Just In
- 17 min ago
ಐಷಾರಾಮಿ ಕಾರು ಚಾಲಕನ ನಿರ್ಲಕ್ಷ್ಯಕ್ಕೆ ಪ್ರಾಣ ತೆತ್ತ ಪೊಲೀಸ್ ಕಾನ್ಸ್ಟೆಬಲ್ಗಳು
- 1 hr ago
ಭಾರತದಲ್ಲಿ 3 ಸೀರಿಸ್ ಗ್ರ್ಯಾನ್ ಲಿಮೊಸಿನ್ ಬಿಡುಗಡೆ ಮಾಡಿದ ಬಿಎಂಡಬ್ಲ್ಯು
- 2 hrs ago
2020ರ ಡಿಸೆಂಬರ್ ತಿಂಗಳಿನಲ್ಲಿ ಭರ್ಜರಿಯಾಗಿ ಮಾರಾಟವಾದ ಟಾಟಾ ಹ್ಯಾರಿಯರ್
- 3 hrs ago
ಭಾರತದಲ್ಲಿ ಬಿಡುಗಡೆಯಾದ ಐದು ವರ್ಷಗಳಲ್ಲಿ ಹೊಸ ದಾಖಲೆಗೆ ಕಾರಣವಾದ ಹ್ಯುಂಡೈ ಕ್ರೆಟಾ
Don't Miss!
- News
ಗಡಿಯಲ್ಲಿ ಮತ್ತೆ ಶಿವಸೇನೆ ಪುಂಡಾಟ; ಕರ್ನಾಟಕ ಪ್ರವೇಶ ಯತ್ನ ವಿಫಲ
- Movies
ಸುದೀಪ್ 'ಫ್ಯಾಂಟಮ್' ಸಿನಿಮಾದಲ್ಲಿ ಬಾಲಿವುಡ್ ಬಿಗ್ ಬಿ ಅಮಿತಾಬ್ ಬಚ್ಚನ್?
- Sports
ಆಸ್ಟ್ರೇಲಿಯಾ ತಂಡದ ಬದ್ಧತೆ ಹಾಗೂ ಪೈಯ್ನ್ ನಾಯಕತ್ವವನ್ನು ಪ್ರಶ್ನಿಸಿದ ಮಾಜಿ ಆಸಿಸ್ ಕ್ರಿಕೆಟಿಗ
- Lifestyle
ಈ 3 ವಸ್ತುಗಳನ್ನು ಹಾಕಿ ಮಾಡಿದ ಜ್ಯೂಸ್ ಕುಡಿದರೆ ಬೊಜ್ಜು ಕರುಗುತ್ತೆ, ಸೌಂದರ್ಯ ಹೆಚ್ಚುತ್ತೆ
- Finance
1986ರಿಂದ 2021 ಸೆನ್ಸೆಕ್ಸ್ ಪ್ರಮುಖ ಮೈಲುಗಲ್ಲುಗಳು: 50,000 ಪಾಯಿಂಟ್ ದಾಖಲೆ ಹಾದಿ
- Education
BMRCL Recruitment 2021: ಸೀನಿಯರ್ ಅರ್ಬನ್ ಮತ್ತು ಟ್ರಾನ್ಸ್ ಪೋರ್ಟ್ ಪ್ಲಾನರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಕಾನ್ಸೆಪ್ಟ್ ಮಾದರಿಯಲ್ಲೇ ಉತ್ಪಾದನೆಗೊಳ್ಳಲಿದೆ ರೆನಾಲ್ಟ್ ಕಿಗರ್ ಕಾರು
ರೆನಾಲ್ಟ್ ಇಂಡಿಯಾ ಕಂಪನಿಯು ಮುಂದಿನ ಕೆಲವೇ ದಿನಗಳಲ್ಲಿ ತನ್ನ ಬಹುನೀರಿಕ್ಷಿತ ಕಿಗರ್ ಕಂಪ್ಯಾಕ್ಟ್ ಎಸ್‌ಯುವಿ ಕಾರು ಮಾದರಿಯನ್ನು ಬಿಡುಗಡೆ ಮಾಡಲು ಸಜ್ಜುಗೊಳ್ಳುತ್ತಿದ್ದು, ಹೊಸ ಕಾರನ್ನು ಕಾನ್ಸೆಪ್ಟ್ ಮಾದರಿಯಲ್ಲೇ ಉತ್ಪಾದನೆ ಕೈಗೊಳ್ಳುವ ಸಿದ್ದತೆಯಲ್ಲಿದೆ.

ಹೊಸ ಕಾರು ಮಾದರಿಗಳನ್ನು ಒಂದೇ ಪ್ಲಾಟ್‌ಫಾರ್ಮ್ ಅಡಿಯಲ್ಲಿ ಅಭಿವೃದ್ದಿಗೆ ಚಾಲನೆ ನೀಡಿರುವ ರೆನಾಲ್ಟ್ ಮತ್ತು ನಿಸ್ಸಾನ್ ಕಂಪನಿಗಳು ಮ್ಯಾಗ್ನೈಟ್ ನಂತರ ಕಿಗರ್ ಕಂಪ್ಯಾಕ್ಟ್ ಎಸ್‌ಯುವಿ ಬಿಡುಗಡೆ ಮಾಡುತ್ತಿದ್ದು, ಸದ್ಯ ಕಾನ್ಸೆಪ್ಟ್ ಮಾದರಿಯಲ್ಲಿ ಅನಾವರಣಗೊಂಡಿರುವ ಕಿಗರ್ ಕಾರಿನ ಪೆಟೆಂಟ್ ಚಿತ್ರಗಳು ಉತ್ಪಾದನಾ ಮಾದರಿಯಲ್ಲೂ ಕಾನ್ಸೆಪ್ಟ್ ಮಾದರಿಯ ವಿನ್ಯಾಸವನ್ನೇ ಮುಂದುವರಿಸುವ ಸುಳಿವು ನೀಡಿದೆ.

ಕಿಗರ್ ಕೂಡಾ ಮ್ಯಾಗ್ನೈಟ್ ಮಾದರಿಯಲ್ಲೇ ಬೆಲೆ ಪಡೆದುಕೊಳ್ಳುವ ಮೂಲಕ ಭಾರೀ ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಲ್ಲಿದ್ದು, ಪೆಟೆಂಟ್ ಚಿತ್ರದಲ್ಲಿರುವಂತೆ ಹೊಸ ಕಾರಿನ ಉತ್ಪಾದನಾ ಆವೃತ್ತಿಯು ಸಿದ್ದಗೊಳ್ಳಲಿದೆ.

ವಿಭಿನ್ನವಾದ ಹೊರ ವಿನ್ಯಾಸಗಳನ್ನು ಹೊಂದಿರುವ ಮ್ಯಾಗ್ನೈಟ್ ಮತ್ತು ಕಿಗರ್ ಕಾರುಗಳು ಒಂದೇ ಮಾದರಿಯು ತಾಂತ್ರಿಕ ಅಂಶಗಳು ಮತ್ತು ಎಂಜಿನ್ ಆಯ್ಕೆ ಪಡೆದುಕೊಂಡಿದ್ದರೂ ಪ್ರತ್ಯೇಕ ಮಾರಾಟ ಸೌಲಭ್ಯದೊಂದಿಗೆ ಗ್ರಾಹಕರನ್ನು ಸೆಳೆಯಲಿವೆ.

ನಾಲ್ಕು ಮೀಟರ್‌ಗಿಂತಲೂ ಕಡಿಮೆ ಉದ್ದಳತೆ ಹೊಂದಿರುವ ಕಂಪ್ಯಾಕ್ಟ್ ಎಸ್‌ಯುವಿ ಮಾರಾಟದಲ್ಲಿ ಸದ್ಯ ಪ್ರಮುಖ ಕಾರು ಕಂಪನಿಗಳ ನಡುವೆ ಭಾರೀ ಪೈಪೋಟಿ ನಡೆಯುತ್ತಿದ್ದು, ಕಿಗರ್ ಕಾರು ಮಾದರಿಯು ಸಹ ಕಂಪ್ಯಾಕ್ಟ್ ಎಸ್‌ಯುವಿ ಮಾರಾಟದಲ್ಲಿ ಹೊಸ ಸಂಚಲನ ಸೃಷ್ಟಿಸುವ ತವಕದಲ್ಲಿದೆ.

ಕಟಿಂಗ್ ಎರ್ಡ್ಜ್ ವಿನ್ಯಾಸದೊಂದಿಗೆ ಸ್ಪೋರ್ಟಿ ಲುಕ್ ಹೊಂದಿರುವ ಹೊಸ ಕಿಗರ್ ಕಾರು ಮಾದರಿಯು ಮುಂಭಾಗದಲ್ಲಿ ಡ್ಯುಯಲ್ ಹೆಡ್‌ಲ್ಯಾಂಪ್ ಜೊತೆಗೆ ಎಲ್ಇಡಿ ಡಿಆರ್‌ಎಲ್ಎಸ್ ಪಡೆದುಕೊಂಡಿದ್ದು, ಹೆಡ್‌ಲ್ಯಾಂಪ್ ಸೌಲಭ್ಯವು ಬಂಪರ್ ಮೇಲ್ಭಾಲದಲ್ಲಿ ಮತ್ತು ಎಲ್ಇಡಿ ಡಿಆರ್‌ಎಲ್ಎಸ್ ಸೌಲಭ್ಯವು ಬ್ಯಾನೆಟ್‌ಗೆ ಹೊಂದಿಕೊಂಡಿದೆ. ಕಿಗರ್ ಆವೃತ್ತಿಯು ಕೂಡಾ ಕಾನ್ಸೆಪ್ಟ್ ಮಾದರಿಯಲ್ಲೇ ಬಹುತೇಕ ತಾಂತ್ರಿಕ ಸೌಲಭ್ಯಗಳನ್ನು ಪಡೆದುಕೊಳ್ಳಲಿದ್ದು, ಟರ್ಬೋ ಎಂಜಿನ್ ಜೋಡಣೆ ಹೊಂದಿರುವ ಮಾದರಿಯು ಹೆಚ್ಚು ಪ್ರೀಮಿಯಂ ಸೌಲಭ್ಯಗಳನ್ನು ಪಡೆದುಕೊಳ್ಳಲಿದೆ.

ಹಾಗೆಯೇ ಡೇ ಲೈಟ್ ರನ್ನಿಂಗ್ ಲೈಟ್ ಸೌಲಭ್ಯವು ಫ್ರಂಟ್ ಗ್ರಿಲ್‍ವರೆಗೂ ಮುಂದುವರೆದಿದ್ದು, ಮಧ್ಯದಲ್ಲಿ ರೆನಾಲ್ಟ್ ಲೊಗೊ ಪಡೆದುಕೊಂಡಿದೆ. ಫ್ರಂಟ್ ಬಂಪರ್ ಸೌಲಭ್ಯವು ಮಧ್ಯದಲ್ಲಿ ದೊಡ್ಡದಾದ ಏರ್ ಡ್ಯಾಮ್ ಜೊತೆ ಸಿಲ್ವರ್ ಕೊಟಿಂಗ್ ಹೊಂದಿರುವ ಸ್ಕೀಡ್ ಪ್ಲೇಟ್ ಪಡೆದುಕೊಂಡಿದ್ದು, ಕಟಿಂಗ್ ಎಡ್ಜ್ ವಿನ್ಯಾಸಗಳು ಹೊಸ ಕಾರಿಗೆ ಮತ್ತಷ್ಟು ಬಲಿಷ್ಠತೆ ಪಡೆದುಕೊಳ್ಳಲಿವೆ.

ಕಾರಿನ ಮುಂಭಾಗದಲ್ಲಿನ ಬಲಿಷ್ಠ ವಿನ್ಯಾಸದಂತೆ ಸೈಡ್ ಪ್ರೋಫೈಲ್ ಕೂಡಾ ಆಕರ್ಷಕವಾಗಿದ್ದು, ಕ್ರೀಸ್ ಲೈನ್‌ಗಳೊಂದಿಗೆ ಬ್ಲ್ಯಾಕ್ ಕ್ಲ್ಯಾಂಡಿಂಗ್ ಒಳಗೊಂಡ ವೀಲ್ಹ್ ಆರ್ಚ್ ಮತ್ತು ಆಕರ್ಷಕ ಡೈಮಂಡ್ ಕಟ್ ಅಲಾಯ್ ವೀಲ್ಹ್ ಹೊಂದಿರಲಿದೆ. ಹೊಸ ಕಾರಿನಲ್ಲಿ ಪ್ರತಿ ಸ್ಪರ್ಧಿ ಕಾರು ಮಾದರಿಗಳಂತೆ ಡ್ಯುಯಲ್ ಟೋನ್ ಬಣ್ಣಗಳ ಆಯ್ಕೆ ಹೊಂದರಲಿರುವ ಕಿಗರ್ ಕಾರು ಮಾದರಿಯು ಇಂಟ್ರಾಗ್ರೆಟೆಡ್ ಟರ್ನ್ ಇಂಡಿಕೇಟರ್ ಹೊಂದಿರುವ ರಿಯಲ್ ವ್ಯೂ ಮಿರರ್, ಬಾಡಿ ಕಲರ್ ಹೊಂದಿರುವ ಡೋರ್ ಹ್ಯಾಂಡಲ್, ಬಾಡಿ ಪ್ಯಾನೆಲ್, ಕಪ್ಪು ಬಣ್ಣ ಹೊಂದಿರುವ ರೂಫ್ ರೈಲ್ಸ್ ಮತ್ತು ಎಲೆಕ್ಟ್ರಿಕ್ ಸನ್‌ರೂಫ್ ಪಡೆದುಕೊಂಡಿರಲಿದೆ.

ಎಲೆಕ್ಟ್ರಿಕ್ ಸನ್‌ರೂಫ್ ಸೌಲಭ್ಯವು ರೆನಾಲ್ಟ್ ಕಿಗರ್ ಹೈ ಎಂಡ್ ಮಾದರಿಗಳಲ್ಲಿ ಜೋಡಣೆ ಮಾಡಲಾಗಿದ್ದು, ನಿಸ್ಸಾನ್ ಮ್ಯಾಗ್ನೈಟ್ ಮಾದರಿಯಲ್ಲೂ ಈ ಸೌಲಭ್ಯವನ್ನು ನೀಡಲಾಗಿಲ್ಲ. ಆದರೆ ಕಿಗರ್ ಕಾರಿನಲ್ಲಿ ಸನ್‌ರೂಫ್ ಸೇರಿದಂತೆ ಕೆಲವು ವಿಭಿನ್ನ ತಾಂತ್ರಿಕ ಸೌಲಭ್ಯಗಳು ಗ್ರಾಹಕರನ್ನು ಸೆಳೆಯಲಿವೆ.
MOST READ: ಭಾರತದಲ್ಲಿ ಎರಡು ಹೊಸ ಎಸ್‌ಯುವಿ ಕಾರು ಮಾದರಿಗಳನ್ನು ಬಿಡುಗಡೆ ಮಾಡಲಿದೆ ಹ್ಯುಂಡೈ

ಇನ್ನು ರೆನಾಲ್ಟ್ ಕಂಪನಿಯು ಸದ್ಯಕ್ಕೆ ಕಿಗರ್ ಕಾನ್ಸೆಪ್ಟ್ ಮಾದರಿಯ ಹೊರಭಾಗದ ವಿನ್ಯಾಸಗಳನ್ನು ಮಾತ್ರವೇ ಅನಾವರಣಗೊಳಿಸಿದ್ದು, ಹೊಸ ಕಾರಿನ ಒಳ ವಿನ್ಯಾಸ ಮತ್ತು ತಾಂತ್ರಿಕ ಮಾಹಿತಿಗಳನ್ನು ಶೀಘ್ರದಲ್ಲೇ ಅನಾವರಣಗೊಳಿಸಲಿದೆ.

ಇನ್ನುಳಿದಂತೆ ಹೊಸ ಕಾರಿನಲ್ಲಿ ರೆನಾಲ್ಟ್ ಕಂಪನಿಯು ಸುಧಾರಿತ ತಂತ್ರಜ್ಞಾನ ಪ್ರೇರಿತ ಇನ್‌ಸ್ಟ್ರುಮೆಂಟ್ ಕ್ಲಸ್ಟರ್, ಟಚ್‌ಸ್ಕ್ರೀನ್ ಇನ್ಪೋಟೈನ್‌ಮೆಂಟ್ ಸಿಸ್ಟಂ, ಆಟೋಮ್ಯಾಟಿಕ್ ಕ್ಲೈಮೆಟ್ ಕಂಟ್ರೋಲ್ ಸೇರಿದಂತೆ ಹಲವು ಪ್ರೀಮಿಯಂ ಫೀಚರ್ಸ್‌ಗಳನ್ನು ಅಳವಡಿಸುವ ಸಾಧ್ಯತೆಗಳಿವೆ.
MOST READ: 2020ರ ಅವಧಿಯಲ್ಲಿ ಬಿಡುಗಡೆಯಾದ ಪ್ರಮುಖ ಹತ್ತು ಕಾರುಗಳಿವು..!

ರೆನಾಲ್ಟ್ ಕಂಪನಿಯು ಹೊಸ ಕಾರನ್ನು 2021ರ ಆರಂಭದಲ್ಲಿ ಬಿಡುಗಡೆ ಮಾಡಲಿದ್ದು, ಹೊಸ ಕಾರು ಮಾದರಿಯು ಮ್ಯಾಗ್ನೈಟ್ ಕಾರಿನಲ್ಲಿರುವಂತೆಯೇ 1.0-ಲೀಟರ್ ಎನ್ಎ ಪೆಟ್ರೋಲ್ ಮತ್ತು 1.0-ಲೀಟರ್ ಟರ್ಬೋ ಪೆಟ್ರೋಲ್ ಆಯ್ಕೆಗಳನ್ನು ಪಡೆದುಕೊಳ್ಳುವ ಮೂಲಕ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ.5.20 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 9 ಲಕ್ಷ ಬೆಲೆ ಅಂತರದಲ್ಲಿ ಮಾರಾಟಗೊಳ್ಳಲಿದೆ.