Just In
Don't Miss!
- Lifestyle
ಗರ್ಭಾವಸ್ಥೆಯಲ್ಲಿ ಥೈರಾಯ್ಡ್ ಸಮಸ್ಯೆ: ಇದರ ಅಪಾಯಗಳೇನು, ತಡೆಗಟ್ಟುವುದು ಹೇಗೆ?
- Sports
ಭಾರತೀಯರ ನಿಂದಿಸಿದ ಕಿಡಿಗೇಡಿಗಳ ಕಂಡುಹಿಡಿಯುವಲ್ಲಿ ಕ್ರಿಕೆಟ್ ಆಸ್ಟ್ರೇಲಿಯಾ ವಿಫಲ
- News
ಶಶಿಕಲಾ ಈಗ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಸಾಮಾನ್ಯ ರೋಗಿ
- Movies
ಎಸ್ಎಸ್ ರಾಜಮೌಳಿ ನಿರ್ಧಾರಕ್ಕೆ ಬೇಸರಗೊಂಡ ನಿರ್ಮಾಪಕ ಬೋನಿ ಕಪೂರ್
- Finance
ಹೊಸ ಸಾರ್ವಕಾಲಿಕ ದಾಖಲೆ ಬರೆದ ಪೆಟ್ರೋಲ್- ಡೀಸೆಲ್ ದರ; ಯಾವ ನಗರದಲ್ಲಿ ಎಷ್ಟು?
- Education
ECIL Recruitment 2021: 3 ಟೆಕ್ನಿಕಲ್ ಅಧಿಕಾರಿ ಹುದ್ದೆಗಳಿಗೆ ನೇರ ಸಂದರ್ಶನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಡಿಸೆಂಬರ್ 4ಕ್ಕೆ ಅನಾವರಣಗೊಳ್ಳಲಿದೆ ಅತಿ ಹೆಚ್ಚು ಮೈಲೇಜ್ ನೀಡುವ ಪ್ರವೈಗ್ ಎಲೆಕ್ಟ್ರಿಕ್ ಕಾರು
ಪ್ರವೈಗ್ ಡೈಮಾನಿಕ್ ಕಂಪನಿಯು ನಿರ್ಮಾಣ ಮಾಡುತ್ತಿರುವ ವಿಶೇಷ ವಿನ್ಯಾಸದ ಎಕ್ಸ್ಟಿಷನ್ ಎಂಕೆ1 ಎಲೆಕ್ಟ್ರಿಕ್ ಸೆಡಾನ್ ಕಾರು ಮಾದರಿಯು ಬಿಡುಗಡೆಗೂ ಮುನ್ನವೇ ಹೊಸ ಸಂಚಲನಕ್ಕೆ ಕಾರಣವಾಗಿದ್ದು, ಹಲವು ವಿಶೇಷತೆಗಳೊಂದಿಗೆ ಅಭಿವೃದ್ದಿಗೊಂಡಿರುವ ಹೊಸ ಕಾರು ಮುಂದಿನ ತಿಂಗಳು ಡಿಸೆಂಬರ್ 4ಕ್ಕೆ ಅನಾವರಣಗೊಳ್ಳುವುದು ಖಚಿತವಾಗಿದೆ.

ಹೊಸ ಮಾದರಿಯ ಎಲೆಕ್ಟ್ರಿಕ್ ವಾಹನ ಉತ್ಪನ್ನಗಳಿಗೆ ಮಾರುಕಟ್ಟೆಯಲ್ಲಿ ಬೇಡಿಕೆ ಹೆಚ್ಚುತ್ತಿದ್ದು, ಹಲವಾರು ಸ್ಟಾರ್ಟ್ಅಪ್ ಕಂಪನಿಗಳು ವಿವಿಧ ಮಾದರಿಯ ಹೊಸ ಎಲೆಕ್ಟ್ರಿಕ್ ವಾಹನಗಳನ್ನು ಸಿದ್ದಪಡಿಸುತ್ತಿವೆ. ನಮ್ಮ ಬೆಂಗಳೂರು ಮೂಲದ ಸ್ಟಾರ್ಟ್‌ಅಪ್ ಕಂಪನಿಯೊಂದು ಕೂಡಾ ವಿಶೇಷ ಎಲೆಕ್ಟ್ರಿಕ್ ಕಾರು ಮಾದರಿಯನ್ನು ಸಿದ್ದಪಡಿಸಿದ್ದು, ಮೈಲೇಜ್ ವಿಚಾರವಾಗಿ ಗ್ರಾಹಕರ ಆಕರ್ಷಣೆಗೆ ಕಾರಣವಾಗಿದೆ. ವಿಶೇಷ ಮಾದರಿಯ ಎಲೆಕ್ಟ್ರಿಕ್ ಕಾರು ಉತ್ಪಾದನೆ ಮಾಡಿರುವ ಪ್ರವೈಗ್ ಡೈಮಾನಿಕ್ ಕಂಪನಿಯು ಸಹ ವಿಶ್ವದ ಪ್ರಮುಖ ಕಾರು ಉತ್ಪಾದನಾ ಕಂಪನಿಗಳಿಗೆ ಪೈಪೋಟಿ ನೀಡಲು ಸಿದ್ದವಾಗಿದೆ.

ಎಕ್ಸ್ಟಿಷನ್ ಎಂಕೆ1 ಎಲೆಕ್ಟ್ರಿಕ್ ಕಾರು ಮಾದರಿಯು ಮೆಲ್ನೋಟಕ್ಕೆ ಟೆಸ್ಲಾ ಕಾರಿನಂತೆ ಕಂಡರೂ ವಿಭಿನ್ನ ತಾಂತ್ರಿಕ ಅಂಶಗಳೊಂದಿಗೆ ಅಭಿವೃದ್ದಿಗೊಂಡಿದ್ದು, ಗ್ರಾಹಕರ ಬೇಡಿಕೆಯೆಂತೆ ವಿವಿಧ ಬ್ಯಾಟರಿ ಪ್ಯಾಕ್ ಆಫರ್ ನೀಡಲಿದೆ.

ಹೈ ಎಂಡ್ ಕಾರು ಮಾದರಿಯು ಪ್ರತಿ ಚಾರ್ಜ್‌ಗೆ ಗರಿಷ್ಠ 504ಕಿ.ಮೀ ಮೈಲೇಜ್ ಹಿಂದಿರುಗಿಸಲಿದ್ದು, ಸಾಮಾನ್ಯ ಕಾರುಗಳಂತೆ ಎಕ್ಸ್ಟಿಷನ್ ಎಂಕೆ1 ಎಲೆಕ್ಟ್ರಿಕ್ ಕಾರು ಕೂಡಾ ಫರ್ಪಾಮೆನ್ಸ್‌ನಲ್ಲೂ ಗಮನಸೆಳೆಯಲಿದೆ.

ಇದಕ್ಕಾಗಿಯೇ ಹೊಸ ಕಾರಿನಲ್ಲಿ ವಿವಿಧ ಡ್ರೈವ್ ಮೊಡ್‌ಗಳನ್ನು ನೀಡಲಾಗಿದ್ದು, 201.5-ಬಿಎಚ್‌ಪಿ ಉತ್ಪಾದನೆಯೊಂದಿಗೆ ಗಂಟೆಗೆ ಗರಿಷ್ಠ 196 ಕಿ.ಮೀ ವೇಗ ಪಡೆದುಕೊಳ್ಳುವ ವೈಶಿಷ್ಟ್ಯತೆ ಹೊಂದಿದೆ. ಹೊಸ ಕಾರಿನ ಹೈ ಎಂಡ್ ಮಾದರಿಯಲ್ಲಿ 96kWh ಲೀ-ಅಯಾನ್ ಬ್ಯಾಟರಿ ಪ್ಯಾಕ್ ಪಡೆದುಕೊಳ್ಳಲಿದ್ದು, ಫಾಸ್ಟ್ ಚಾರ್ಜಿಂಗ್ ಮೂಲಕ ಕೇವಲ 30 ನಿಮಿಷಗಳಲ್ಲಿ ಗರಿಷ್ಠ ಶೇ.80ರಷ್ಟು ಬ್ಯಾಟರಿ ಚಾರ್ಜ್ ಮಾಡಬಹುದಾಗಿದೆ.

ಹಾಗೆಯೇ ಹೊಸ ಹೊರಭಾಗದ ವಿನ್ಯಾಸವು ಸಹ ಸೆಡಾನ್ ಕಾರು ಪ್ರಿಯರ ಆಕರ್ಷಣೆಗೆ ಕಾರಣವಾಗಿದ್ದು, ಕಾನ್ಸೆಪ್ಟ್ ಮಾದರಿಯನ್ನು ಟೂ ಡೋರ್ ಕೂಪೆ ಮಾದರಿಯಲ್ಲಿ ಸಿದ್ದಪಡಿಸಲಾಗಿದೆ. ಆದರೆ ಉತ್ಪಾದನಾ ಆವೃತ್ತಿಯು ಫೋರ್ ಡೋರ್ ಮಾದರಿಯಾಗಿರಲಿದ್ದು, ಭಾರತೀಯ ಕಾರು ಖರೀದಿದಾರರ ಅಭಿರುಚಿಗೆ ತಕ್ಕಂತೆ ಹೊಸ ಕಾರನ್ನು ಸಿದ್ದಪಡಿಸಲಾಗಿದೆ.
MOST READ: ಪ್ರತಿ ಚಾರ್ಜ್‌ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿ..!

ಹೊಸ ಕಾರಿನ ಮೈಲೇಜ್ ಮಾಹಿತಿ ಹೊರತಾಗಿ ತಾಂತ್ರಿಕ ಅಂಶಗಳು ಡಿಸೆಂಬರ್ 4ಕ್ಕೆ ಅನಾವರಣಗೊಳ್ಳಲಿದ್ದು, ಕಾನ್ಸೆಪ್ಟ್ ಮಾದರಿಯಲ್ಲೇ ಉತ್ಪಾದನಾ ಆವೃತ್ತಿಯು ಸಹ ಸಿದ್ದಪಡಿಸಿದ್ದೆ ಆದಲ್ಲಿ ಹೊಸ ಕಾರು ದೇಶಿಯ ಆಟೋ ಉದ್ಯಮದಲ್ಲಿ ದೊಡ್ಡ ಸಂಚಲನ ಉಂಟು ಮಾಡುವುದರಲ್ಲಿ ಎರಡು ಮಾತಿಲ್ಲ.

ಹಾಗೆಯೇ ಹೊಸ ಕಾರಿನ ಬೆಲೆಯು ಕೂಡಾ ಎಲೆಕ್ಟ್ರಿಕ್ ಕಾರಿನ ಭವಿಷ್ಯವನ್ನು ನಿರ್ಧರಿಸಿದ್ದು, ದೇಶಿಯ ಮಾರುಕಟ್ಟೆಯಲ್ಲೇ ಪೂರ್ಣ ಪ್ರಮಾಣದಲ್ಲಿ ಸಿದ್ದವಾಗುತ್ತಿರುವುದರಿಂದ ಕಾರಿನ ಬೆಲೆಯು ಆಕರ್ಷಕವಾಗಿರಬಹುದು ಎನ್ನಲಾಗುತ್ತಿದೆ.
MOST READ: ಬಿಡುಗಡೆಗೆ ಸಿದ್ದವಾದ ಹೋಂಡಾದ ಮೊದಲ ಎಲೆಕ್ಟ್ರಿಕ್ ಕಾರು

ಸದ್ಯ ಅನಾವರಣಗೊಳ್ಳಲಿರುವ ಪ್ರವೈಗ್ ಡೈಮಾನಿಕ್ ನಿರ್ಮಾಣದ ಎಕ್ಸ್ಟಿಷನ್ ಎಂಕೆ1 ಎಲೆಕ್ಟ್ರಿಕ್ ಸೆಡಾನ್ ಕಾರು ಮಾದರಿಯು 2021ರ ಆರಂಭದಲ್ಲಿ ಅಧಿಕೃತವಾಗಿ ಖರೀದಿಗೆ ಲಭ್ಯವಾಗಲಿದ್ದು, ಟೆಸ್ಲಾ ಮಾದರಿಯಲ್ಲೇ ಈ ಕಾರು ಕೂಡಾ ದೇಶಿಯ ಮಾರುಕಟ್ಟೆಯಲ್ಲಿ ಭರ್ಜರಿ ಬೇಡಿಕೆ ಪಡೆದುಕೊಳ್ಳುವ ವಿಶ್ವಾಸದಲ್ಲಿದೆ.