Just In
Don't Miss!
- News
ಮತ್ತೊಮ್ಮೆ ಮಹಾ ಹಿಂಸಾಚಾರಕ್ಕೆ ಟ್ರಂಪ್ ಬೆಂಬಲಿಗರಿಂದ ಸ್ಕೆಚ್..?
- Movies
ರಾಕಿಂಗ್ ಸ್ಟಾರ್ ಯಶ್ ಗೆ ಮದುವೆ ಆಮಂತ್ರಣ ನೀಡಿದ ಕೃಷ್ಣ-ಮಿಲನಾ ಜೋಡಿ
- Sports
ಭಾರತ vs ಆಸ್ಟ್ರೇಲಿಯಾ 4ನೇ ಟೆಸ್ಟ್ ಸಿಡ್ನಿ, ದಿನ 4, Live ಸ್ಕೋರ್
- Lifestyle
"ಸೋಮವಾರದ ರಾಶಿಫಲ: ಮೇಷ-ಮೀನದವರೆಗಿನ ದಿನ ಭವಿಷ್ಯ"
- Finance
Flipkart Big Saving Days: ಆಪಲ್, ಸ್ಯಾಮ್ಸಂಗ್ ಸೇರಿ ಹಲವು ಬ್ರ್ಯಾಂಡ್ ಗಳ ಆಫರ್
- Education
BEL Recruitment 2021: 205 ಟೆಕ್ನೀಶಿಯನ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ರಾಷ್ಟ್ರ ರಾಜಧಾನಿಯಲ್ಲಿ ಆಟೋ ಸೇವೆಯನ್ನಾರಂಭಿಸಿದ ರ್‍ಯಾಪಿಡೋ
ಬೈಕ್ ಟ್ಯಾಕ್ಸಿ ಕಂಪನಿಯಾದ ರ್‍ಯಾಪಿಡೋ ಭಾರತದ 11 ನಗರಗಳು ಸೇರಿದಂತೆ 7 ರಾಜ್ಯಗಳಲ್ಲಿ ತನ್ನ ಸೇವೆಯನ್ನು ನೀಡುತ್ತದೆ. ಈಗ ಕಂಪನಿಯು ದೆಹಲಿಯಲ್ಲಿ ತನ್ನ ಆಟೋ ಟ್ಯಾಕ್ಸಿ ಸೇವೆಯನ್ನು ಆರಂಭಿಸಿದೆ.

ಈ ಸೇವೆಗೆ ನೋಯ್ಡಾದ ಸಂಸದ ಮಹೇಶ್ ಶರ್ಮಾ ಚಾಲನೆ ನೀಡಿದರು. ದೇಶದಲ್ಲಿ ಕರೋನಾ ವೈರಸ್ ಸಾಂಕ್ರಾಮಿಕ ರೋಗದ ನಂತರ ಸ್ವಂತ ವಾಹನಗಳಿಗೆ ಬೇಡಿಕೆ ಹೆಚ್ಚಾಗಿದೆ ಎಂದು ಕಂಪನಿ ಹೇಳಿದೆ. ಈ ಭಾಗದಲ್ಲಿ ರ್‍ಯಾಪಿಡೋ ಟ್ಯಾಕ್ಸಿಗಳು ಉತ್ತಮ ಸೇವೆಯನ್ನು ನೀಡಲಿವೆ ಎಂದು ಕಂಪನಿಯು ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

ದೇಶದಲ್ಲಿ ಕೇವಲ 5%ನಷ್ಟು ಟ್ಯಾಕ್ಸಿ ಸೇವೆಗಳನ್ನು ಆನ್‌ಲೈನ್ ಮೂಲಕ ನೀಡಲಾಗುತ್ತಿದೆ ಎಂದು ಹೇಳಲಾಗಿದೆ. ಆನ್‌ಲೈನ್ ಟ್ಯಾಕ್ಸಿಯಲ್ಲಿನ ಹೆಚ್ಚಳವು ಹೆಚ್ಚಿನ ಜನರನ್ನು ತಲುಪಲು ಸಾಧ್ಯವಾಗಲಿದೆ.
MOSTREAD: ಟ್ರ್ಯಾಕ್ಟರ್‌ಗಳ ಹಿಂಭಾಗದಲ್ಲಿ ದೊಡ್ಡ ಗಾತ್ರದ ಟಯರ್‌ಗಳಿರಲು ಕಾರಣಗಳಿವು

ರ್‍ಯಾಪಿಡೋ ಕಂಪನಿಯು ಹೆಚ್ಚಿನ ಜನರಿಗೆ ಸುರಕ್ಷಿತವಾದ, ಗುಣಮಟ್ಟದ ಟ್ಯಾಕ್ಸಿ ಸೇವೆಗಳನ್ನು ಒದಗಿಸುವ ಉದ್ದೇಶವನ್ನು ಹೊಂದಿದೆ. ರ್‍ಯಾಪಿಡೋ ಕಂಪನಿಯು 2015ರಲ್ಲಿ ಬೈಕ್ ಟ್ಯಾಕ್ಸಿ ಸೇವೆಯನ್ನು ಭಾರತದಲ್ಲಿ ಆರಂಭಿಸಿತು.

ಟ್ರಾಫಿಕ್ ಸಮಸ್ಯೆಯಿಂದ ಬಳಲುತ್ತಿರುವ ನಗರವಾಸಿಗಳಿಗೆ ಬೈಕ್ ಮೂಲಕ ಟ್ಯಾಕ್ಸಿ ಸೌಲಭ್ಯವನ್ನು ಒದಗಿಸುವ ಉದ್ದೇಶದಿಂದ ಕಂಪನಿಯನ್ನು ಆರಂಭಿಸಲಾಯಿತು. ರ್‍ಯಾಪಿಡೋ ಭಾರತದ ಅತಿದೊಡ್ಡ ಬೈಕ್ ಟ್ಯಾಕ್ಸಿ ಸೇವಾ ಪೂರೈಕೆದಾರ ಕಂಪನಿಯಾಗಿದೆ.
MOSTREAD: ಚಿಕ್ಕ ಜಾಗದಲ್ಲಿ ದೊಡ್ಡ ಕಾರನ್ನು ಪಾರ್ಕ್ ಮಾಡಿದ ಅಪ್ರತಿಮ ಚಾಲಕನನ್ನು ಸನ್ಮಾನಿಸಿದ ಟೊಯೊಟಾ ಡೀಲರ್

ಕಂಪನಿಯು 1.5 ಮಿಲಿಯನ್ ರೈಡ್ ಪಾಲುದಾರರೊಂದಿಗೆ 100ಕ್ಕೂ ಹೆಚ್ಚು ನಗರಗಳಲ್ಲಿ ಸೇವೆಯನ್ನು ನೀಡುತ್ತಿದೆ. ರ್‍ಯಾಪಿಡೋ ಕಂಪನಿಯು ಭಾರತದಲ್ಲಿ 10 ಲಕ್ಷಕ್ಕೂ ಹೆಚ್ಚು ಗ್ರಾಹಕರನ್ನು ಹೊಂದಿದೆ.

ಖ್ಯಾತ ಕ್ಯಾಬ್ ಸೇವಾ ಕಂಪನಿಯಾದ ಉಬರ್ 2040ರ ವೇಳೆಗೆ ತನ್ನ ಕಾರುಗಳನ್ನು 100% ಎಲೆಕ್ಟ್ರಿಕ್ ಆಗಿ ಬದಲಿಸಲು ಯೋಜಿಸಿದೆ. ಪರಿಸರ ಸ್ನೇಹಿ ವಾಹನಗಳಿಗೆ ಆದ್ಯತೆ ನೀಡುತ್ತಿರುವ ಕಂಪನಿಯು 2021ರ ಅಂತ್ಯದ ವೇಳೆಗೆ ಭಾರತದಲ್ಲಿ 3,000 ಎಲೆಕ್ಟ್ರಿಕ್ ದ್ವಿಚಕ್ರ ವಾಹನ, ತ್ರಿಚಕ್ರ ವಾಹನ ಹಾಗೂ ನಾಲ್ಕು ಚಕ್ರ ವಾಹನಗಳನ್ನು ಹೊಂದಲು ಬಯಸಿದೆ.
MOSTREAD: ಲಾಕ್‌ಡೌನ್ ನಿಂದ ಕೆಲಸ ಕಳೆದುಕೊಂಡವ ಇಂದು ವಿಶ್ವ ವಿಖ್ಯಾತ ವ್ಯಕ್ತಿ

ದೇಶದಲ್ಲಿ ಹೆಚ್ಚುತ್ತಿರುವ ಮಾಲಿನ್ಯವನ್ನು ತಡೆಯುವುದು ಅವಶ್ಯಕ ಎಂದು ಹೇಳಿರುವ ಕಂಪನಿಯು ಇದಕ್ಕಾಗಿ ಎಲೆಕ್ಟ್ರಿಕ್ ವಾಹನಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಬಳಸಬೇಕೆಂದು ಹೇಳಿದೆ. ಕರೋನಾ ವೈರಸ್ ಅವಧಿಯಲ್ಲಿ 1.8 ಲಕ್ಷಕ್ಕೂ ಹೆಚ್ಚು ಉಚಿತ ರೈಡ್'ಗಳನ್ನು ಒದಗಿಸಿರುವುದಾಗಿ ಉಬರ್ ತಿಳಿಸಿದೆ.

ಲಾಕ್ ಡೌನ್ ಅವಧಿಯಲ್ಲಿ ಕಂಪನಿಯು 1 ಲಕ್ಷಕ್ಕೂ ಹೆಚ್ಚು ಕ್ಯಾಬ್ ಚಾಲಕರಿಗೆ ಆರ್ಥಿಕ ನೆರವನ್ನು ನೀಡಿದೆ. ಮಾರ್ಚ್ ತಿಂಗಳಿನಲ್ಲಿ ಲಾಕ್ ಡೌನ್ ಕಾರಣಕ್ಕೆ ಕಾರ್ಯಾಚರಣೆ ಸ್ಥಗಿತಗೊಂಡ ನಂತರ ತನ್ನ ಕ್ಯಾಬ್ ಪಾಲುದಾರರ ಭತ್ಯೆಯನ್ನು ನೋಡಿಕೊಂಡಿರುವುದಾಗಿ ಕಂಪನಿ ತಿಳಿಸಿದೆ.
MOSTREAD: 13 ವರ್ಷಗಳಲ್ಲಿ 10 ಲಕ್ಷ ಕಿ.ಮೀ ಸಂಚರಿಸಿದ ಟೊಯೊಟಾ ಇನೋವಾ ಕಾರು

ಲಾಕ್‌ಡೌನ್ ಮುಗಿದ ನಂತರ ಕಂಪನಿಯು ವಾರಕ್ಕೆ ಸುಮಾರು 10 ಲಕ್ಷ ಸವಾರಿಗಳನ್ನು ಕಾಯ್ದಿರಿಸಿದೆ. ಆರೋಗ್ಯ ಕಾರ್ಯಕರ್ತರು, ವೈದ್ಯರು ಹಾಗೂ ಆಹಾರ ವಿತರಣೆಗಾಗಿ ಉಬರ್ 1 ಕೋಟಿಗೂ ಹೆಚ್ಚು ಸವಾರಿಗಳನ್ನು ಕಾಯ್ದಿರಿಸಿದೆ ಎಂದು ವರದಿಯಾಗಿದೆ.

ಉಬರ್ 30 ಲಕ್ಷಕ್ಕೂ ಹೆಚ್ಚು ಫೇಸ್ ಮಾಸ್ಕ್, 2 ಲಕ್ಷ ಡಿಸ್ ಇನ್'ಫೆಂಕ್ಟೆಂಟ್ ಹಾಗೂ 2 ಲಕ್ಷ ಸ್ಯಾನಿಟೈಜರ್'ಗಳನ್ನು ಉಚಿತವಾಗಿ ವಿತರಿಸಿದೆ. ಇದರ ಜೊತೆಗೆ ಆರೋಗ್ಯ ಹಾಗೂ ಅಗತ್ಯ ಸೇವೆಗಳಲ್ಲಿ ತೊಡಗಿರುವವರಿಗೆ ಉಬರ್ 45,000ಕ್ಕೂ ಹೆಚ್ಚು ಸವಾರಿಗಳನ್ನು ಒದಗಿಸಿದೆ.
MOSTREAD: ಇನ್ನು ಮುಂದೆ ಈ ನಗರಗಳಲ್ಲಿ ಡೀಸೆಲ್ ವಾಹನಗಳನ್ನು ಮಾರಾಟ ಮಾಡುವಂತಿಲ್ಲ

ಕರೋನಾ ಸೋಂಕು ಹರಡುವುದನ್ನು ತಡೆಗಟ್ಟಲು ಕಂಪನಿಯು 43,000 ಕಾರು ಹಾಗೂ 87,000 ಆಟೋಗಳಲ್ಲಿ ಸೆಫ್ಟಿ ಸ್ಕ್ರೀನ್'ಗಳನ್ನು ಅಳವಡಿಸಿದೆ. ಇನ್ನು ಓಲಾ ಕಂಪನಿಯ ಬಗ್ಗೆ ಹೇಳುವುದಾದರೆ ಕಂಪನಿಯು ಭಾರತದಲ್ಲಿ ಸಣ್ಣ ಎಲೆಕ್ಟ್ರಿಕ್ ಕಾರುಗಳನ್ನು ಪರಿಚಯಿಸಿದೆ.

ಇದರ ಜೊತೆಗೆ 2021ರ ಜನವರಿಯಿಂದ ಎಲೆಕ್ಟ್ರಿಕ್ ಸ್ಕೂಟರ್‌ಗಳನ್ನು ಬಿಡುಗಡೆಗೊಳಿಸಲು ತಯಾರಿ ನಡೆಸುತ್ತಿದೆ. ಕಂಪನಿಯು ಕೇವಲ ದ್ವಿಚಕ್ರ ವಾಹನಗಳಿಗೆ ಸೀಮಿತವಾಗಿಲ್ಲದೇ ಸಣ್ಣ ಕಾರುಗಳತ್ತಲೂ ಗಮನ ಹರಿಸುತ್ತಿದೆ ಎಂದು ಓಲಾ ಸಿಇಒ ಭಾವೀಶ್ ಅಗರ್‌ವಾಲ್ ಇತ್ತೀಚೆಗೆ ಎಕನಾಮಿಕ್ ಟೈಮ್ಸ್ ಗೆ ನೀಡಿದ ಸಂದರ್ಶನದಲ್ಲಿ ತಿಳಿಸಿದ್ದರು.
MOST READ:ಶೋಚನೀಯ ಸ್ಥಿತಿಯಲ್ಲಿವೆ ದುಬಾರಿ ಬೆಲೆಯ ಐಷಾರಾಮಿ ರೋಲ್ಸ್ ರಾಯ್ಸ್ ಕಾರುಗಳು

ಕಂಪನಿಯು ಸಣ್ಣ ಎಲೆಕ್ಟ್ರಿಕ್ ಕಾರುಗಳನ್ನು ನಗರಗಳಲ್ಲಿ ಪರಿಚಯಿಸಲು ಮುಂದಾಗಿದೆ ಎಂದು ಓಲಾ ಕಂಪನಿಯು ಹೇಳಿರುವ ಹಿನ್ನೆಲೆಯಲ್ಲಿ ಮುಂಬರುವ ದಿನಗಳಲ್ಲಿ ಕಂಪನಿಯು ಎಲೆಕ್ಟ್ರಿಕ್ ಕ್ವಾಡ್ರೈಸಿಕಲ್‌ಗಳನ್ನು ಬಿಡುಗಡೆಗೊಳಿಸಬಹುದು ಎಂಬುದರ ಸೂಚಕವಾಗಿದೆ.

ಕ್ವಾಡ್ರೈಸಿಕಲ್‌ಗಳನ್ನು ನಗರದದಲ್ಲಿ ಸುಲಭವಾಗಿ ಚಾಲನೆ ಮಾಡಬಹುದು. ಇವುಗಳು ಸ್ಕೂಟರ್‌ಗಳಂತೆ ಸುರಕ್ಷಿತವಾಗಿರುತ್ತವೆ.