ಬಿಡುಗಡೆಯ ಸನಿಹದಲ್ಲಿ ಬಿಎಸ್-6 ಎಂಜಿನ್ ಪ್ರೇರಿತ ರೆನಾಲ್ಟ್ ಕ್ಯಾಪ್ಚರ್ ಎಸ್‌ಯುವಿ
ರೆನಾಲ್ಟ್ ಕಂಪನಿಯು ಕಡ್ಡಾಯವಾಗಿ ಜಾರಿಗೆ ಬಂದಿರುವ ಬಿಎಸ್-6 ಎಮಿಷನ್‌ಗೆ ಅನುಗುಣವಾಗಿ ತನ್ನ ಕ್ರಾಸ್ ಓವರ್ ಎಸ್‌ಯುವಿ ಮಾದರಿಯಾದ ಕ್ಯಾಪ್ಚರ್ ಫೇಸ್‌ಲಿಫ್ಟ್ ಬಿಡುಗಡೆಗೊಳಿಸುತ್ತಿದ್ದು, ಹೊಸ ಕಾರಿನ ಎಂಜಿನ್ ಆಯ್ಕೆ ಸಾಕಷ್ಟು ಹೊಸ ಬದಲಾವಣೆಗಳನ್ನು ತರಲಾಗಿದೆ.

ಬಿಎಸ್-6 ನಿಯಮದಿಂದಾಗಿ ಪ್ರಸ್ತುತ ಮಾರುಕಟ್ಟೆಯಲ್ಲಿರುವ ಹಲವು ಡೀಸೆಲ್ ಎಂಜಿನ್ ಕಾರು ಮಾದರಿಗಳು ಮಾರಾಟದಿಂದ ಸ್ಥಗಿತಗೊಳ್ಳುತ್ತಿದ್ದು, ಇದರಲ್ಲಿ ರೆನಾಲ್ಟ್ ನಿರ್ಮಾಣ ಕಾರು ಮಾದರಿಗಳು ಸಹ ಪ್ರಮುಖವಾಗಿವೆ. ಇದರಲ್ಲಿ ಡಸ್ಟರ್, ಲೊಡ್ಜಿ ಮತ್ತು ಕ್ಯಾಪ್ಚರ್ ಕಾರುಗಳಲ್ಲಿ ಈ ಹಿಂದೆ ನೀಡಲಾಗುತ್ತಿದ್ದ 1.5-ಲೀಟರ್ ಡೀಸೆಲ್ ಎಂಜಿನ್ ಅನ್ನು ಮಾರಾಟದಿಂದ ಕೈಬಿಡಲಾಗಿದ್ದು, ಹೊಸ ತಂತ್ರಜ್ಞಾನ ಪ್ರೇರಿತ 1.3-ಲೀಟರ್ ಟರ್ಬೋ ಪೆಟ್ರೋಲ್ ಎಂಜಿನ್‌ನೊಂದಿಗೆ ಬಿಡುಗಡೆ ಮಾಡಲಾಗುತ್ತಿದೆ.

ಇದರಲ್ಲಿ ಲೋಡ್ಜಿ ಆವೃತ್ತಿಯನ್ನು ಈಗಾಗಲೇ ಸಂಪೂರ್ಣವಾಗಿ ಮಾರಾಟ ಸ್ಥಗಿತಗೊಳಿಸಲಾಗಿದ್ದು, ಇನ್ನೆರಡು ಪ್ರಮುಖ ಕಾರು ಮಾದರಿಗಳಾದ ಡಸ್ಟರ್ ಮತ್ತು ಕ್ಯಾಪ್ಚರ್ ಕಾರು ಮಾತ್ರವೇ ಹೊಸ ಪೆಟ್ರೋಲ್ ಎಂಜಿನ್‌ನೊಂದಿಗೆ ಮಾರಾಟ ಮುಂದುವರಿಸಲಿವೆ.

ಕ್ಯಾಪ್ಚರ್ ಫೇಸ್‌ಲಿಫ್ಟ್ ಈಗಾಗಲೇ ರಷ್ಯಾ ಮಾರುಕಟ್ಟೆಯಲ್ಲಿ ಅನಾವರಣಗೊಳಿಸಲಾಗಿದ್ದು, ತನ್ನ ಮತ್ತೊಂದು ಜನಪ್ರಿಯ ಆರ್ಕಾನ್ ಕೂಪೆ ಎಸ್‌ಯುವಿ ಪ್ರೇರಣೆಯೊಂದಿಗೆ ಹೊಸ ಕ್ಯಾಪ್ಚರ್ ವಿನ್ಯಾಸಗಳಲ್ಲಿ ಮಹತ್ವದ ಬದಲಾವಣೆಗಳನ್ನು ಮಾಡಲಾಗಿದೆ.

ಇನ್ನು ಕೆಲವು ಮಾಹಿತಿಗಳ ಪ್ರಕಾರ, ಹೊಸ ಕ್ಯಾಪ್ಚರ್ ಆವೃತ್ತಿಯಲ್ಲಿ ನಿಸ್ಸಾನ್ ಜೊತೆಗೂಡಿ ಅಭಿವೃದ್ದಿಗೊಳಿಸಲಾಗುತ್ತಿರುವ 1.5-ಲೀಟರ್ ಹೊಸ ಮಾದರಿಯ ಟರ್ಬೋ ಪೆಟ್ರೋಲ್ ಎಂಜಿನ್ ಪಡೆದುಕೊಳ್ಳಬಹುದೆಂದು ಅಂದಾಜಿಸಲಾಗಿದ್ದು, ಒಟ್ಟಿನಲ್ಲಿ ನ್ಯೂ ಜನರೇಷನ್ ಡಸ್ಟರ್ ಮತ್ತು ಕ್ಯಾಪ್ಚರ್ ಫೇಸ್‌ಲಿಫ್ಟ್‌ನಲ್ಲಿ ಡೀಸೆಲ್ ಎಂಜಿನ್ ಆಯ್ಕೆ ತೆಗೆದುಹಾಕಲಾಗಿದ್ದು, ಸಣ್ಣ ಗಾತ್ರದ ಕಾರುಗಳಲ್ಲಿ 1.0-ಲೀಟರ್ ಟರ್ಬೋ ಪೆಟ್ರೋಲ್ ಆವೃತ್ತಿಯು ಮಾರಾಟಗೊಳ್ಳಲಿದೆ.
MOST READ: ಬಿಡುಗಡೆಗೆ ಸಿದ್ದವಾಗಿರುವ ಟಾಪ್ 5 ಎಲೆಕ್ಟ್ರಿಕ್ ಕಾರುಗಳಿವು..

ಮಾಲಿನ್ಯ ಪ್ರಮಾಣವನ್ನು ಪರಿಣಾಮಕಾರಿಗೆ ತಗ್ಗಿಸುವ ಉದ್ದೇಶದಿಂದ ಆಟೋ ಉದ್ಯಮದಲ್ಲಿ ಕೆಲವು ಮಹತ್ವದ ಬದಲಾವಣೆಗಳನ್ನು ತರಲಾಗುತ್ತಿದ್ದು, ಈ ಹಿನ್ನಲೆಯಲ್ಲಿ ರೆನಾಲ್ಟ್ ಸೇರಿದಂತೆ ಬಹುತೇಕ ಕಾರು ಉತ್ಪಾದನಾ ಕಂಪನಿಗಳು ಹೊಸ ನಿಯಮ ಪಾಲನೆ ಮಾಡಲು ಸಾಧ್ಯವಿಲ್ಲದ ಡೀಸೆಲ್ ಎಂಜಿನ್ ಕಾರುಗಳ ಮಾರಾಟವನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸುತ್ತಿವೆ.

ಡೀಸೆಲ್ ಎಂಜಿನ್ ವಾಹನಗಳು ಮಾಲಿನ್ಯ ಉತ್ಪಾದನೆಯಲ್ಲಿ ಅಗ್ರಸ್ಥಾನದಲ್ಲಿದ್ದು, ಕಡ್ಡಾಯವಾಗಿ ಜಾರಿಗೆ ಬಂದಿರುವ ಬಿಎಸ್-6 (ಭಾರತ್ ಸ್ಟೇಜ್) ನಿಯಮವು ಕಡಿಮೆ ಸಾಮಾರ್ಥ್ಯದ ಡೀಸೆಲ್ ಎಂಜಿನ್ ಉತ್ಪಾದನೆಗೆ ಬ್ರೇಕ್ ಹಾಕಲಿದೆ.
MOST READ: ಕರೋನಾ ವಿರುದ್ಧದ ಹೋರಾಟಕ್ಕಾಗಿ 60 ಬೈಕ್ ಆ್ಯಂಬುಲೆನ್ಸ್ ದೇಣಿಗೆ ನೀಡಿದ ಹೀರೋ

ಒಂದು ವೇಳೆ ಸದ್ಯ ಮಾರುಕಟ್ಟೆಯಲ್ಲಿರುವ ಬಿಎಸ್-4 ಡೀಸೆಲ್ ಎಂಜಿನ್‌ಗಳನ್ನು ಬಿಎಸ್-6 ನಿಯಮಕ್ಕೆ ಉನ್ನತಿಕರಿಸಿದರೂ ಸಹ ಕಾರಿನ ಬೆಲೆಗಳು ಕನಿಷ್ಠ ರೂ. 80 ಸಾವಿರದಿಂದ ರೂ.1.20 ಲಕ್ಷದಷ್ಟು ಹೆಚ್ಚುವರಿ ಬೆಲೆ ಪಡೆದುಕೊಳ್ಳಲಿವೆ.

ಇದರಿಂದಾಗಿ ಅಗ್ಗದ ಕಾರು ಉನ್ಪತ್ನಗಳನ್ನು ಮಾರಾಟಮಾಡುವ ಕಾರು ಕಂಪನಿಗಳಿಗೆ ಇದು ಬಿಸಿತುಪ್ಪವಾಗಿ ಪರಿಣಮಿಸಲಿದ್ದು, ಕಾರುಗಳ ಬೆಲೆಗಳನ್ನು ಒಂದೇ ಬಾರಿಗೆ ರೂ.80 ಸಾವಿರದಿಂದ ರೂ. 1.20 ಲಕ್ಷದಷ್ಟು ಹೆಚ್ಚಳ ಮಾಡಿದ್ದಲ್ಲಿ ಗ್ರಾಹಕರನ್ನು ಕಳೆದುಕೊಳ್ಳಬೇಕಾದ ಪರಿಸ್ಥಿತಿ ಎದುರಾಗುತ್ತದೆ.
MOST READ: ಅತಿ ಕಡಿಮೆ ಬೆಲೆಯ 'ಏರ್ 100' ವೆಂಟಿಲೆಟರ್ ಪರಿಚಯಿಸಿದ ಮಹೀಂದ್ರಾ

ಇದಕ್ಕಾಗಿಯೇ ರೆನಾಲ್ಟ್ ಸಂಸ್ಥೆಯು 1.5-ಲೀಟರ್ ಸಾಮರ್ಥದ ಡೀಸೆಲ್ ಎಂಜಿನ್ ಆಯ್ಕೆಯನ್ನು ಕೈ ಕೈಬಿಟ್ಟು, ಹೊಸದಾಗಿ 1.0-ಲೀಟರ್ ಟರ್ಬೋ ಪೆಟ್ರೋಲ್ ಮತ್ತು 1.3-ಲೀಟರ್ ಟರ್ಬೋ ಪೆಟ್ರೋಲ್ ಮತ್ತು 1.5-ಲೀಟರ್ ಇನ್-ಲೈನ್ ಫೋರ್ ಸಿಲಿಂಡರ್ ಪೆಟ್ರೋಲ್ ಎಂಜಿನ್ ಮಾದರಿಯನ್ನು ಬಿಡುಗಡೆ ಮಾಡುವ ಯೋಜನೆ ಹೊಂದಲಾಗಿದೆ.

ಹೀಗಾಗಿ ಸದ್ಯ ಬಿಡುಗಡೆಗಾಗಿ ಸಿದ್ದವಾಗಿರುವ ಕ್ಯಾಪ್ಚರ್ ಫೇಸ್‌ಲಿಫ್ಟ್ ಕಾರು ಹೊಸ ಎಂಜಿನ್ ಆಯ್ಕೆಯೊಂದಿಗೆ ಮುಂಬರುವ ಜೂನ್ ಹೊತ್ತಿಗೆ ಮಾರುಕಟ್ಟೆ ಪ್ರವೇಶಿಸಲಿದ್ದು, ಟರ್ಬೋ ಪೆಟ್ರೋಲ್ ಎಂಜಿನ್‌ನೊಂದಿಗೆ ಪ್ರಸ್ತುತ ಮಾರುಕಟ್ಟೆಯಲ್ಲಿನ ಬೆಲೆಗಿಂತ ರೂ.20 ಸಾವಿರದಿಂದ ರೂ.50 ಸಾವಿರ ಹೆಚ್ಚುವರಿ ಬೆಲೆ ಪಡೆದುಕೊಳ್ಳಲಿದೆ.


Click it and Unblock the Notifications