ಪ್ರತಿಸ್ಪರ್ಧಿ ಕಾರು ಮಾದರಿಗಳಿಂತಲೂ ಅತಿ ಕಡಿಮೆ ಬೆಲೆಯಲ್ಲಿ ಬಿಡುಗಡೆಯಾಗಲಿದೆ ರೆನಾಲ್ಟ್ ಕಿಗರ್

ರೆನಾಲ್ಟ್ ಬಹುನೀರಿಕ್ಷಿತ ಕಿಗರ್ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯು ಶೀಘ್ರದಲ್ಲೇ ಮಾರುಕಟ್ಟೆ ಪ್ರವೇಶಿಸಲಿದ್ದು, ಹೊಸ ಕಾರು ಮಾದರಿಯು ಸಬ್ ಫೋರ್ ಮೀಟರ್ ಕಾರು ಮಾದರಿಗಳಲ್ಲೇ ಆಕರ್ಷಕ ಬೆಲೆಯೊಂದಿಗೆ ಬಿಡುಗಡೆಗೊಳ್ಳುವ ಸುಳಿವು ನೀಡಿದೆ.

ಪ್ರತಿಸ್ಪರ್ಧಿ ಕಾರು ಮಾದರಿಗಳಿಂತಲೂ ಅತಿ ಕಡಿಮೆ ಬೆಲೆಯಲ್ಲಿ ಬಿಡುಗಡೆಯಾಗಲಿದೆ ರೆನಾಲ್ಟ್ ಕಿಗರ್

ಪ್ರಸ್ತುತ ಮಾರುಕಟ್ಟೆಯಲ್ಲಿ ಖರೀದಿಗೆ ಲಭ್ಯವಿರುವ ಬಹುತೇಕ ಸಬ್ ಫೋರ್ ಮೀಟರ್ ಕಂಪ್ಯಾಕ್ಟ್ ಎಸ್‌ಯುವಿ ಕಾರು ಮಾದರಿಗಳು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 6.50 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 12.50 ಲಕ್ಷ ಬೆಲೆ ಅಂತರದಲ್ಲಿ ಮಾರಾಟಗೊಳ್ಳುತ್ತಿದ್ದು, ಇದೀಗ ಹೊಸ ತಂತ್ರಜ್ಞಾನ ಮತ್ತು ವಿನೂತನ ತಾಂತ್ರಿಕ ಅಂಶಗಳೊಂದಿಗೆ ಬಿಡುಗಡೆಯಾಗುತ್ತಿರುವ ರೆನಾಲ್ಟ್ ಹೊಚ್ಚ ಹೊಸ ಕಿಗರ್ ಕಾರು ಮಾದರಿಯು ಬೆಲೆ ವಿಚಾರವಾಗಿ ಗ್ರಾಹಕರನ್ನು ಸೆಳೆಯಲಿದೆ.

ಪ್ರತಿಸ್ಪರ್ಧಿ ಕಾರು ಮಾದರಿಗಳಿಂತಲೂ ಅತಿ ಕಡಿಮೆ ಬೆಲೆಯಲ್ಲಿ ಬಿಡುಗಡೆಯಾಗಲಿದೆ ರೆನಾಲ್ಟ್ ಕಿಗರ್

ಮಾಹಿತಿಗಳ ಪ್ರಕಾರ ರೆನಾಲ್ಟ್ ಹೊಸ ಕಿಗರ್ ಕಾರು ಮಾದರಿಯು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 5.50 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ.10 ಲಕ್ಷದೊಳಗೆ ಬಿಡುಗಡೆಯಾಗುವ ನೀರಿಕ್ಷೆಗಳಿವೆ ಎನ್ನಲಾಗಿದೆ.

ಪ್ರತಿಸ್ಪರ್ಧಿ ಕಾರು ಮಾದರಿಗಳಿಂತಲೂ ಅತಿ ಕಡಿಮೆ ಬೆಲೆಯಲ್ಲಿ ಬಿಡುಗಡೆಯಾಗಲಿದೆ ರೆನಾಲ್ಟ್ ಕಿಗರ್

ಆರಂಭಿಕ ಕಾರು ಮಾದರಿಯು ಪ್ರತಿಸ್ಪರ್ಧಿ ಕಾರು ಮಾದರಿಗಳಿಂತಲೂ ರೂ. 1 ಲಕ್ಷದಷ್ಟು ಕಡಿಮೆ ಬೆಲೆ ಹೊಂದಿರಲಿದ್ದು, ಹೊಸ ಕಾರು ಇದೇ ವರ್ಷಾಂತ್ಯಕ್ಕೆ ಇಲ್ಲವೇ 2021ರ ಆರಂಭದಲ್ಲಿ ಬಿಡುಗಡೆಯಾಗುವುದು ಬಹುತೇಕ ಖಚಿತವಾಗಿದೆ.

ಪ್ರತಿಸ್ಪರ್ಧಿ ಕಾರು ಮಾದರಿಗಳಿಂತಲೂ ಅತಿ ಕಡಿಮೆ ಬೆಲೆಯಲ್ಲಿ ಬಿಡುಗಡೆಯಾಗಲಿದೆ ರೆನಾಲ್ಟ್ ಕಿಗರ್

ಕರೋನಾ ವೈರಸ್ ಪರಿಣಾಮ ಹೊಸ ಕಾರಿನ ಬಿಡುಗಡೆಯನ್ನು ಮುಂದೂಡಿಕೆ ಮಾಡಿರುವ ರೆನಾಲ್ಟ್ ಕಂಪನಿಯು ಇದೀಗ ಹೊಸ ಕಾರಿನ ರೋಡ್ ಟೆಸ್ಟಿಂಗ್ ಪ್ರಕ್ರಿಯೆಗಳನ್ನು ಈಗಷ್ಟೇ ಪೂರ್ಣಗೊಳಿಸುತ್ತಿದ್ದು, ಹ್ಯುಂಡೈ ವೆನ್ಯೂ, ಕಿಯಾ ಸೊನೆಟ್, ಮಾರುತಿ ಸುಜುಕಿ ವಿಟಾರಾ ಬ್ರೆಝಾ, ಮಹೀಂದ್ರಾ ಎಕ್ಸ್‌ಯುವಿ300, ಟಾಟಾ ನೆಕ್ಸಾನ್, ಫೋರ್ಡ್ ಇಕೋಸ್ಪೋರ್ಟ್ ಕಾರುಗಳಿಗೆ ಪೈಪೋಟಿ ನೀಡುವ ತವಕದಲ್ಲಿದೆ.

MOST READ: ಪ್ರತಿ ಚಾರ್ಜ್‌ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿ..!

ಪ್ರತಿಸ್ಪರ್ಧಿ ಕಾರು ಮಾದರಿಗಳಿಂತಲೂ ಅತಿ ಕಡಿಮೆ ಬೆಲೆಯಲ್ಲಿ ಬಿಡುಗಡೆಯಾಗಲಿದೆ ರೆನಾಲ್ಟ್ ಕಿಗರ್

ಹೊಸ ಕಿಗರ್ ಕಾರಿನಲ್ಲಿ ರೆನಾಲ್ಟ್ ಕಂಪನಿಯು ಹೊಸದಾಗಿ ಅಭಿವೃದ್ದಿಗೊಳಿಸಲಾಗುತ್ತಿರುವ 1.0-ಲೀಟರ್ ಟರ್ಬೋ ಪೆಟ್ರೋಲ್ ಎಂಜಿನ್ ಜೋಡಣೆ ಮಾಡುವ ಸಾಧ್ಯತೆಗಳಿದ್ದು, ಇದೇ ಎಂಜಿನ್ ಅನ್ನು ಮುಂಬರುವ ದಿನಗಳಲ್ಲಿ ಬಿಡುಗಡೆಗೆ ಸಿದ್ದವಾಗುತ್ತಿರುವ ಟ್ರೈಬರ್ ಟರ್ಬೋ ಆವೃತ್ತಿಯಲ್ಲೂ ಜೋಡಣೆ ಮಾಡಲು ನಿರ್ಧರಿಸಲಾಗಿದೆ.

ಪ್ರತಿಸ್ಪರ್ಧಿ ಕಾರು ಮಾದರಿಗಳಿಂತಲೂ ಅತಿ ಕಡಿಮೆ ಬೆಲೆಯಲ್ಲಿ ಬಿಡುಗಡೆಯಾಗಲಿದೆ ರೆನಾಲ್ಟ್ ಕಿಗರ್

ಕಿಗರ್ ಕಾರು 5-ಸ್ಪೀಡ್ ಮ್ಯಾನುವಲ್ ಮತ್ತು 5-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಪ್ರೇರಿತ ಪೆಟ್ರೋಲ್ ಮತ್ತು ಟರ್ಬೋ ಪೆಟ್ರೋಲ್ ಎಂಜಿನ್ ಮಾದರಿಯಲ್ಲಿ ಮಾತ್ರವೇ ಮಾರಾಟವಾಗಲಿದ್ದು, ಪ್ರಸ್ತುತ ಮಾರುಕಟ್ಟೆಯಲ್ಲಿನ ಬೇಡಿಕೆಗೆ ಅನುಗುಣವಾಗಿ ಹಲವು ಪ್ರೀಮಿಯಂ ಸೌಲಭ್ಯಗಳನ್ನು ಹೊಂದಿರಲಿದೆ.

MOST READ: ಭಾರತದಲ್ಲಿ ಎರಡು ಹೊಸ ಎಸ್‌ಯುವಿ ಕಾರು ಮಾದರಿಗಳನ್ನು ಬಿಡುಗಡೆ ಮಾಡಲಿದೆ ಹ್ಯುಂಡೈ

ಪ್ರತಿಸ್ಪರ್ಧಿ ಕಾರು ಮಾದರಿಗಳಿಂತಲೂ ಅತಿ ಕಡಿಮೆ ಬೆಲೆಯಲ್ಲಿ ಬಿಡುಗಡೆಯಾಗಲಿದೆ ರೆನಾಲ್ಟ್ ಕಿಗರ್

ಹೊಸ ಕಾರು ಸಹಭಾಗೀತ್ವದ ಕಂಪನಿಯಾದ ನಿಸ್ಸಾನ್ ನಿರ್ಮಾಣದ ಹೊಸ ಮ್ಯಾಗ್ನೈಟ್ ಕಾರು ಮಾದರಿಯೊಂದಿಗೆ ಉತ್ಪಾದನಾ ಪ್ಲ್ಯಾಟ್‌ಫಾರ್ಮ್ ಹಂಚಿಕೊಳ್ಳಲಿದ್ದು, ಮಾಗ್ನೈಟ್ ಮತ್ತು ಕಿಗರ್ ಕಾರುಗಳು ತಾಂತ್ರಿಕವಾಗಿ ಒಂದೇ ಮಾದರಿಯ ಕಾರು ಮಾದರಿಗಳಾಗಿದ್ದರೂ ಗ್ರಾಹಕರ ಬೇಡಿಕೆಯೆಂತೆ ವಿಭಿನ್ನವಾದ ಆಕರ್ಷಕ ವಿನ್ಯಾಸ ಹೊಂದಿವೆ.

Most Read Articles

Kannada
English summary
Renault Kiger Could Become The Most Affordable Compact SUV In India. Read in Kannada.
Story first published: Saturday, October 10, 2020, 15:38 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X