Just In
Don't Miss!
- News
ಮತ್ತೊಂದು ದಾಖಲೆಯ ಮಟ್ಟವನ್ನ ತಲುಪಿದ ಪೆಟ್ರೋಲ್, ಡೀಸೆಲ್ ದರ
- Finance
ಹೊಸ ಸಾರ್ವಕಾಲಿಕ ದಾಖಲೆ ಬರೆದ ಪೆಟ್ರೋಲ್- ಡೀಸೆಲ್ ದರ; ಯಾವ ನಗರದಲ್ಲಿ ಎಷ್ಟು?
- Movies
ರೈತರ ಪ್ರತಿಭಟನೆ: ಕೆಂಪುಕೋಟೆ ಮೇಲೆ ಬಾವುಟ ಹಾರಿಸಿದ್ದು ಸಿನಿಮಾ ನಟ ದೀಪ್ ಸಿಧು?
- Lifestyle
ಹೊಟ್ಟೆಯ ಬಲಭಾಗದಲ್ಲಿ ನೋವು, ಈ ತೊಂದರೆಗಳಿರಬಹುದು
- Sports
ವಿರಾಟ್ ಕೊಹ್ಲಿ ಮತ್ತು ನನ್ನ ಮಧ್ಯೆ ಏನೂ ಬದಲಾಗಿಲ್ಲ: ಅಜಿಂಕ್ಯ ರಹಾನೆ
- Education
ECIL Recruitment 2021: 3 ಟೆಕ್ನಿಕಲ್ ಅಧಿಕಾರಿ ಹುದ್ದೆಗಳಿಗೆ ನೇರ ಸಂದರ್ಶನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಹೊಸ ಕಾರುಗಳ ಮೂಲಕ ಗ್ರಾಮೀಣ ಭಾಗಕ್ಕೂ ತಲುಪಲು ಸಿದ್ದವಾದ ರೆನಾಲ್ಟ್ ಇಂಡಿಯಾ
ರೆನಾಲ್ಟ್ ಕಂಪನಿಯು ಭಾರತದಲ್ಲಿ ಕಾರು ಮಾರಾಟ ಆರಂಭಿಸಿದ ನಂತರ ಹಲವಾರು ವಾಹನ ಉತ್ಪನ್ನಗಳನ್ನು ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆ ಮಾಡಿದ್ದರೂ ಕೂಡಾ ಕೆಲವೇ ಕೆಲವು ಕಾರು ಮಾದರಿಗಳ ಮಾರಾಟದಲ್ಲಿ ಮಾತ್ರವೇ ಗ್ರಾಹಕರನ್ನು ಸೆಳೆಯುವಲ್ಲಿ ಯಶಸ್ವಿಯಾಗಿದೆ.

ಕೈಗೆಟುಕುವ ಬೆಲೆಗಳಲ್ಲಿ ವಿವಿಧ ಕಾರು ಮಾದರಿಗಳ ಮಾರಾಟವನ್ನು ಹೊಂದಿದ್ದರೂ ಕೂಡಾ ಪ್ರತಿಸ್ಪರ್ಧಿ ಕಾರು ಮಾದರಿಗಳ ಅಬ್ಬರದ ಮುಂದೆ ನೆಲೆ ಕಾಣಲು ಯತ್ನಿಸುತ್ತಿದ್ದ ರೆನಾಲ್ಟ್ ಕಂಪನಿಗೆ ಕಳೆದ ವರ್ಷದ ಮಧ್ಯಂತರದಲ್ಲಿ ಬಿಡುಗಡೆಯಾದ ಟ್ರೈಬರ್ ಮರುಜೀವ ನೀಡಿದೆ ತಪ್ಪಾಗುವುದಿಲ್ಲ. ರೆನಾಲ್ಟ್ ಕಂಪನಿಯ ಕಾರು ಮಾರಾಟದಲ್ಲಿ ಟ್ರೈಬರ್ ಬಿಡುಗಡೆಗೂ ಮುನ್ನ ಡಸ್ಟರ್ ಎಸ್‌ಯುವಿ ಹೊರತುಪಡಿಸಿ ಕ್ವಿಡ್ ಕಾರು ಮಾದರಿಯು ಹೆಚ್ಚಿನ ಮಟ್ಟದ ಬೇಡಿಕೆಯನ್ನು ಪಡೆದುಕೊಳ್ಳುವಲ್ಲಿ ಹಿನ್ನಡೆ ಅನುಭವಿಸಿದೆ.

ಆದರೆ ಟ್ರೈಬರ್ ಮಿನಿ ಎಂಪಿವಿ ನಂತರ ದೇಶಿಯ ಮಾರುಕಟ್ಟೆಯಲ್ಲಿನ ಕಾರು ಮಾರಾಟದಲ್ಲಿ ಮಹತ್ವದ ಬೆಳವಣಿಗೆ ಸಾಧಿಸುತ್ತಿರುವ ರೆನಾಲ್ಟ್ ಕಂಪನಿಗೆ ಇದೀಗ ಮತ್ತೊಂದು ಬಲ ಎಂದರೆ ಅದು ಬಿಡುಗಡೆಗೆ ಸಿದ್ದವಾಗಿರುವ ಕಿಗರ್ ಕಂಪ್ಯಾಕ್ಟ್ ಎಸ್‌ಯುವಿ.

ಹೌದು, ಕಿಗರ್ ಕಾರು ಮಾದರಿಯು ರೆನಾಲ್ಟ್ ಕಾರು ಮಾರಾಟದ ದಿಕ್ಕನ್ನೇ ಬದಲಿಸುವ ನೀರಿಕ್ಷೆಯಲ್ಲಿದ್ದು, ಹೊಸ ಕಾರು ಮುಂಬರುವ ಕೆಲವೇ ತಿಂಗಳಿನಲ್ಲಿ ಮಾರುಕಟ್ಟೆ ಪ್ರವೇಶಿಸುತ್ತಿದೆ. ಸದ್ಯ ಮಾರುಕಟ್ಟೆಯಲ್ಲಿ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಗಳಿಗೆ ಭಾರೀ ಪ್ರಮಾಣದ ಬೇಡಿಕೆ ಹರಿದುಬರುತ್ತಿರುವುದೇ ಕಿಗರ್ ಕಾರಿನ ರೆನಾಲ್ಟ್ ಕಂಪನಿಯು ಹೆಚ್ಚು ನೀರಿಕ್ಷೆ ಇಟ್ಟುಕೊಂಡಿದೆ.

ಕಳೆದ ಎರಡು ವರ್ಷಗಳ ಅವಧಿಯಲ್ಲಿ ಸಬ್ ಫೋರ್ ಮೀಟರ್ ಕಂಪ್ಯಾಕ್ಟ್ ಎಸ್‌ಯುವಿ ಮಾರಾಟ ಪ್ರಮಾಣವು ಶೇ.60 ರಷ್ಟು ಹೆಚ್ಚಳವಾಗಿದ್ದು, ಆಕರ್ಷಕ ಫೀಚರ್ಸ್ ಮತ್ತು ಬಜೆಟ್ ಬೆಲೆಯಲ್ಲಿ ಬಿಡುಗಡೆಯಾಗುತ್ತಿರುವ ಕಿಗರ್ ಕಾರು ಗ್ರಾಹಕರ ಆಯ್ಕೆಯಲ್ಲಿ ಮುಂಚೂಣಿ ಸಾಧಿಸುವ ಎಲ್ಲಾ ಗುಣಲಕ್ಷಣಹೊಂದಿದೆ. ಇದೇ ಕಾರಣಕ್ಕೆ ಗ್ರಾಹಕರ ಬೇಡಿಕೆಯೆಂತೆ ಪ್ರಮುಖ ನಗರಗಳಲ್ಲಿ ಗ್ರಾಹಕರ ಬೇಡಿಕೆಯೆಂತೆ ಹೊಸ ಮಾರಾಟ ಮಳಿಗೆಗಳನ್ನು ಹೆಚ್ಚಿಸುತ್ತಿರುವ ರೆನಾಲ್ಟ್ ಕಂಪನಿಯು ಲಾಕ್‌ಡೌನ್ ಅವಧಿಯಲ್ಲೇ ಸುಮಾರು 40ಕ್ಕೂ ಹೆಚ್ಚು ಹೊಸ ಕಾರು ಮಾರಾಟ ಮಳಿಗೆಗಳಿಗೆ ಚಾಲನೆ ನೀಡಿದೆ.

ಈ ಮೂಲಕ ಮುಂದಿನ ಎರಡು ವರ್ಷಗಳ ಅವಧಿಯಲ್ಲಿ ವಿವಿಧ ಕಾರು ಮಾದರಿಗಳ ಮಾರಾಟದೊಂದಿಗೆ ವಾರ್ಷಿಕವಾಗಿ 1 ಮಿಲಿಯನ್ ಕಾರು ಮಾರಾಟ ಗುರಿಹೊಂದಿದ್ದು, ಇದಕ್ಕೆ ಪೂರಕವಾಗಿ ಬಜೆಟ್ ಬೆಲೆಯಲ್ಲೇ ಅತ್ಯುತ್ತಮ ಫೀಚರ್ಸ್ ಹೊಂದಿರುವ ಮತ್ತಷ್ಟು ಹೊಸ ಕಾರು ಮಾದರಿಗಳನ್ನು ಬಿಡುಗಡೆ ಮಾಡುವ ಯೋಜನೆಯಲ್ಲಿದೆ.

ವಿವಿಧ ಕಾರು ಮಾದರಿಗಳಿಗಾಗಿ ಉತ್ತಮ ಮಾರುಕಟ್ಟೆ ಒದಗಿಸುವ ಸಂಬಂಧ ಹಲವಾರು ಮಾರುಕಟ್ಟೆ ಅಧ್ಯಯನ ನಡೆಸಿರುವ ರೆನಾಲ್ಟ್ ಕಂಪನಿಯು ಕೇವಲ ಮಾಹಾನಗರಗಳಲ್ಲಿ ಮಾತ್ರವಲ್ಲ ಟೈರ್ 2, ಟೈರ್ 3 ಮತ್ತು ಟೈರ್ 4 ನಗರಗಳಲ್ಲೂ ಹೊಸ ಕಾರು ಮಾರಾಟ ಮಳಿಗೆಗಳನ್ನು ತೆರೆಯುತ್ತಿದೆ.
MOST READ: ಭಾರತದಲ್ಲಿ ಎರಡು ಹೊಸ ಎಸ್‌ಯುವಿ ಕಾರು ಮಾದರಿಗಳನ್ನು ಬಿಡುಗಡೆ ಮಾಡಲಿದೆ ಹ್ಯುಂಡೈ

ಇನ್ನು ಅನಾವರಣಗೊಳ್ಳುವ ಮೂಲಕ ಬಿಡುಗಡೆಗಾಗಿ ಸಿದ್ದತೆಯಲ್ಲಿರುವ ಕಿಗರ್ ಕಾರು ಮಾದರಿಯು ಬಲಿಷ್ಠ ವಿನ್ಯಾಸದೊಂದಿಗೆ ಪ್ರತಿ ಸ್ಪರ್ಧಿ ಕಾರು ಮಾದರಿಗಳಿಂತಲೂ ಆಕರ್ಷಕ ಬೆಲೆಯೊಂದಿಗೆ ಬಿಡುಗಡೆಯಾಗಲಿದ್ದು, ಶೀಘ್ರದಲ್ಲೇ ಹೊಸ ಕಾರಿನ ಉತ್ಪಾದನಾ ಆವೃತ್ತಿ ಕೂಡಾ ರಸ್ತೆಗಿಳಿಯಲಿದೆ.

ಈ ಮೂಲಕ ಕಂಪ್ಯಾಕ್ಟ್ ಎಸ್‌ಯುವಿ ಕಾರು ಮಾರಾಟದಲ್ಲಿ ತನ್ನದೆ ಆದ ಜನಪ್ರಿಯತೆ ಪಡೆದುಕೊಳ್ಳುವ ನೀರಿಕ್ಷೆಯಲ್ಲಿರುವ ರೆನಾಲ್ಟ್ ಕಿಗರ್ ಕಾರು ಮಾದರಿಯು ಮಾರುತಿ ಸುಜುಕಿ ಬ್ರೆಝಾ, ಕಿಯಾ ಸೊನೆಟ್, ಹ್ಯುಂಡೈ ವೆನ್ಯೂ, ಟಾಟಾ ನೆಕ್ಸಾನ್, ಮಹೀಂದ್ರಾ ಎಕ್ಸ್‌ಯುವಿ300, ಫೋರ್ಡ್ ಇಕೋಸ್ಪೋರ್ಟ್ ಮತ್ತು ಬಿಡುಗಡೆಯಾಗಲಿರುವ ನಿಸ್ಸಾನ್ ಮ್ಯಾಗ್ನೈಟ್ ಕಾರುಗಳಿಗೆ ಪೈಪೋಟಿ ನೀಡಲಿದೆ.
MOST READ: 2020ರ ಅವಧಿಯಲ್ಲಿ ಬಿಡುಗಡೆಯಾದ ಪ್ರಮುಖ ಹತ್ತು ಕಾರುಗಳಿವು..!

1.0-ಲೀಟರ್ ಎನ್ಎ ಪೆಟ್ರೋಲ್ ಮತ್ತು 1.0-ಲೀಟರ್ ಟರ್ಬೋ ಪೆಟ್ರೋಲ್ ಎಂಜಿನ್ ಆಯ್ಕೆಯೊಂದಿಗೆ ಬಿಡುಗಡೆಯಾಗಲಿರುವ ಹೊಸ ಕಾರು ತಾಂತ್ರಿಕ ಅಂಶಗಳಿಗೆ ಅನುಗುಣವಾಗಿ ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ.5.50 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 9 ಲಕ್ಷ ಬೆಲೆ ಅಂತರದಲ್ಲಿ ಬಿಡುಗಡೆಯಾಗುವ ನೀರಿಕ್ಷೆಯಿದೆ.