Just In
- 23 min ago ವಿಮಾನದಂತಹ ಸೌಲಭ್ಯ ಹೊಂದಿರುವ ವಂದೇ ಭಾರತ್ ಸರಣಿ ರೈಲುಗಳು ಶೀಘ್ರ ಬರಲಿವೆ.. ಆರಾಮದಾಯಕ ಪ್ರಯಾಣ!
- 27 min ago 'ಬಾಹುಬಲಿ' ಎಸ್ಯುವಿ ಪರಾಕ್ರಮ: ಟೊಯೊಟಾ ಫಾರ್ಚುನರ್ ಲೀಡರ್ ಎಡಿಷನ್ ವಿಶೇಷತೆಗಳೇನು?
- 29 min ago Honda: ಭಾರತ ನಿರ್ಮಿಸಿದ ಹೋಂಡಾ ಕಾರಿಗೆ ಮುಗಿಬಿದ್ದ ಜಪಾನ್ ಜನ!
- 39 min ago ಮತ್ತೆ ಅಖಾಡಕ್ಕೆ ಅಮೇರಿಕನ್ ಆಫ್ರೋಡ್ ಕಿಂಗ್: 2024 ಜೀಪ್ ರಾಂಗ್ಲರ್ ಫೇಸ್ಲಿಫ್ಟ್ ರಿವ್ಯೂ!
Don't Miss!
- Technology HMD ಪಲ್ಸ್ ಸರಣಿ ಅಡಿಯಲ್ಲಿ 3 ಹೊಸ ಸ್ಮಾರ್ಟ್ಫೋನ್ ಲಾಂಚ್! ಫೀಚರ್ಸ್ ಏನಿವೆ?
- News Tamannaah Bhatia: ಮಿಲ್ಕಿ ಬ್ಯೂಟಿ ತಮನ್ನಾಗೆ ಮುಂಬೈ ಸೈಬರ್ ಪೊಲೀಸರಿಂದ ಸಮನ್ಸ್.!-ಕಾರಣ ಏನು?
- Finance April 25 Gold Rate: ಇಂದಿನ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರ ಎಷ್ಟಿದೆ ತಿಳಿಯಿರಿ
- Lifestyle ಬೆಳ್ಳುಳ್ಳಿ ಕಬಾಬ್ ಅಂದುಕೊಂಡ್ರಾ? ಇದು ಚಿಕನ್ ರುಚಿಯ ಹೂವಿನ ಫ್ರೈ..!
- Sports 2009ರ ಐಪಿಎಲ್ ಫೈನಲ್ನಲ್ಲಿ ಆರ್ಸಿಬಿ ಸೋಲಲು ಕಾರಣ ತಿಳಿಸಿದ ಅನಿಲ್ ಕುಂಬ್ಳೆ
- Movies 'ಯುವ ರಣಧೀರ ಕಂಠೀರವ' ಸಿನಿಮಾ ನಿಂತಿದ್ದೇಕೆ? ಕಥೆಗಾರ ಭಗೀರಥ ಏನಂದ್ರು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮತ್ತೊಮ್ಮೆ ಸ್ಥಗಿತಗೊಂಡ ಟೊಯೊಟಾ ಉತ್ಪಾದನಾ ಘಟಕ
ಟೊಯೊಟಾ ಕಿರ್ಲೋಸ್ಕರ್ ಕಂಪನಿಯು ಬಿಡದಿಯಲ್ಲಿರುವ ತನ್ನ ಉತ್ಪಾದನಾ ಘಟಕದಲ್ಲಿನ ಉತ್ಪಾದನೆಯನ್ನು ಮತ್ತೊಮ್ಮೆ ಸ್ಥಗಿತಗೊಳಿಸಿರುವುದಾಗಿ ಮಂಗಳವಾರ ಪ್ರಕಟಿಸಿದೆ. ಮೂಲಗಳ ಪ್ರಕಾರ, ರಾಜ್ಯ ಸರ್ಕಾರದ ಸೂಚನೆಯ ಮೇರೆಗೆ ಕಂಪನಿಯು ಉತ್ಪಾದನೆಯನ್ನು ಸ್ಥಗಿತಗೊಳಿಸಿದೆ.
ಕರೋನಾ ವೈರಸ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಉತ್ಪಾದನಾ ಘಟಕವನ್ನು ಸ್ಥಗಿತಗೊಳಿಸುವಂತೆ ರಾಜ್ಯ ಸರ್ಕಾರ ಸೂಚನೆ ನೀಡಿದೆ ಎಂದು ಕಂಪನಿ ಹೇಳಿದೆ. ಕರ್ನಾಟಕ ರಾಜ್ಯ ಸರ್ಕಾರವು ಜುಲೈ 14ರಿಂದ ಜುಲೈ 22ರವರೆಗೆ ಬೆಂಗಳೂರು ನಗರ ಹಾಗೂ ಬೆಂಗಳೂರು ಗ್ರಾಮಾಂತರದಲ್ಲಿ ಲಾಕ್ ಡೌನ್ ಜಾರಿಗೊಳಿಸಿದೆ.
ಟೊಯೊಟಾದ ಬಿಡದಿ ಉತ್ಪಾದನಾ ಘಟಕದಲ್ಲಿನ ಕೆಲವು ಸಿಬ್ಬಂದಿಗಳು ಕರೋನಾ ವೈರಸ್ ಸೋಂಕಿಗೆ ಒಳಗಾಗಿದ್ದರು. ಉತ್ಪಾದನಾ ಘಟಕದಲ್ಲಿ ಕರೋನಾ ವೈರಸ್ ಹರಡುವುದನ್ನು ತಡೆಗಟ್ಟಲು ಎಲ್ಲಾ ಸುರಕ್ಷತಾ ಮಾನದಂಡಗಳನ್ನು ಅನುಸರಿಸಲಾಗುತ್ತಿದೆ ಎಂದು ಕಂಪನಿ ಹೇಳಿದೆ.
MOSTREAD: ಕರೋನಾ ವೈರಸ್ ಎಫೆಕ್ಟ್: ಕಾರಿಗೂ ಬಂತು ಪೋರ್ಟಬಲ್ ಟಾಯ್ಲೆಟ್
ಟೊಯೊಟಾ ಕಂಪನಿಯು ಎರಡನೇ ಬಾರಿಗೆ ತನ್ನ ಉತ್ಪಾದನೆಯನ್ನು ಸ್ಥಗಿತಗೊಳಿಸುತ್ತಿದೆ. ಈ ಮೊದಲು ಮಾರ್ಚ್ ತಿಂಗಳಿನಲ್ಲಿ ಲಾಕ್ ಡೌನ್ ಜಾರಿಯಾಗಿದ್ದ ಸಂದರ್ಭದಲ್ಲಿ ಉತ್ಪಾದನೆಯನ್ನು ಸ್ಥಗಿತಗೊಳಿಸಲಾಗಿತ್ತು.
ಟೊಯೊಟಾ ಕಂಪನಿಯ ಕಾರ್ಪೊರೇಟ್ ಕಚೇರಿ ಸಿಬ್ಬಂದಿ ಹಾಗೂ ಪ್ರಾದೇಶಿಕ ಕಚೇರಿ ಸಿಬ್ಬಂದಿಗಳಿಗೆ ವರ್ಕ್ ಫ್ರಂ ಹೋಂ ಆಯ್ಕೆಯನ್ನು ನೀಡಲಾಗಿದೆ. ಕರೋನಾ ಪಾಸಿಟಿವ್ ಕಂಡುಬಂದ ಉದ್ಯೋಗಿಗಳಿಗೆ ಪೂರ್ಣ ರೀತಿಯ ನೆರವು ನೀಡಲಾಗುವುದೆಂದು ಕಂಪನಿ ತಿಳಿಸಿದೆ.
MOSTREAD: ರಾಷ್ಟ್ರೀಯ ಹೆದ್ದಾರಿ ನಿರ್ಮಾಣದಲ್ಲಿ ಹೊಸ ದಾಖಲೆ ಬರೆದ ಕೇಂದ್ರ ಸರ್ಕಾರ
ಯಾವುದೇ ನೌಕರನು ಕರೋನಾ ಸೋಂಕಿಗೆ ಒಳಗಾದಾಗ ಆತನ ಸಂಪರ್ಕದಲ್ಲಿದ್ದ ಎಲ್ಲಾ ಉದ್ಯೋಗಿಗಳನ್ನು ಪರೀಕ್ಷಿಸಿ, ಕ್ವಾರಂಟೈನ್ ಗೆ ಒಳಪಡಿಸಲಾಗುತ್ತಿದೆ ಎಂದು ಟೊಯೊಟಾ ಕಂಪನಿ ಸ್ಪಷ್ಟಪಡಿಸಿದೆ.
ಇಷ್ಟು ಮಾತ್ರವಲ್ಲದೇ ಸೋಂಕಿತ ಸಿಬ್ಬಂದಿಗೆ ಎಲ್ಲಾ ರೀತಿಯ ನೆರವನ್ನು ನೀಡಲಾಗುತ್ತಿದೆ. ಉತ್ಪಾದನಾ ಘಟಕವನ್ನು ಪ್ರತಿದಿನವೂ ಸ್ವಚ್ವಗೊಳಿಸಿ, ನೈರ್ಮಲ್ಯವನ್ನು ನೋಡಿಕೊಳ್ಳಲಾಗುತ್ತಿದೆ ಎಂದು ಕಂಪನಿ ಹೇಳಿದೆ.