ಜನಪ್ರಿಯ ರೆನಾಲ್ಟ್ ಕಾರುಗಳ ಮೇಲೆ ಭರ್ಜರಿ ರಿಯಾಯಿತಿ
ರೆನಾಲ್ಟ್ ಇಂಡಿಯಾ ಕಂಪನಿಯು ಭಾರತೀಯ ಮಾರುಕಟ್ಟೆಯಲ್ಲಿ ತಮ್ಮ ಮೂರು ಜನಪ್ರಿಯ ಮಾದರಿಗಳಿಗೆ ಭರ್ಜರಿ ರಿಯಾಯಿತಿ ಮತ್ತು ವಿಶೇಷ ಆಫರ್ ಗಳನ್ನು ಘೋಷಿಸಿದೆ. ರೆನಾಲ್ಟ್ ಇಂಡಿಯಾ ತಮ್ಮ ಕ್ವಿಡ್, ಟ್ರೈಬರ್ ಮತ್ತು ಡಸ್ಟರ್ ಮಾದರಿಗಳಿಗೆ ರೂ.60,000 ಗಳವರೆಗೆ ರಿಯಾಯಿತಿಯನ್ನು ಘೋಷಿಸಿದ್ದಾರೆ.

ಎಂಟ್ರಿ ಲೆವೆಲ್ ಕ್ವಿಡ್ ಕಾರಿಗೆ ಒಟ್ಟು ರೂ.35,000 ಗಳವರೆಗೆ ರಿಯಾಯಿತಿಯನ್ನು ಘೋಷಿಸಿದೆ. ಇದರಲ್ಲಿ ನಗದು ರಿಯಾಯಿತಿ ಮತ್ತು ಲಾಯಲ್ಟಿ ಬೋನಸ್ ಅನ್ನು ರೂ.10,000ಗಳವರಗೆ ನೀಡಿದೆ. ಇದರೊಂದಿಗೆ ರೂ.15,000 ಗಳವರೆಗೆ ಎಕ್ಸ್‌ಚೆಂಜ್ ಬೋನಸ್ ಅನ್ನು ಒಳಗೊಂಡಿದೆ. ಇನ್ನು ರೆನಾಲ್ಟ್ ಕ್ವಿಡ್ ಕಾರಿಗೆ ರೂ.4,000 ಗಳವರೆಗೆ ಕಾರ್ಪೋರೆಟ್ ಬೋನಸ್ ಮತ್ತು ಗ್ರಾಮೀಣ ಭಾಗದಲ್ಲಿ ರೈತರಿಗೆ, ಬಡವರ್ಗದ ಜನರಿಗೆ ರೂ.4,000 ಗಳವರೆಗೆ ರಿಯಾಯಿತಿಯನ್ನು ನೀಡಿದೆ.

ಅಲ್ಲದೇ ರೆನಾಲ್ಟ್ ಕ್ವಿಡ್ ಮಾದರಿಯಲ್ಲಿ ರೂ.7,000 ಗಳವರೆಗೆ ಕಾರ್ಪೋರೆಟ್ ಬೋನಸ್ ಮತ್ತು ಗ್ರಾಮೀಣ ಭಾಗದಲ್ಲಿ ರೈತರಿಗೆ, ಬಡವರ್ಗದ ಜನರಿಗೆ ರೂ.10,000 ಗಳವರೆಗೆ ರಿಯಾಯಿತಿಯನ್ನು ನೀಡಿದೆ.
MOST READ: ಕರೋನಾ ಭೀತಿಯಿಂದ ಪಾತಾಳಕ್ಕೆ ಕುಸಿತ ಮಾರುತಿ ಸುಜುಕಿ ಕಾರುಗಳ ಮಾರಾಟ

ಈ ಕ್ವಿಡ್ ಹ್ಯಾಚ್‍ಬ್ಯಾಕ್‍ನಲ್ಲಿ ಎರಡೂ ಪೆಟ್ರೋಲ್ ಎಂಜಿನ್ ಆಯ್ಕೆಗಳನ್ನು ನೀಡಲಾಗಿದೆ. ಇದರಲ್ಲಿ 0.8 ಲೀಟರ್ ಮೂರು ಸಿಲಿಂಡರ್ ಪೆಟ್ರೋಲ್ ಎಂಜಿನ್ 54 ಬಿಹೆಚ್‍ಪಿ ಪವರ್ ಮತ್ತು 72 ಎನ್‍ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್‍ನೊಂದಿಗೆ 5 ಸ್ಪೀಡ್ ಆಟೋಮ್ಯಾಟಿಕ್ ಮತ್ತು ಮ್ಯಾನುವಲ್ ಗೇರ್‍ಬಾಕ್ಸ್ ಅನ್ನು ಅಳವಡಿಸಲಾಗಿದೆ.

ರೆನಾಲ್ಟ್ ಟ್ರೈಬರ್ ಎಂಪಿವಿಗೆ ರೂ.30,000 ಗಳವರೆಗೆ ರಿಯಾಯಿತಿಯನ್ನು ನೀಡಿದೆ. ಇದರಲ್ಲಿ ನಗದು ರಿಯಾಯಿತಿ ಒಳಪಡುವುದಿಲ್ಲ. ಇನ್ನು ರೂ.20,000 ಗಳವರೆಗೆ ಎಕ್ಸ್‌ಚೆಂಜ್ ಬೋನಸ್ ಮತ್ತು ರೂ.10,000ಗಳವರೆಗೆ ಲಾಯಲ್ಟಿ ಬೋನಸ್ ಅನ್ನು ಹೊಂದಿದೆ.
MOST READ: ಮರ್ಸಿಡಿಸ್ ಬೆಂಝ್ ಜಿಎಲ್ಇ ಎಸ್‍ಯುವಿಯ ಎರಡು ಹೊಸ ರೂಪಾಂತರಗಳು ಬಿಡುಗಡೆ

ರೆನಾಲ್ಟ್ ಡಸ್ಟರ್ ಕಾರಿಗೆ ಒಟ್ಟು ರೂ.60,000ಗಳವರೆಗೆ ರಿಯಾಯಿತಿಯನ್ನು ಘೋಷಿಸಿದ. ಇದರಲ್ಲಿ ರೂ.15,000 ಗಳವರೆಗೆ ನಗದು ರಿಯಾಯಿತಿಯನ್ನು ನೀಡಿದೆ. ಇನ್ನು ರೂ.25 ಸಾವಿರಗಳವರೆಗೆ ಎಕ್ಸ್‌ಚೆಂಜ್ ಬೋನಸ್ ಅನ್ನು ಘೋಷಿಸಿದ್ದಾರೆ.

ಇದರೊಂದಿಗೆ ರೆನಾಲ್ಟ್ ಡಸ್ಟರ್ ಕಾರಿಗೆ ರೂ.20,000 ಗಳವರೆಗೆ ಕಾರ್ಪೋರೆಟ್ ಬೋನಸ್ ಮತ್ತು ಗ್ರಾಮೀಣ ಭಾಗದ ಜನರಿಗೆ ರೂ.10,000 ಗಳವರೆಗೆ ರಿಯಾಯಿತಿಯನ್ನು ನೀಡಿದೆ.
MOST READ: ಭರ್ಜರಿಯಾಗಿ ಮಾರಾಟವಾಯ್ತು ಫೋಕ್ಸ್‌ವ್ಯಾಗನ್ ಟಿ-ರಾಕ್ ಎಸ್‍ಯುವಿ

ಭರ್ಜರಿ ರಿಯಾಯಿತಿ ಮತ್ತು ವಿಶೇಷ ಆಫರ್ ಗಳ ಹೊರತಾಗಿ ಈ ಮೇಲಿನ ಮೂರು ರೆನಾಲ್ಟ್ ಮಾದರಿಗಳಿಗೆ 8.99% ನಷ್ಟು ವಿಶೇಷ ಬಡ್ಡಿದರ ಮತ್ತು ಪ್ರಾರಂಭಿಕ ಮೂರು ತಿಂಗಳ ಇಎಂಐ ಕಟ್ಟುವ ಅವಶ್ಯಕತೆ ಇಲ್ಲ. ಈ ಎಲ್ಲಾ ರಿಯಾಯಿಗಳು ಈ ಜೂನ್ ತಿಂಗಳಲ್ಲಿ ಮಾತ್ರ ಲಭ್ಯವಿರಲಿದೆ.

ಜೂನ್ ತಿಂಗಳಲ್ಲಿ ಹಲವಾರು ಕಾರು ತಯಾರಕ ಕಂಪನಿಗಳು ತಮ್ಮ ಆಯ್ದ ಮಾದರಿಗಳಿಗೆ ರಿಯಾಯಿತಿಯನ್ನು ಘೋಷಿಸಿದೆ. ಈ ಪಟ್ಟಿಯಲ್ಲಿ ರೆನಾಲ್ಟ್ ಕೂಡ ಸೇರಿದೆ. ರೆನಾಲ್ಟ್ ಇಂಡಿಯಾ ಕಂಪನಿಯು ಗ್ರಾಹಕರನ್ನು ಆಕರ್ಷಿಸಲು ತನ್ನ ಮೂರು ಜನಪ್ರಿಯಾ ಮಾದರಿಗಳಿಗೆ ಭರ್ಜರಿ ರಿಯಾಯಿತಿ ಮತ್ತು ವಿಶೇಷ ಆಫರ್ ಗಳನ್ನು ಘೋಷಿಸಿದೆ.


Click it and Unblock the Notifications








