ರೆನಾಲ್ಟ್ ಹೊಸ ಕಿಗರ್ ಕಂಪ್ಯಾಕ್ಟ್ ಎಸ್‌ಯುವಿ ಬಿಡುಗಡೆ ಮಾಹಿತಿ ಬಹಿರಂಗ
ಬಹುನೀರಿಕ್ಷಿತ ರೆನಾಲ್ಟ್ ಕಿಗರ್ ಕಾನ್ಸೆಪ್ಟ್ ಮಾದರಿಯು ಭಾರತದಲ್ಲಿ ಅನಾವರಣಗೊಂಡಿದ್ದು, ಹೊಸ ಕಂಪ್ಯಾಕ್ಟ್ ಎಸ್‌ಯುವಿ ಕಾರು ಮಾದರಿಯು ಭಾರತೀಯ ಆಟೋ ಉದ್ಯಮದಲ್ಲಿ ಭಾರೀ ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಲ್ಲಿದೆ.

ಕಂಪ್ಯಾಕ್ಟ್ ಎಸ್‌ಯುವಿ ಕಾರುಗಳ ಮಾರಾಟ ಪಾಲು ಕಳೆದ ಎರಡು ವರ್ಷಗಳಲ್ಲಿ ಅತ್ಯಧಿಕ ಪ್ರಮಾಣದಲ್ಲಿ ಏರಿಕೆಯಾಗಿದ್ದು, ಕಂಪ್ಯಾಕ್ಟ್ ಎಸ್‌ಯುವಿ ಸೆಗ್ಮೆಂಟ್‌ನಲ್ಲಿ ಈಗಾಗಲೇ ಹಲವಾರು ಹೊಸ ಕಾರುಗಳು ಬಿಡುಗಡೆಗೊಂಡಿವೆ. 4 ಮೀಟರ್‌ಗಿಂತಲೂ ಕಡಿಮೆ ಉದ್ದಳತೆ ಹೊಂದಿರುವ ಕಂಪ್ಯಾಕ್ಟ್ ಎಸ್‌ಯುವಿ ಮಾರಾಟದಲ್ಲಿ ಸದ್ಯ ಪ್ರಮುಖ ಕಾರು ಕಂಪನಿಗಳ ನಡುವೆ ಭಾರೀ ಪೈಪೋಟಿ ನಡೆಯುತ್ತಿದ್ದು, ಕಿಗರ್ ಕಾರು ಮಾದರಿಯು ಮುಂಬರುವ 2021 ಮಾರ್ಚ್ ಹೊತ್ತಿಗೆ ಅಧಿಕೃತವಾಗಿ ಖರೀದಿಗೆ ಲಭ್ಯವಿರಲಿದೆ.

ಕಟಿಂಗ್ ಎರ್ಡ್ಜ್ ವಿನ್ಯಾಸದೊಂದಿಗೆ ಸ್ಪೋರ್ಟಿ ಲುಕ್ ಹೊಂದಿರುವ ಹೊಸ ಕಿಗರ್ ಕಾರು ಮಾದರಿಯು ಮುಂಭಾಗದಲ್ಲಿ ಡ್ಯುಯಲ್ ಹೆಡ್‌ಲ್ಯಾಂಪ್ ಜೊತೆಗೆ ಎಲ್ಇಡಿ ಡಿಆರ್‌ಎಲ್ಎಸ್ ಪಡೆದುಕೊಂಡಿದ್ದು, ಹೆಡ್‌ಲ್ಯಾಂಪ್ ಸೌಲಭ್ಯವು ಬಂಪರ್ ಮೇಲ್ಭಾಲದಲ್ಲಿ ಮತ್ತು ಎಲ್ಇಡಿ ಡಿಆರ್‌ಎಲ್ಎಸ್ ಸೌಲಭ್ಯವು ಬ್ಯಾನೆಟ್‌ಗೆ ಹೊಂದಿಕೊಂಡಿದೆ.

ಡೇ ಲೈಟ್ ರನ್ನಿಂಗ್ ಲೈಟ್ ಸೌಲಭ್ಯವು ಫ್ರಂಟ್ ಗ್ರಿಲ್‍ವರೆಗೂ ಮುಂದುವರೆದಿದ್ದು, ಮಧ್ಯದಲ್ಲಿ ರೆನಾಲ್ಟ್ ಲೊಗೊ ಪಡೆದುಕೊಂಡಿದೆ. ಫ್ರಂಟ್ ಬಂಪರ್ ಸೌಲಭ್ಯವು ಮಧ್ಯದಲ್ಲಿ ದೊಡ್ಡದಾದ ಏರ್ ಡ್ಯಾಮ್ ಜೊತೆ ಸಿಲ್ವರ್ ಕೊಟಿಂಗ್ ಹೊಂದಿರುವ ಸ್ಕೀಡ್ ಪ್ಲೇಟ್ ಪಡೆದುಕೊಂಡಿದ್ದು, ಕಟಿಂಗ್ ಎಡ್ಜ್ ವಿನ್ಯಾಸಗಳು ಹೊಸ ಕಾರಿಗೆ ಮತ್ತಷ್ಟು ಬಲಿಷ್ಠತೆ ಪಡೆದುಕೊಳ್ಳಲಿವೆ.

ಹಾಗೆಯೇ ಕಾರಿನ ಮುಂಭಾಗದಲ್ಲಿನ ಬಲಿಷ್ಠ ವಿನ್ಯಾಸದಂತೆ ಸೈಡ್ ಪ್ರೋಫೈಲ್ ಕೂಡಾ ಆಕರ್ಷಕವಾಗಿದ್ದು, ಕ್ರೀಸ್ ಲೈನ್‌ಗಳೊಂದಿಗೆ ಬ್ಲ್ಯಾಕ್ ಕ್ಲ್ಯಾಂಡಿಂಗ್ ಒಳಗೊಂಡ ವೀಲ್ಹ್ ಆರ್ಚ್ ಮತ್ತು ಆಕರ್ಷಕ ಡೈಮಂಡ್ ಕಟ್ ಅಲಾಯ್ ವೀಲ್ಹ್ ಹೊಂದಿರಲಿದೆ. ಹೊಸ ಕಾರಿನಲ್ಲಿ ಪ್ರತಿ ಸ್ಪರ್ಧಿ ಕಾರು ಮಾದರಿಗಳಂತೆ ಡ್ಯುಯಲ್ ಟೋನ್ ಬಣ್ಣಗಳ ಆಯ್ಕೆ ಹೊಂದರಲಿರುವ ಕಿಗರ್ ಕಾರು ಮಾದರಿಯು ಇಂಟ್ರಾಗ್ರೆಟೆಡ್ ಟರ್ನ್ ಇಂಡಿಕೇಟರ್ ಹೊಂದಿರುವ ರಿಯಲ್ ವ್ಯೂ ಮಿರರ್, ಬಾಡಿ ಕಲರ್ ಹೊಂದಿರುವ ಡೋರ್ ಹ್ಯಾಂಡಲ್, ಬಾಡಿ ಪ್ಯಾನೆಲ್, ಕಪ್ಪು ಬಣ್ಣ ಹೊಂದಿರುವ ರೂಫ್ ರೈಲ್ಸ್ ಪಡೆದುಕೊಂಡಿದೆ.

ರೆನಾಲ್ಟ್ ಕಂಪನಿಯು ಸದ್ಯಕ್ಕೆ ಕಿಗರ್ ಕಾನ್ಸೆಪ್ಟ್ ಮಾದರಿಯ ಹೊರಭಾಗದ ವಿನ್ಯಾಸಗಳನ್ನು ಮಾತ್ರವೇ ಅನಾವರಣಗೊಳಿಸಿದ್ದು, ಹೊಸ ಕಾರಿನ ಒಳ ವಿನ್ಯಾಸ ಮತ್ತು ತಾಂತ್ರಿಕ ಮಾಹಿತಿಗಳನ್ನು ಶೀಘ್ರದಲ್ಲೇ ಅನಾವರಣಗೊಳಿಸಲಿದೆ.

ಹೊಸ ಕಾರಿನಲ್ಲಿ ರೆನಾಲ್ಟ್ ಕಂಪನಿಯು ಸುಧಾರಿತ ತಂತ್ರಜ್ಞಾನ ಪ್ರೇರಿತ ಇನ್‌ಸ್ಟ್ರುಮೆಂಟ್ ಕ್ಲಸ್ಟರ್, ಟಚ್‌ಸ್ಕ್ರೀನ್ ಇನ್ಪೋಟೈನ್‌ಮೆಂಟ್ ಸಿಸ್ಟಂ, ಆಟೋಮ್ಯಾಟಿಕ್ ಕ್ಲೈಮೆಟ್ ಕಂಟ್ರೋಲ್, ಎಲೆಕ್ಟ್ರಿಕ್ ಸನ್‌ರೂಫ್ ಸೇರಿದಂತೆ ಹಲವು ಪ್ರೀಮಿಯಂ ಫೀಚರ್ಸ್‌ಗಳನ್ನು ಅಳವಡಿಸುವ ಸಾಧ್ಯತೆಗಳಿವೆ.

ಇನ್ನು ಹೊಸ ಕಾರಿನಲ್ಲಿ ಜೋಡಣೆ ಮಾಡಲಿರುವ ಅಧಿಕೃತ ಎಂಜಿನ್ ಮಾಹಿತಿಯನ್ನು ಬಿಟ್ಟುಕೊಡದ ರೆನಾಲ್ಟ್ ಕಂಪನಿಯು ಹೊಸ ಕಾರನ್ನು 2021ರ ಆರಂಭದಲ್ಲಿ ಬಿಡುಗಡೆ ಮಾಡಲಿದ್ದು, ಮಾಹಿತಿಗಳ ಪ್ರಕಾರ ಹೊಸ ಕಾರು 1.0-ಲೀಟರ್ ಸಾಮಾರ್ಥ್ಯದ ಎರಡು ಪೆಟ್ರೋಲ್ ಎಂಜಿನ್ ಆಯ್ಕೆಗಳನ್ನು ಪಡೆದುಕೊಳ್ಳಲಿದೆ.

ಸಾಮಾನ್ಯ ಆವೃತ್ತಿಯಲ್ಲಿ ನ್ಯಾಚುರಲಿ ಆಸ್ಪೆರೆಟೆಡ್ 1.0-ಲೀಟರ್ ಪೆಟ್ರೋಲ್ ಎಂಜಿನ್ ಮತ್ತು ನಿಸ್ಸಾನ್ ಜೊತೆಗೂಡಿ ಹೊಸದಾಗಿ ಅಭಿವೃದ್ದಿಗೊಳಿಸಿರುವ 1.0-ಟೀಟರ್ ಟರ್ಬೋ ಪೆಟ್ರೋಲ್ ಮಾದರಿಯನ್ನು ಹೈ ಎಂಡ್ ಮಾದರಿಗಳಲ್ಲಿ ಅಳವಡಿಸಲಿದೆಯೆಂತೆ. ಸಾಮಾನ್ಯ ಮಾದರಿಯಲ್ಲಿ 5-ಸ್ಪೀಡ್ ಮ್ಯಾನುವಲ್ ಮತ್ತು ಟರ್ಬೋ ಮಾದರಿಯಲ್ಲಿ 5-ಸ್ಪೀಡ್ ಮ್ಯಾನುವಲ್ ಮತ್ತು 5-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆ ನೀಡಲಿದೆ.


Click it and Unblock the Notifications