ಮೈಕ್ರೊ ಎಸ್‌ಯುವಿ ವಿಭಾಗದಲ್ಲಿ ಭರ್ಜರಿ ಬೇಡಿಕೆ ಪಡೆದುಕೊಳ್ಳಲಿದೆ ಟಾಟಾ ಹೊಸ ಕಾರು

ಟಾಟಾ ಮೋಟಾರ್ಸ್ ಬಹುನೀರಿಕ್ಷಿತ ಹೆಚ್‌ಬಿಎಕ್ಸ್ ಮೈಕ್ರೊ ಎಸ್‌ಯುವಿ ಆವೃತ್ತಿಯ ಉತ್ಪಾದನಾ ಮಾದರಿಯನ್ನು ಇದೇ ತಿಂಗಳಾಂತ್ಯಕ್ಕೆ ಅನಾವರಣಗೊಳಿಸುವ ಸಾಧ್ಯತೆಗಳಿದ್ದು, ಹೊಸ ಕಾರಿನ ಎಂಜಿನ್ ಕಾರ್ಯಕ್ಷಮತೆ ಕುರಿತು ರೋಡ್ ಟೆಸ್ಟಿಂಗ್ ಪ್ರಕ್ರಿಯೆಯನ್ನು ಮುಂದುವರಿಸಿದೆ.

ಮೈಕ್ರೊ ಎಸ್‌ಯುವಿ ವಿಭಾಗದಲ್ಲಿ ಭರ್ಜರಿ ಬೇಡಿಕೆ ಪಡೆದುಕೊಳ್ಳಲಿದೆ ಟಾಟಾ

ಟಾಟಾ ಮೋಟಾರ್ಸ್ ಕಂಪನಿಯು ಸದ್ಯ ಹೊಸ ವಾಹನಗಳ ಮಾರಾಟ ಪ್ರಕ್ರಿಯೆ ಜೊತೆಗೆ ಬಿಡುಗಡೆಯಾಗಲಿರುವ ಹೊಸ ವಾಹನಗಳ ಅಭಿವೃದ್ದಿ ಮೇಲೂ ಗಮನಹರಿಸುತ್ತಿದ್ದು, ಬಹುನೀರಿಕ್ಷಿತ ಹೆಚ್‌ಬಿಎಕ್ಸ್ ಮೈಕ್ರೊ ಎಸ್‌ಯುವಿ ಮತ್ತು ಗ್ರಾವಿಟಾಸ್ ಎಸ್‌ಯುವಿ ಬಿಡುಗಡೆಗೆ ಸಜ್ಜಾಗುತ್ತಿದೆ. ಹೀಗಾಗಿ ಬಿಡುಗಡೆಯಾಗಲಿರುವ ಹೊಸ ಕಾರುಗಳ ರೋಡ್ ಟೆಸ್ಟಿಂಗ್ ಪ್ರಕ್ರಿಯೆಗೆ ಲಾಕ್‌ಡೌನ್ ವಿನಾಯ್ತಿ ನಂತರ ಮರು ಚಾಲನೆ ನೀಡಲಾಗಿದ್ದು, ಹೊಸ ಕಾರುಗಳು ಮುಂಬರುವ ಕೆಲವೇ ದಿನಗಳಲ್ಲಿ ಅಧಿಕೃತವಾಗಿ ಖರೀದಿಗೆ ಲಭ್ಯವಿರಲಿವೆ.

ಮೈಕ್ರೊ ಎಸ್‌ಯುವಿ ವಿಭಾಗದಲ್ಲಿ ಭರ್ಜರಿ ಬೇಡಿಕೆ ಪಡೆದುಕೊಳ್ಳಲಿದೆ ಟಾಟಾ

ಆಲ್‌ಟ್ರೊಜ್ ಹ್ಯಾಚ್‌ಬ್ಯಾಕ್ ನಂತರ ಅಲ್ಫಾ ಕಾರು ಉತ್ಪಾದನಾ ಪ್ಲ್ಯಾಟ್‌ಫಾರ್ಮ್ ಮೇಲೆ ಉತ್ಪಾದನೆ ಮಾಡಲಾಗುತ್ತಿರುವ ಎರಡನೇ ಆವೃತ್ತಿಯಾಗಿರುವ ಹೆಚ್‌ಬಿಎಕ್ಸ್ ಕಾನ್ಸೆಪ್ಟ್ ಕಾರು ಶೀಘ್ರದಲ್ಲೇ ಉತ್ಪಾದನಾ ಮಾದರಿಯು ಸಹ ಅನಾವರಣಗೊಳ್ಳಲಿದ್ದು, ಹೊಸ ಕಾರು ಕಾನ್ಸೆಪ್ಟ್ ಮಾದರಿಯಲ್ಲೇ ಬಹುತೇಕ ವಿನ್ಯಾಸಗಳನ್ನು ಪಡೆದುಕೊಂಡಿರಲಿದೆ.

ಮೈಕ್ರೊ ಎಸ್‌ಯುವಿ ವಿಭಾಗದಲ್ಲಿ ಭರ್ಜರಿ ಬೇಡಿಕೆ ಪಡೆದುಕೊಳ್ಳಲಿದೆ ಟಾಟಾ

ಸಣ್ಣ ಗಾತ್ರದ ಎಸ್‌ಯುವಿ ಮಾದರಿಗಳಲ್ಲೇ ವಿಶೇಷ ಹೊರ ವಿನ್ಯಾಸ ಹೊಂದಿರುವ ಹೆಚ್‌ಬಿಎಕ್ಸ್ ಕಾನ್ಸೆಪ್ಟ್ ಕಾರನ್ನ ಸದ್ಯ ವಿವಿಧ ಮಾದರಿಯಲ್ಲಿ ತಾಂತ್ರಿಕ ಸೌಲಭ್ಯಗಳ ಪರೀಕ್ಷೆಗಾಗಿ ರೋಡ್ ಟೆಸ್ಟಿಂಗ್‌ ನಡೆಸಲಾಗುತ್ತಿದ್ದು, ಅತ್ಯುತ್ತಮ ತಾಂತ್ರಿಕ ಸೌಲಭ್ಯಗಳನ್ನು ಹೊಂದಿದೆ.

ಮೈಕ್ರೊ ಎಸ್‌ಯುವಿ ವಿಭಾಗದಲ್ಲಿ ಭರ್ಜರಿ ಬೇಡಿಕೆ ಪಡೆದುಕೊಳ್ಳಲಿದೆ ಟಾಟಾ

ಮೈಕ್ರೊ ಎಸ್‌ಯುವಿ ಕಾರುಗಳಲ್ಲಿ ಗಮನಸೆಳೆಯುವಂತಹ ಉದ್ದಳತೆ ಹೊಂದಿರುವ ಹೆಚ್‌ಬಿಎಕ್ಸ್ ಕಾನ್ಸೆಪ್ಟ್ ಕಾರು 3,822-ಎಂಎಂ ಉದ್ದ, 1,822-ಎಂಎಂ ಉದ್ದ, 1,635-ಎಂಎಂ ಅಗಲ ಮತ್ತು 2,450-ಎಂಎಂ ವೀಲ್ಹ್‌ಬೆಸ್ ಹೊಂದಿದೆ.

MOST READ: ಪ್ರತಿ ಚಾರ್ಜ್‌ಗೆ 480 ಕಿ.ಮೀ ಮೈಲೇಜ್ ನೀಡುವ ಎಲೆಕ್ಟ್ರಿಕ್ ಎಸ್‌ಯುವಿ ಬಿಡುಗಡೆ ಮಾಡಲಿದೆ ನಿಸ್ಸಾನ್

ಮೈಕ್ರೊ ಎಸ್‌ಯುವಿ ವಿಭಾಗದಲ್ಲಿ ಭರ್ಜರಿ ಬೇಡಿಕೆ ಪಡೆದುಕೊಳ್ಳಲಿದೆ ಟಾಟಾ

ಹೊಸ ಕಾರು 1.2-ಲೀಟರ್ ಸಾಮಾನ್ಯ ಪೆಟ್ರೋಲ್ ಎಂಜಿನ್ ಜೊತೆಗೆ ಪರ್ಫಾಮೆನ್ಸ್ ಪ್ರಿಯರಿಗಾಗಿ 1.0-ಲೀಟರ್ ಟರ್ಬೋ ಪೆಟ್ರೋಲ್ ಆವೃತ್ತಿಯನ್ನು ಪಡೆದುಕೊಳ್ಳುವ ಸಾಧ್ಯತೆಗಳಿವೆ. ಆದರೆ ಹೊಸ ಕಾರಿನ ಎಂಜಿನ್ ಆಯ್ಕೆ ಕುರಿತಾಗಿ ಇದುವರೆಗೂ ಯಾವುದೇ ನಿಖರ ಮಾಹಿತಿ ಇಲ್ಲ.

ಮೈಕ್ರೊ ಎಸ್‌ಯುವಿ ವಿಭಾಗದಲ್ಲಿ ಭರ್ಜರಿ ಬೇಡಿಕೆ ಪಡೆದುಕೊಳ್ಳಲಿದೆ ಟಾಟಾ

ಇನ್ನು ಹೊಸ ಕಾರಿನಲ್ಲಿ ಸ್ಪೋರ್ಟಿ ಖದರ್ ಹೆಚ್ಚಿಸಲು ವಿಶೇಷ ಡಿಸೈನ್‌ಗಳನ್ನು ನೀಡಲಾಗಿದ್ದು, ಸ್ಪ್ಲಿಟ್ ಹೆಡ್‌ಲ್ಯಾಂಪ್ ಸೆಟ್‌ಅಪ್, ಆಕರ್ಷಕವಾದ ಬಂಪರ್, ಸ್ಕ್ವಾರ್ಡ್ ಔಟ್ ವೀಲ್ಹ್ ಆರ್ಚ್, ರೂಫ್ ಮೌಂಟೆಡ್ ಕ್ಯಾರಿಯರ್ ಸೌಲಭ್ಯಗಳು ಕಾರಿನ ಬಲಿಷ್ಠತೆ ಮತ್ತಷ್ಟು ಮೆರಗು ನೀಡಿವೆ.

MOST READ: ರೂ.5 ಲಕ್ಷಕ್ಕಿಂತ ಕಡಿಮೆ ಬೆಲೆಯ ಜನಪ್ರಿಯ ಕಾರುಗಳಿವು

ಮೈಕ್ರೊ ಎಸ್‌ಯುವಿ ವಿಭಾಗದಲ್ಲಿ ಭರ್ಜರಿ ಬೇಡಿಕೆ ಪಡೆದುಕೊಳ್ಳಲಿದೆ ಟಾಟಾ

ಹೊಸ ಮೈಕ್ರೊ ಎಸ್‌ಯುವಿ ಬಿಡುಗಡೆಯ ಅವಧಿ(ಅಂದಾಜು)

ಹೆಚ್‌ಬಿಎಕ್ಸ್ ಕಾನ್ಸೆಪ್ಟ್ ಪೆಟ್ರೋಲ್ ಆವೃತ್ತಿಯನ್ನು ಇದೇ ವರ್ಷದ ಜೂನ್ ಅಥವಾ ಜುಲೈ ಹೊತ್ತಿಗೆ ಬಿಡುಗೆಡೆಗೊಳ್ಳಬಹುದೆಂದು ನೀರಿಕ್ಷೆ ಮಾಡಲಾಗಿತ್ತು. ಆದರೆ ಲಾಕ್‌ಡೌನ್ ಸಂಕಷ್ಟದಿಂದಾಗಿ ಮಾರುಕಟ್ಟೆಯ ಸನ್ನಿವೇಶದ ಆಧಾರದ ಮೇಲೆ ಹೊಸ ಕಾರು ಬಿಡುಗಡೆಯನ್ನು ಮುಂಬರುವ ಸೆಪ್ಟೆಂಬರ್‌ಗೆ ಮುಂದೂಡಲಾಗಿದ್ದು, ಅದಕ್ಕೂ ಮುನ್ನ ಈ ತಿಂಗಳಾಂತ್ಯಕ್ಕೆ ಉತ್ಪಾದನಾ ಆವೃತ್ತಿಯನ್ನು ಪ್ರದರ್ಶನಗೊಳಿಸಲಿದೆ. ಹಾಗೆಯೇ ಹೊಸ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಹೊಸ ಕಾರು ಆರಂಭಿಕವಾಗಿ ರೂ.5.50 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ.8 ಲಕ್ಷ ಬೆಲೆ ಪಡೆದುಕೊಳ್ಳಬಹುದೆಂದು ಅಂದಾಜಿಸಲಾಗಿದೆ.

Most Read Articles

Kannada
English summary
Production Ready Tata HBX Micro SUV Spied. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X