ಕರೋನಾ ಎಫೆಕ್ಟ್: ಸೆಕೆಂಡ್ ಹ್ಯಾಂಡ್ ವಾಹನಗಳಿಗೆ ಭಾರೀ ಬೇಡಿಕೆ
ಕರೋನಾ ವೈರಸ್ ಪರಿಣಾಮ ಪ್ರಮುಖ ವಾಣಿಜ್ಯ ಚಟುವಟಿಕೆಗಳು ನೆಲಕಚ್ಚಿದ್ದು, ಆಟೋ ಉದ್ಯಮವು ಕೂಡಾ ಭಾರೀ ಪ್ರಮಾಣದ ನಷ್ಟ ಅನುಭವಿಸುತ್ತಿದೆ. ಲಾಕ್‌ಡೌನ್ ವಿನಾಯ್ತಿ ನಂತರ ಆಟೋ ಉತ್ಪಾದನಾ ಚಟುವಟಿಕೆಗಳಿಗೆ ಅವಕಾಶ ಸಿಕ್ಕಿದ್ದರೂ ಗ್ರಾಹಕರಿಲ್ಲದೆ ಬಹುತೇಕ ಹೊಸ ಕಾರುಗಳ ಮಾರಾಟ ಕಂಪನಿಗಳು ಕದಮುಚ್ಚುವ ಸ್ಥಿತಿಗೆ ತಲುಪಿವೆ.

ಸದ್ಯ ಕರೋನಾ ವೈರಸ್ ಪರಿಣಾಮ ದೇಶದಲ್ಲಿ ಆಟೋ ಉದ್ಯಮವು ಮಂದಗತಿಯಲ್ಲಿ ಸಾಗಿದ್ದು, ಹೊಸ ವಾಹನಗಳ ಖರೀದಿ ಯೋಜನೆಯಲ್ಲಿದ್ದ ಹಲವು ಗ್ರಾಹಕರು ಸದ್ಯದ ಪರಿಸ್ಥಿತಿಗೆ ಅನುಗುಣವಾಗಿ ಸೆಕೆಂಡ್ ಹ್ಯಾಂಡ್ ವಾಹನಗಳ ಖರೀದಿಯತ್ತ ಮುಖ ಮಾಡುತ್ತಿದ್ದಾರೆ. ಈ ಅವಕಾಶವನ್ನು ಬಳಸಿಕೊಳ್ಳಲು ಮುಂದಾಗಿರುವ ಬಹುತೇಕ ಆಟೋ ಕಂಪನಿಗಳು ಹೊಸ ವಾಹನಗಳ ಮಾರಾಟದ ಜೊತೆಗೆ ಸೆಕೆಂಡ್ ಹ್ಯಾಂಡ್ ಕಾರುಗಳ ಮಾರಾಟದ ಉದ್ಯಮದ ಮೇಲೂ ಭಾರೀ ಹೂಡಿಕೆ ಮಾಡುತ್ತಿವೆ.

ಹೊಸ ಸುರಕ್ಷಾ ಮಾರ್ಗಸೂಚಿಯೊಂದಿಗೆ ವ್ಯಾಪಾರ ವಹಿವಾಟು ಕೈಗೊಂಡಿರುವ ಆಟೋ ಕಂಪನಿಗಳು ಕನಿಷ್ಠ ಪ್ರಮಾಣದ ವಾಹನ ಮಾರಾಟ ಪ್ರಮಾಣವನ್ನು ದಾಖಲಿಸಿದ್ದು, ಬಹುತೇಕ ಕಂಪನಿಗಳು ಕಾರು ಕಂಪನಿಗಳು ತಮ್ಮ ವಾಹನಗಳ ಮಾರಾಟದಲ್ಲಿ ಶೇ.70ರಿಂದ ಶೇ.90ರಷ್ಟು ನಷ್ಟ ಅನುಭವಿಸಿವೆ.

ಹೊಸ ವಾಹನಗಳ ಮಾರಾಟವು ಕುಸಿದ ಬೆನ್ನಲ್ಲೇ ಸೆಕೆಂಡ್ ಹ್ಯಾಂಡ್ ವಾಹನಗಳ ಖರೀದಿ ಮತ್ತು ಮಾರಾಟ ಪ್ರಮಾಣವು ತೀವ್ರಗತಿಯಲ್ಲಿ ಹೆಚ್ಚಿದ್ದು, ಈ ನಿಟ್ಟಿನಲ್ಲಿ ಹಲವು ಆಟೋ ಕಂಪನಿಗಳು ಸೆಕೆಂಡ್ ಹ್ಯಾಂಡ್ ವಾಹನಗಳ ಮಾರಾಟಕ್ಕಾಗಿ ಪ್ರತ್ಯೇಕ ಮಳಿಗೆಗಳನ್ನು ತೆರೆಯುತ್ತಿವೆ.

ಹೊಸ ವಾಹನಗಳ ಮಾರಾಟ ಪ್ರಕ್ರಿಯೆಯಲ್ಲೇ ಸೆಕೆಂಡ್ ಹ್ಯಾಂಡ್ ವಾಹನಗಳ ಮಾರಾಟವನ್ನು ಆರಂಭಿಸಿರುವ ಆಟೋ ಕಂಪನಿಗಳು ಸಂಘಟಿತವಾಗಿ ಬಳಕೆ ಮಾಡಿದ ವಾಹಳ ಮಾರಾಟ ಉದ್ಯಮಕ್ಕೆ ಒತ್ತು ನೀಡುತ್ತಿದ್ದು, ಗ್ರಾಹಕರು ಕೂಡಾ ಸೆಕೆಂಡ್ ಹ್ಯಾಂಡ್ ವಾಹನಗಳ ಖರೀದಿ ಹೆಚ್ಚು ಆಕರ್ಷಿತರಾಗುತ್ತಿದ್ದಾರೆ.

ಅಸಂಘಟಿತವಾಗಿರುವ ಸ್ಥಳೀಯ ವ್ಯಾಪಾರಿಗಳ ಬಳಿ ಸೆಕೆಂಡ್ ಹ್ಯಾಂಡ್ ವಾಹನ ಖರೀದಿಯು ಕೆಲವು ಸಂದರ್ಭಗಳಲ್ಲಿ ಲಾಭಕ್ಕಿಂತ ಹೆಚ್ಚು ನಷ್ಟ ಅನುಭವಿಸಬೇಕಾದ ಸಂದರ್ಭಗಳು ಎದುರಾಗಬಹುದಾಗಿದ್ದು, ಪ್ರಮಾಣೀಕೃತ ಸೆಕೆಂಡ್ ಹ್ಯಾಂಡ್ ವಾಹನಗಳು ಗ್ರಾಹಕರ ಆಯ್ಕೆಗೆ ಉತ್ತಮ ಎನ್ನಬಹುದು.
MOST READ: ಪ್ರತಿ ಚಾರ್ಜ್‌ಗೆ 480 ಕಿ.ಮೀ ಮೈಲೇಜ್ ನೀಡುವ ಎಲೆಕ್ಟ್ರಿಕ್ ಎಸ್‌ಯುವಿ ಬಿಡುಗಡೆ ಮಾಡಲಿದೆ ನಿಸ್ಸಾನ್

ಜೊತೆಗೆ ಪ್ರಮಾಣೀಕೃತ ಸೆಕೆಂಡ್ ಹ್ಯಾಂಡ್ ವಾಹನಗಳ ಮಾರಾಟ ಮಳಿಗೆಗಳಲ್ಲಿ ಖರೀದಿಸುವ ವಾಹನಗಳಿಗೆ ಹೆಚ್ಚುವರಿಯಾಗಿ ವಾರಂಟಿ ಸಹ ದೊರೆಯಲಿದ್ದು, ಮೋಸ ವ್ಯವಹಾರಗಳಿಗೆ ಇಲ್ಲಿ ಅವಕಾಶವಿರುವುದಿಲ್ಲ.

ಈ ನಿಟ್ಟಿನಲ್ಲಿ ವಿವಿಧ ಕಾರು ಉತ್ಪಾದನಾ ಕಂಪನಿಗಳು ಹೊಸ ವಾಹನಗಳ ಮಾರಾಟದ ಜೊತೆಗೆ ಸೆಕೆಂಡ್ ಹ್ಯಾಂಡ್ ವಾಹನಗಳ ಮಾರಾಟ ಮಳಿಗೆಗಳನ್ನು ಹೆಚ್ಚಿಸುತ್ತಿದ್ದು, ಮಾರುತಿ ಸುಜುಕಿ, ಮಹೀಂದ್ರಾ ಸೇರಿದಂತೆ ಐಷಾರಾಮಿ ಕಾರು ಕಂಪನಿಗಳ ಸಹ ಈ ನಿಟ್ಟಿನಲ್ಲಿ ಭಾರೀ ಪ್ರಮಾಣದ ಪ್ರಮಾಣದ ಹೂಡಿಕೆ ಮಾಡಿವೆ.
MOST READ: ಕೋವಿಡ್ 19: ಒಂದೇ ದಿನದಲ್ಲಿ ಸಾವಿರಕ್ಕೂ ಹೆಚ್ಚು ಆಂಬ್ಯುಲೆನ್ಸ್ ಪಡೆದ ಜಗನ್ ಸರ್ಕಾರ

ಸೆಕೆಂಡ್ ಹ್ಯಾಂಡ್ ವಾಹನಗಳಿಗೆ ಮಹಾನಗರಗಳಿಂತಲೂ ಹೆಚ್ಚು 2ನೇ ಮತ್ತು 3ನೇ ಹಂತದ ನಗರಗಳಲ್ಲಿ ಹೆಚ್ಚಿನ ಮಟ್ಟದ ಬೇಡಿಕೆ ಕಂಡುಬರುತ್ತಿದ್ದು, ಮುಂದಿನ ಎರಡು ವರ್ಷಗಳಲ್ಲಿ ದೇಶಿಯ ಮಾರುಕಟ್ಟೆಯಲ್ಲಿನ ಸೆಕೆಂಡ್ ಹ್ಯಾಂಡ್ ವಾಹನ ಮಾರಾಟ ಪ್ರಕ್ರಿಯೆಯು ಆಟೋ ಕಂಪನಿಗಳಿಗೆ ಭಾರೀ ಪ್ರಮಾಣದ ಆದಾಯ ತಂದುಕೊಡುವ ನೀರಿಕ್ಷೆಯಿದೆ.


Click it and Unblock the Notifications