ಡಸ್ಟರ್ ಪೆಟ್ರೋಲ್ ಟರ್ಬೋ‌ದಲ್ಲಿ ಮೈಲ್ಡ್ ಹೈಬ್ರಿಡ್ ತಂತ್ರಜ್ಞಾನ ಬಳಕೆ ಮಾಡಿದ ರೆನಾಲ್ಟ್

ರೆನಾಲ್ಟ್ ಇಂಡಿಯಾ ಕಂಪನಿಯು ಬಿಎಸ್-6 ಜಾರಿ ನಂತರ ಹೊಸ ಕಾರುಗಳ ಎಂಜಿನ್ ವಿಭಾಗದಲ್ಲಿ ಸಾಕಷ್ಟು ಸುಧಾರಣೆ ಪರಿಚಯಿಸಿದ್ದು, ಈ ಹಿಂದಿನ ಡೀಸೆಲ್ ಎಂಜಿನ್ ಆಯ್ಕೆಯನ್ನು ಸ್ಥಗಿತಗೊಳಿಸಿ ಪೂರ್ಣಪ್ರಮಾಣದಲ್ಲಿ ಪೆಟ್ರೋಲ್ ಕಾರುಗಳ ಮಾದರಿಗಳ ಗಮನಹರಿಸಿದೆ.

ಡಸ್ಟರ್ ಪೆಟ್ರೋಲ್ ಟರ್ಬೋ‌ದಲ್ಲಿ ಮೈಲ್ಡ್ ಹೈಬ್ರಿಡ್ ತಂತ್ರಜ್ಞಾನ ಬಳಕೆ

ಕಳೆದ ತಿಂಗಳ ಹಿಂದಷ್ಟೇ ಬಿಡುಗಡೆ ಮಾಡಲಾಗಿದ್ದ ಡಸ್ಟರ್ ಪೆಟ್ರೋಲ್ ಟರ್ಬೋ ಮಾದರಿಯಲ್ಲಿ ಇದೀಗ ಮತ್ತಷ್ಟು ಹೊಸ ಬದಲಾವಣೆ ತರಲಾಗುತ್ತಿದ್ದು, ಇಂಧನ ದಕ್ಷತೆಗಾಗಿ ಮೈಲ್ಡ್ ಹೈಬ್ರಿಡ್ ತಂತ್ರಜ್ಞಾನ ಜೋಡಣೆ ಮಾಡಿದೆ. ಮೈಲ್ಡ್ ಹೈಬ್ರಿಡ್ ತಂತ್ರಜ್ಞಾನದಿಂದಾಗಿ ಪೆಟ್ರೋಲ್ ಕಾರುಗಳ ಇಂಧನ ದಕ್ಷತೆಯು ಡೀಸೆಲ್ ಮಾದರಿಗಳಂತೆ ಉತ್ತಮ ಮೈಲೇಜ್ ಹಿಂದಿರುಗಿಸಲಿದ್ದು, ಹಲವಾರು ಕಾರು ಕಂಪನಿಗಳು ತಮ್ಮ ಬಜೆಟ್ ಕಾರುಗಳಲ್ಲೂ ಈ ತಂತ್ರಜ್ಞಾನವನ್ನು ಬಳಕೆ ಮಾಡುತ್ತಿವೆ.

ಡಸ್ಟರ್ ಪೆಟ್ರೋಲ್ ಟರ್ಬೋ‌ದಲ್ಲಿ ಮೈಲ್ಡ್ ಹೈಬ್ರಿಡ್ ತಂತ್ರಜ್ಞಾನ ಬಳಕೆ

ಮೈಲ್ಡ್ ಹೈಬ್ರಿಡ್ ತಂತ್ರಜ್ಞಾನದಿಂದಾಗಿ ಕಾರು ಆನ್ ಮಾಡಿದ ನಂತರ ಮತ್ತು ಕಾರಿನ ವೇಗ ನಿಗದಿತ ಮಟ್ಟದ ವೇಗದಲ್ಲಿರುವಾಗ ಮೈಲ್ಡ್ ಹೈಬ್ರಿಡ್ ತಂತ್ರಜ್ಞಾನದೊಂದಿಗೆ ಜೋಡಣೆಯಾಗುವ ಕಾರಿನ ಎಂಜಿನ್ ನಿಗದಿತ ವೇಗಕ್ಕಿಂತ ಹೆಚ್ಚು ವೇಗ ಪಡೆದ ತಕ್ಷಣವೇ ಪೆಟ್ರೋಲ್ ಎಂಜಿನ್ ಶಕ್ತಿ ಪೂರೈಕೆಗೆ ವರ್ಗಾವಣೆಗೊಳ್ಳುತ್ತದೆ.

ಡಸ್ಟರ್ ಪೆಟ್ರೋಲ್ ಟರ್ಬೋ‌ದಲ್ಲಿ ಮೈಲ್ಡ್ ಹೈಬ್ರಿಡ್ ತಂತ್ರಜ್ಞಾನ ಬಳಕೆ

ಇದರಿಂದ ಕಾರಿನ ಆರಂಭದಲ್ಲಿ ಮತ್ತು ಟ್ರಾಫಿಕ್ ಸಂದರ್ಭದಲ್ಲಿ ಇಂಧನ ಉಳಿತಾಯಕ್ಕೆ ಸಹಕರಿಸುವ ಮೈಲ್ಡ್ ಹೈಬ್ರಿಡ್ ತಂತ್ರಜ್ಞಾನವು ಮೈಲೇಜ್ ಹೆಚ್ಚಳಕ್ಕೆ ಸಾಕಷ್ಟು ಸಹಕಾರಿಯಾಗಿದ್ದು, ಇದೀಗ ರೆನಾಲ್ಟ್ ಕೂಡಾ ಡಸ್ಟರ್ ಟರ್ಬೋ ಪೆಟ್ರೋಲ್ ಮಾದರಿಯಲ್ಲಿ ಹೊಸ ತಂತ್ರಜ್ಞಾನವನ್ನು ಜೋಡಣೆ ಮಾಡಿದೆ.

ಡಸ್ಟರ್ ಪೆಟ್ರೋಲ್ ಟರ್ಬೋ‌ದಲ್ಲಿ ಮೈಲ್ಡ್ ಹೈಬ್ರಿಡ್ ತಂತ್ರಜ್ಞಾನ ಬಳಕೆ

ಇನ್ನು ಡಸ್ಟರ್ ಎಸ್‌ಯುವಿ ಮೂಲಕ ದೇಶಿಯ ಮಾರುಕಟ್ಟೆಯಲ್ಲಿ ತನ್ನದೆ ಆದ ಜನಪ್ರಿಯತೆ ಹೊಂದಿರುವ ಫ್ರೆಂಚ್ ಕಾರು ಉತ್ಪಾದನಾ ಕಂಪನಿಯಾದ ರೆನಾಲ್ಟ್ ಕಾಲಕ್ಕೆ ತಕ್ಕಂತೆ ಹೊಸ ಕಾರು ಮಾದರಿಯಲ್ಲಿ ಹಲವಾರು ಬದಲಾವಣೆಗಳನ್ನು ಪರಿಚಯಿಸಿದ್ದು, ಮೊದಲ ಬಾರಿಗೆ ಹೊಸ ಕಾರಿನಲ್ಲಿ ಟರ್ಬೋ ಪೆಟ್ರೋಲ್ ಮಾದರಿಯನ್ನು ಬಿಡುಗಡೆ ಮಾಡಿರುವುದು ಎಸ್‌ಯುವಿ ಪ್ರಿಯರ ಆಕರ್ಷಣೆಗೆ ಕಾರಣವಾಗಿದೆ.

ಡಸ್ಟರ್ ಪೆಟ್ರೋಲ್ ಟರ್ಬೋ‌ದಲ್ಲಿ ಮೈಲ್ಡ್ ಹೈಬ್ರಿಡ್ ತಂತ್ರಜ್ಞಾನ ಬಳಕೆ

ಮಧ್ಯಮ ಗಾತ್ರದ ಎಸ್‌ಯುವಿ ಮಾದರಿಯಾಗಿರುವ ಡಸ್ಟರ್ ಕಾರು ಮಾದರಿಯನ್ನು ಭಾರತದಲ್ಲಿ ಮೊದಲ ಬಾರಿಗೆ 2012ರಲ್ಲಿ ಪರಿಚಯಿಸಿದ್ದ ರೆನಾಲ್ಟ್ ಕಂಪನಿಯು ಮಾರುಕಟ್ಟೆಯಲ್ಲಿನ ಬೇಡಿಕೆಗೆ ಅನುಗುಣವಾಗಿ ಹಲವಾರು ಬಾರಿ ಹೊಸ ಕಾರಿನ ತಾಂತ್ರಿಕ ಅಂಶಗಳನ್ನು ಬದಲಾವಣೆಗೊಳಿಸುತ್ತ ಬೇಡಿಕೆಯನ್ನು ಕಾಯ್ದಕೊಂಡಿದ್ದು, ಇದೀಗ ಹೊಸದಾಗಿ ಬಿಡುಗಡೆಯಾಗಿರುವ ಪೆಟ್ರೋಲ್ ಟರ್ಬೋ ಎಂಜಿನ್ ಮಾದರಿಯು ಕೂಡಾ ಹಲವಾರು ವಿಶೇಷತೆಗಳಿಗೆ ಕಾರಣವಾಗಿದೆ.

MOST READ: ಪ್ರತಿ ಚಾರ್ಜ್‌ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿ..!

ಡಸ್ಟರ್ ಪೆಟ್ರೋಲ್ ಟರ್ಬೋ‌ದಲ್ಲಿ ಮೈಲ್ಡ್ ಹೈಬ್ರಿಡ್ ತಂತ್ರಜ್ಞಾನ ಬಳಕೆ

ರಗಡ್ ಸ್ಟೈಲಿಷ್ ಜೊತೆಗೆ ಬಲಿಷ್ಠ ಎಂಜಿನ್ ಆಯ್ಕೆ ಹೊಂದಿರುವ ಡಸ್ಟರ್ ಟರ್ಬೋ ಪೆಟ್ರೋಲ್ ಆವೃತ್ತಿಯು ಹಲವಾರು ಹೊಸತನದೊಂದಿಗೆ ಮಾರುಕಟ್ಟೆ ಪ್ರವೇಶಿಸಿದ್ದು, ಸ್ಟ್ಯಾಂಡರ್ಡ್ ಡಸ್ಟರ್ ಮಾದರಿಗಿಂತಲೂ ಟರ್ಬೋ ಪೆಟ್ರೋಲ್ ಆವೃತ್ತಿಯು ಹೊಸ ಸಂಚಲನ ಸೃಷ್ಠಿಸುವ ತವಕದಲ್ಲಿದೆ.

ಡಸ್ಟರ್ ಪೆಟ್ರೋಲ್ ಟರ್ಬೋ‌ದಲ್ಲಿ ಮೈಲ್ಡ್ ಹೈಬ್ರಿಡ್ ತಂತ್ರಜ್ಞಾನ ಬಳಕೆ

ಡಸ್ಟರ್ ಕಾರು ಮಾದರಿಯು ಸದ್ಯ ಎರಡು ಪೆಟ್ರೋಲ್ ಎಂಜಿನ್ ಆಯ್ಕೆಯೊಂದಿಗೆ ಮಾರಾಟವಾಗುತ್ತಿದ್ದು, 1.5-ಲೀಟರ್ ಸಾಮಾನ್ಯ ಪೆಟ್ರೋಲ್ ಮಾದರಿಲ್ಲಿ ಮತ್ತು 1.3-ಲೀಟರ್ ಟರ್ಬೋ ಪೆಟ್ರೋಲ್ ಎಂಜಿನ್ ಆಯ್ಕೆ ಹೊಂದಿದೆ. ದೆಹಲಿ ಎಕ್ಸ್‌ಶೋರೂಂ ಪ್ರಕಾರ ಡಸ್ಟರ್ ಕಾರು ಆರಂಭಿಕವಾಗಿ ರೂ. 8.49 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 13.59 ಲಕ್ಷ ಬೆಲೆ ಹೊಂದಿದೆ.

MOST READ: ಭಾರತದಲ್ಲಿ ಎರಡು ಹೊಸ ಎಸ್‌ಯುವಿ ಕಾರು ಮಾದರಿಗಳನ್ನು ಬಿಡುಗಡೆ ಮಾಡಲಿದೆ ಹ್ಯುಂಡೈ

ಡಸ್ಟರ್ ಪೆಟ್ರೋಲ್ ಟರ್ಬೋ‌ದಲ್ಲಿ ಮೈಲ್ಡ್ ಹೈಬ್ರಿಡ್ ತಂತ್ರಜ್ಞಾನ ಬಳಕೆ

ಇದರಲ್ಲಿ 1.5-ಲೀಟರ್ ಪೆಟ್ರೋಲ್ ಮಾದರಿಯು ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 8.49 ಲಕ್ಷದಿಂದ ರೂ.9.99 ಲಕ್ಷ ಬೆಲೆ ಹೊಂದಿದ್ದರೆ, 1.3-ಲೀಟರ್ ಟರ್ಬೋ ಪೆಟ್ರೋಲ್ ಮಾದರಿಯು ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 10.49 ಲಕ್ಷದಿಂದ ರೂ.13.59 ಲಕ್ಷ ಬೆಲೆ ಹೊಂದಿದೆ. ಬಿಎಸ್-6 ಜಾರಿ ನಂತರ ರೆನಾಲ್ಟ್ ಕಾರುಗಳಲ್ಲಿ ಡೀಸೆಲ್ ಎಂಜಿನ್ ಮಾರಾಟವನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಲಾಗಿದ್ದು, ಕೇವಲ ಪೆಟ್ರೋಲ್ ಮಾದರಿಗಳಲ್ಲಿ ಮಾತ್ರ ಮಾರಾಟಮಾಡಲಾಗುತ್ತಿದೆ.

Most Read Articles

Kannada
English summary
Renault 1.3-litre Turbo-petrol Engine Gets Mild-Hybrid Tech. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X