ಆಟೋ ಎಕ್ಸ್‌ಪೋ 2020: ಅನಾವರಣಗೊಳ್ಳಲಿದೆ ರೆನಾಲ್ಟ್ ಹೊಸ ಕಂಪ್ಯಾಕ್ಟ್ ಎಸ್‌ಯುವಿ..!

ಮುಂದಿನ ತಿಂಗಳು ಫೆಬ್ರುವರಿ 7ರಿಂದ ನೋಯ್ಡಾದಲ್ಲಿ ನಡೆಯಲಿರುವ 2020ರ ದೆಹಲಿ ಆಟೋ ಎಕ್ಸ್‌ಪೋದಲ್ಲಿ ರೆನಾಲ್ಟ್ ನಿರ್ಮಾಣದ ಹೊಸ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯಾದ ಕಿಗರ್ ಅನಾವರಣಗೊಳ್ಳುವುದು ಬಹುತೇಕ ಖಚಿತವಾಗಿದ್ದು, ಹೊಸ ಕಾರಿನ ಅಧಿಕೃತ ಟೀಸರ್ ಕೂಡಾ ಬಹಿರಂಗವಾಗಿದೆ.

ಆಟೋ ಎಕ್ಸ್‌ಪೋ 2020: ಅನಾವರಣಗೊಳ್ಳಲಿದೆ ರೆನಾಲ್ಟ್ ಹೊಸ ಕಂಪ್ಯಾಕ್ಟ್ ಎಸ್‌ಯುವಿ..!

ಟ್ರೈಬರ್ ಮಿನಿ ಎಂಪಿವಿ, ಡಸ್ಟರ್ ಫೇಸ್‌ಲಿಫ್ಟ್ ಮತ್ತು ಕ್ವಿಡ್ ಫೇಸ್‌ಲಿಫ್ಟ್ ಕಾರುಗಳ ಮಾರಾಟದಲ್ಲಿ ಮುನ್ನಡೆ ಕಾಯ್ದುಕೊಂಡಿರುವ ರೆನಾಲ್ಟ್ ಸಂಸ್ಥೆಯು ಸದ್ಯದಲ್ಲೇ ಮತ್ತಷ್ಟು ಹೊಸ ಕಾರುಗಳನ್ನು ಪರಿಚಯಿಸುವ ಇರಾದೆಯಲ್ಲಿದ್ದು, ವಿನೂತನ ವಿನ್ಯಾಸದ ಕಿಗರ್ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯನ್ನು ಬಿಡುಗಡೆಗಾಗಿ ಅಂತಿಮ ಹಂತದ ಸಿದ್ದತೆ ನಡೆಸಿದೆ. ಬಿಡುಗಡೆಗೂ ಮುನ್ನ ಹೊಸ ಕಾರನ್ನು ಆಟೋ ಎಕ್ಸ್‌ಪೋದಲ್ಲಿ ಪ್ರದರ್ಶನಗೊಳಿಸಲಿರುವ ರೆನಾಲ್ಟ್ ಸಂಸ್ಥೆಯು ಟೀಸರ್ ಮೂಲಕ ಗ್ರಾಹಕರ ಕುತೂಹಲಕ್ಕೆ ಕಾರಣವಾಗಿದೆ.

ಆಟೋ ಎಕ್ಸ್‌ಪೋ 2020: ಅನಾವರಣಗೊಳ್ಳಲಿದೆ ರೆನಾಲ್ಟ್ ಹೊಸ ಕಂಪ್ಯಾಕ್ಟ್ ಎಸ್‌ಯುವಿ..!

ಏಪ್ರಿಲ್ 1ರಿಂದ ಜಾರಿಗೆ ಬರಲಿರುವ ಬಿಎಸ್-6 ನಿಯಮದಂತೆ ಪ್ರಸ್ತುತ ಮಾರುಕಟ್ಟೆಯಲ್ಲಿರುವ ಕಾರುಗಳನ್ನು ಉನ್ನತೀಕರಿಸುತ್ತಿರುವ ರೆನಾಲ್ಟ್ ಸಂಸ್ಥೆಯು ಡೀಸೆಲ್ ಕಾರುಗಳ ಮಾರಾಟ ಬಂದ್ ಮಾಡುವ ಮಹತ್ವದ ನಿರ್ಧಾರವನ್ನು ಪ್ರಕಟಿಸಿದ್ದು, ಪೆಟ್ರೋಲ್ ಎಂಜಿನ್ ಕಾರುಗಳ ಮೇಲೆ ಹೆಚ್ಚಿನ ಒತ್ತು ನೀಡುತ್ತಿದೆ.

ಆಟೋ ಎಕ್ಸ್‌ಪೋ 2020: ಅನಾವರಣಗೊಳ್ಳಲಿದೆ ರೆನಾಲ್ಟ್ ಹೊಸ ಕಂಪ್ಯಾಕ್ಟ್ ಎಸ್‌ಯುವಿ..!

ಹೀಗಾಗಿ ರೆನಾಲ್ಟ್ ಬಿಡುಗಡೆ ಮಾಡಲಿರುವ ಹೊಸ ಪೆಟ್ರೋಲ್ ಕಾರುಗಳಲ್ಲಿ ಪ್ರಸ್ತುತ ಮಾರುಕಟ್ಟೆಯಲ್ಲಿರುವ ಕಾರುಗಳಷ್ಟೇ ಅಲ್ಲದೇ ಇನ್ನು ಕೆಲವು ಹೊಸ ಮಾದರಿಗಳು ಸಹ ಗ್ರಾಹಕರನ್ನು ಸೆಳೆಯಲಿದ್ದು, ಪ್ರಸ್ತುತ ಮಾರುಕಟ್ಟೆಯಲ್ಲಿನ ಬೇಡಿಕೆಗೆ ಅನುಗುಣವಾಗಿ ಕೆಲವು ಹೊಸ ಕಾರು ಮಾದರಿಗಳನ್ನು ಬಿಡುಗಡೆಗೊಳಿಸುವ ಯೋಜನೆಯಲ್ಲಿದೆ.

ಟ್ರೈಬರ್ ಆವೃತ್ತಿಯ ಮೂಲಕ ಎಂಪಿವಿ ವಿಭಾಗದಲ್ಲಿ ಭಾರೀ ಬೇಡಿಕೆ ಪಡೆದುಕೊಳ್ಳುತ್ತಿರುವ ರೆನಾಲ್ಟ್ ಸಂಸ್ಥೆಯು ಇದೀಗ ಕಂಪ್ಯಾಕ್ಟ್ ಎಸ್‌ಯುವಿ ವೈಶಿಷ್ಟ್ಯತೆಯ ಕಿಗರ್ ಕಾರು ಮಾದರಿಯ ಮೂಲಕ ಭಾರತದಲ್ಲಿ ಮತ್ತಷ್ಟು ಸದ್ದು ಮಾಡುವ ನೀರಿಕ್ಷೆಯಲ್ಲಿದೆ. ಹ್ಯುಂಡೈ ವೆನ್ಯೂ ಮತ್ತು ಮಾರುತಿ ಸುಜುಕಿ ಬ್ರೆಝಾ ಕಾರುಗಳಿಗೆ ಪೈಪೋಟಿಯಾಗಿ ಹೊಸ ಕಂಪ್ಯಾಕ್ಟ್ ಎಸ್‌ಯುವಿ ಕಾರು ರಸ್ತೆಗಿಳಿಯಲಿದ್ದು, ಹೆಚ್‌ಬಿಸಿ ಕೋಡ್‌ನೆಮ್ ಆಧಾರದ ಮೇಲೆ ಹೊಸ ಕಾರನ್ನು ಸದ್ಯ ಟೆಸ್ಟಿಂಗ್ ಮಾಡಲಾಗುತ್ತಿದೆ.

ಆಟೋ ಎಕ್ಸ್‌ಪೋ 2020: ಅನಾವರಣಗೊಳ್ಳಲಿದೆ ರೆನಾಲ್ಟ್ ಹೊಸ ಕಂಪ್ಯಾಕ್ಟ್ ಎಸ್‌ಯುವಿ..!

ಪ್ರಸ್ತುತ ಮಾರುಕಟ್ಟೆಯಲ್ಲಿರುವ ಡಸ್ಟರ್ ಕಾರಿಗಿಂತಲೂ ತುಸು ಸಣ್ಣ ಗಾತ್ರವನ್ನು ಹೊಂದಲಿರುವ ಕಿಗರ್ ಕಾರು ನಗರ ಪ್ರದೇಶದಲ್ಲಿನ ಸಂಚಾರಕ್ಕೆ ಸೂಕ್ತ ಆಯ್ಕೆಯಾಗಲಿದ್ದು, ಕೈಗೆಟುಕುವ ಬೆಲೆಯೊಂದಿಗೆ ಮಧ್ಯಮ ವರ್ಗದ ಗ್ರಾಹಕರ ಗಮನಸೆಳೆಯಲಿದೆ.

ಆಟೋ ಎಕ್ಸ್‌ಪೋ 2020: ಅನಾವರಣಗೊಳ್ಳಲಿದೆ ರೆನಾಲ್ಟ್ ಹೊಸ ಕಂಪ್ಯಾಕ್ಟ್ ಎಸ್‌ಯುವಿ..!

ಗ್ರಾಹಕರ ಬೇಡಿಕೆಯಲ್ಲಿ ಕಂಪ್ಯಾಕ್ಟ್ ಎಸ್‌ಯುವಿ ಕಾರುಗಳು ಸದ್ಯ ಭಾರೀ ಪ್ರಮಾಣದ ಬೇಡಿಕೆ ಗಿಟ್ಟಿಸಿಕೊಳ್ಳುವಲ್ಲಿ ಯಶಸ್ವಿಯಾಗುತ್ತಿದ್ದು, ಇದೇ ಕಾರಣಕ್ಕಾಗಿ ಕಂಪ್ಯಾಕ್ಟ್ ಎಸ್‌ಯುವಿ ಕಾರುಗಳ ವಿಭಾಗದ ಮೇಲೆ ಹೆಚ್ಚಿನ ಗಮನಹರಿಸಿರುವ ರೆನಾಲ್ಟ್ ಸಂಸ್ಥೆಯು ಕಿಗರ್ ಬಿಡುಗಡೆಗೆ ಸಜ್ಜಾಗಿದೆ.

ಆಟೋ ಎಕ್ಸ್‌ಪೋ 2020: ಅನಾವರಣಗೊಳ್ಳಲಿದೆ ರೆನಾಲ್ಟ್ ಹೊಸ ಕಂಪ್ಯಾಕ್ಟ್ ಎಸ್‌ಯುವಿ..!

ಪ್ರಸ್ತುತ ಮಾರುಕಟ್ಟೆಯಲ್ಲಿರುವ ಇತರೆ ಕಂಪ್ಯಾಕ್ಟ್ ಎಸ್‌ಯುವಿ ಕಾರುಗಳಿಂತಲೂ ಕಿಗರ್ ಕಡಿಮೆ ಬೆಲೆಯಲ್ಲಿ ಬಿಡುಗಡೆಯಾಗುವ ಸುಳಿವು ನೀಡಿದ್ದು, ಮಾರುತಿ ಸುಜುಕಿ ವಿಟಾರಾ ಬ್ರೆಝಾ, ಮಹೀಂದ್ರಾ ಎಕ್ಸ್‌ಯುವಿ300, ನಿಸ್ಸಾನ್ ಕಿಕ್ಸ್ ಕಾರುಗಳಿಗೆ ಪೈಪೋಟಿ ನೀಡಲಿರುವ ಹೊಸ ಕಾರ ಐದು ಆಸನ ಮಾದರಿಯಲ್ಲಿ ಬಿಡುಗಡೆಯಾಗಲಿದೆ.

ಆಟೋ ಎಕ್ಸ್‌ಪೋ 2020: ಅನಾವರಣಗೊಳ್ಳಲಿದೆ ರೆನಾಲ್ಟ್ ಹೊಸ ಕಂಪ್ಯಾಕ್ಟ್ ಎಸ್‌ಯುವಿ..!

ಎಂಜಿನ್ ಸಾಮರ್ಥ್ಯ

ಬಿಡುಗಡೆಯಾಗುತ್ತಿರುವ ಹೊಸ ಕಿಗರ್ ಕಾರು ಟ್ರೈಬರ್ ಹೊಸ ಕಾರಿನಲ್ಲಿ ಹೊಸದಾಗಿ 1.0-ಲೀಟರ್ ಟರ್ಬೋ ಪೆಟ್ರೋಲ್ ಎಂಜಿನ್ ಪಡೆದುಕೊಂಡಿದ್ದು, ಆಕರ್ಷಕ ನೋಟ ಮತ್ತು ಬಲಿಷ್ಠ ಬಾಡಿ ಕಿಟ್ ಜೋಡಣೆಯೊಂದಿಗೆ ರಸ್ತೆಗಿಳಿಯಲಿದೆ.

ಆಟೋ ಎಕ್ಸ್‌ಪೋ 2020: ಅನಾವರಣಗೊಳ್ಳಲಿದೆ ರೆನಾಲ್ಟ್ ಹೊಸ ಕಂಪ್ಯಾಕ್ಟ್ ಎಸ್‌ಯುವಿ..!

ಜೊತೆಗೆ ಹೊಸ ಕಾರು ಪೆಟ್ರೋಲ್ ಎಂಜಿನ್‌ನಲ್ಲಿ ಮಾತ್ರವಲ್ಲದೇ ಎಲೆಕ್ಟ್ರಿಕ್ ಆವೃತ್ತಿಯಲ್ಲೂ ಕೂಡಾ ಖರೀದಿಗೆ ಲಭ್ಯವಾಗುವ ಸಾಧ್ಯತೆಗಳಿದ್ದು, ಹಲವು ಪ್ರೀಮಿಯಂ ಸೌಲಭ್ಯಗಳನ್ನು ಹೊಂದುವುದು ಬಹುತೇಕ ಖಚಿತ ಎನ್ನಲಾಗಿದೆ.

ಆಟೋ ಎಕ್ಸ್‌ಪೋ 2020: ಅನಾವರಣಗೊಳ್ಳಲಿದೆ ರೆನಾಲ್ಟ್ ಹೊಸ ಕಂಪ್ಯಾಕ್ಟ್ ಎಸ್‌ಯುವಿ..!

ಬಿಡುಗಡೆಯ ಅವಧಿ ಮತ್ತು ಬೆಲೆ(ಅಂದಾಜು)

ರೆನಾಲ್ಟ್ ಸಂಸ್ಥೆಯು ಹೊಸ ಕಾರನ್ನು ದೆಹಲಿ ಎಕ್ಸ್‌ಪೋದಲ್ಲಿ ಪ್ರದರ್ಶನಗೊಳಿಸಿದ ನಂತರ ಮತ್ತಷ್ಟು ರೋಡ್ ಟೆಸ್ಟಿಂಗ್ ಪ್ರಕ್ರಿಯೆಗಳನ್ನು ಕೈಗೊಳ್ಳಲಿದ್ದು, ಏಪ್ರಿಲ್ ಅಥವಾ ಮೇ ಹೊತ್ತಿಗೆ ಬಿಡುಗಡೆಗೊಳಿಸುವ ಸಾಧ್ಯತೆಗಳಿವೆ. ಹಾಗೆಯೇ ಹೊಸ ಕಾರಿನ ಬೆಲೆಯು ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 6 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ.8 ಲಕ್ಷ ಬೆಲೆಯೊಂದಿಗೆ ಖರೀದಿಗೆ ಲಭ್ಯವಾಗುವ ಸಾಧ್ಯತೆಗಳಿವೆ.

Most Read Articles

Kannada
English summary
Renault HBC compact SUV teaser debut at auto expo. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Drivespark sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Drivespark website. However, you can change your cookie settings at any time. Learn more