ಪ್ರೀಮಿಯಂ ಫೀಚರ್ಸ್‌ಗಳೊಂದಿಗೆ ಬಿಡುಗಡೆಯಾಗಲಿದೆ ರೆನಾಲ್ಟ್ ಕಿಗರ್

ರೆನಾಲ್ಟ್ ಇಂಡಿಯಾ ಕಂಪನಿಯು ಶೀಘ್ರದಲ್ಲೇ ತನ್ನ ಬಹುನೀರಿಕ್ಷಿತ ಟ್ರೈಬರ್ ಕಂಪ್ಯಾಕ್ಟ್ ಎಸ್‌ಯುವಿ ಬಿಡುಗಡೆಗೆ ಸಿದ್ದವಾಗಿದ್ದು, ರೋಡ್ ಟೆಸ್ಟಿಂಗ್ ವೇಳೆ ಹೊಸ ಕಾರಿನ ಇಂಟಿರಿಯರ್ ಮಾಹಿತಿಯು ಬಹಿರಂಗವಾಗಿದೆ.

ಪ್ರೀಮಿಯಂ ಫೀಚರ್ಸ್‌ಗಳೊಂದಿಗೆ ಬಿಡುಗಡೆಯಾಗಲಿದೆ ರೆನಾಲ್ಟ್ ಕಿಗರ್

ಕರೋನಾ ವೈರಸ್ ಪರಿಣಾಮ ಹೊಸ ಕಿಗರ್ ಕಾರು ಬಿಡುಗಡೆಯನ್ನು ಮುಂದೂಡಿಕೆ ಮಾಡುತ್ತಿರುವ ರೆನಾಲ್ಟ್ ಕಂಪನಿಯು ಮುಂಬರುವ ಅಕ್ಟೋಬರ್ ಹೊತ್ತಿಗೆ ಬಿಡುಗಡೆ ಮಾಡುವ ಯೋಜನೆಯಲ್ಲಿದ್ದು, ಹೊಸ ಕಾರು ಕಂಪ್ಯಾಕ್ಟ್ ಎಸ್‌ಯುವಿ ಕಾರು ಮಾದರಿಯಲ್ಲೇ ವಿಶೇಷ ತಂತ್ರಜ್ಞಾನ ಪ್ರೇರಣೆಯೊಂದಿಗೆ ಆಕರ್ಷಕ ಬೆಲೆಯೊಂದಿಗೆ ಬಿಡುಗಡೆಯಾಗುವ ನೀರಿಕ್ಷೆಯಲ್ಲಿದೆ.

ಪ್ರೀಮಿಯಂ ಫೀಚರ್ಸ್‌ಗಳೊಂದಿಗೆ ಬಿಡುಗಡೆಯಾಗಲಿದೆ ರೆನಾಲ್ಟ್ ಕಿಗರ್

ಸದ್ಯ ಹೊಸ ಕಾರನ್ನು ಹೆಚ್‌ಬಿಸಿ ಕೋಡ್‌ನೆಮ್ ಆಧಾರದ ಮೇಲೆ ರೋಡ್ ಟೆಸ್ಟಿಂಗ್ ಪ್ರಕ್ರಿಯೆಗಳನ್ನು ನಡೆಸಲಾಗುತ್ತಿದ್ದು, ಕಿಗರ್ ಹೆಸರನ್ನೇ ಅಧಿಕೃತವಾಗಿ ಕರೆಯುವುದು ಬಹುತೇಕ ಖಚಿತವಾಗಿದೆ.

ಪ್ರೀಮಿಯಂ ಫೀಚರ್ಸ್‌ಗಳೊಂದಿಗೆ ಬಿಡುಗಡೆಯಾಗಲಿದೆ ರೆನಾಲ್ಟ್ ಕಿಗರ್

ಪ್ರಸ್ತುತ ಮಾರುಕಟ್ಟೆಯಲ್ಲಿರುವ ಡಸ್ಟರ್ ಕಾರಿಗಿಂತಲೂ ತುಸು ಸಣ್ಣ ಗಾತ್ರವನ್ನು ಹೊಂದಲಿರುವ ಕಿಗರ್ ಕಾರು ನಗರ ಪ್ರದೇಶದಲ್ಲಿನ ಸಂಚಾರಕ್ಕೆ ಸೂಕ್ತ ಆಯ್ಕೆಯಾಗಲಿದ್ದು, ಕೈಗೆಟುಕುವ ಬೆಲೆಯೊಂದಿಗೆ ಮಧ್ಯಮ ವರ್ಗದ ಗ್ರಾಹಕರ ಗಮನಸೆಳೆಯಲಿದೆ.

ಪ್ರೀಮಿಯಂ ಫೀಚರ್ಸ್‌ಗಳೊಂದಿಗೆ ಬಿಡುಗಡೆಯಾಗಲಿದೆ ರೆನಾಲ್ಟ್ ಕಿಗರ್

ಹೊಸ ಕಾರಿನಲ್ಲಿ ಸದ್ಯ ಮಾರುಕಟ್ಟೆಯಲ್ಲಿರುವ ಟ್ರೈಬರ್ ಕಾರು ಮಾದರಿಗಳಿಂದಲೂ ಕೆಲವು ಇಂಟಿರಿಯರ್ ಫೀಚರ್ಸ್‌ಗಳನ್ನು ಎರವಲು ಪಡೆದುಕೊಳ್ಳಲಾಗಿದ್ದು, ಟಚ್‌ಸ್ಕ್ರೀನ್ ಇನ್ಪೋಟೈನ್‌ಮೆಂಟ್, ಕನೆಕ್ಟೆಡ್ ಫೀಚರ್ಸ್‌ಗಳಿಗಾಗಿ ಇನ್ಪೋಟೈನ್ ಸಿಸ್ಟಂನಲ್ಲಿ ಇ-ಸಿಮ್ ಅಳವಡಿಕೆ, ಡಿಜಿಟಲ್ ಇನ್‌ಸ್ಟ್ರುಮೆಂಟ್ ಕ್ಲಸ್ಟರ್ ಮತ್ತು ಮಲ್ಟಿ ಫಂಕ್ಷನ್ ಸ್ಟೀರಿಂಗ್ ವೀಲ್ಹ್ ಜೋಡಿಸಲಾಗಿದೆ.

ಪ್ರೀಮಿಯಂ ಫೀಚರ್ಸ್‌ಗಳೊಂದಿಗೆ ಬಿಡುಗಡೆಯಾಗಲಿದೆ ರೆನಾಲ್ಟ್ ಕಿಗರ್

ಜೊತೆಗೆ ಪ್ರಯಾಣಿಕ ಸುರಕ್ಷತೆಗೂ ಹೆಚ್ಚಿನ ಒತ್ತು ನೀಡಲಾಗಿದ್ದು, ಫ್ರಂಟ್ ಡ್ಯುಯಲ್ ಏರ್‌ಬ್ಯಾಗ್, ಎಬಿಎಸ್ ಜೊತೆ ಇಬಿಡಿ, ಫ್ರಂಟ್ ಡಿಸ್ಕ್ ಬ್ರೇಕ್, ಸೀಟ್ ಬೆಲ್ಟ್ ರಿಮೆಂಡರ್, ಸ್ಪೀಡ್ ಅಲರ್ಟ್, ಫ್ರಂಟ್ ಆ್ಯಂಡ್ ರಿಯರ್ ಪಾರ್ಕಿಂಗ್ ಸೆನ್ಸಾರ್ ಸೇರಿದಂತೆ ಹಲವು ಸುರಕ್ಷಾ ಸೌಲಭ್ಯಗಳಿವೆ.

ಪ್ರೀಮಿಯಂ ಫೀಚರ್ಸ್‌ಗಳೊಂದಿಗೆ ಬಿಡುಗಡೆಯಾಗಲಿದೆ ರೆನಾಲ್ಟ್ ಕಿಗರ್

ಈ ಮೂಲಕ ಕಂಪ್ಯಾಕ್ಟ್ ಎಸ್‌ಯುವಿ ಕಾರುಗಳಿಂತಲೂ ಕಿಗರ್ ಕಾರು ಕಡಿಮೆ ಬೆಲೆಯಲ್ಲಿ ಬಿಡುಗಡೆಯಾಗುವ ಸುಳಿವು ನೀಡಿದ್ದು, ಹ್ಯುಂಡೈ ವೆನ್ಯೂ, ಮಾರುತಿ ಸುಜುಕಿ ವಿಟಾರಾ ಬ್ರೆಝಾ, ಮಹೀಂದ್ರಾ ಎಕ್ಸ್‌ಯುವಿ300, ನಿಸ್ಸಾನ್ ಕಿಕ್ಸ್ ಕಾರುಗಳಿಗೆ ಪೈಪೋಟಿ ನೀಡಲಿರುವ ಹೊಸ ಕಾರ ಐದು ಆಸನ ಮಾದರಿಯಲ್ಲಿ ಬಿಡುಗಡೆಯಾಗಲಿದೆ. ಜೊತೆಗೆ ಹೊಸ ಕಾರಿನ ಎಂಜಿನ್ ಆಯ್ಕೆ ಆಕರ್ಷಕವಾಗಿದ್ದು, ಪರ್ಫಾಮೆನ್ಸ್ ಜೊತೆಗೆ ಇಂಧನ ದಕ್ಷತೆಗೂ ಹೆಚ್ಚಿನ ಒತ್ತು ನೀಡಲಾಗಿದೆ.

MOST READ: ರೂ.5 ಲಕ್ಷಕ್ಕಿಂತ ಕಡಿಮೆ ಬೆಲೆಯ ಜನಪ್ರಿಯ ಕಾರುಗಳಿವು

ಪ್ರೀಮಿಯಂ ಫೀಚರ್ಸ್‌ಗಳೊಂದಿಗೆ ಬಿಡುಗಡೆಯಾಗಲಿದೆ ರೆನಾಲ್ಟ್ ಕಿಗರ್

ಹೊಸ ಕಿಗರ್ ಕಾರಿನಲ್ಲಿ ರೆನಾಲ್ಟ್ ಸಂಸ್ಥೆಯು ಹೊಸದಾಗಿ ಅಭಿವೃದ್ದಿಗೊಳಿಸಲಾಗುತ್ತಿರುವ 1.0-ಲೀಟರ್ ಟರ್ಬೋ ಪೆಟ್ರೋಲ್ ಎಂಜಿನ್ ಜೋಡಣೆ ಮಾಡುವ ಸಾಧ್ಯತೆಗಳಿದ್ದು, ಇದೇ ಎಂಜಿನ್ ಅನ್ನು ಮುಂಬರುವ ದಿನಗಳಲ್ಲಿ ಬಿಡುಗಡೆಗೆ ಸಿದ್ದವಾಗುತ್ತಿರುವ ಟ್ರೈಬರ್ ಟರ್ಬೋ ಆವೃತ್ತಿಯಲ್ಲೂ ಜೋಡಣೆ ಮಾಡಲು ನಿರ್ಧರಿಸಲಾಗಿದೆ.

ಪ್ರೀಮಿಯಂ ಫೀಚರ್ಸ್‌ಗಳೊಂದಿಗೆ ಬಿಡುಗಡೆಯಾಗಲಿದೆ ರೆನಾಲ್ಟ್ ಕಿಗರ್

ಹೀಗಾಗಿ ಕಿಗರ್ ಕಾರು 5-ಸ್ಪೀಡ್ ಮ್ಯಾನುವಲ್ ಮತ್ತು 5-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಪ್ರೇರಿತ ಪೆಟ್ರೋಲ್ ಎಂಜಿನ್ ಮಾದರಿಯಲ್ಲಿ ಮಾತ್ರವೇ ಮಾರಾಟವಾಗಲಿದ್ದು, ಪ್ರಸ್ತುತ ಮಾರುಕಟ್ಟೆಯಲ್ಲಿನ ಬೇಡಿಕೆಗೆ ಅನುಗುಣವಾಗಿ ಹಲವು ಪ್ರೀಮಿಯಂ ಸೌಲಭ್ಯಗಳನ್ನು ಹೊಂದಿರಲಿದೆ.

MOST READ: ಕಾರು ಖರೀದಿ ಮಾಡುವ ಕರೋನಾ ವಾರಿಯರ್ಸ್‌ಗೆ ಭರ್ಜರಿ ಆಫರ್ ನೀಡಿದ ಟಾಟಾ

ಪ್ರೀಮಿಯಂ ಫೀಚರ್ಸ್‌ಗಳೊಂದಿಗೆ ಬಿಡುಗಡೆಯಾಗಲಿದೆ ರೆನಾಲ್ಟ್ ಕಿಗರ್

ಹೊಸ ಕಾರಿನ ಬೆಲೆಯು ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 5.50 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 8 ಲಕ್ಷ ಬೆಲೆಯೊಂದಿಗೆ ಖರೀದಿಗೆ ಲಭ್ಯವಾಗುವ ಸಾಧ್ಯತೆಗಳಿದ್ದು, ಹೊಸ ಕಾರು ಅಕ್ಟೋಬರ್ ಹೊತ್ತಿಗೆ ಖರೀದಿಗೆ ಲಭ್ಯವಿರಲಿದೆ.

Source: Autocar India

Article Published On: Saturday, June 27, 2020, 15:33 [IST]
English summary
Renault Kiger Interiors Spied Ahead Of India Launch. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+