ಹೊಚ್ಚ ಹೊಸ ಕಿಗರ್ ಕಂಪ್ಯಾಕ್ಟ್ ಎಸ್‌ಯುವಿ ಬಿಡುಗಡೆ ಮುಂದೂಡಿದ ರೆನಾಲ್ಟ್

ರೆನಾಲ್ಟ್ ಇಂಡಿಯಾ ಕಂಪನಿಯು ತನ್ನ ಬಹುನೀರಿಕ್ಷಿತ ಕಿಗರ್ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯನ್ನು ಮುಂಬರುವ ದೀಪಾವಳಿ ಹೊತ್ತಿಗೆ ಬಿಡುಗಡೆ ಮಾಡುವುದಾಗಿ ಹೇಳಿಕೊಂಡಿತ್ತು. ಆದರೆ ಇದೀಗ ಹೊಸ ಕಾರಿನ ಬಿಡುಗಡೆಯನ್ನು ಕಾರಣಾಂತರಗಳಿಂದ ಮುಂದೂಡಿಕೆ ಮಾಡಿರುವ ಮಾಹಿತಿ ಲಭ್ಯವಾಗಿದೆ.

ಹೊಸ ಕಿಗರ್ ಕಂಪ್ಯಾಕ್ಟ್ ಎಸ್‌ಯುವಿ ಬಿಡುಗಡೆ ಮುಂದೂಡಿದ ರೆನಾಲ್ಟ್

ಕರೋನಾ ವೈರಸ್ ಪರಿಣಾಮ ಕಳೆದ ಕೆಲ ತಿಂಗಳಿನಿಂದ ಭಾರೀ ನಷ್ಟ ಅನುಭವಿಸಿದ್ದ ಆಟೋ ಉದ್ಯಮ ಇದೀಗ ಚೇತರಿಸಿಕೊಳ್ಳುತ್ತಿದ್ದು, ಬಹುತೇಕ ಹೊಸ ವಾಹನಗಳು ಭಾರೀ ಬೇಡಿಕೆ ಪಡೆದುಕೊಳ್ಳುತ್ತಿವೆ. ಆದರೂ ಕೂಡಾ ಬಿಡಿಭಾಗಗಳ ಕೊರತೆಯು ಬೇಡಿಕೆ ಪೂರೈಕೆ ಮಾಡುವಲ್ಲಿ ವಿಫಲಾಗುತ್ತಿದ್ದು, ಕರೋನಾ ವೈರಸ್ ಪರಿಣಾಮ ಹಲವಾರು ಬಿಡಿಭಾಗಗಳ ಉತ್ಪಾದನಾ ಕಂಪನಿಗಳು ತಾತ್ಕಾಲಿಕವಾಗಿ ಸ್ಥಗಿತವಾಗಿದ್ದ ಪರಿಣಾಮವೇ ಇದೀಗ ವಾಹನ ಪೂರೈಕೆಯಲ್ಲಿ ಹಿನ್ನಡೆಯಾಗಲು ಕಾರಣವಾಗಿದೆ.

ಹೊಸ ಕಿಗರ್ ಕಂಪ್ಯಾಕ್ಟ್ ಎಸ್‌ಯುವಿ ಬಿಡುಗಡೆ ಮುಂದೂಡಿದ ರೆನಾಲ್ಟ್

ಈ ಹಿನ್ನಲೆಯಲ್ಲಿ ಹೊಸ ಕಿಗರ್ ಕಾರು ಮಾದರಿಯ ಬಿಡುಗಡೆ ಪ್ರಕ್ರಿಯೆಯನ್ನು ಕೆಲ ತಿಂಗಳು ಮುಂದೂಡಿಕೆ ಮಾಡಿರುವ ರೆನಾಲ್ಟ್ ಕಂಪನಿಯು ಈ ವರ್ಷದ ಅಂತ್ಯದಲ್ಲಿ ಇಲ್ಲವೆ 2021ರ ಆರಂಭದಲ್ಲಿ ಬಿಡುಗಡೆ ಮಾಡುವುದಾಗಿ ಖಚಿತಪಡಿಸಿದೆ.

ಹೊಸ ಕಿಗರ್ ಕಂಪ್ಯಾಕ್ಟ್ ಎಸ್‌ಯುವಿ ಬಿಡುಗಡೆ ಮುಂದೂಡಿದ ರೆನಾಲ್ಟ್

ಹೊಸ ಕಾರನ್ನು ಸದ್ಯ ಹೆಚ್‌ಬಿಸಿ ಕೋಡ್‌ನೆಮ್ ಆಧಾರದ ಮೇಲೆ ರೋಡ್ ಟೆಸ್ಟಿಂಗ್ ಪ್ರಕ್ರಿಯೆಗಳನ್ನು ನಡೆಸಲಾಗುತ್ತಿದ್ದು, ಕಿಗರ್ ಹೆಸರನ್ನೇ ಅಧಿಕೃತವಾಗಿ ಕರೆಯಲಿದೆ. ಹೊಸ ಕಾರಿನಲ್ಲಿ ಸದ್ಯ ಮಾರುಕಟ್ಟೆಯಲ್ಲಿರುವ ಟ್ರೈಬರ್ ಕಾರು ಮಾದರಿಗಳಿಂದಲೂ ಕೆಲವು ಇಂಟಿರಿಯರ್ ಫೀಚರ್ಸ್‌ಗಳನ್ನು ಎರವಲು ಪಡೆದುಕೊಳ್ಳಲಾಗಿದ್ದು, ಟಚ್‌ಸ್ಕ್ರೀನ್ ಇನ್ಪೋಟೈನ್‌ಮೆಂಟ್, ಕನೆಕ್ಟೆಡ್ ಫೀಚರ್ಸ್‌ಗಳಿಗಾಗಿ ಇನ್ಪೋಟೈನ್ ಸಿಸ್ಟಂನಲ್ಲಿ ಇ-ಸಿಮ್ ಅಳವಡಿಕೆ, ಡಿಜಿಟಲ್ ಇನ್‌ಸ್ಟ್ರುಮೆಂಟ್ ಕ್ಲಸ್ಟರ್ ಮತ್ತು ಮಲ್ಟಿ ಫಂಕ್ಷನ್ ಸ್ಟೀರಿಂಗ್ ವೀಲ್ಹ್ ಜೋಡಿಸಲಾಗಿದೆ.

ಹೊಸ ಕಿಗರ್ ಕಂಪ್ಯಾಕ್ಟ್ ಎಸ್‌ಯುವಿ ಬಿಡುಗಡೆ ಮುಂದೂಡಿದ ರೆನಾಲ್ಟ್

ಜೊತೆಗೆ ಪ್ರಯಾಣಿಕ ಸುರಕ್ಷತೆಗೂ ಹೆಚ್ಚಿನ ಒತ್ತು ನೀಡಲಾಗಿದ್ದು, ಫ್ರಂಟ್ ಡ್ಯುಯಲ್ ಏರ್‌ಬ್ಯಾಗ್, ಎಬಿಎಸ್ ಜೊತೆ ಇಬಿಡಿ, ಫ್ರಂಟ್ ಡಿಸ್ಕ್ ಬ್ರೇಕ್, ಸೀಟ್ ಬೆಲ್ಟ್ ರಿಮೆಂಡರ್, ಸ್ಪೀಡ್ ಅಲರ್ಟ್, ಫ್ರಂಟ್ ಆ್ಯಂಡ್ ರಿಯರ್ ಪಾರ್ಕಿಂಗ್ ಸೆನ್ಸಾರ್ ಸೇರಿದಂತೆ ಹಲವು ಸುರಕ್ಷಾ ಸೌಲಭ್ಯಗಳಿವೆ.

MOST READ: ರೂ.5 ಲಕ್ಷಕ್ಕಿಂತ ಕಡಿಮೆ ಬೆಲೆಯ ಜನಪ್ರಿಯ ಕಾರುಗಳಿವು

ಹೊಸ ಕಿಗರ್ ಕಂಪ್ಯಾಕ್ಟ್ ಎಸ್‌ಯುವಿ ಬಿಡುಗಡೆ ಮುಂದೂಡಿದ ರೆನಾಲ್ಟ್

ಈ ಮೂಲಕ ಕಂಪ್ಯಾಕ್ಟ್ ಎಸ್‌ಯುವಿ ಕಾರುಗಳಿಂತಲೂ ಕಿಗರ್ ಕಾರು ಕಡಿಮೆ ಬೆಲೆಯಲ್ಲಿ ಬಿಡುಗಡೆಯಾಗುವ ಸುಳಿವು ನೀಡಿದ್ದು, ಹ್ಯುಂಡೈ ವೆನ್ಯೂ, ಮಾರುತಿ ಸುಜುಕಿ ವಿಟಾರಾ ಬ್ರೆಝಾ, ಮಹೀಂದ್ರಾ ಎಕ್ಸ್‌ಯುವಿ300, ನಿಸ್ಸಾನ್ ಕಿಕ್ಸ್ ಕಾರುಗಳಿಗೆ ಪೈಪೋಟಿ ನೀಡಲಿರುವ ಹೊಸ ಕಾರ ಐದು ಆಸನ ಮಾದರಿಯಲ್ಲಿ ಬಿಡುಗಡೆಯಾಗಲಿದೆ. ಜೊತೆಗೆ ಹೊಸ ಕಾರಿನ ಎಂಜಿನ್ ಆಯ್ಕೆ ಆಕರ್ಷಕವಾಗಿದ್ದು, ಪರ್ಫಾಮೆನ್ಸ್ ಜೊತೆಗೆ ಇಂಧನ ದಕ್ಷತೆಗೂ ಹೆಚ್ಚಿನ ಒತ್ತು ನೀಡಲಾಗಿದೆ.

ಹೊಸ ಕಿಗರ್ ಕಂಪ್ಯಾಕ್ಟ್ ಎಸ್‌ಯುವಿ ಬಿಡುಗಡೆ ಮುಂದೂಡಿದ ರೆನಾಲ್ಟ್

ಹೊಸ ಕಿಗರ್ ಕಾರಿನಲ್ಲಿ ರೆನಾಲ್ಟ್ ಸಂಸ್ಥೆಯು ಹೊಸದಾಗಿ ಅಭಿವೃದ್ದಿಗೊಳಿಸಲಾಗುತ್ತಿರುವ 1.0-ಲೀಟರ್ ಟರ್ಬೋ ಪೆಟ್ರೋಲ್ ಎಂಜಿನ್ ಜೋಡಣೆ ಮಾಡುವ ಸಾಧ್ಯತೆಗಳಿದ್ದು, ಇದೇ ಎಂಜಿನ್ ಅನ್ನು ಮುಂಬರುವ ದಿನಗಳಲ್ಲಿ ಬಿಡುಗಡೆಗೆ ಸಿದ್ದವಾಗುತ್ತಿರುವ ಟ್ರೈಬರ್ ಟರ್ಬೋ ಆವೃತ್ತಿಯಲ್ಲೂ ಜೋಡಣೆ ಮಾಡಲು ನಿರ್ಧರಿಸಲಾಗಿದೆ.

ಹೊಸ ಕಿಗರ್ ಕಂಪ್ಯಾಕ್ಟ್ ಎಸ್‌ಯುವಿ ಬಿಡುಗಡೆ ಮುಂದೂಡಿದ ರೆನಾಲ್ಟ್

ಹೀಗಾಗಿ ಕಿಗರ್ ಕಾರು 5-ಸ್ಪೀಡ್ ಮ್ಯಾನುವಲ್ ಮತ್ತು 5-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಪ್ರೇರಿತ ಪೆಟ್ರೋಲ್ ಎಂಜಿನ್ ಮಾದರಿಯಲ್ಲಿ ಮಾತ್ರವೇ ಮಾರಾಟವಾಗಲಿದ್ದು, ಪ್ರಸ್ತುತ ಮಾರುಕಟ್ಟೆಯಲ್ಲಿನ ಬೇಡಿಕೆಗೆ ಅನುಗುಣವಾಗಿ ಹಲವು ಪ್ರೀಮಿಯಂ ಸೌಲಭ್ಯಗಳನ್ನು ಹೊಂದಿರಲಿದೆ.

MOST READ: ಅತಿ ಕಡಿಮೆ ಬೆಲೆಯಲ್ಲಿ ಹೆಚ್ಚು ಮೈಲೇಜ್ ನೀಡುವ ರೆಟ್ರೊ ಎಲೆಕ್ಟ್ರಿಕ್ ಬೈಕ್ ಬಿಡುಗಡೆ

ಹೊಸ ಕಿಗರ್ ಕಂಪ್ಯಾಕ್ಟ್ ಎಸ್‌ಯುವಿ ಬಿಡುಗಡೆ ಮುಂದೂಡಿದ ರೆನಾಲ್ಟ್

ಹೊಸ ಕಾರಿನ ಬೆಲೆಯು ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 6 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 8.50 ಲಕ್ಷ ಬೆಲೆಯೊಂದಿಗೆ ಖರೀದಿಗೆ ಲಭ್ಯವಾಗುವ ಸಾಧ್ಯತೆಗಳಿದ್ದು, ಹೊಸ ಕಾರು ನಿಸ್ಸಾನ್ ಮ್ಯಾಗ್ನೈಟ್ ಮಾದರಿಯ ಪ್ಲ್ಯಾಟ್‌ಫಾರ್ಮ್ ಅಡಿಯಲ್ಲೇ ಸಿದ್ದವಾಗುತ್ತಿದೆ.

Most Read Articles

Kannada
English summary
Renault has postponed the much awaited Kiger SUV launch in India.
Story first published: Tuesday, September 29, 2020, 21:29 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X