ಸನ್‌‌ರೂಫ್ ಸೇರಿದಂತೆ ಹಲವಾರು ಪ್ರೀಮಿಯಂ ಫೀಚರ್ಸ್ ಹೊಂದಿರಲಿದೆ ರೆನಾಲ್ಟ್ ಕಿಗರ್

ಕಾರು ಮಾರಾಟದಲ್ಲಿ ಸದ್ಯ ಹೊಸ ಸಂಚಲನಕ್ಕೆ ಕಾರಣವಾಗಿರುವ ರೆನಾಲ್ಟ್ ಇಂಡಿಯಾ ಕಂಪನಿಯು ಟ್ರೈಬರ್ ಸೇರಿದಂತೆ ವಿವಿಧ ಕಾರು ಮಾದರಿಗಳ ಮೂಲಕ ಅತ್ಯುತ್ತಮ ಬೇಡಿಕೆ ಪಡೆದುಕೊಳ್ಳುತ್ತಿದ್ದು, ಶೀಘ್ರದಲ್ಲೇ ಕಿಗರ್ ಕಾರು ಮಾದರಿಯ ಮೂಲಕ ಕಾರು ಮಾರಾಟದಲ್ಲಿ ಮತ್ತೊಂದು ಹಂತದ ಬೆಳವಣಿಗೆ ಸಾಧಿಸುವ ತವಕದಲ್ಲಿದೆ.

ಸನ್‌‌ರೂಫ್ ಸೇರಿದಂತೆ ಹಲವಾರು ಪ್ರೀಮಿಯಂ ಫೀಚರ್ಸ್ ಹೊಂದಿರಲಿದೆ ರೆನಾಲ್ಟ್ ಕಿಗರ್

ಹೊಸ ಕಾರು ಮಾದರಿಗಳನ್ನು ಒಂದೇ ಪ್ಲಾಟ್‌ಫಾರ್ಮ್ ಅಡಿಯಲ್ಲಿ ಅಭಿವೃದ್ದಿಗೆ ಚಾಲನೆ ನೀಡಿರುವ ರೆನಾಲ್ಟ್ ಮತ್ತು ನಿಸ್ಸಾನ್ ಕಂಪನಿಗಳು ಮ್ಯಾಗ್ನೈಟ್ ನಂತರ ಕಿಗರ್ ಕಂಪ್ಯಾಕ್ಟ್ ಎಸ್‌ಯುವಿ ಬಿಡುಗಡೆ ಮಾಡುತ್ತಿದ್ದು, ಮ್ಯಾಗ್ನೈಟ್ ಕಾರು ಮಾದರಿಯು ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ. 4.99 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 9.35 ಲಕ್ಷಕ್ಕೆ ಮಾರಾಟಗೊಳ್ಳತ್ತಿದೆ. ಮ್ಯಾಗ್ನೈಟ್ ಕಾರು ಬಿಡುಗಡೆಯಾದ ಒಂದು ತಿಂಗಳಿನಲ್ಲಿ ಬರೋಬ್ಬರಿ 18 ಸಾವಿರಕ್ಕೂ ಅಧಿಕ ಬುಕ್ಕಿಂಗ್ ಪಡೆದುಕೊಂಡಿದ್ದು, ಕಿಗರ್ ಕೂಡಾ ಮ್ಯಾಗ್ನೈಟ್ ಮಾದರಿಯಲ್ಲೇ ಬೆಲೆ ಪಡೆದುಕೊಳ್ಳುವ ಮೂಲಕ ಭಾರೀ ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಲ್ಲಿದೆ.

ಸನ್‌‌ರೂಫ್ ಸೇರಿದಂತೆ ಹಲವಾರು ಪ್ರೀಮಿಯಂ ಫೀಚರ್ಸ್ ಹೊಂದಿರಲಿದೆ ರೆನಾಲ್ಟ್ ಕಿಗರ್

ವಿಭಿನ್ನವಾದ ಹೊರ ವಿನ್ಯಾಸಗಳನ್ನು ಹೊಂದಿರುವ ಮ್ಯಾಗ್ನೈಟ್ ಮತ್ತು ಕಿಗರ್ ಕಾರುಗಳು ಒಂದೇ ಮಾದರಿಯು ತಾಂತ್ರಿಕ ಅಂಶಗಳು ಮತ್ತು ಎಂಜಿನ್ ಆಯ್ಕೆ ಪಡೆದುಕೊಂಡಿದ್ದು, ಪ್ರತ್ಯೇಕ ಮಾರಾಟ ಸೌಲಭ್ಯದೊಂದಿಗೆ ಗ್ರಾಹಕರನ್ನು ಸೆಳೆಯಲಿವೆ.

ಸನ್‌‌ರೂಫ್ ಸೇರಿದಂತೆ ಹಲವಾರು ಪ್ರೀಮಿಯಂ ಫೀಚರ್ಸ್ ಹೊಂದಿರಲಿದೆ ರೆನಾಲ್ಟ್ ಕಿಗರ್

ನಾಲ್ಕು ಮೀಟರ್‌ಗಿಂತಲೂ ಕಡಿಮೆ ಉದ್ದಳತೆ ಹೊಂದಿರುವ ಕಂಪ್ಯಾಕ್ಟ್ ಎಸ್‌ಯುವಿ ಮಾರಾಟದಲ್ಲಿ ಸದ್ಯ ಪ್ರಮುಖ ಕಾರು ಕಂಪನಿಗಳ ನಡುವೆ ಭಾರೀ ಪೈಪೋಟಿ ನಡೆಯುತ್ತಿದ್ದು, ಕಿಗರ್ ಕಾರು ಮಾದರಿಯು ಸಹ ಕಂಪ್ಯಾಕ್ಟ್ ಎಸ್‌ಯುವಿ ಮಾರಾಟದಲ್ಲಿ ಹೊಸ ಸಂಚಲನ ಸೃಷ್ಟಿಸುವ ತವಕದಲ್ಲಿದೆ.

ಸನ್‌‌ರೂಫ್ ಸೇರಿದಂತೆ ಹಲವಾರು ಪ್ರೀಮಿಯಂ ಫೀಚರ್ಸ್ ಹೊಂದಿರಲಿದೆ ರೆನಾಲ್ಟ್ ಕಿಗರ್

ಕಟಿಂಗ್ ಎರ್ಡ್ಜ್ ವಿನ್ಯಾಸದೊಂದಿಗೆ ಸ್ಪೋರ್ಟಿ ಲುಕ್ ಹೊಂದಿರುವ ಹೊಸ ಕಿಗರ್ ಕಾರು ಮಾದರಿಯು ಮುಂಭಾಗದಲ್ಲಿ ಡ್ಯುಯಲ್ ಹೆಡ್‌ಲ್ಯಾಂಪ್ ಜೊತೆಗೆ ಎಲ್ಇಡಿ ಡಿಆರ್‌ಎಲ್ಎಸ್ ಪಡೆದುಕೊಂಡಿದ್ದು, ಹೆಡ್‌ಲ್ಯಾಂಪ್ ಸೌಲಭ್ಯವು ಬಂಪರ್ ಮೇಲ್ಭಾಲದಲ್ಲಿ ಮತ್ತು ಎಲ್ಇಡಿ ಡಿಆರ್‌ಎಲ್ಎಸ್ ಸೌಲಭ್ಯವು ಬ್ಯಾನೆಟ್‌ಗೆ ಹೊಂದಿಕೊಂಡಿದೆ. ಕಿಗರ್ ಆವೃತ್ತಿಯು ಕೂಡಾ ಕಾನ್ಸೆಪ್ಟ್ ಮಾದರಿಯಲ್ಲೇ ಬಹುತೇಕ ತಾಂತ್ರಿಕ ಸೌಲಭ್ಯಗಳನ್ನು ಪಡೆದುಕೊಳ್ಳಲಿದ್ದು, ಟರ್ಬೋ ಎಂಜಿನ್ ಜೋಡಣೆ ಹೊಂದಿರುವ ಮಾದರಿಯು ಹೆಚ್ಚು ಪ್ರೀಮಿಯಂ ಸೌಲಭ್ಯಗಳನ್ನು ಪಡೆದುಕೊಳ್ಳಲಿದೆ.

ಸನ್‌‌ರೂಫ್ ಸೇರಿದಂತೆ ಹಲವಾರು ಪ್ರೀಮಿಯಂ ಫೀಚರ್ಸ್ ಹೊಂದಿರಲಿದೆ ರೆನಾಲ್ಟ್ ಕಿಗರ್

ಹಾಗೆಯೇ ಡೇ ಲೈಟ್ ರನ್ನಿಂಗ್ ಲೈಟ್ ಸೌಲಭ್ಯವು ಫ್ರಂಟ್ ಗ್ರಿಲ್‍ವರೆಗೂ ಮುಂದುವರೆದಿದ್ದು, ಮಧ್ಯದಲ್ಲಿ ರೆನಾಲ್ಟ್ ಲೊಗೊ ಪಡೆದುಕೊಂಡಿದೆ. ಫ್ರಂಟ್ ಬಂಪರ್ ಸೌಲಭ್ಯವು ಮಧ್ಯದಲ್ಲಿ ದೊಡ್ಡದಾದ ಏರ್ ಡ್ಯಾಮ್ ಜೊತೆ ಸಿಲ್ವರ್ ಕೊಟಿಂಗ್ ಹೊಂದಿರುವ ಸ್ಕೀಡ್ ಪ್ಲೇಟ್ ಪಡೆದುಕೊಂಡಿದ್ದು, ಕಟಿಂಗ್ ಎಡ್ಜ್ ವಿನ್ಯಾಸಗಳು ಹೊಸ ಕಾರಿಗೆ ಮತ್ತಷ್ಟು ಬಲಿಷ್ಠತೆ ಪಡೆದುಕೊಳ್ಳಲಿವೆ.

ಸನ್‌‌ರೂಫ್ ಸೇರಿದಂತೆ ಹಲವಾರು ಪ್ರೀಮಿಯಂ ಫೀಚರ್ಸ್ ಹೊಂದಿರಲಿದೆ ರೆನಾಲ್ಟ್ ಕಿಗರ್

ಕಾರಿನ ಮುಂಭಾಗದಲ್ಲಿನ ಬಲಿಷ್ಠ ವಿನ್ಯಾಸದಂತೆ ಸೈಡ್ ಪ್ರೋಫೈಲ್ ಕೂಡಾ ಆಕರ್ಷಕವಾಗಿದ್ದು, ಕ್ರೀಸ್‌ ಲೈನ್‌ಗಳೊಂದಿಗೆ ಬ್ಲ್ಯಾಕ್ ಕ್ಲ್ಯಾಂಡಿಂಗ್ ಒಳಗೊಂಡ ವೀಲ್ಹ್ ಆರ್ಚ್ ಮತ್ತು ಆಕರ್ಷಕ ಡೈಮಂಡ್ ಕಟ್ ಅಲಾಯ್ ವೀಲ್ಹ್ ಹೊಂದಿರಲಿದೆ. ಹೊಸ ಕಾರಿನಲ್ಲಿ ಪ್ರತಿ ಸ್ಪರ್ಧಿ ಕಾರು ಮಾದರಿಗಳಂತೆ ಡ್ಯುಯಲ್ ಟೋನ್ ಬಣ್ಣಗಳ ಆಯ್ಕೆ ಹೊಂದರಲಿರುವ ಕಿಗರ್ ಕಾರು ಮಾದರಿಯು ಇಂಟ್ರಾಗ್ರೆಟೆಡ್ ಟರ್ನ್ ಇಂಡಿಕೇಟರ್ ಹೊಂದಿರುವ ರಿಯಲ್ ವ್ಯೂ ಮಿರರ್, ಬಾಡಿ ಕಲರ್ ಹೊಂದಿರುವ ಡೋರ್ ಹ್ಯಾಂಡಲ್, ಬಾಡಿ ಪ್ಯಾನೆಲ್, ಕಪ್ಪು ಬಣ್ಣ ಹೊಂದಿರುವ ರೂಫ್ ರೈಲ್ಸ್ ಮತ್ತು ಎಲೆಕ್ಟ್ರಿಕ್ ಸನ್‌ರೂಫ್ ಪಡೆದುಕೊಂಡಿರಲಿದೆ.

ಸನ್‌‌ರೂಫ್ ಸೇರಿದಂತೆ ಹಲವಾರು ಪ್ರೀಮಿಯಂ ಫೀಚರ್ಸ್ ಹೊಂದಿರಲಿದೆ ರೆನಾಲ್ಟ್ ಕಿಗರ್

ಎಲೆಕ್ಟ್ರಿಕ್ ಸನ್‌ರೂಫ್ ಸೌಲಭ್ಯವು ರೆನಾಲ್ಟ್ ಕಿಗರ್ ಹೈ ಎಂಡ್ ಮಾದರಿಗಳಲ್ಲಿ ಜೋಡಣೆ ಮಾಡಲಾಗಿದ್ದು, ನಿಸ್ಸಾನ್ ಮ್ಯಾಗ್ನೈಟ್ ಮಾದರಿಯಲ್ಲೂ ಈ ಸೌಲಭ್ಯವನ್ನು ನೀಡಲಾಗಿಲ್ಲ. ಆದರೆ ಕಿಗರ್ ಕಾರಿನಲ್ಲಿ ಸನ್‌ರೂಫ್ ಸೇರಿದಂತೆ ಕೆಲವು ವಿಭಿನ್ನ ತಾಂತ್ರಿಕ ಸೌಲಭ್ಯಗಳು ಗ್ರಾಹಕರನ್ನು ಸೆಳೆಯಲಿವೆ.

MOST READ: ಭಾರತದಲ್ಲಿ ಎರಡು ಹೊಸ ಎಸ್‌ಯುವಿ ಕಾರು ಮಾದರಿಗಳನ್ನು ಬಿಡುಗಡೆ ಮಾಡಲಿದೆ ಹ್ಯುಂಡೈ

ಸನ್‌‌ರೂಫ್ ಸೇರಿದಂತೆ ಹಲವಾರು ಪ್ರೀಮಿಯಂ ಫೀಚರ್ಸ್ ಹೊಂದಿರಲಿದೆ ರೆನಾಲ್ಟ್ ಕಿಗರ್

ಇನ್ನು ರೆನಾಲ್ಟ್ ಕಂಪನಿಯು ಸದ್ಯಕ್ಕೆ ಕಿಗರ್ ಕಾನ್ಸೆಪ್ಟ್ ಮಾದರಿಯ ಹೊರಭಾಗದ ವಿನ್ಯಾಸಗಳನ್ನು ಮಾತ್ರವೇ ಅನಾವರಣಗೊಳಿಸಿದ್ದು, ಹೊಸ ಕಾರಿನ ಒಳ ವಿನ್ಯಾಸ ಮತ್ತು ತಾಂತ್ರಿಕ ಮಾಹಿತಿಗಳನ್ನು ಶೀಘ್ರದಲ್ಲೇ ಅನಾವರಣಗೊಳಿಸಲಿದೆ.

ಸನ್‌‌ರೂಫ್ ಸೇರಿದಂತೆ ಹಲವಾರು ಪ್ರೀಮಿಯಂ ಫೀಚರ್ಸ್ ಹೊಂದಿರಲಿದೆ ರೆನಾಲ್ಟ್ ಕಿಗರ್

ಇನ್ನುಳಿದಂತೆ ಹೊಸ ಕಾರಿನಲ್ಲಿ ರೆನಾಲ್ಟ್ ಕಂಪನಿಯು ಸುಧಾರಿತ ತಂತ್ರಜ್ಞಾನ ಪ್ರೇರಿತ ಇನ್‌ಸ್ಟ್ರುಮೆಂಟ್ ಕ್ಲಸ್ಟರ್, ಟಚ್‌ಸ್ಕ್ರೀನ್ ಇನ್ಪೋಟೈನ್‌ಮೆಂಟ್ ಸಿಸ್ಟಂ, ಆಟೋಮ್ಯಾಟಿಕ್ ಕ್ಲೈಮೆಟ್ ಕಂಟ್ರೋಲ್ ಸೇರಿದಂತೆ ಹಲವು ಪ್ರೀಮಿಯಂ ಫೀಚರ್ಸ್‌ಗಳನ್ನು ಅಳವಡಿಸುವ ಸಾಧ್ಯತೆಗಳಿವೆ.

MOST READ: ಪ್ರತಿ ಚಾರ್ಜ್‌ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿ..!

ಸನ್‌‌ರೂಫ್ ಸೇರಿದಂತೆ ಹಲವಾರು ಪ್ರೀಮಿಯಂ ಫೀಚರ್ಸ್ ಹೊಂದಿರಲಿದೆ ರೆನಾಲ್ಟ್ ಕಿಗರ್

ರೆನಾಲ್ಟ್ ಕಂಪನಿಯು ಹೊಸ ಕಾರನ್ನು 2021ರ ಆರಂಭದಲ್ಲಿ ಬಿಡುಗಡೆ ಮಾಡಲಿದ್ದು, ಹೊಸ ಕಾರು ಮಾದರಿಯು ಮ್ಯಾಗ್ನೈಟ್ ಕಾರಿನಲ್ಲಿರುವಂತೆಯೇ 1.0-ಲೀಟರ್ ಎನ್ಎ ಪೆಟ್ರೋಲ್ ಮತ್ತು 1.0-ಲೀಟರ್ ಟರ್ಬೋ ಪೆಟ್ರೋಲ್ ಆಯ್ಕೆಗಳನ್ನು ಪಡೆದುಕೊಳ್ಳುವ ಮೂಲಕ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ.5.20 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 9 ಲಕ್ಷ ಬೆಲೆ ಅಂತರದಲ್ಲಿ ಮಾರಾಟಗೊಳ್ಳಲಿದೆ.

Article Published On: Monday, December 28, 2020, 10:56 [IST]
English summary
Renault Kiger Compact SUV Spotted Testing With Sunroof. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+