ಪ್ರಯಾಣಿಕರೇ ಗಮನಿಸಿ: ಶೀಘ್ರದಲ್ಲೇ ರಸ್ತೆಗಿಳಿಯಲಿವೆ ಸಾರ್ವಜನಿಕ ಸಾರಿಗೆ ಬಸ್ಸುಗಳು

ಸಾರ್ವಜನಿಕ ಸಾರಿಗೆ ಪುನರಾರಂಭಿಸಲು ಕೇಂದ್ರ ಸರ್ಕಾರವು ಮಾರ್ಗಸೂಚಿ ಸಿದ್ಧಪಡಿಸುತ್ತಿದೆ ಎಂದು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿರವರು ತಿಳಿಸಿದ್ದಾರೆ. ವೀಡಿಯೊ ಕಾನ್ಫರೆನ್ಸ್ ಮೂಲಕ ಭಾರತದ ಬಸ್ ಹಾಗೂ ಕಾರು ಆಪರೇಟರ್‌ಗಳೊಂದಿಗೆ ನಿತಿನ್ ಗಡ್ಕರಿ ಮಾತನಾಡಿ, ಲಾಕ್‌ಡೌನ್ ಕಾರಣಕ್ಕೆ ಸಾರ್ವಜನಿಕ ಸಾರಿಗೆಯನ್ನು ಸ್ಥಗಿತಗೊಳಿಸುವಂತೆ ಮನವಿ ಮಾಡಿದರು.

ಪ್ರಯಾಣಿಕರೇ ಗಮನಿಸಿ: ಶೀಘ್ರದಲ್ಲೇ ರಸ್ತೆಗಿಳಿಯಲಿವೆ ಸಾರ್ವಜನಿಕ ಸಾರಿಗೆ ಬಸ್ಸುಗಳು

ಹೆದ್ದಾರಿಗಳಲ್ಲಿ ಸಾರಿಗೆ ವ್ಯವಸ್ಥೆಗೆ ಅನುಕೂಲ ಮಾಡುವುದರಿಂದ ಸಾರ್ವಜನಿಕರಲ್ಲಿ ವಿಶ್ವಾಸ ಮೂಡುತ್ತದೆ ಎಂದು ಹೇಳಿದ ಅವರು ಬಸ್ಸು, ಕಾರುಗಳನ್ನು ನಿರ್ವಹಿಸುವಾಗ ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳುವುದರ ಜೊತೆಗೆ ಕೈ ತೊಳೆಯುವುದು, ಫೇಸ್ ಮಾಸ್ಕ್ ಧರಿಸುವುದು ಸೇರಿದಂತೆ ಎಲ್ಲಾ ಸುರಕ್ಷತಾ ಕ್ರಮಗಳನ್ನು ಅಳವಡಿಸಿಕೊಳ್ಳಬೇಕೆಂದು ತಿಳಿಸಿದರು.

ಪ್ರಯಾಣಿಕರೇ ಗಮನಿಸಿ: ಶೀಘ್ರದಲ್ಲೇ ರಸ್ತೆಗಿಳಿಯಲಿವೆ ಸಾರ್ವಜನಿಕ ಸಾರಿಗೆ ಬಸ್ಸುಗಳು

ಸಾರಿಗೆ ಉದ್ಯಮಕ್ಕೆ ವಿಶೇಷ ಪರಿಹಾರ ಪ್ಯಾಕೇಜ್‌ ನೀಡುವಂತೆ ಕೋರಿರುವ ಬೇಡಿಕೆಯ ಬಗ್ಗೆ ಮಾತನಾಡಿದ ಗಡ್ಕರಿರವರು ಸರ್ಕಾರವು ಸಾರಿಗೆ ಸಮಸ್ಯೆಗಳ ಬಗ್ಗೆ ತಿಳಿದಿದೆ. ಸಾರಿಗೆಯ ಸಮಸ್ಯೆಗಳನ್ನು ಪರಿಹರಿಸಲು ಸಂಪೂರ್ಣ ಬೆಂಬಲ ನೀಡಲಿದೆ ಎಂದು ಹೇಳಿದರು.

MOSTREAD: ರಾಷ್ಟ್ರೀಯ ಹೆದ್ದಾರಿ ನಿರ್ಮಾಣದಲ್ಲಿ ಹೊಸ ದಾಖಲೆ ಬರೆದ ಕೇಂದ್ರ ಸರ್ಕಾರ

ಪ್ರಯಾಣಿಕರೇ ಗಮನಿಸಿ: ಶೀಘ್ರದಲ್ಲೇ ರಸ್ತೆಗಿಳಿಯಲಿವೆ ಸಾರ್ವಜನಿಕ ಸಾರಿಗೆ ಬಸ್ಸುಗಳು

ಕೋವಿಡ್ -19 ಸಾಂಕ್ರಾಮಿಕ ರೋಗದಿಂದ ಉಂಟಾಗಿರುವ ಈ ಸಂಕಷ್ಟದ ಸಂದರ್ಭದಲ್ಲಿ ಆರ್ಥಿಕ ವ್ಯವಸ್ಥೆಯನ್ನು ಸರಿದಾರಿಗೆ ತರಲು ಶ್ರಮಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಹಾಗೂ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರೊಂದಿಗೆ ನಿಯಮಿತವಾಗಿ ಸಂಪರ್ಕದಲ್ಲಿರುವುದಾಗಿ ಅವರು ತಿಳಿಸಿದರು.

ಪ್ರಯಾಣಿಕರೇ ಗಮನಿಸಿ: ಶೀಘ್ರದಲ್ಲೇ ರಸ್ತೆಗಿಳಿಯಲಿವೆ ಸಾರ್ವಜನಿಕ ಸಾರಿಗೆ ಬಸ್ಸುಗಳು

ಕರೋನಾ ವೈರಸ್‌ನಿಂದ ಉಂಟಾಗಿರುವ ಬಿಕ್ಕಟ್ಟನ್ನು ಜಾಗತಿಕ ಮಾರುಕಟ್ಟೆಯಲ್ಲಿ ಪ್ರಾಬಲ್ಯವನ್ನು ಸ್ಥಾಪಿಸುವ ಅವಕಾಶವನ್ನಾಗಿ ಮಾಡಿಕೊಳ್ಳುವಂತೆ ಹೂಡಿಕೆದಾರರು ಹಾಗೂ ಉದ್ಯಮಿಗಳಿಗೆ ಸಚಿವರು ಕರೆ ನೀಡಿದರು. ಕರೋನಾ ವೈರಸ್‌ನಿಂದಾಗಿ ಆರ್ಥಿಕತೆಯ ಮೇಲೆ ಬಿಕ್ಕಟ್ಟು ಉಂಟಾಗಿದೆ. ಈ ಬಿಕ್ಕಟ್ಟನ್ನು ನಾವು ಆಶೀರ್ವಾದವನ್ನಾಗಿ ಪರಿವರ್ತಿಸಿಕೊಳ್ಳಬೇಕೆಂದು ಅವರು ಹೇಳಿದರು.

MOSTREAD: ಕರೋನಾ ವೈರಸ್ ಎಫೆಕ್ಟ್: ಭಾರೀ ಪ್ರಮಾಣದಲ್ಲಿ ಕುಸಿದ ಇಂಧನ ಮಾರಾಟ

ಪ್ರಯಾಣಿಕರೇ ಗಮನಿಸಿ: ಶೀಘ್ರದಲ್ಲೇ ರಸ್ತೆಗಿಳಿಯಲಿವೆ ಸಾರ್ವಜನಿಕ ಸಾರಿಗೆ ಬಸ್ಸುಗಳು

ಜಪಾನ್, ಅಮೆರಿಕಾ ಸೇರಿದಂತೆ ಅನೇಕ ದೇಶಗಳಲ್ಲಿನ ಕಂಪನಿಗಳು ಚೀನಾದಿಂದ ಹೊರಬರುತ್ತಿವೆ. ಈ ನಾವು ಅವಕಾಶವನ್ನು ಸದುಪಯೋಗಪಡಿಸಿಕೊಂಡು, ಬಂಡವಾಳ ಹೂಡಿಕೆಯನ್ನು ಆಕರ್ಷಿಸಲು ಪ್ರಯತ್ನಿಸಬೇಕು. ಭಾರತದ ಆರ್ಥಿಕತೆಯನ್ನು ಹೆಚ್ಚಿಸಿಕೊಳ್ಳಲು ಇದೊಂದು ಸುವರ್ಣಾವಕಾಶವೆಂದು ಹೇಳಿದರು.

ಪ್ರಯಾಣಿಕರೇ ಗಮನಿಸಿ: ಶೀಘ್ರದಲ್ಲೇ ರಸ್ತೆಗಿಳಿಯಲಿವೆ ಸಾರ್ವಜನಿಕ ಸಾರಿಗೆ ಬಸ್ಸುಗಳು

ಭಾರತದಲ್ಲಿ ಹೂಡಿಕೆ ಮಾಡಲು ಭಾರತೀಯ ಉದ್ಯಮವು ವಿದೇಶಿ ಕಂಪನಿಗಳನ್ನು ಆಹ್ವಾನಿಸಬೇಕೆಂದು ಹೇಳಿದ ಅವರು ಕರೋನಾ ವೈರಸ್ ವಿರುದ್ದದ ಯುದ್ಧವನ್ನು ಭಾರತವು ಮೆಟ್ಟಿ ನಿಲ್ಲಲಿದೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು.

Most Read Articles

Kannada
English summary
Public transport will start soon says Nitin Gadkari. Read in Kannada.
Story first published: Thursday, May 7, 2020, 17:02 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X