ಹೊಸ ಪೆಟ್ರೋಲ್ ಎಂಜಿನ್‌ನೊಂದಿಗೆ ಇದೇ ತಿಂಗಳು ಬಿಡುಗಡೆಯಾಗಲಿದೆ 2020ರ ಕ್ಯಾಪ್ಚರ್

ರೆನಾಲ್ಟ್ ಕಂಪನಿಯು ಕಡ್ಡಾಯವಾಗಿ ಜಾರಿಗೆ ಬಂದಿರುವ ಬಿಎಸ್-6 ಎಮಿಷನ್‌ಗೆ ಅನುಗುಣವಾಗಿ ತನ್ನ ಕ್ರಾಸ್ ಓವರ್ ಎಸ್‌ಯುವಿ ಮಾದರಿಯಾದ ಕ್ಯಾಪ್ಚರ್ ಫೇಸ್‌ಲಿಫ್ಟ್ ಕಾರನ್ನು ಇದೇ ತಿಂಗಳಾಂತ್ಯಕ್ಕೆ ಬಿಡುಗಡೆಗೊಳಿಸುತ್ತಿದ್ದು, ಹೊಸ ಕಾರಿನ ಎಂಜಿನ್ ಆಯ್ಕೆ ಸಾಕಷ್ಟು ಹೊಸ ಬದಲಾವಣೆಗಳನ್ನು ತರಲಾಗಿದೆ.

ಹೊಸ ಪೆಟ್ರೋಲ್ ಎಂಜಿನ್‌ನೊಂದಿಗೆ ಇದೇ ತಿಂಗಳು ಬಿಡುಗಡೆಯಾಗಲಿದೆ 2020ರ ಕ್ಯಾಪ್ಚರ್

ಬಿಎಸ್-6 ನಿಯಮದಿಂದಾಗಿ ಪ್ರಸ್ತುತ ಮಾರುಕಟ್ಟೆಯಲ್ಲಿರುವ ಹಲವು ಡೀಸೆಲ್ ಎಂಜಿನ್ ಕಾರು ಮಾದರಿಗಳು ಮಾರಾಟದಿಂದ ಸ್ಥಗಿತಗೊಳ್ಳುತ್ತಿದ್ದು, ಇದರಲ್ಲಿ ರೆನಾಲ್ಟ್ ನಿರ್ಮಾಣ ಕಾರು ಮಾದರಿಗಳು ಸಹ ಪ್ರಮುಖವಾಗಿವೆ. ಇದರಲ್ಲಿ ಡಸ್ಟರ್, ಲೊಡ್ಜಿ ಮತ್ತು ಕ್ಯಾಪ್ಚರ್ ಕಾರುಗಳಲ್ಲಿ ಈ ಹಿಂದೆ ನೀಡಲಾಗುತ್ತಿದ್ದ 1.5-ಲೀಟರ್ ಡೀಸೆಲ್ ಎಂಜಿನ್ ಅನ್ನು ಮಾರಾಟದಿಂದ ಕೈಬಿಡಲಾಗಿದ್ದು, ಹೊಸ ತಂತ್ರಜ್ಞಾನ ಪ್ರೇರಿತ 1.3-ಲೀಟರ್ ಟರ್ಬೋ ಪೆಟ್ರೋಲ್ ಎಂಜಿನ್‌ನೊಂದಿಗೆ ಬಿಡುಗಡೆ ಮಾಡಲಾಗುತ್ತಿದೆ.

ಹೊಸ ಪೆಟ್ರೋಲ್ ಎಂಜಿನ್‌ನೊಂದಿಗೆ ಇದೇ ತಿಂಗಳು ಬಿಡುಗಡೆಯಾಗಲಿದೆ 2020ರ ಕ್ಯಾಪ್ಚರ್

ಇದರಲ್ಲಿ ಲೋಡ್ಜಿ ಆವೃತ್ತಿಯನ್ನು ಈಗಾಗಲೇ ಸಂಪೂರ್ಣವಾಗಿ ಮಾರಾಟ ಸ್ಥಗಿತಗೊಳಿಸಲಾಗಿದ್ದು, ಇನ್ನೆರಡು ಪ್ರಮುಖ ಕಾರು ಮಾದರಿಗಳಾದ ಡಸ್ಟರ್ ಮತ್ತು ಕ್ಯಾಪ್ಚರ್ ಕಾರುಗಳಲ್ಲಿ ಮಾತ್ರವೇ ಹೊಸ ಪೆಟ್ರೋಲ್ ಎಂಜಿನ್‌ನೊಂದಿಗೆ ಮಾರಾಟ ಮುಂದುವರಿಸಲಿವೆ.

ಹೊಸ ಪೆಟ್ರೋಲ್ ಎಂಜಿನ್‌ನೊಂದಿಗೆ ಇದೇ ತಿಂಗಳು ಬಿಡುಗಡೆಯಾಗಲಿದೆ 2020ರ ಕ್ಯಾಪ್ಚರ್

ಕ್ಯಾಪ್ಚರ್ ಫೇಸ್‌ಲಿಫ್ಟ್ ಈಗಾಗಲೇ ರಷ್ಯಾ ಮಾರುಕಟ್ಟೆಯಲ್ಲಿ ಅನಾವರಣಗೊಳಿಸಲಾಗಿದ್ದು, ತನ್ನ ಮತ್ತೊಂದು ಜನಪ್ರಿಯ ಆರ್ಕಾನ್ ಕೂಪೆ ಎಸ್‌ಯುವಿ ಪ್ರೇರಣೆಯೊಂದಿಗೆ ಹೊಸ ಕ್ಯಾಪ್ಚರ್ ವಿನ್ಯಾಸಗಳಲ್ಲಿ ಮಹತ್ವದ ಬದಲಾವಣೆಗಳನ್ನು ಮಾಡಲಾಗಿದೆ.

ಹೊಸ ಪೆಟ್ರೋಲ್ ಎಂಜಿನ್‌ನೊಂದಿಗೆ ಇದೇ ತಿಂಗಳು ಬಿಡುಗಡೆಯಾಗಲಿದೆ 2020ರ ಕ್ಯಾಪ್ಚರ್

ಇನ್ನು ಕೆಲವು ಮಾಹಿತಿಗಳ ಪ್ರಕಾರ, ಹೊಸ ಕ್ಯಾಪ್ಚರ್ ಆವೃತ್ತಿಯಲ್ಲಿ ನಿಸ್ಸಾನ್ ಜೊತೆಗೂಡಿ ಅಭಿವೃದ್ದಿಗೊಳಿಸಲಾಗುತ್ತಿರುವ 1.5-ಲೀಟರ್ ಸಾಮಾನ್ಯ ಪೆಟ್ರೋಲ್ ಮತ್ತು 1.3-ಲೀಟರ್ ಟರ್ಬೋ ಪೆಟ್ರೋಲ್ ಎಂಜಿನ್ ಪಡೆದುಕೊಳ್ಳಬಹುದೆಂದು ಅಂದಾಜಿಸಲಾಗಿದೆ. ಒಟ್ಟಿನಲ್ಲಿ ನ್ಯೂ ಜನರೇಷನ್ ಡಸ್ಟರ್ ಮತ್ತು ಕ್ಯಾಪ್ಚರ್ ಫೇಸ್‌ಲಿಫ್ಟ್‌ನಲ್ಲಿ ಡೀಸೆಲ್ ಎಂಜಿನ್ ಆಯ್ಕೆ ತೆಗೆದುಹಾಕಲಾಗಿದ್ದು, ಗ್ರಾಹಕರ ತಮ್ಮ ಬೇಡಿಕೆಯೆಂತೆ ಸಾಮಾನ್ಯ ಪೆಟ್ರೋಲ್ ಅಥವಾ ಟರ್ಬೋ ಪೆಟ್ರೋಲ್ ಖರೀದಿಸಬಹುದು.

ಹೊಸ ಪೆಟ್ರೋಲ್ ಎಂಜಿನ್‌ನೊಂದಿಗೆ ಇದೇ ತಿಂಗಳು ಬಿಡುಗಡೆಯಾಗಲಿದೆ 2020ರ ಕ್ಯಾಪ್ಚರ್

ಮಾಲಿನ್ಯ ಪ್ರಮಾಣವನ್ನು ಪರಿಣಾಮಕಾರಿಗೆ ತಗ್ಗಿಸುವ ಉದ್ದೇಶದಿಂದ ಆಟೋ ಉದ್ಯಮದಲ್ಲಿ ಕೆಲವು ಮಹತ್ವದ ಬದಲಾವಣೆಗಳನ್ನು ತರಲಾಗುತ್ತಿದ್ದು, ಈ ಹಿನ್ನಲೆಯಲ್ಲಿ ರೆನಾಲ್ಟ್ ಸೇರಿದಂತೆ ಬಹುತೇಕ ಕಾರು ಉತ್ಪಾದನಾ ಕಂಪನಿಗಳು ಹೊಸ ನಿಯಮ ಪಾಲನೆ ಮಾಡಲು ಸಾಧ್ಯವಿಲ್ಲದ ಡೀಸೆಲ್ ಎಂಜಿನ್ ಕಾರುಗಳ ಮಾರಾಟವನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸುತ್ತಿವೆ.

ಹೊಸ ಪೆಟ್ರೋಲ್ ಎಂಜಿನ್‌ನೊಂದಿಗೆ ಇದೇ ತಿಂಗಳು ಬಿಡುಗಡೆಯಾಗಲಿದೆ 2020ರ ಕ್ಯಾಪ್ಚರ್

ಡೀಸೆಲ್ ಎಂಜಿನ್ ವಾಹನಗಳು ಮಾಲಿನ್ಯ ಉತ್ಪಾದನೆಯಲ್ಲಿ ಅಗ್ರಸ್ಥಾನದಲ್ಲಿದ್ದು, ಕಡ್ಡಾಯವಾಗಿ ಜಾರಿಗೆ ಬಂದಿರುವ ಬಿಎಸ್-6 (ಭಾರತ್ ಸ್ಟೇಜ್) ನಿಯಮವು ಕಡಿಮೆ ಸಾಮಾರ್ಥ್ಯದ ಡೀಸೆಲ್ ಎಂಜಿನ್ ಉತ್ಪಾದನೆಗೆ ಬ್ರೇಕ್ ಹಾಕಿದೆ. ಒಂದು ವೇಳೆ ಸದ್ಯ ಮಾರುಕಟ್ಟೆಯಲ್ಲಿರುವ ಬಿಎಸ್-4 ಡೀಸೆಲ್ ಎಂಜಿನ್‌ಗಳನ್ನು ಬಿಎಸ್-6 ನಿಯಮಕ್ಕೆ ಉನ್ನತಿಕರಿಸಿದರೂ ಸಹ ಕಾರಿನ ಬೆಲೆಗಳು ಕನಿಷ್ಠ ರೂ. 80 ಸಾವಿರದಿಂದ ರೂ.1.20 ಲಕ್ಷದಷ್ಟು ಹೆಚ್ಚುವರಿ ಬೆಲೆ ಪಡೆದುಕೊಳ್ಳಲಿವೆ.

ಹೊಸ ಪೆಟ್ರೋಲ್ ಎಂಜಿನ್‌ನೊಂದಿಗೆ ಇದೇ ತಿಂಗಳು ಬಿಡುಗಡೆಯಾಗಲಿದೆ 2020ರ ಕ್ಯಾಪ್ಚರ್

ಇದರಿಂದಾಗಿ ಅಗ್ಗದ ಕಾರು ಉನ್ಪತ್ನಗಳನ್ನು ಮಾರಾಟಮಾಡುವ ಕಾರು ಕಂಪನಿಗಳಿಗೆ ಇದು ಬಿಸಿತುಪ್ಪವಾಗಿ ಪರಿಣಮಿಸಲಿದ್ದು, ಕಾರುಗಳ ಬೆಲೆಗಳನ್ನು ಒಂದೇ ಬಾರಿಗೆ ರೂ.80 ಸಾವಿರದಿಂದ ರೂ. 1.20 ಲಕ್ಷದಷ್ಟು ಹೆಚ್ಚಳ ಮಾಡಿದ್ದಲ್ಲಿ ಗ್ರಾಹಕರನ್ನು ಕಳೆದುಕೊಳ್ಳಬೇಕಾದ ಪರಿಸ್ಥಿತಿ ಎದುರಾಗುತ್ತದೆ.

ಹೊಸ ಪೆಟ್ರೋಲ್ ಎಂಜಿನ್‌ನೊಂದಿಗೆ ಇದೇ ತಿಂಗಳು ಬಿಡುಗಡೆಯಾಗಲಿದೆ 2020ರ ಕ್ಯಾಪ್ಚರ್

ಇದಕ್ಕಾಗಿಯೇ ರೆನಾಲ್ಟ್ ಕಂಪನಿಯು 1.5-ಲೀಟರ್ ಸಾಮರ್ಥದ ಡೀಸೆಲ್ ಎಂಜಿನ್ ಆಯ್ಕೆಯನ್ನು ಕೈ ಕೈಬಿಟ್ಟು, ನಿಸ್ಸಾನ್ ಜೊತೆಗೂಡಿ ಹೊಸದಾಗಿ 1.3-ಲೀಟರ್ ಟರ್ಬೋ ಪೆಟ್ರೋಲ್ ಮತ್ತು 1.5-ಲೀಟರ್ ನ್ಯಾಚುರಲ್ ಆಸ್ಪೆರೆಟೆಡ್ ಪೆಟ್ರೋಲ್ ಮತ್ತು ಸಣ್ಣ ಕಾರುಗಳಿಗಾಗಿ 1.0-ಲೀಟರ್ ಟರ್ಬೋ ಪೆಟ್ರೋಲ್ ನಿರ್ಮಾಣ ಮಾಡಿದೆ.

ಹೊಸ ಪೆಟ್ರೋಲ್ ಎಂಜಿನ್‌ನೊಂದಿಗೆ ಇದೇ ತಿಂಗಳು ಬಿಡುಗಡೆಯಾಗಲಿದೆ 2020ರ ಕ್ಯಾಪ್ಚರ್

ಹೊಸದಾಗಿ ಅಭಿವೃದ್ದಿಗೊಳಿಸಲಾದ 1.3-ಲೀಟರ್ ಟರ್ಬೋ ಮತ್ತು 1.5-ಲೀಟರ್ ನ್ಯಾಚುರಲ್ ಆಸ್ಪೆರೆಟೆಡ್ ಪೆಟ್ರೋಲ್ ಎಂಜಿನ್ ಅನ್ನು ನಿಸ್ಸಾನ್ ಫೇಸ್‌ಲಿಫ್ಟ್ ಕಿಕ್ಸ್‌ನಲ್ಲಿ ಅಳವಡಿಸಿ ಬಿಡುಗಡೆ ಮಾಡಲಾಗಿದ್ದು, 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ನೊಂದಿಗೆ 105-ಬಿಎಚ್‌ಪಿ ಮತ್ತು 142-ಎನ್ಎಂ ಟಾರ್ಕ್ ಉತ್ಪಾದನೆ ಮಾಡಲಿದೆ.

ಹೊಸ ಪೆಟ್ರೋಲ್ ಎಂಜಿನ್‌ನೊಂದಿಗೆ ಇದೇ ತಿಂಗಳು ಬಿಡುಗಡೆಯಾಗಲಿದೆ 2020ರ ಕ್ಯಾಪ್ಚರ್

1.3-ಲೀಟರ್ ಎಂಜಿನ್ ಮಾದರಿಯು 7-ಸ್ಟೇಪ್ ಎಂ-ಮೋಡ್ ಆಟೋ ಟ್ರಾನ್ಸ್‌ಮಿಷನ್‌ನೊಂದಿಗೆ 156-ಬಿಎಚ್‌ಪಿ ಮತ್ತು 254-ಎನ್ಎಂ ಟಾರ್ಕ್ ಉತ್ಪಾದನೆ ಮಾಡಲಿದ್ದು, ಕಂಪ್ಯಾಕ್ಟ್ ಎಸ್‌ಯುವಿ ಕಾರುಗಳಲ್ಲೇ ಅತಿ ಬಿಎಚ್‌ಪಿ ಉತ್ಪಾದನಾ ಮಾದರಿಯಾಗಿದೆ.

Article Published On: Tuesday, June 9, 2020, 15:40 [IST]
English summary
Renault Captur BS6 Expected To Launch In India This Month. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+