Just In
- 9 hrs ago ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- 12 hrs ago Kia Carens: ಗ್ಲೋಬಲ್ ಎನ್ಸಿಎಪಿ ಸುರಕ್ಷತಾ ಪರೀಕ್ಷೆ.. 3-ಸ್ಟಾರ್ ಪಡೆದ ಕಿಯಾ ಕ್ಯಾರೆನ್ಸ್
- 12 hrs ago ಈ ಬೈಕ್ಗಳನ್ನು ಗ್ರಾಹಕರು ಮುಗಿಬಿದ್ದು ಖರೀದಿಸುತ್ತಿದ್ದಾಗಲೇ ಬೆಲೆ ಏರಿಕೆ ಮಾಡಿ ಶಾಕ್ ಕೊಟ್ಟ ಟ್ರಯಂಫ್
- 14 hrs ago ಅಪ್ಪ-ಮಗಳ ಭಾಂದವ್ಯ.. ಪ್ರೀತಿಯ ಪುತ್ರಿಗೆ ತಂದೆಯಿಂದ 2 ಕೋಟಿಯ ಪೋರ್ಷೆ ಕಾರು ಗಿಫ್ಟ್
Don't Miss!
- Movies 'KGF-2' ಚಿತ್ರದಿಂದ ಸಿಕ್ಕಿದ್ದು 200 ಕೋಟಿ ರೂ.; 'ಟಾಕ್ಸಿಕ್', 'ರಾಮಾಯಣ'ಕ್ಕೆ ಯಶ್ 50-50 ಡೀಲ್!
- Sports CSK vs LSG IPL 2024: ಮಾರ್ಕಸ್ ಸ್ಟೋಯಿನಿಸ್ ಆರ್ಭಟಕ್ಕೆ ಸಿಎಸ್ಕೆ ಥಂಡಾ; ಚೆನ್ನೈಗೆ ನೀರು ಕುಡಿಸಿದ ಲಕ್ನೋ
- News ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ: ಕಾರಣ ತಿಳಿಸಿದ ಚಾಲೆಂಜಿಂಗ್ ಸ್ಟಾರ್ ದರ್ಶನ್
- Lifestyle ಈ ಕಾರಣಕ್ಕೆ ನೀವು ಮಾವಿನ ಹಣ್ಣನ್ನು ನೀರಿನಲ್ಲಿ ನೆನೆಹಾಕಿಯೇ ತಿನ್ನಬೇಕು, ಅದು ನಿಮ್ಮ ತೋಟದಲ್ಲಿ ಬೆಳೆದಿದ್ದೇ ಆಗಿರಲಿ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಬಿಡುಗಡೆಗಾಗಿ ಸಿದ್ದವಾಗುತ್ತಿದೆ ಟಾಟಾ ಹೊಸ ಮೈಕ್ರೊ ಎಸ್ಯುವಿ
ಕಾರು ಮಾರಾಟದಲ್ಲಿ ಹೊಸ ಬದಲಾವಣೆಗೆ ಕಾರಣವಾಗಿರುವ ಟಾಟಾ ಮೋಟಾರ್ಸ್ ಕಂಪನಿಯು ಶೀಘ್ರದಲ್ಲೇ ಹಲವು ಹೊಸ ಕಾರು ಮಾದರಿಗಳನ್ನು ಬಿಡುಗಡೆಗೊಳಿಸಲು ಸಜ್ಜಾಗುತ್ತಿದ್ದು, ದೆಹಲಿ ಎಕ್ಸ್ಪೋದಲ್ಲಿ ಅನಾವರಣಗೊಂಡಿದ್ದ ಮೈಕ್ರೊ ಎಸ್ಯುವಿ ವೈಶಿಷ್ಟ್ಯತೆಯ ಹೆಚ್ಬಿಎಕ್ಸ್ ಕಾನ್ಸೆಪ್ಟ್ ಕಾರನ್ನು ಶೀಘ್ರದಲ್ಲೇ ಬಿಡುಗಡೆಗೊಳಿಸುವುದಾಗಿ ಸುಳಿವು ನೀಡಿದೆ.
ಆಲ್ಟ್ರೊಜ್ ಹ್ಯಾಚ್ಬ್ಯಾಕ್ ನಂತರ ಅಲ್ಫಾ ಕಾರು ಉತ್ಪಾದನಾ ಪ್ಲ್ಯಾಟ್ಫಾರ್ಮ್ ಮೇಲೆ ಉತ್ಪಾದನೆ ಮಾಡಲಾಗುತ್ತಿರುವ ಎರಡನೇ ಆವೃತ್ತಿಯಾಗಿರುವ ಹೆಚ್ಬಿಎಕ್ಸ್ ಕಾನ್ಸೆಪ್ಟ್ ಕಾರು ಶೀಘ್ರದಲ್ಲೇ ಉತ್ಪಾದನಾ ಮಾದರಿಯು ಅನಾವರಣಗೊಳ್ಳಲಿದ್ದು, ಪ್ರಸ್ತುತ ಮಾರುಕಟ್ಟೆಯಲ್ಲಿರುವ ನೆಕ್ಸಾನ್ಗಿಂತ ಕೆಳದರ್ಜೆಯಲ್ಲಿ ಮಾರಾಟಗೊಳ್ಳಲಿದೆ. ಸಣ್ಣ ಗಾತ್ರದ ಎಸ್ಯುವಿ ಮಾದರಿಗಳಲ್ಲೇ ವಿಶೇಷ ಹೊರ ವಿನ್ಯಾಸ ಹೊಂದಿರುವ ಹೆಚ್ಬಿಎಕ್ಸ್ ಕಾನ್ಸೆಪ್ಟ್ ಕಾರನ್ನ ಸದ್ಯ ವಿವಿಧ ಮಾದರಿಯಲ್ಲಿ ತಾಂತ್ರಿಕ ಸೌಲಭ್ಯಗಳ ಪರೀಕ್ಷೆಗಾಗಿ ರೋಡ್ ಟೆಸ್ಟಿಂಗ್ ನಡೆಸಲಾಗುತ್ತಿದ್ದು, ಅತ್ಯುತ್ತಮ ತಾಂತ್ರಿಕ ಸೌಲಭ್ಯಗಳನ್ನು ಹೊಂದಿದೆ.
ಹೆಚ್ಬಿಎಕ್ಸ್ ಕಾನ್ಸೆಪ್ಟ್ ಕಾರು ಪೆಟ್ರೋಲ್ ಆವೃತ್ತಿಯಲ್ಲಿ ಮಾತ್ರವೇ ಮಾರಾಟಗೊಳ್ಳಲಿದ್ದು, ಮಾರುತಿ ಸುಜುಕಿ ಎಸ್-ಪ್ರೆಸ್ಸೊ, ಮಹೀಂದ್ರಾ ಕೆಯುವಿ100 ಮತ್ತು ರೆನಾಲ್ಟ್ ಕ್ವಿಡ್ ಕಾರುಗಳಿಗೆ ಇದು ಉತ್ತಮ ಪೈಪೋಟಿಯಾಗಲಿದೆ.
ಮೊದಲ ಬಾರಿಗೆ ಜಿನೆವಾ ಆಟೋ ಎಕ್ಸ್ಪೋದಲ್ಲಿ ಪ್ರದರ್ಶನಗೊಂಡಿದ್ದ ಆವೃತ್ತಿಗಿಂತಲೂ ಇದೀಗ ಮತ್ತಷ್ಟು ಬದಲಾವಣೆ ಹೊಂದಿರುವ ಹೆಚ್ಬಿಎಕ್ಸ್ ಕಾನ್ಸೆಪ್ಟ್ ಕಾರು ಉತ್ಪಾದನಾ ಮಾದರಿಯ ಸಿದ್ದತೆಯ ಹೊತ್ತಿಗೆ ಮತ್ತಷ್ಟು ಬದಲಾವಣೆಗಳನ್ನು ಪಡೆದುಕೊಳ್ಳಲಿದೆ.
ಮೈಕ್ರೊ ಎಸ್ಯುವಿ ಕಾರುಗಳಲ್ಲಿ ಗಮನಸೆಳೆಯುವಂತಹ ಉದ್ದಳತೆ ಹೊಂದಿರುವ ಹೆಚ್ಬಿಎಕ್ಸ್ ಕಾನ್ಸೆಪ್ಟ್ ಕಾರು 3,822-ಎಂಎಂ ಉದ್ದ, 1,822-ಎಂಎಂ ಉದ್ದ, 1,635-ಎಂಎಂ ಅಗಲ ಮತ್ತು 2,450-ಎಂಎಂ ವೀಲ್ಹ್ಬೆಸ್ ಹೊಂದಿದ್ದು, ಇದು ಮಾರುಕಟ್ಟೆಯಲ್ಲಿರುವ ಮಾರುತಿ ಸುಜುಕಿ ಸ್ವಿಫ್ಟ್ ಕಾರಿನ ಉದ್ದಳತೆಗೆ ಸಮನಾವಾಗಿದೆ. ಇದರೊಂದಿಗೆ ಹ್ಯಾಚ್ಬ್ಯಾಕ್ ಕಾರುಗಳ ಮಾರಾಟದಲ್ಲೂ ಸದ್ದು ಮಾಡಲಿರುವ ಹೆಚ್ಬಿಎಕ್ಸ್ ಕಾನ್ಸೆಪ್ಟ್ ಕಾರು 1.2-ಲೀಟರ್ ಪೆಟ್ರೋಲ್ ಎಂಜಿನ್ ಪಡೆದುಕೊಳ್ಳಲಿದೆ.
1.2-ಲೀಟರ್ ತ್ರಿ ಸಿಲಿಂಡರ್ ಪೆಟ್ರೋಲ್ ಎಂಜಿನ್ ಮಾದರಿಯು ಈಗಾಗಲೇ ಆಲ್ಟ್ರೊಜ್ ಮಾದರಿಯಲ್ಲಿ ಮಾರಾಟಗೊಳ್ಳುತ್ತಿದ್ದು, ಅದೇ ಎಂಜಿನ್ ಇದೀಗ ಹೆಚ್ಬಿಎಕ್ಸ್ ಕಾನ್ಸೆಪ್ಟ್ ಕಾರಿನಲ್ಲೂ ಬಳಕೆ ಮಾಡಲು ಉದ್ದೇಶಿಸಲಾಗಿದೆ.
86-ಬಿಎಚ್ಪಿ ಉತ್ಪಾದನಾ ಸಾಮರ್ಥ್ಯ ಹೊಂದಿರುವ 1.2-ಲೀಟರ್ ಪೆಟ್ರೋಲ್ ಮಾದರಿಯು ಹೆಚ್ಬಿಎಕ್ಸ್ ಕಾನ್ಸೆಪ್ಟ್ ಕಾರಿಗೆ ಉತ್ತಮ ಆಯ್ಕೆಯಾಗಲಿದ್ದು, 5-ಸ್ಪೀಡ್ ಮ್ಯಾನುವಲ್ ಗೇರ್ಬಾಕ್ಸ್ ಆಯ್ಕೆಯನ್ನು ಸ್ಟ್ಯಾಂಡರ್ಡ್ ಆಗಿ ನೀಡಲಾಗುತ್ತಿದೆ.
ಇದರೊಂದಿಗೆ ಹೊಸ ಕಾರಿನ ಸ್ಪೋರ್ಟಿ ಖದರ್ ಹೆಚ್ಚಿಸಲು ವಿಶೇಷ ಡಿಸೈನ್ಗಳನ್ನು ನೀಡಲಾಗಿದ್ದು, ಸ್ಪ್ಲಿಟ್ ಹೆಡ್ಲ್ಯಾಂಪ್ ಸೆಟ್ಅಪ್, ಆಕರ್ಷಕವಾದ ಬಂಪರ್, ಸ್ಕ್ವಾರ್ಡ್ ಔಟ್ ವೀಲ್ಹ್ ಆರ್ಚ್, ರೂಫ್ ಮೌಂಟೆಡ್ ಕ್ಯಾರಿಯರ್ ಸೌಲಭ್ಯಗಳು ಕಾರಿನ ಬಲಿಷ್ಠತೆ ಮತ್ತಷ್ಟು ಮೆರಗು ನೀಡಿವೆ.
ಎಲೆಕ್ಟ್ರಿಕ್ ಆವೃತ್ತಿಯಲ್ಲೂ ಬಿಡುಗಡೆಗೆ ಸಿದ್ದತೆ
ಹೆಚ್ಬಿಎಕ್ಸ್ ಕಾನ್ಸೆಪ್ಟ್ ಕಾರು ಕೇವಲ ಪೆಟ್ರೋಲ್ ಆವೃತ್ತಿಯಲ್ಲಿ ಮಾತ್ರವಲ್ಲ ಎಲೆಕ್ಟ್ರಿಕ್ ಆವೃತ್ತಿಯಲ್ಲೂ ಬಿಡುಗಡೆಗೆ ಸಿದ್ದತೆ ನಡೆಸಲಾಗುತ್ತಿದ್ದು, ಮೊದಲು ಪೆಟ್ರೋಲ್ ಆವೃತ್ತಿಯ ಬಿಡುಗಡೆಯ ನಂತರವಷ್ಟೇ ಎಲೆಕ್ಟ್ರಿಕ್ ವರ್ಷನ್ ಮಾರುಕಟ್ಟೆ ಪ್ರವೇಶಿಸಲಿದೆ.
ಬಿಡುಗಡೆಯ ಅವಧಿಯ ಮತ್ತು ಬೆಲೆ(ಅಂದಾಜು)
ಹೆಚ್ಬಿಎಕ್ಸ್ ಕಾನ್ಸೆಪ್ಟ್ ಪೆಟ್ರೋಲ್ ಆವೃತ್ತಿಯನ್ನು ಇದೇ ವರ್ಷದ ಜೂನ್ ಜುಲೈ ಹೊತ್ತಿಗೆ ಬಿಡುಗೆಡೆಗೊಳ್ಳಬಹುದೆಂದು ನೀರಿಕ್ಷೆ ಮಾಡಲಾಗಿತ್ತು. ಆದರೆ ಮಾರುಕಟ್ಟೆಯಲ್ಲಿ ಸನ್ನಿವೇಶದ ಆಧಾರದ ಮೇಲೆ ಹೊಸ ಕಾರು ಬಿಡುಗಡೆಯನ್ನು ನವೆಂಬರ್ ಅಂತ್ಯಕ್ಕೆ ಮುಂದೂಡಲಾಗಿದ್ದು, ದೆಹಲಿ ಎಕ್ಸ್ಶೋರೂಂ ಪ್ರಕಾರ ಹೊಸ ಕಾರು ಆರಂಭಿಕವಾಗಿ ರೂ.5 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 6.50 ಲಕ್ಷ ಬೆಲೆ ಪಡೆದುಕೊಳ್ಳಬಹುದೆಂದು ಅಂದಾಜಿಸಲಾಗಿದೆ.
Image Source: Thrustzone