ಬಿಡುಗಡೆಗೆ ಸಜ್ಜಾದ ಕ್ಯಾಪ್ಚರ್ ಫೇಸ್‌ಲಿಫ್ಟ್ ಆವೃತ್ತಿಯಲ್ಲಿ ಡೀಸೆಲ್ ಎಂಜಿನ್‌ಗೆ ಗುಡ್‌ಬೈ

ರೆನಾಲ್ಟ್ ಕಂಪನಿಯು ಮುಂದಿನ ಕೆಲವೇ ದಿನಗಳಲ್ಲಿ ಕಡ್ಡಾಯವಾಗಿ ಜಾರಿಗೆ ಬರುತ್ತಿರುವ ಬಿಎಸ್-6 ಎಮಿಷನ್‌ಗೆ ಅನುಗುಣವಾಗಿ ತನ್ನ ಕ್ರಾಸ್ ಓವರ್ ಎಸ್‌ಯುವಿ ಮಾದರಿಯಾದ ಕ್ಯಾಪ್ಚರ್ ಫೇಸ್‌ಲಿಫ್ಟ್ ಮಾದರಿಯನ್ನು ಬಿಡುಗಡೆಗೊಳಿಸುತ್ತಿದ್ದು, ಹೊಸ ಕಾರಿನ ಎಂಜಿನ್ ಆಯ್ಕೆ ಸಾಕಷ್ಟು ಹೊಸ ಬದಲಾವಣೆಗಳನ್ನು ತರಲಾಗಿದೆ.

ಬಿಡುಗಡೆಗೆ ಸಜ್ಜಾದ ಕ್ಯಾಪ್ಚರ್ ಫೇಸ್‌ಲಿಫ್ಟ್ ಆವೃತ್ತಿಯಲ್ಲಿ ಡೀಸೆಲ್ ಎಂಜಿನ್‌ಗೆ ಗುಡ್‌ಬೈ

ಬಿಎಸ್-6 ನಿಯಮದಿಂದಾಗಿ ಪ್ರಸ್ತುತ ಮಾರುಕಟ್ಟೆಯಲ್ಲಿರುವ ಹಲವು ಡೀಸೆಲ್ ಎಂಜಿನ್ ಕಾರು ಮಾದರಿಗಳು ಮಾರಾಟದಿಂದ ಸ್ಥಗಿತಗೊಳ್ಳುತ್ತಿದ್ದು, ಇದರಲ್ಲಿ ರೆನಾಲ್ಟ್ ನಿರ್ಮಾಣ ಕಾರು ಮಾದರಿಗಳು ಸಹ ಪ್ರಮುಖವಾಗಿವೆ. ಇದರಲ್ಲಿ ಡಸ್ಟರ್, ಲೊಡ್ಜಿ ಮತ್ತು ಕ್ಯಾಪ್ಚರ್ ಕಾರುಗಳಲ್ಲಿ ಈ ಹಿಂದೆ ನೀಡಲಾಗುತ್ತಿದ್ದ 1.5-ಲೀಟರ್ ಡೀಸೆಲ್ ಎಂಜಿನ್ ಅನ್ನು ಮಾರಾಟದಿಂದ ಕೈಬಿಡಲಾಗಿದ್ದು, ಹೊಸ ತಂತ್ರಜ್ಞಾನ ಪ್ರೇರಿತ 1.3-ಲೀಟರ್ ಟರ್ಬೋ ಪೆಟ್ರೋಲ್ ಎಂಜಿನ್‌ನೊಂದಿಗೆ ಬಿಡುಗಡೆ ಮಾಡಲಾಗುತ್ತಿದೆ.

ಬಿಡುಗಡೆಗೆ ಸಜ್ಜಾದ ಕ್ಯಾಪ್ಚರ್ ಫೇಸ್‌ಲಿಫ್ಟ್ ಆವೃತ್ತಿಯಲ್ಲಿ ಡೀಸೆಲ್ ಎಂಜಿನ್‌ಗೆ ಗುಡ್‌ಬೈ

ಇದರಲ್ಲಿ ಲೋಡ್ಜಿ ಆವೃತ್ತಿಯನ್ನು ಈಗಾಗಲೇ ಸಂಪೂರ್ಣವಾಗಿ ಮಾರಾಟ ಸ್ಥಗಿತಗೊಳಿಸಲಾಗಿದ್ದು, ಇನ್ನೆರಡು ಪ್ರಮುಖ ಕಾರು ಮಾದರಿಗಳಾದ ಡಸ್ಟರ್ ಮತ್ತು ಕ್ಯಾಪ್ಚರ್ ಕಾರು ಮಾತ್ರವೇ ಹೊಸ ಪೆಟ್ರೋಲ್ ಎಂಜಿನ್‌ನೊಂದಿಗೆ ಮಾರಾಟ ಮುಂದುವರಿಸಲಿವೆ.

ಬಿಡುಗಡೆಗೆ ಸಜ್ಜಾದ ಕ್ಯಾಪ್ಚರ್ ಫೇಸ್‌ಲಿಫ್ಟ್ ಆವೃತ್ತಿಯಲ್ಲಿ ಡೀಸೆಲ್ ಎಂಜಿನ್‌ಗೆ ಗುಡ್‌ಬೈ

ಕ್ಯಾಪ್ಚರ್ ಫೇಸ್‌ಲಿಫ್ಟ್ ಈಗಾಗಲೇ ರಷ್ಯಾದಲ್ಲಿ ಅನಾವರಣಗೊಳಿಸಲಾಗಿದ್ದು, ತನ್ನ ಮತ್ತೊಂದು ಜನಪ್ರಿಯ ಆರ್ಕಾನ್ ಕೂಪೆ ಎಸ್‌ಯುವಿ ಪ್ರೇರಣೆಯೊಂದಿಗೆ ಹೊಸ ಕ್ಯಾಪ್ಚರ್ ವಿನ್ಯಾಸಗಳಲ್ಲಿ ಮಹತ್ವದ ಬದಲಾವಣೆಗಳನ್ನು ಮಾಡಲಾಗಿದೆ.

ಬಿಡುಗಡೆಗೆ ಸಜ್ಜಾದ ಕ್ಯಾಪ್ಚರ್ ಫೇಸ್‌ಲಿಫ್ಟ್ ಆವೃತ್ತಿಯಲ್ಲಿ ಡೀಸೆಲ್ ಎಂಜಿನ್‌ಗೆ ಗುಡ್‌ಬೈ

ಇನ್ನು ಕೆಲವು ಮಾಹಿತಿಗಳ ಪ್ರಕಾರ, ಹೊಸ ಕ್ಯಾಪ್ಚರ್ ಆವೃತ್ತಿಯಲ್ಲಿ ನಿಸ್ಸಾನ್ ಜೊತೆಗೂಡಿ ಅಭಿವೃದ್ದಿಗೊಳಿಸಲಾಗುತ್ತಿರುವ 1.5-ಲೀಟರ್ ಹೊಸ ಮಾದರಿಯ ಟರ್ಬೋ ಪೆಟ್ರೋಲ್ ಎಂಜಿನ್ ಪಡೆದುಕೊಳ್ಳಬಹುದೆಂದು ಅಂದಾಜಿಸಲಾಗಿದ್ದು, ಒಟ್ಟಿನಲ್ಲಿ ನ್ಯೂ ಜನರೇಷನ್ ಡಸ್ಟರ್ ಮತ್ತು ಕ್ಯಾಪ್ಚರ್ ಫೇಸ್‌ಲಿಫ್ಟ್‌ನಲ್ಲಿ ಡೀಸೆಲ್ ಎಂಜಿನ್ ಆಯ್ಕೆ ತೆಗೆದುಹಾಕಲಾಗಿದ್ದು, ಸಣ್ಣ ಗಾತ್ರದ ಕಾರುಗಳಲ್ಲಿ 1.0-ಲೀಟರ್ ಟರ್ಬೋ ಪೆಟ್ರೋಲ್ ಆವೃತ್ತಿಯು ಮಾರಾಟಗೊಳ್ಳಲಿದೆ.

ಬಿಡುಗಡೆಗೆ ಸಜ್ಜಾದ ಕ್ಯಾಪ್ಚರ್ ಫೇಸ್‌ಲಿಫ್ಟ್ ಆವೃತ್ತಿಯಲ್ಲಿ ಡೀಸೆಲ್ ಎಂಜಿನ್‌ಗೆ ಗುಡ್‌ಬೈ

ಮಾಲಿನ್ಯ ಪ್ರಮಾಣವನ್ನು ಪರಿಣಾಮಕಾರಿಗೆ ತಗ್ಗಿಸುವ ಉದ್ದೇಶದಿಂದ ಆಟೋ ಉದ್ಯಮದಲ್ಲಿ ಕೆಲವು ಮಹತ್ವದ ಬದಲಾವಣೆಗಳನ್ನು ತರಲಾಗುತ್ತಿದ್ದು, ಈ ಹಿನ್ನಲೆಯಲ್ಲಿ ರೆನಾಲ್ಟ್ ಸೇರಿದಂತೆ ಬಹುತೇಕ ಕಾರು ಉತ್ಪಾದನಾ ಸಂಸ್ಥೆಗಳು 2020ರ ಮಾರ್ಚ್ ಅಂತ್ಯಕ್ಕೆ ಡೀಸೆಲ್ ಎಂಜಿನ್ ಕಾರುಗಳ ಮಾರಾಟವನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸುತ್ತಿವೆ.

ಬಿಡುಗಡೆಗೆ ಸಜ್ಜಾದ ಕ್ಯಾಪ್ಚರ್ ಫೇಸ್‌ಲಿಫ್ಟ್ ಆವೃತ್ತಿಯಲ್ಲಿ ಡೀಸೆಲ್ ಎಂಜಿನ್‌ಗೆ ಗುಡ್‌ಬೈ

ಡೀಸೆಲ್ ಎಂಜಿನ್ ವಾಹನಗಳು ಮಾಲಿನ್ಯ ಉತ್ಪಾದನೆಯಲ್ಲಿ ಅಗ್ರಸ್ಥಾನದಲ್ಲಿದ್ದು, ಜಾರಿಗೆ ಬರಲಿರುವ ಬಿಎಸ್-6 (ಭಾರತ್ ಸ್ಟೇಜ್) ನಿಯಮವು ಕಡಿಮೆ ಸಾಮಾರ್ಥ್ಯದ ಡೀಸೆಲ್ ಎಂಜಿನ್ ಉತ್ಪಾದನೆಗೆ ಬ್ರೇಕ್ ಹಾಕಲಿದೆ.

ಬಿಡುಗಡೆಗೆ ಸಜ್ಜಾದ ಕ್ಯಾಪ್ಚರ್ ಫೇಸ್‌ಲಿಫ್ಟ್ ಆವೃತ್ತಿಯಲ್ಲಿ ಡೀಸೆಲ್ ಎಂಜಿನ್‌ಗೆ ಗುಡ್‌ಬೈ

ಒಂದು ವೇಳೆ ಸದ್ಯ ಮಾರುಕಟ್ಟೆಯಲ್ಲಿರುವ ಬಿಎಸ್-4 ಡೀಸೆಲ್ ಎಂಜಿನ್‌ಗಳನ್ನು ಬಿಎಸ್-6 ನಿಯಮಕ್ಕೆ ಉನ್ನತಿಕರಿಸಿದರೂ ಸಹ ಕಾರಿನ ಬೆಲೆಗಳು ಕನಿಷ್ಠ ರೂ. 80 ಸಾವಿರದಿಂದ ರೂ.1.20 ಲಕ್ಷದಷ್ಟು ಹೆಚ್ಚುವರಿ ಬೆಲೆ ಪಡೆದುಕೊಳ್ಳಲಿವೆ.

ಬಿಡುಗಡೆಗೆ ಸಜ್ಜಾದ ಕ್ಯಾಪ್ಚರ್ ಫೇಸ್‌ಲಿಫ್ಟ್ ಆವೃತ್ತಿಯಲ್ಲಿ ಡೀಸೆಲ್ ಎಂಜಿನ್‌ಗೆ ಗುಡ್‌ಬೈ

ಇದರಿಂದಾಗಿ ಅಗ್ಗದ ಕಾರು ಉನ್ಪತ್ನಗಳನ್ನು ಮಾರಾಟಮಾಡುವ ಕಾರು ಸಂಸ್ಥೆಗಳಿಗೆ ಇದು ಬಿಸಿತುಪ್ಪವಾಗಿ ಪರಿಣಮಿಸಲಿದ್ದು, ಕಾರುಗಳ ಬೆಲೆಗಳನ್ನು ಒಂದೇ ಬಾರಿಗೆ ರೂ.80 ಸಾವಿರದಿಂದ ರೂ. 1.20 ಲಕ್ಷದಷ್ಟು ಹೆಚ್ಚಳ ಮಾಡಿದ್ದಲ್ಲಿ ಗ್ರಾಹಕರನ್ನು ಕಳೆದುಕೊಳ್ಳಬೇಕಾದ ಪರಿಸ್ಥಿತಿ ಎದುರಾಗುತ್ತದೆ.

ಬಿಡುಗಡೆಗೆ ಸಜ್ಜಾದ ಕ್ಯಾಪ್ಚರ್ ಫೇಸ್‌ಲಿಫ್ಟ್ ಆವೃತ್ತಿಯಲ್ಲಿ ಡೀಸೆಲ್ ಎಂಜಿನ್‌ಗೆ ಗುಡ್‌ಬೈ

ಇದಕ್ಕಾಗಿಯೇ ರೆನಾಲ್ಟ್ ಸಂಸ್ಥೆಯು 1.5-ಲೀಟರ್ ಸಾಮರ್ಥದ ಡೀಸೆಲ್ ಎಂಜಿನ್ ಆಯ್ಕೆಯನ್ನು ಕೈ ಕೈಬಿಟ್ಟು, ಹೊಸದಾಗಿ 1.0-ಲೀಟರ್ ಟರ್ಬೋ ಪೆಟ್ರೋಲ್ ಮತ್ತು 1.3-ಲೀಟರ್ ಟರ್ಬೋ ಪೆಟ್ರೋಲ್ ಮತ್ತು 1.5-ಲೀಟರ್ ಇನ್-ಲೈನ್ ಫೋರ್ ಸಿಲಿಂಡರ್ ಪೆಟ್ರೋಲ್ ಎಂಜಿನ್ ಮಾದರಿಯನ್ನು ಬಿಡುಗಡೆ ಮಾಡುವ ಯೋಜನೆ ಹೊಂದಲಾಗಿದೆ.

Most Read Articles

Kannada
English summary
Renault Captur facelift debuts in Russia ahead of India launch. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X