ಡಸ್ಟರ್ ಪೆಟ್ರೋಲ್ ಟರ್ಬೋ ವರ್ಷನ್ ಟೀಸರ್ ಬಿಡುಗಡೆ ಮಾಡಿದ ರೆನಾಲ್ಟ್
ರೆನಾಲ್ಟ್ ಇಂಡಿಯಾ ಕಂಪನಿಯು ಶೀಘ್ರದಲ್ಲೇ ತನ್ನ ಬಹುನೀರಿಕ್ಷಿತ ಡಸ್ಟರ್ ಪೆಟ್ರೋಲ್ ಟರ್ಬೋ ಆವೃತ್ತಿಯನ್ನು ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆ ಮಾಡುವ ಯೋಜನೆಯಲ್ಲಿದ್ದು, ಹೊಸ ಕಾರಿನ ಎಂಜಿನ್ ಮಾಹಿತಿ ಬಿಡುಗಡೆ ನಂತರ ಮೊದಲ ಟೀಸರ್ ಚಿತ್ರವನ್ನು ಬಿಡುಗಡೆ ಮಾಡಿದೆ.

2020ರ ಎಪ್ರಿಲ್ 1ರಿಂದ ಜಾರಿಗೆ ಕಡ್ಡಾಯವಾಗಿ ಬಂದಿರುವ ಬಿಎಸ್-6 ಎಮಿಷನ್ ನಿಯಮ ಅನುಸಾರವಾಗಿ ಬಹುತೇಕ ಕಾರು ಉತ್ಪಾದನಾ ಕಂಪನಿಗಳು ಹೊಸ ಮಾದರಿಯ ಎಂಜಿನ್ ಆಯ್ಕೆಗಳನ್ನು ಪರಿಚಯಿಸಿದ್ದು, ರೆನಾಲ್ಟ್ ಕೂಡಾ ತನ್ನ ಪ್ರಮುಖ ಕಾರುಗಳ ಎಂಜಿನ್ ಆಯ್ಕೆಯಲ್ಲಿ ಭಾರೀ ಬದಲಾವಣೆ ತಂದಿದೆ. ತನ್ನ ಜನಪ್ರಿಯ ಕಾರು ಮಾದರಿಗಳಲ್ಲಿ ಡೀಸೆಲ್ ಎಂಜಿನ್ ಮಾರಾಟವನ್ನು ಸ್ಥಗಿತಗೊಳಿಸಿರವ ರೆನಾಲ್ಟ್ ಕಂಪನಿಯು ಕೇವಲ ಪೆಟ್ರೋಲ್ ಮಾದರಿಗಳನ್ನು ಮಾತ್ರವೇ ಮಾರಾಟ ಮಾಡುತ್ತಿದೆ.

ರೆನಾಲ್ಟ್ ಕಂಪನಿಯು ಕಂಪನಿಯು ಈಗಾಗಲೇ ಡಸ್ಟರ್ ಮಾದರಿಯಲ್ಲಿ ಬಿಎಸ್-6 ಎಂಜಿನ್ ಪ್ರೇರಿತ 1.5-ಲೀಟರ್ ಸಾಮಾನ್ಯ ಪೆಟ್ರೋಲ್ ಎಂಜಿನ್ ಮಾರಾಟ ಮಾಡುತ್ತಿದ್ದು, ಇದೀಗ 1.3-ಲೀಟರ್ ಸಾಮರ್ಥ್ಯದ ಟರ್ಬೋ ಪೆಟ್ರೋಲ್ ಮಾದರಿಯನ್ನು ಬಿಡುಗಡೆ ಮಾಡುತ್ತಿದೆ.

1.3-ಲೀಟರ್ ಪೆಟ್ರೋಲ್ ಟರ್ಬೋ ಎಂಜಿನ್ ಅನ್ನು ಡೈಮ್ಲರ್ ಮತ್ತು ರೆನಾಲ್ಟ್-ನಿಸ್ಸಾನ್-ಮಿಟ್ಸುಬಿಷಿ ಜಂಟಿಯಾಗಿ ಅಭಿವೃದ್ಧಿಪಡಿಸಿದ್ದು, ಇದನ್ನು ಮೊದಲ ಬಾರಿಗೆ 2017ರ ಡಿಸೆಂಬರ್‌ನಲ್ಲಿ ಪರಿಚಯಿಸಲಾಯಿತು. ಸದ್ಯ ಈ ಎಂಜಿನ್ ಅನ್ನು ಮರ್ಸಿಡಿಸ್ ಬೆಂಝ್, ರೆನಾಲ್ಟ್, ನಿಸ್ಸಾನ್ ಮತ್ತು ಡಾಸಿಯಾ ಬ್ರ್ಯಾಂಡ್ ಗಳು ವಿವಿಧ ಕಾರು ಮಾದರಿಗಳಲ್ಲಿ ಬಳಸುತ್ತಿದ್ದು, 6-ಸ್ಪೀಡ್ ಮ್ಯಾನುವಲ್ ಜೊತೆಗೆ 7-ಸ್ಪೀಡ್ ಡಿಸಿಟಿ ಆಟೋ ಗೇರ್‌ಬಾಕ್ಸ್ ಪಡೆದುಕೊಳ್ಳಲಿದೆ.

ಈ ಮೂಲಕ ಹೊಸ ಎಂಜಿನ್ ಮಾದರಿಯು 156-ಬಿಎಚ್‌ಪಿ ಮತ್ತು 245-ಎನ್ಎಂ ಟಾರ್ಕ್ ಉತ್ಪಾದನೆ ಮಾಡಲಿದ್ದು, ಅತ್ಯುತ್ತಮ ಪರ್ಫಾಮೆನ್ಸ್ ಜೊತೆಗೆ ಇಂಧನ ದಕ್ಷತೆಯಲ್ಲೂ ಗಮನಸೆಳೆಯಲಿದೆ.
MOST READ: ಪ್ರತಿ ಚಾರ್ಜ್‌ಗೆ 480 ಕಿ.ಮೀ ಮೈಲೇಜ್ ನೀಡುವ ಎಲೆಕ್ಟ್ರಿಕ್ ಎಸ್‌ಯುವಿ ಬಿಡುಗಡೆ ಮಾಡಲಿದೆ ನಿಸ್ಸಾನ್

ಇನ್ನು ಹೊಸ ಕಾರಿನ ಎಂಜಿನ್ ಕಾರ್ಯಕ್ಷಮತೆ ಹೆಚ್ಚಿಸಲು ಜಿಟಿ-ಆರ್ ಮಾದರಿಯಲ್ಲಿ ಎಂಜಿನ್ ಕಾಟಿಂಗ್ ತಂತ್ರಜ್ಞಾನವು ಕೂಡಾ ಹೊಸ 1.3-ಲೀಟರ್ ಟರ್ಬೋ ಪೆಟ್ರೋಲ್ ಮಾದರಿಯಲ್ಲೂ ಜೋಡಣೆ ಮಾಡುವ ಸಾಧ್ಯತೆಗಳಿದ್ದು, ಸಾಮಾನ್ಯ ಮಾದರಿಗಿಂತ ಟರ್ಬೋ ಮಾದರಿಯು ಕೆಲವು ಸ್ಪೋರ್ಟಿ ವಿನ್ಯಾಸಗಳನ್ನು ಸಹ ಪಡೆದುಕೊಳ್ಳಲಿದೆ.

ಸಾಮಾನ್ಯ ಮಾದರಿಯಾದ ಡಸ್ಟರ್ ಮಾದರಿಯು 1.5-ಲೀಟರ್ ಪೆಟ್ರೋಲ್ ಎಂಜಿನ್ ಮಾದರಿಯು 105-ಬಿಎಚ್‌ಪಿ ಮತ್ತು 142-ಎನ್ಎಂ ಟಾರ್ಕ್ ಉತ್ಪಾದನಾ ಗುಣಹೊಂದಿದ್ದು, ಸಾಮಾನ್ಯ ಮಾದರಿಗಿಂತ ಟರ್ಬೋ ಆವೃತ್ತಿಯು ಹಲವು ಪ್ರೀಮಿಯಂ ಫೀಚರ್ಸ್‌ನೊಂದಿಗೆ ಬೆಲೆಯಲ್ಲೂ ತುಸು ದುಬಾರಿಯಾಗಿರಲಿದೆ.
MOST READ: ವಾಹನ ಖರೀದಿಯನ್ನು ಸುಲಭವಾಗಿಸಲಿದೆ ಅಗಸ್ಟ್ 1ರಿಂದ ಜಾರಿಗೆ ಬಂದಿರುವ ಹೊಸ ವಿಮಾ ನೀತಿ..

ಸದ್ಯ ಮಾರುಕಟ್ಟೆಯಲ್ಲಿ ಖರೀದಿಗೆ ಲಭ್ಯವಿರುವ ಡಸ್ಟರ್ ಬಿಎಸ್-6 ಆವೃತ್ತಿಯು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 8.49 ಲಕ್ಷದಿಂದ ಟಾಪ್ ಎಂಡ್ ಮಾದರಿಯ 9.99 ಲಕ್ಷ ಬೆಲೆ ಹೊಂದಿದ್ದು, ಇದೀಗ ಬಿಡುಗಡೆಯಾಗಲಿರುವ ಟರ್ಬೋ ಮಾದರಿಯು ಆರಂಭಿಕವಾಗಿ ರೂ. 11 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ.13 ಲಕ್ಷ ಬೆಲೆಯೊಂದಿಗೆ ಖರೀದಿಗೆ ಲಭ್ಯವಾಗುವ ನೀರಿಕ್ಷೆಯಿದೆ.


Click it and Unblock the Notifications








