Just In
Don't Miss!
- News
ಹುಣಸೋಡು ಸ್ಪೋಟದ ಸುತ್ತ ಒಂದು ನೋಟ: ಸಿಎಂ ಯಡಿಯೂರಪ್ಪ ಭೇಟಿ
- Sports
'ಭಾರತೀಯರಿಗೆ ಹೋಲಿಸಿದರೆ ಯುವ ಆಸೀಸ್ ಇನ್ನೂ ಪ್ರೈಮರಿ ಶಾಲೆಯಲ್ಲಿದೆ'
- Lifestyle
ಕೊಲೆಸ್ಟ್ರಾಲ್ ಹೆಚ್ಚಾಗಿದೆಯೇ? ಈ ಆಹಾರ ಸೇವಿಸಿ
- Education
RITES Limited Recruitment 2021: ವಿವಿಧ 9 ಹುದ್ದೆಗಳಿಗೆ ಅರ್ಜಿ ಆಹ್ವಾನ
- Movies
ದುಬಾರಿ ವಿವಾಹ; ವರುಣ್ ಧವನ್ ಮದುವೆ ನಡೆಯುತ್ತಿರುವ ಐಷಾರಾಮಿ ಹೋಟೆಲ್ ಗೆ ಇಷ್ಟೊಂದು ಖರ್ಚು ಮಾಡುತ್ತಿದ್ದಾರಾ?
- Finance
ಬಜೆಟ್ 2021: ಜ. 23ರಂದು ಹಲ್ವಾ ಕಾರ್ಯಕ್ರಮ- ಇದೇನು, ಎತ್ತ?
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ವಿವಿಧ ಕಾರು ಮಾದರಿಗಳ ಖರೀದಿ ಮೇಲೆ ಇಯಲ್ ಎಂಡ್ ಆಫರ್ ಘೋಷಿಸಿದ ರೆನಾಲ್ಟ್
ದಸರಾ ಮತ್ತು ದೀಪಾವಳಿ ಸಂಭ್ರಮಾಚರಣೆಯ ವೇಳೆ ನೀರಿಕ್ಷೆಗೂ ಮೀರಿ ಹೊಸ ವಾಹನಗಳನ್ನು ಮಾರಾಟ ಮಾಡಿರುವ ವಿವಿಧ ಆಟೋ ಉತ್ಪಾದನಾ ಕಂಪನಿಗಳು ಹಬ್ಬದ ಋುತು ಮುಗಿದ ಬಳಿಕವು ವಿವಿಧ ಆಫರ್‌ಗಳನ್ನು ಮುಂದುವರಿಸಿದ್ದು, ರೆನಾಲ್ಟ್ ಕಂಪನಿಯು ಕೂಡಾ ವಿವಿಧ ಮಾದರಿಗಳ ಭರ್ಜರಿ ಆಫರ್ ನೀಡುತ್ತಿದೆ.

ಲಾಕ್‌ಡೌನ್ ವಿಧಿಸಿದ್ದ ಅವಧಿಯಿಂದಲೂ ಹೊಸ ವಾಹನಗಳ ಮಾರಾಟದಲ್ಲಿ ನಷ್ಟ ಅನುಭವಿಸುತ್ತಲೇ ಬಂದಿದ್ದ ಆಟೋ ಉತ್ಪಾದನಾ ಕಂಪನಿಗಳಿಗೆ ದಸರಾ ಮತ್ತು ದೀಪಾವಳಿ ಸಂಭ್ರಮವು ನೀರಿಕ್ಷೆಗೂ ಮೀರಿ ಆದಾಯ ತಂದುಕೊಟ್ಟಿದ್ದು, ಕಳೆದ ಎರಡು ತಿಂಗಳಿ ಹೊಸ ವಾಹನಗಳ ಮಾರಾಟವು ಕಳೆದ ವರ್ಷಕ್ಕಿಂತಲೂ ಹೆಚ್ಚಿನ ಪ್ರಮಾಣದಲ್ಲಿ ಏರಿಕೆಯಾಗಿದೆ. ರೆಲಾಲ್ಟ್ ಕಂಪನಿಯು ಕೂಡಾ ಅಕ್ಟೋಬರ್ ಮತ್ತು ನವೆಂಬರ್ ಅವಧಿಯಲ್ಲಿನ ಕಾರು ಮಾರಾಟದಲ್ಲಿ ಭಾರೀ ಪ್ರಮಾಣದ ಬೆಳವಣಿಗೆ ಸಾಧಿಸಿದ್ದು, ಇದೀದ ವರ್ಷಾಂತ್ಯದ ವೇಳೆ ಕಾರು ಖರೀದಿಸುವ ಗ್ರಾಹಕರಿಗೆ ವಿವಿಧ ಆಫರ್ ನೀಡುತ್ತಿದೆ.

ದಸರಾ ಮತ್ತು ದೀಪಾವಳಿ ಪ್ರಯುಕ್ತ ಘೋಷಣೆ ಮಾಡಲಾಗಿದ್ದ ವಿವಿಧ ಡಿಸ್ಕೌಂಟ್‌ಗಳು ಮತ್ತು ಸರಳ ಸಾಲಸೌಲಭ್ಯಗಳು ಹೊಸ ವಾಹನ ಮಾರಾಟ ಸುಧಾರಣೆಗೆ ಪ್ರಮುಖ ಕಾರಣವಾಗಿದ್ದು, ಇದೀಗ ವರ್ಷಾಂತ್ಯದ ವೇಳೆ ಕಾರು ಖರೀದಿದಾರರಿಗೂ ಈ ಹಿಂದಿನ ಆಫರ್‌ಗಳನ್ನು ಮುಂದುವರಿಸಿದೆ.

ರೆನಾಲ್ಟ್ ಕಂಪನಿಯು ಪ್ರಮುಖ ಕಾರು ಮಾದರಿಗಳ ಮೇಲೆ ಗರಿಷ್ಠ ಮಟ್ಟದ ಆಫರ್ ಘೋಷಣೆ ಮಾಡಿದ್ದು, ಹೊಸ ಆಫರ್‌ಗಳಲ್ಲಿ ಎಕ್ಸ್‌ಚೆಂಜ್, ಕ್ಯಾಶ್ ಬ್ಯಾಕ್, ಕಾರ್ಪೊರೇಟ್ ಡಿಸ್ಕೌಂಟ್ ನೀಡಲಾಗುತ್ತಿದೆ. ಪ್ರಮುಖವಾಗಿ ಬಹುತೇಕ ಕಾರು ಮಾದರಿಗಳ ಮೇಲೆ ಜೀರೋ ಬಡ್ಡಿದರದಲ್ಲಿ ಸಾಲಸೌಲಭ್ಯ ಒದಗಿಸುತ್ತಿದ್ದು, ಹೊಸ ಆಫರ್‌ಗಳು ಈ ತಿಂಗಳಾಂತ್ಯವರೆಗೆ ಲಭ್ಯವಿರಲಿವೆ.

ಹೊಸ ವಾಹನಗಳ ಮಾರಾಟಕ್ಕೆ ಪೂರಕವಾಗಿ ಬಹುತೇಕ ಆಟೋ ಕಂಪನಿಗಳು ಹಲವಾರು ಆಫರ್ ನೀಡುತ್ತಿರುವುದಲ್ಲದೆ ಸರಳ ಸಾಲ ಸೌಲಭ್ಯಗಳನ್ನು ಒದಗಿಸುತ್ತಿರುವುದು ಕಾರು ಖರೀದಿಗೆ ಪ್ರಮುಖ ಆಕರ್ಷಣೆಯಾಗಿದ್ದು, ರೆನಾಲ್ಟ್ ಇಂಡಿಯಾ ಕೂಡಾ ವಿವಿಧ ಆಫರ್‌ಗಳನ್ನು ಘೋಷಣೆ ಮಾಡಿದೆ. ಹೊಸ ಆಫರ್‌ಗಳಲ್ಲಿ ಕ್ವಿಡ್ ಮೇಲೆ ಕನಿಷ್ಠ ಮತ್ತು ಡಸ್ಟರ್ ಕಾರಿನ ಮೇಲೆ ಗರಿಷ್ಠ ಆಫರ್ ಒದಗಿಸಿದ್ದು, ಕಾರು ಖರೀದಿಯಲ್ಲಿರುವ ಗ್ರಾಹಕರಿಗೆ ಜೀರೋ ಬಡ್ಡಿದರವು ಪ್ರಮುಖ ಆಕರ್ಷಣೆಯಾಗಲಿದೆ.

ಎಂಟ್ರಿ ಲೆವಲ್ ಕಾರು ಮಾದರಿಯಾದ ಕ್ವಿಡ್ ಕಾರಿನ ಮೇಲೆ ರೂ. 45 ಸಾವಿರದಷ್ಟು ಆಫರ್ ಲಭ್ಯವಿದ್ದು, ರೂ.45 ಸಾವಿರದಲ್ಲಿ ರೂ.20 ಸಾವಿರ ಕ್ಯಾಶ್ ಡಿಸ್ಕೌಂಟ್, ರೂ.15 ಸಾವಿರ ಎಕ್ಸ್‌ಚೆಂಜ್ ಬೋನಸ್ ಮತ್ತು ರೂ.10 ಸಾವಿರ ಲೊಯಾಲಿಟಿ ಆಫರ್ ನೀಡಲಾಗುತ್ತಿದೆ.

ಇದಲ್ಲದೆ ಕ್ವಿಡ್ ಕಾರು ಖರೀದಿಯ ಮೇಲೆ ರೂ. 9 ಸಾವಿರದಷ್ಟು ಕಾರ್ಪೊರೇಟ್ ಡಿಸ್ಕೌಂಟ್ ಮತ್ತು ರೂ. 5 ಸಾವಿರದಷ್ಟು ಗ್ರಾಮ ಪಂಚಾಯ್ತಿ ಸದಸ್ಯರಿಗೆ ಹೆಚ್ಚುವರಿಯಾಗಿ ಆಫರ್ ನೀಡಲಾಗುತ್ತಿದ್ದು, ಹೊಸ ಕಾರು ಖರೀದಿಗಾಗಿ ಶೂನ್ಯ ಬಡ್ಡಿದರದಲ್ಲಿ ಒಂದು ವರ್ಷದ ಅವಧಿಗೆ ರೂ. 1.30 ಲಕ್ಷ ಸಾಲ ಸೌಲಭ್ಯಗಳನ್ನು ಪಡೆದುಕೊಳ್ಳಬಹುದು.

ಟ್ರೈಬರ್ ಮಿನಿ ಎಂಪಿವಿ
ಬಜೆಟ್ ಬೆಲೆಯ ಎಂಪಿವಿ ಮಾದರಿಯಲ್ಲಿ ಸದ್ಯ ಭಾರೀ ಬೇಡಿಕೆ ಹೊಂದಿರುವ ಟ್ರೈಬರ್ ಕಾರಿನ ಖರೀದಿ ಮೇಲೂ ಕೂಡಾ ಆಕರ್ಷಕ ಆಫರ್‌ಗಳು ಲಭ್ಯವಿದ್ದು, ಗರಿಷ್ಠ ರೂ.50 ಸಾವಿರದಷ್ಟು ಡಿಸ್ಕೌಂಟ್ ನೀಡಲಾಗುತ್ತಿದೆ. ಇದರಲ್ಲಿ ರೂ.20 ಸಾವಿರ ಎಕ್ಸ್‌ಚೆಂಜ್ ಬೋನಸ್, ರೂ.20 ಸಾವಿರ ಕ್ಯಾಶ್ ಡಿಸ್ಕೌಂಟ್ ಮತ್ತು ರೂ.10 ಸಾವಿರದಷ್ಟು ಲೊಯಾಲಿಟಿ ಬೋನಸ್‌ನೊಂದಿಗೆ ರೂ.5 ಸಾವಿರ ಪಂಚಾಯ್ತಿ ಸದಸ್ಯರಿಗಾಗಿ ಹೆಚ್ಚುವರಿ ಕ್ಯಾಶ್ ಡಿಸ್ಕೌಂಟ್ ನೀಡುತ್ತಿದೆ.
MOST READ: ಬಿಡುಗಡೆಗೆ ಸಿದ್ದವಾದ ಹೋಂಡಾದ ಮೊದಲ ಎಲೆಕ್ಟ್ರಿಕ್ ಕಾರು

ಇನ್ನುಳಿದ ರೂ. 9 ಸಾವಿರ ಕಾರ್ಪೊರೇಟ್ ಡಿಸ್ಕೌಂಟ್ ಆಗಿ ಪಡೆಯಬಹುದುಗಾಗಿದ್ದು, ಹೊಸ ಕಾರನ್ನು ಖರೀದಿಸಲು ಶೂನ್ಯ ಬಡ್ಡಿದರದಲ್ಲಿ ಒಂದು ವರ್ಷದ ಅವಧಿಗಾಗಿ ರೂ. 2.31 ಲಕ್ಷ ಸಾಲ ಪಡೆದುಕೊಳ್ಳಬಹುದಾಗಿದೆ.

ಡಸ್ಟರ್ ಎಸ್‌ಯುವಿ
ರೆನಾಲ್ಟ್ ಕಂಪನಿಯು ಡಸ್ಟರ್ ಕಾರು ಖರೀದಿಯ ಮೇಲೆ ರೂ. 50 ಸಾವಿರ ತನಕ ಡಿಸ್ಕೌಂಟ್ ಘೋಷಣೆ ಮಾಡಿದ್ದು, ಹೊಸ ಕಾರಿನ ಟರ್ಬೋ ಆವೃತ್ತಿಯನ್ನು ಖರೀದಿ ಗ್ರಾಹಕರಿಗೆ ರೂ. 70 ಸಾವಿರ ತನಕ ಡಿಸ್ಕೌಂಟ್ ಲಭ್ಯವಿದೆ.
MOST READ: ಭಾರತದಲ್ಲಿ ಎರಡು ಹೊಸ ಎಸ್‌ಯುವಿ ಕಾರು ಮಾದರಿಗಳನ್ನು ಬಿಡುಗಡೆ ಮಾಡಲಿದೆ ಹ್ಯುಂಡೈ

ಹೊಸ ಆಫರ್‌ನಲ್ಲಿ ರೂ.30 ಸಾವಿರ ಎಕ್ಸ್‌ಚೆಂಜ್ ಆಫರ್, ರೂ.20 ಸಾವಿರ ಲೊಯಾಲಿಟಿ ಆಫರ್ ಮತ್ತು ಟರ್ಬೋ ಮಾದರಿಯ ಮೇಲೆ ಹೆಚ್ಚುವರಿಯಾಗಿ ರೂ. 20 ಸಾವಿರ ಕ್ಯಾಶ್ ಡಿಸ್ಕೌಂಟ್ ಪಡೆಯಬಹುದಾಗಿದ್ದು, ಡಸ್ಟರ್ ಕಾರು ಖರೀದಿಸುವ ಗ್ರಾಹಕರಿಗೆ ಕಂಪನಿಯು ವಿಶೇಷ ಕೊಡುಗೆಯಾಗಿ ಇಸಿ ಕೇರ್ ಪ್ಯಾಕೇಜ್ ವಾರಂಟಿಯನ್ನು ಸಹ ನೀಡುತ್ತಿದೆ.