ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮಕ್ಕಾಗಿ ಭರ್ಜರಿ ಡಿಸ್ಕೌಂಟ್ ಘೋಷಣೆ ಮಾಡಿದ ರೆನಾಲ್ಟ್

ಕರೋನಾ ವೈರಸ್‌ನಿಂದಾಗಿ ಕಾರು ಮಾರಾಟದಲ್ಲಿ ಹಿನ್ನಡೆ ಅನುಭವಿಸಿರುವ ಆಟೋ ಕಂಪನಿಗಳು ಇದೀಗ ನಿಧಾನವಾಗಿ ಚೇತರಿಸಿಕೊಳ್ಳುತ್ತಿದ್ದು, ವಾಹನ ಮಾರಾಟ ಹೆಚ್ಚಿಸುವ ನಿಟ್ಟಿನಲ್ಲಿ ವಿವಿಧ ಆಫರ್‌ಗಳು ಮತ್ತು ಸರಳ ಸಾಲ ಸೌಲಭ್ಯಗಳ ಮೂಲಕ ಗ್ರಾಹಕರನ್ನು ಸೆಳೆಯುತ್ತಿವೆ.

ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮಕ್ಕಾಗಿ ಭರ್ಜರಿ ಡಿಸ್ಕೌಂಟ್ ಘೋಷಣೆ ಮಾಡಿದ ರೆನಾಲ್ಟ್

ಮೇ ಮತ್ತು ಜೂನ್ ಅವಧಿಗಿಂತ ಜುಲೈ ಅವಧಿಯಲ್ಲಿನ ವಾಹನ ಮಾರಾಟವು ಸಾಕಷ್ಟು ಸುಧಾರಣೆ ಕಂಡಿದ್ದು, ಅಗಸ್ಟ್‌ನಲ್ಲಿ ಮತ್ತಷ್ಟು ಹೆಚ್ಚುವ ನೀರಿಕ್ಷೆಗಳಿವೆ. ಹೀಗಾಗಿ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ವಿವಿಧ ಆಫರ್‌ಗಳನ್ನು ಘೋಷಣೆ ಮಾಡುತ್ತಿರುವ ಆಟೋ ಕಂಪನಿಗಳು ಮಾರಾಟ ಪ್ರಮಾಣವನ್ನು ಸರಿದಾಗಿ ತರಲು ಯತ್ನದಲ್ಲಿದ್ದು, ರೆನಾಲ್ಟ್ ಕೂಡಾ ಪ್ರಮುಖ ಕಾರುಗಳ ಖರೀದಿ ಮೇಲೆ ಆಫರ್ ಘೋಷಣೆ ಮಾಡಿದೆ.

ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮಕ್ಕಾಗಿ ಭರ್ಜರಿ ಡಿಸ್ಕೌಂಟ್ ಘೋಷಣೆ ಮಾಡಿದ ರೆನಾಲ್ಟ್

ಹೊಸ ಆಫರ್‌ಗಳು ಒಟ್ಟು ರೂ. 80 ಸಾವಿರ ಮೌಲ್ಯ ಹೊಂದಿದ್ದು, ಹೊಸ ಆಫರ್‌ಗಳಲ್ಲಿ ಇಎಂಐ ಪಾವತಿ ಪ್ರಮಾಣದಲ್ಲಿ ವಿನಾಯ್ತಿ, ಎಕ್ಸ್‌ಚೆಂಜ್, ಲೊಯಾಲಿಟಿ ಆಫರ್, ಕಾರ್ಪೊರೇಟ್ ಡಿಸ್ಕೌಂಟ್ ಮತ್ತು ಆಕ್ಸೆಸರಿಸ್‌ಗಳ ಮೇಲೆ ಆಫರ್ ಲಭ್ಯವಿದೆ.

ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮಕ್ಕಾಗಿ ಭರ್ಜರಿ ಡಿಸ್ಕೌಂಟ್ ಘೋಷಣೆ ಮಾಡಿದ ರೆನಾಲ್ಟ್

ರೆನಾಲ್ಟ್ ಕಂಪನಿಯು ಸದ್ಯ ಮಾರಾಟ ಮಾಡುತ್ತಿರುವ ಕ್ವಿಡ್, ಟ್ರೈಬರ್ ಮತ್ತು ಡಸ್ಟರ್ ಕಾರುಗಳ ಮೇಲೆ ಹೊಸ ಆಫರ್‌ಗಳು ಲಭ್ಯವಿದ್ದು, ಆಯ್ದ ಕಾರು ಮಾದರಿಗಳ ಮೇಲೆ "ಬೈ ನೌ ಪೇ ಇನ್ 2021" ಆಯ್ಕೆ ನೀಡುತ್ತಿರುವುದು ಪ್ರಮುಖ ಆಕರ್ಷಣೆಯಾಗಿದೆ.

ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮಕ್ಕಾಗಿ ಭರ್ಜರಿ ಡಿಸ್ಕೌಂಟ್ ಘೋಷಣೆ ಮಾಡಿದ ರೆನಾಲ್ಟ್

ಕ್ವಿಡ್ ಹ್ಯಾಚ್‌ಬ್ಯಾಕ್

ಎಂಟ್ರಿ ಲೆವಲ್ ಕಾರು ಮಾದರಿಯಾದ ಕ್ವಿಡ್ ಕಾರಿನ ಮೇಲೆ ರೂ. 40 ಸಾವಿರದಷ್ಟು ಆಫರ್ ಲಭ್ಯವಿದ್ದು, ಗ್ರಾಮೀಣ ಭಾಗದ ಗ್ರಾಹಕರಿಗೆ ಹೆಚ್ಚುವರಿಯಾಗಿ ರೂ.7 ಸಾವಿರ ಸ್ಪೆಷಲ್ ಆಫರ್ ಲಭ್ಯವಿದೆ. ಹಾಗೆಯೇ ಕ್ವಿಡ್ ಕಾರಿನ ಮೇಲೆ "ಬೈ ನೌ ಪೇ ಇನ್ 2021" ಅನ್ವಯವಾಗಲಿದ್ದು, ಹೊಸ ಕಾರನ್ನು ಇದೀಗ ಖರೀದಿಸಿ 2021ರಿಂದ ಇಎಂಐ ಮರುಪಾವತಿ ಮಾಡಲು ಅವಕಾಶ ನೀಡಲಾಗಿದೆ.

ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮಕ್ಕಾಗಿ ಭರ್ಜರಿ ಡಿಸ್ಕೌಂಟ್ ಘೋಷಣೆ ಮಾಡಿದ ರೆನಾಲ್ಟ್

ಇದಲ್ಲದೇ ಹೊಸ ಕಾರಿನ ಮೇಲೆ ಶೇ. 6.95 ಬಡ್ಡಿ ದರದಲ್ಲಿ ಶೇ.95 ರಷ್ಟು ಆನ್ ರೋಡ್ ಸಾಲ ಸೌಲಭ್ಯವನ್ನು ಸಹ ಒದಗಿಸಲಿದ್ದು, ಲಾಕ್ ಡೌನ್ ಸಂದರ್ಭದಲ್ಲಿ ಕಾರು ಖರೀದಿ ಸಾಧ್ಯವಾಗದೆ ಮುಂದೂಡಿರುವ ಗ್ರಾಹಕರಿಗೆ ಇದು ಸಹಕಾರಿಯಾಗಿದೆ.

ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮಕ್ಕಾಗಿ ಭರ್ಜರಿ ಡಿಸ್ಕೌಂಟ್ ಘೋಷಣೆ ಮಾಡಿದ ರೆನಾಲ್ಟ್

ಟ್ರೈಬರ್ ಮಿನಿ ಎಂಪಿವಿ

ಬಜೆಟ್ ಬೆಲೆಯ ಎಂಪಿವಿ ಮಾದರಿಯಲ್ಲಿ ಸದ್ಯ ಭಾರೀ ಬೇಡಿಕೆ ಹೊಂದಿರುವ ಟ್ರೈಬರ್ ಕಾರಿನ ಖರೀದಿ ಮೇಲೂ ಆಕರ್ಷಕ ಆಫರ್‌ಗಳು ಲಭ್ಯವಿದ್ದು, ವಿವಿಧ ರಾಜ್ಯಗಳಿಗೆ ಅನುಗುಣವಾಗಿ ರೂ.30 ಸಾವಿರದಿಂದ ರೂ.40 ಸಾವಿರದಷ್ಟು ಡಿಸ್ಕೌಂಟ್ ನೀಡಲಾಗುತ್ತಿದೆ.

MOST READ: ಪ್ರತಿ ಚಾರ್ಜ್‌ಗೆ 480 ಕಿ.ಮೀ ಮೈಲೇಜ್ ನೀಡುವ ಎಲೆಕ್ಟ್ರಿಕ್ ಎಸ್‌ಯುವಿ ಬಿಡುಗಡೆ ಮಾಡಲಿದೆ ನಿಸ್ಸಾನ್

ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮಕ್ಕಾಗಿ ಭರ್ಜರಿ ಡಿಸ್ಕೌಂಟ್ ಘೋಷಣೆ ಮಾಡಿದ ರೆನಾಲ್ಟ್

ಟ್ರೈಬರ್ ಕಾರಿನ ಖರೀದಿ ಮೇಲೂ "ಬೈ ನೌ ಪೇ ಇನ್ 2021" ಘೋಷಣೆ ಮಾಡಿರುವ ರೆನಾಲ್ಟ್ ಕಂಪನಿಯು ಆಕರ್ಷಕ ಬಡ್ಡಿದರದಲ್ಲಿ ಸಾಲಸೌಲಭ್ಯ ಒದಗಿಸಲಿದ್ದು, ಸೀಮಿತ ಅವಧಿಗೆ ಮಾತ್ರ ಹೊಸ ಆಫರ್ ಲಭ್ಯವಿರಲಿವೆ.

ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮಕ್ಕಾಗಿ ಭರ್ಜರಿ ಡಿಸ್ಕೌಂಟ್ ಘೋಷಣೆ ಮಾಡಿದ ರೆನಾಲ್ಟ್

ಡಸ್ಟರ್ ಎಸ್‌ಯುವಿ

ರೆನಾಲ್ಟ್ ಕಂಪನಿಯು ಡಸ್ಟರ್ ಕಾರು ಖರೀದಿ ಮೇಲೆ ವಿವಿಧ ರಾಜ್ಯಗಳಿಗೆ ಅನುಗುಣವಾಗಿ ರೂ. 70 ಸಾವಿರದಿಂದ ರೂ. 80 ಸಾವಿರದಷ್ಟು ಡಿಸ್ಕೌಂಟ್ ಘೋಷಣೆ ಮಾಡಿದ್ದು, ಹೊಸ ಆಫರ್‌ನಲ್ಲಿ ಕಾರ್ಪೊರೇಟ್ ಡಿಸ್ಕೌಂಟ್, ಎಕ್ಸ್‌ಚೆಂಜ್, ಲೊಯಾಲಿಟಿ ಆಫರ್‌ಗಳು ಒಳಗೊಂಡಿವೆ.

MOST READ: ವಾಹನ ಖರೀದಿಯನ್ನು ಸುಲಭವಾಗಿಸಲಿದೆ ಅಗಸ್ಟ್ 1ರಿಂದ ಜಾರಿಗೆ ಬಂದಿರುವ ಹೊಸ ವಿಮಾ ನೀತಿ..

ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮಕ್ಕಾಗಿ ಭರ್ಜರಿ ಡಿಸ್ಕೌಂಟ್ ಘೋಷಣೆ ಮಾಡಿದ ರೆನಾಲ್ಟ್

ಡಸ್ಟರ್ ಎಸ್‌ಯುವಿ ಕಾರು ಸದ್ಯ 1.5-ಲೀಟರ್ ಪೆಟ್ರೋಲ್ ಎಂಜಿನ್‌ನೊಂದಿಗೆ ಮಾತ್ರ ಮಾರಾಟಕ್ಕೆ ಲಭ್ಯವಿದ್ದು, ಬಿಎಸ್-6 ನಿಯಮ ಜಾರಿ ನಂತರ ಡೀಸೆಲ್ ಎಂಜಿನ್ ಮಾರಾಟವನ್ನು ಸ್ಥಗಿತಗೊಳಿಸಲಾಗಿದೆ. ಡೀಸೆಲ್ ಎಂಜಿನ್‌ಗೆ ಬದಲಾಗಿ ಪರ್ಫಾಮೆನ್ಸ್ ಪ್ರಿಯರಿಗಾಗಿ 1.3-ಲೀಟರ್ ಟರ್ಬೋ ಪೆಟ್ರೋಲ್ ಮಾದರಿಯನ್ನು ಬಿಡುಗಡೆ ಮಾಡಲಾಗುತ್ತಿದ್ದು, ಡಸ್ಟರ್ ಹೊಸ ವೆರಿಯೆಂಟ್ ಈ ತಿಂಗಳಾಂತ್ಯಕ್ಕೆ ಬಿಡುಗಡೆಯಾಗುವ ಸಾಧ್ಯತೆಗಳಿವೆ.

Most Read Articles

Kannada
English summary
Renault Car Discounts Around Independence Day. Read in Kannada.
Story first published: Saturday, August 8, 2020, 13:32 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X