರಿಕ್ ಸೆಡಾನ್ ಮಾದರಿಯನ್ನು ಸುಧಾರಿತ ತಂತ್ರಜ್ಞಾನ ಪ್ರೇರಣೆಯೊಂದಿಗೆ ಅಭಿವೃದ್ದಿಗೊಳಿಸಿದೆ.

ಅತಿ ಹೆಚ್ಚು ಮೈಲೇಜ್ ನೀಡುವ ಪ್ರವೈಗ್ ಎಕ್ಸ್ಟಿಷನ್ ಎಂಕೆ1 ಎಲೆಕ್ಟ್ರಿಕ್ ಸೆಡಾನ್ ಅನಾವರಣ

ಎಕ್ಸ್ಟಿಷನ್ ಎಂಕೆ1 ಎಲೆಕ್ಟ್ರಿಕ್ ಕಾರು ಮಾದರಿಯು ಮೆಲ್ನೋಟಕ್ಕೆ ಟೆಸ್ಲಾ ಕಾರಿನಂತೆ ಕಂಡರೂ ವಿಭಿನ್ನ ತಾಂತ್ರಿಕ ಅಂಶಗಳೊಂದಿಗೆ ಅಭಿವೃದ್ದಿಗೊಂಡಿದ್ದು, ಗ್ರಾಹಕರ ಬೇಡಿಕೆಯೆಂತೆ ವಿವಿಧ ಬ್ಯಾಟರಿ ಪ್ಯಾಕ್ ಜೋಡಣೆ ಹೊಂದಿರಲಿವೆ.

ಅತಿ ಹೆಚ್ಚು ಮೈಲೇಜ್ ನೀಡುವ ಪ್ರವೈಗ್ ಎಕ್ಸ್ಟಿಷನ್ ಎಂಕೆ1 ಎಲೆಕ್ಟ್ರಿಕ್ ಸೆಡಾನ್ ಅನಾವರಣ

ಎಕ್ಸ್ಟಿಷನ್ ಎಂಕೆ1 ಹೈ ಎಂಡ್ ಕಾರು ಮಾದರಿಯು ಪ್ರತಿ ಚಾರ್ಜ್‌ಗೆ ಗರಿಷ್ಠ 504ಕಿ.ಮೀ ಮೈಲೇಜ್ ಹಿಂದಿರುಗಿಸಲಿದ್ದು, ಸಾಮಾನ್ಯ ಕಾರುಗಳಂತೆ ಎಕ್ಸ್ಟಿಷನ್ ಎಂಕೆ1 ಎಲೆಕ್ಟ್ರಿಕ್ ಕಾರು ಕೂಡಾ ಫರ್ಪಾಮೆನ್ಸ್‌ನಲ್ಲೂ ಗಮನಸೆಳೆಯಲಿದೆ.

ಅತಿ ಹೆಚ್ಚು ಮೈಲೇಜ್ ನೀಡುವ ಪ್ರವೈಗ್ ಎಕ್ಸ್ಟಿಷನ್ ಎಂಕೆ1 ಎಲೆಕ್ಟ್ರಿಕ್ ಸೆಡಾನ್ ಅನಾವರಣ

ಇದಕ್ಕಾಗಿಯೇ ಹೊಸ ಕಾರಿನಲ್ಲಿ ವಿವಿಧ ಡ್ರೈವ್ ಮೊಡ್‌ಗಳನ್ನು ನೀಡಲಾಗಿದ್ದು, 201.5-ಬಿಎಚ್‌ಪಿ ಉತ್ಪಾದನೆಯೊಂದಿಗೆ ಗಂಟೆಗೆ ಗರಿಷ್ಠ 196 ಕಿ.ಮೀ ಟಾಪ್ ಸ್ಪೀಡ್ ಪಡೆದುಕೊಳ್ಳುವ ವೈಶಿಷ್ಟ್ಯತೆ ಹೊಂದಿದೆ. ಹೊಸ ಕಾರಿನ ಹೈ ಎಂಡ್ ಮಾದರಿಯಲ್ಲಿ 96kWh ಲೀ-ಅಯಾನ್ ಬ್ಯಾಟರಿ ಪ್ಯಾಕ್ ಪಡೆದುಕೊಳ್ಳಲಿದ್ದು, ಫಾಸ್ಟ್ ಚಾರ್ಜಿಂಗ್ ಮೂಲಕ ಕೇವಲ 30 ನಿಮಿಷಗಳಲ್ಲಿ ಗರಿಷ್ಠ ಶೇ.80ರಷ್ಟು ಬ್ಯಾಟರಿ ಚಾರ್ಜ್ ಮಾಡಬಹುದಾಗಿದೆ.

ಅತಿ ಹೆಚ್ಚು ಮೈಲೇಜ್ ನೀಡುವ ಪ್ರವೈಗ್ ಎಕ್ಸ್ಟಿಷನ್ ಎಂಕೆ1 ಎಲೆಕ್ಟ್ರಿಕ್ ಸೆಡಾನ್ ಅನಾವರಣ

ಹಾಗೆಯೇ ಹೊಸ ಹೊರಭಾಗದ ವಿನ್ಯಾಸವು ಸಹ ಸೆಡಾನ್ ಕಾರು ಪ್ರಿಯರ ಆಕರ್ಷಣೆಗೆ ಕಾರಣವಾಗಿದ್ದು, ಕಾನ್ಸೆಪ್ಟ್ ಮಾದರಿಯನ್ನು ಟೂ ಡೋರ್ ಕೂಪೆ ಮಾದರಿಯಲ್ಲಿ ಸಿದ್ದಪಡಿಸಲಾಗಿದೆ. ಆದರೆ ಉತ್ಪಾದನಾ ಆವೃತ್ತಿಯು ಫೋರ್ ಡೋರ್ ಮಾದರಿಯಾಗಿರಲಿದ್ದು, ಭಾರತೀಯ ಕಾರು ಖರೀದಿದಾರರ ಅಭಿರುಚಿಗೆ ತಕ್ಕಂತೆ ಹೊಸ ಕಾರನ್ನು ಸಿದ್ದಪಡಿಸಲಾಗುತ್ತಿದೆ.

MOST READ: ಪ್ರತಿ ಚಾರ್ಜ್‌ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿ..!

ಅತಿ ಹೆಚ್ಚು ಮೈಲೇಜ್ ನೀಡುವ ಪ್ರವೈಗ್ ಎಕ್ಸ್ಟಿಷನ್ ಎಂಕೆ1 ಎಲೆಕ್ಟ್ರಿಕ್ ಸೆಡಾನ್ ಅನಾವರಣ

ಹೊಸ ಕಾರಿನ ಕಾನ್ಸೆಪ್ಟ್ ಮಾದರಿಯೊಂದಿಗೆ ಮೈಲೇಜ್ ಮಾಹಿತಿಯ ಹೊರತಾಗಿ ತಾಂತ್ರಿಕ ಅಂಶಗಳನ್ನು ಮುಂಬರುವ ದಿನಗಳಲ್ಲಿ ಅನಾವರಣಗೊಳಿಸಲಿದ್ದು, ಕಾನ್ಸೆಪ್ಟ್ ಮಾದರಿಯಲ್ಲಿನ ವಿನ್ಯಾಸವನ್ನೇ ಉತ್ಪಾದನಾ ಆವೃತ್ತಿಯಲ್ಲೂ ಉಳಿಸಿಕೊಳ್ಳುವ ಸುಳಿವು ನೀಡಿದೆ.

ಅತಿ ಹೆಚ್ಚು ಮೈಲೇಜ್ ನೀಡುವ ಪ್ರವೈಗ್ ಎಕ್ಸ್ಟಿಷನ್ ಎಂಕೆ1 ಎಲೆಕ್ಟ್ರಿಕ್ ಸೆಡಾನ್ ಅನಾವರಣ

ಹಾಗೆಯೇ ಹೊಸ ಕಾರಿನ ಬೆಲೆಯು ಕೂಡಾ ಎಲೆಕ್ಟ್ರಿಕ್ ಕಾರಿನ ಭವಿಷ್ಯವನ್ನು ನಿರ್ಧರಿಸಿದ್ದು, ದೇಶಿಯ ಮಾರುಕಟ್ಟೆಯಲ್ಲೇ ಪೂರ್ಣ ಪ್ರಮಾಣದಲ್ಲಿ ಸಿದ್ದವಾಗುತ್ತಿರುವುದರಿಂದ ಕಾರಿನ ಬೆಲೆಯು ಕೂಡಾ ಆಕರ್ಷಕವಾಗಿರಬಹುದು ಎನ್ನಲಾಗುತ್ತಿದೆ.

MOST READ: ಬಿಡುಗಡೆಗೆ ಸಿದ್ದವಾದ ಹೋಂಡಾದ ಮೊದಲ ಎಲೆಕ್ಟ್ರಿಕ್ ಕಾರು

ಅತಿ ಹೆಚ್ಚು ಮೈಲೇಜ್ ನೀಡುವ ಪ್ರವೈಗ್ ಎಕ್ಸ್ಟಿಷನ್ ಎಂಕೆ1 ಎಲೆಕ್ಟ್ರಿಕ್ ಸೆಡಾನ್ ಅನಾವರಣ

ಸದ್ಯ ಕಾನ್ಸೆಪ್ಟ್ ಮಾದರಿಯ ಹೊರವಿನ್ಯಾಸವನ್ನು ಮಾತ್ರ ಅನಾವರಣಗೊಳಿಸಿರುವ ಪ್ರವೈಗ್ ಡೈಮಾನಿಕ್ ಕಂಪನಿಯು ಎಕ್ಸ್ಟಿಷನ್ ಎಂಕೆ1 ಎಲೆಕ್ಟ್ರಿಕ್ ಸೆಡಾನ್ ಕಾರಿನ ಉತ್ಪಾದನಾ ಮಾದರಿಯನ್ನು 2021ರ ಆರಂಭದಲ್ಲಿ ಅನಾವರಣಗೊಳಿಸುವ ಸಾಧ್ಯತೆಗಳಿದ್ದು, 5 ಸ್ಟಾರ್ ಸೇಫ್ಟಿ ರೇಟಿಂಗ್ಸ್ ಮೂಲಕ ದೇಶಿಯ ಮಾರುಕಟ್ಟೆಯಲ್ಲಿ ಭರ್ಜರಿ ಬೇಡಿಕೆ ಪಡೆದುಕೊಳ್ಳುವ ವಿಶ್ವಾಸದಲ್ಲಿದೆ.

More from DriveSpark

Article Published On: Saturday, December 5, 2020, 14:06 [IST]
English summary
Pravaig Extinction MK1 Electric Sedan Unveiled. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+