ರೆಡ್ ಝೋನ್‌ಗಳಲ್ಲಿ ಕ್ಯಾಬ್ ಸಂಚಾರಕ್ಕೆ ಗ್ರೀನ್ ಸಿಗ್ನಲ್ ನೀಡಿದ ಸರ್ಕಾರ
ರೆಡ್ ಝೋನ್‌ಗಳಲ್ಲೂ ಆಟೋರಿಕ್ಷಾ ಹಾಗೂ ಟ್ಯಾಕ್ಸಿಗಳ ಸಂಚಾರಕ್ಕೆ ಅನುಮತಿ ನೀಡಿರುವುದಾಗಿ ರಾಜಸ್ಥಾನ ಸರ್ಕಾರ ಸೋಮವಾರ ಪ್ರಕಟಿಸಿದೆ. ಇದರ ಜೊತೆಗೆ ಗುಟ್ಕಾ, ಪಾನ್ ಮಸಾಲಾ ಹಾಗೂ ತಂಬಾಕು ಉತ್ಪನ್ನಗಳ ಮಾರಾಟಕ್ಕೂ ಅನುಮತಿ ನೀಡಲಾಗಿದೆ.

ಆದರೆ ಗುಟ್ಕಾ ಹಾಗೂ ತಂಬಾಕು ಉತ್ಪನ್ನಗಳನ್ನು ಸಾರ್ವಜನಿಕ ಸ್ಥಳಗಳಲ್ಲಿ ತಿನ್ನುವಂತಿಲ್ಲ ಹಾಗೂ ಉಗುಳುವಂತಿಲ್ಲ ಎಂಬ ನಿಯಮವನ್ನು ಸರ್ಕಾರ ಹೊರಡಿಸಿದೆ. ಈ ನಿಯಮ ಉಲ್ಲಂಘನೆ ಕಾನೂನುಬಾಹಿರ ಹಾಗೂ ಶಿಕ್ಷಾರ್ಹ ಅಪರಾಧವಾಗಿದೆ ಎಂದು ಹೇಳಲಾಗಿದೆ.

ಲಾಕ್‌ಡೌನ್ ನಾಲ್ಕನೇ ಹಂತದಲ್ಲಿ ಓಲಾ, ಉಬರ್ ಟ್ಯಾಕ್ಸಿಗಳು ಸೇರಿದಂತೆ ಆಟೋ ರಿಕ್ಷಾಗಳ ಕಾರ್ಯಾಚರಣೆಗೆ ರಾಜಸ್ಥಾನ ಸರ್ಕಾರವು ಅನುಮತಿ ನೀಡಿದೆ. ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಹಾಗೂ ಸುರಕ್ಷಾ ನಿಯಮಗಳನ್ನು ಅನುಸರಿಸಬೇಕೆಂಬ ಎಂಬ ಷರತ್ತುಗಳೊಂದಿಗೆ ಈ ಕಾರ್ಯಾಚರಣೆಗೆ ಅನುಮತಿ ನೀಡಲಾಗಿದೆ.
MOSTREAD: ರಾಷ್ಟ್ರೀಯ ಹೆದ್ದಾರಿ ನಿರ್ಮಾಣದಲ್ಲಿ ಹೊಸ ದಾಖಲೆ ಬರೆದ ಕೇಂದ್ರ ಸರ್ಕಾರ

ಇದರ ಜೊತೆಗೆ ರಾಜ್ಯದಲ್ಲಿರುವ ಸಾರ್ವಜನಿಕ ಉದ್ಯಾನವನಗಳನ್ನೂ ತೆರೆಯಲಾಗುವುದು. ಮೂಲಗಳ ಪ್ರಕಾರ ಸಾರ್ವಜನಿಕ ಉದ್ಯಾನವನವನ್ನು ಬೆಳಿಗ್ಗೆ 7ರಿಂದ ಸಂಜೆ 6.45ರವರೆಗೆ ತೆರೆಯಲು ಅವಕಾಶ ನೀಡಲಾಗುವುದು. ಗ್ರೀನ್ ಹಾಗೂ ಆರೇಂಜ್ ಝೋನ್‌ಗಳಲ್ಲಿ ಈಗಾಗಲೇ ಈ ಎಲ್ಲಾ ಚಟುವಟಿಕೆಗಳಿಗೆ ಅನುಮತಿ ನೀಡಲಾಗಿದೆ.

ಸೋಮವಾರ ರಾಜಸ್ಥಾನದಲ್ಲಿ ನಾಲ್ವರು ಕರೋನಾ ವೈರಸ್ ಸೋಂಕಿನಿಂದ ಮೃತಪಟ್ಟಿದ್ದಾರೆ. ಇದರಿಂದ ರಾಜಸ್ಥಾನದಲ್ಲಿ ಕರೋನಾ ವೈರಸ್ ಸೋಂಕಿಗೆ ಬಲಿಯಾದವರ ಸಂಖ್ಯೆ 272ಕ್ಕೆ ಏರಿದೆ. ರಾಜಸ್ಥಾನದಲ್ಲಿ ಕೋವಿಡ್ -19 ಸೋಂಕಿಗೆ ಒಳಗಾದವರ ಸಂಖ್ಯೆ 7,300ಕ್ಕೆ ಏರಿದೆ.
MOST READ:ಕರೋನಾದಿಂದ ಬೈಕ್ ಕಳೆದುಕೊಂಡ ಯುವಕನಿಗೆ ಸರ್ ಪ್ರೈಸ್ ಗಿಫ್ಟ್ ನೀಡಿದ ಟಿವಿಎಸ್

ಈ ಬಗ್ಗೆ ಮಾತನಾಡಿರುವ ರಾಜಸ್ಥಾನದ ಹೆಚ್ಚುವರಿ ಆರೋಗ್ಯ ಕಾರ್ಯದರ್ಶಿ ರೋಹಿತ್ ಕುಮಾರ್ ಸಿಂಗ್‌ರವರು ರಾಜ್ಯದಲ್ಲಿ 272 ಹೊಸ ಪ್ರಕರಣಗಳು ವರದಿಯಾಗಿದ್ದು, ಸೋಂಕಿತರ ಸಂಖ್ಯೆ 7,300ಕ್ಕೆ ಏರಿದೆ ಎಂದು ಹೇಳಿದರು.

ಪಾಲಿಯಲ್ಲಿ 50, ನಾಗೌರ್‌ನಲ್ಲಿ 48, ಜೋಧ್‌ಪುರದಲ್ಲಿ 47, ಸಿಕಾರ್‌ನಲ್ಲಿ 44, ಚುರುನಲ್ಲಿ 17, ಜೈಪುರದಲ್ಲಿ 13 ಹಾಗೂ ಉದಯಪುರದಲ್ಲಿ 12 ಹೊಸ ಪ್ರಕರಣಗಳು ವರದಿಯಾಗಿವೆ. ರಾಜಸ್ಥಾನದಲ್ಲಿ 3,077 ಸಕ್ರಿಯ ಪ್ರಕರಣಗಳಿದ್ದು, 3,559 ಜನರು ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.


Click it and Unblock the Notifications