Just In
Don't Miss!
- News
ಪೆಟ್ರೋಲ್, ಡೀಸೆಲ್ ದರ ಮತ್ತಷ್ಟು ತುಟ್ಟಿ: ಜನವರಿ 19ರ ದರ ಹೀಗಿದೆ
- Finance
"ಐಡಿಎಫ್ ಸಿ ಫಸ್ಟ್ ಬ್ಯಾಂಕ್ ಕ್ರೆಡಿಟ್ ಕಾರ್ಡ್ ಮೇಲಿನ ನಗದು ಸಾಲಕ್ಕೆ ಬಡ್ಡಿ ಇಲ್ಲ"
- Sports
ಭಾರತ vs ಆಸ್ಟ್ರೇಲಿಯಾ: 91 ರನ್ ಗಳಿಸಿ ವಿಕೆಟ್ ಒಪ್ಪಿಸಿದ ಶುಬ್ಮನ್ ಗಿಲ್
- Lifestyle
ಕೂದಲು ಬೇಗನೆ ಬೆಳ್ಳಗಾಗುವುದು: ಇದು ನಿಮ್ಮ ದೇಹದ ಕುರಿತು ಏನು ಸೂಚಿಸುತ್ತದೆ?
- Education
Indian Forest Service Recruitment 2021: 70 ಡಿಐಜಿಎಫ್/ಎಐಜಿಎಫ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Movies
ಚಿತ್ರೀಕರಣ ವೇಳೆ ಅಸ್ವಸ್ಥ: ನಟಿ ಅಲಿಯಾ ಭಟ್ ಆಸ್ಪತ್ರೆಗೆ ದಾಖಲು
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಕಿಗರ್ ಕಂಪ್ಯಾಕ್ಟ್ ಎಸ್‌ಯುವಿ ಮೂಲಕ ಹೊಸ ಸಂಚಲನ ಸೃಷ್ಠಿಸಲಿದೆ ರೆನಾಲ್ಟ್
ರೆನಾಲ್ಟ್ ಕಂಪನಿಯು ಭಾರತದಲ್ಲಿ ಕಾರು ಮಾರಾಟ ಆರಂಭಿಸಿದ ನಂತರ ಹಲವಾರು ವಾಹನ ಉತ್ಪನ್ನಗಳನ್ನು ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆ ಮಾಡಿದ್ದು, ಕೆಲವೇ ಕೆಲವು ಕಾರು ಮಾದರಿಗಳು ಮಾತ್ರ ಗ್ರಾಹಕರನ್ನು ಸೆಳೆಯುವಲ್ಲಿ ಯಶಸ್ವಿಯಾಗಿವೆ.

ಕೈಗೆಟುಕುವ ಬೆಲೆಗಳಲ್ಲಿ ವಿವಿಧ ಕಾರು ಮಾದರಿಗಳ ಮಾರಾಟವನ್ನು ಹೊಂದಿದ್ದರೂ ಕೂಡಾ ಪ್ರತಿಸ್ಪರ್ಧಿ ಕಾರು ಮಾದರಿಗಳ ಅಬ್ಬರದ ಮುಂದೆ ನೆಲೆ ಕಾಣಲು ಯತ್ನಿಸುತ್ತಿದ್ದ ರೆನಾಲ್ಟ್ ಕಂಪನಿಗೆ ಕಳೆದ ವರ್ಷದ ಮಧ್ಯಂತರದಲ್ಲಿ ಬಿಡುಗಡೆಯಾದ ಟ್ರೈಬರ್ ಮರುಜೀವ ನೀಡಿದೆ ತಪ್ಪಾಗುವುದಿಲ್ಲ. ರೆನಾಲ್ಟ್ ಕಂಪನಿಯ ಕಾರು ಮಾರಾಟದಲ್ಲಿ ಟ್ರೈಬರ್ ಬಿಡುಗಡೆಗೂ ಮುನ್ನ ಡಸ್ಟರ್ ಎಸ್‌ಯುವಿ ಹೊರತುಪಡಿಸಿ ಕ್ವಿಡ್ ಕಾರು ಮಾದರಿಯು ಹೆಚ್ಚಿನ ಮಟ್ಟದ ಬೇಡಿಕೆ ಪಡೆದುಕೊಳ್ಳುವಲ್ಲಿ ಸತತ ಹಿನ್ನಡೆ ಅನುಭವಿಸಿದೆ.

ಆದರೆ ಟ್ರೈಬರ್ ಮಿನಿ ಎಂಪಿವಿ ನಂತರ ದೇಶಿಯ ಮಾರುಕಟ್ಟೆಯಲ್ಲಿನ ಕಾರು ಮಾರಾಟದಲ್ಲಿ ಮಹತ್ವದ ಬೆಳವಣಿಗೆ ಸಾಧಿಸಿರುವ ರೆನಾಲ್ಟ್ ಕಂಪನಿಗೆ ಇದೀಗ ಮತ್ತೊಂದು ಬಲ ಎಂದರೆ ಅದು ಬಿಡುಗಡೆಗೆ ಸಿದ್ದವಾಗಿರುವ ಕಿಗರ್ ಕಂಪ್ಯಾಕ್ಟ್ ಎಸ್‌ಯುವಿ.

ಕಿಗರ್ ಕಾರು ಮಾದರಿಯು ರೆನಾಲ್ಟ್ ಕಾರು ಮಾರಾಟದ ದಿಕ್ಕನ್ನೇ ಬದಲಿಸುವ ನೀರಿಕ್ಷೆಯಲ್ಲಿದ್ದು, ಹೊಸ ಕಾರು ಮುಂಬರುವ ಕೆಲವೇ ತಿಂಗಳಿನಲ್ಲಿ ಮಾರುಕಟ್ಟೆ ಪ್ರವೇಶಿಸುತ್ತಿದೆ. ಸದ್ಯ ಮಾರುಕಟ್ಟೆಯಲ್ಲಿ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಗಳಿಗೆ ಭಾರೀ ಪ್ರಮಾಣದ ಬೇಡಿಕೆ ಹರಿದುಬರುತ್ತಿರುವುದೇ ಕಿಗರ್ ಕಾರಿನ ರೆನಾಲ್ಟ್ ಕಂಪನಿಯು ಹೆಚ್ಚು ನೀರಿಕ್ಷೆ ಇಟ್ಟುಕೊಂಡಿದೆ.

ಕಳೆದ ಎರಡು ವರ್ಷಗಳ ಅವಧಿಯಲ್ಲಿ ಸಬ್ ಫೋರ್ ಮೀಟರ್ ಕಂಪ್ಯಾಕ್ಟ್ ಎಸ್‌ಯುವಿ ಮಾರಾಟ ಪ್ರಮಾಣವು ಶೇ.60 ರಷ್ಟು ಹೆಚ್ಚಳವಾಗಿದ್ದು, ಆಕರ್ಷಕ ಫೀಚರ್ಸ್ ಮತ್ತು ಬಜೆಟ್ ಬೆಲೆಯಲ್ಲಿ ಬಿಡುಗಡೆಯಾಗುತ್ತಿರುವ ಕಿಗರ್ ಕಾರು ಗ್ರಾಹಕರ ಆಯ್ಕೆ ಮುಂಚೂಣಿ ಸಾಧಿಸುವ ಎಲ್ಲಾ ಗುಣಲಕ್ಷಣಹೊಂದಿದೆ. ಇದೇ ಕಾರಣಕ್ಕೆ ಗ್ರಾಹಕರ ಬೇಡಿಕೆಯೆಂತೆ ಪ್ರಮುಖ ನಗರಗಳಲ್ಲಿ ಗ್ರಾಹಕರ ಬೇಡಿಕೆಯೆಂತೆ ಹೊಸ ಮಾರಾಟ ಮಳಿಗೆಗಳನ್ನು ಹೆಚ್ಚಿಸುತ್ತಿರುವ ರೆನಾಲ್ಟ್ ಕಂಪನಿಯು ಲಾಕ್‌ಡೌನ್ ಅವಧಿಯಲ್ಲೇ ಸುಮಾರು 40ಕ್ಕೂ ಹೆಚ್ಚು ಹೊಸ ಕಾರು ಮಾರಾಟ ಮಳಿಗೆಗಳಿಗೆ ಚಾಲನೆ ನೀಡಿದೆ.

ಈ ಮೂಲಕ ಮುಂದಿನ ಎರಡು ವರ್ಷಗಳ ಅವಧಿಯಲ್ಲಿ ವಿವಿಧ ಕಾರು ಮಾದರಿಗಳ ಮಾರಾಟದೊಂದಿಗೆ ವಾರ್ಷಿಕವಾಗಿ 1 ಮಿಲಿಯನ್ ಕಾರು ಮಾರಾಟ ಗುರಿಹೊಂದಿದ್ದು, ಇದಕ್ಕೆ ಪೂರಕವಾಗಿ ಬಜೆಟ್ ಬೆಲೆಯಲ್ಲೇ ಅತ್ಯುತ್ತಮ ಫೀಚರ್ಸ್ ಹೊಂದಿರುವ ಮತ್ತಷ್ಟು ಹೊಸ ಕಾರು ಮಾದರಿಗಳನ್ನು ಬಿಡುಗಡೆ ಮಾಡುವ ಯೋಜನೆಯಲ್ಲಿದೆ.
MOST READ: ಭಾರತದಲ್ಲಿ ಎರಡು ಹೊಸ ಎಸ್‌ಯುವಿ ಕಾರು ಮಾದರಿಗಳನ್ನು ಬಿಡುಗಡೆ ಮಾಡಲಿದೆ ಹ್ಯುಂಡೈ

ಇನ್ನು ಅನಾವರಣಗೊಳ್ಳುವ ಮೂಲಕ ಬಿಡುಗಡೆಗಾಗಿ ಸಿದ್ದತೆಯಲ್ಲಿರುವ ಕಿಗರ್ ಕಾರು ಮಾದರಿಯು ಬಲಿಷ್ಠ ವಿನ್ಯಾಸದೊಂದಿಗೆ ಪ್ರತಿ ಸ್ಪರ್ಧಿ ಕಾರು ಮಾದರಿಗಳಿಂತಲೂ ಆಕರ್ಷಕ ಬೆಲೆಯೊಂದಿಗೆ ಬಿಡುಗಡೆಯಾಗಲಿದ್ದು, ಶೀಘ್ರದಲ್ಲೇ ಹೊಸ ಕಾರಿನ ಉತ್ಪಾದನಾ ಆವೃತ್ತಿ ಕೂಡಾ ರಸ್ತೆಗಿಳಿಯಲಿದೆ.

ಈ ಮೂಲಕ ಕಂಪ್ಯಾಕ್ಟ್ ಎಸ್‌ಯುವಿ ಕಾರು ಮಾರಾಟದಲ್ಲಿ ತನ್ನದೆ ಆದ ಜನಪ್ರಿಯತೆ ಪಡೆದುಕೊಳ್ಳುವ ನೀರಿಕ್ಷೆಯಲ್ಲಿರುವ ರೆನಾಲ್ಟ್ ಕಿಗರ್ ಕಾರು ಮಾದರಿಯು ಮಾರುತಿ ಸುಜುಕಿ ಬ್ರೆಝಾ, ಕಿಯಾ ಸೊನೆಟ್, ಹ್ಯುಂಡೈ ವೆನ್ಯೂ, ಟಾಟಾ ನೆಕ್ಸಾನ್, ಮಹೀಂದ್ರಾ ಎಕ್ಸ್‌ಯುವಿ300, ಫೋರ್ಡ್ ಇಕೋಸ್ಪೋರ್ಟ್ ಮತ್ತು ಬಿಡುಗಡೆಯಾಗಲಿರುವ ನಿಸ್ಸಾನ್ ಮ್ಯಾಗ್ನೈಟ್ ಕಾರುಗಳಿಗೆ ಪೈಪೋಟಿ ನೀಡಲಿದೆ.
MOST READ: ಬಿಡುಗಡೆಗೆ ಸಿದ್ದವಾದ ಹೋಂಡಾದ ಮೊದಲ ಎಲೆಕ್ಟ್ರಿಕ್ ಕಾರು

1.0-ಲೀಟರ್ ಎನ್ಎ ಪೆಟ್ರೋಲ್ ಮತ್ತು 1.0-ಲೀಟರ್ ಟರ್ಬೋ ಪೆಟ್ರೋಲ್ ಎಂಜಿನ್ ಆಯ್ಕೆಯೊಂದಿಗೆ ಬಿಡುಗಡೆಯಾಗಲಿರುವ ಹೊಸ ಕಾರು ತಾಂತ್ರಿಕ ಅಂಶಗಳಿಗೆ ಅನುಗುಣವಾಗಿ ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ.5.50 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 9 ಲಕ್ಷ ಬೆಲೆಯಲ್ಲಿ ಬಿಡುಗಡೆಯಾಗುವ ನೀರಿಕ್ಷೆಯಿದೆ.