ಬಿಡುಗಡೆಯ ಸನಿಹದಲ್ಲಿ ರೆನಾಲ್ಟ್ ಕಿಗರ್ ಕಂಪ್ಯಾಕ್ಟ್ ಎಸ್‌ಯುವಿ

ರೆನಾಲ್ಟ್ ಕಂಪನಿಯು ತನ್ನ ಬಹುನೀರಿಕ್ಷಿತ ಟ್ರೈಬರ್ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯನ್ನು ಬಿಡುಗಡೆ ಮಾಡಲು ಅಂತಿಮ ಹಂತದ ಸಿದ್ದತೆಯಲ್ಲಿದ್ದು, ಹೊಸ ಕಾರಿನ ತಾಂತ್ರಿಕ ಅಂಶಗಳ ಕುರಿತಾದ ರೋಡ್ ಟೆಸ್ಟಿಂಗ್ ಪ್ರಕ್ರಿಯೆಯನ್ನು ಹಂತ ಹಂತವಾಗಿ ಪೂರ್ಣಗೊಳಿಸುತ್ತಿದೆ.

ಬಿಡುಗಡೆಯ ಸನಿಹದಲ್ಲಿ ರೆನಾಲ್ಟ್ ಕಿಗರ್ ಕಂಪ್ಯಾಕ್ಟ್ ಎಸ್‌ಯುವಿ

ಕರೋನಾ ವೈರಸ್ ಪರಿಣಾಮ ಸದ್ಯ ಹೊಸ ಕಿಗರ್ ಕಾರಿನ ಬಿಡುಗಡೆ ಪ್ರಕ್ರಿಯೆಯನ್ನು ಮುಂದೂಡಿಕೆ ಮಾಡಿ ರೋಡ್ ಟೆಸ್ಟಿಂಗ್ ನಡೆಸಿರುವ ರೆನಾಲ್ಟ್ ಕಂಪನಿಯು ಮುಂಬರುವ ಅಕ್ಟೋಬರ್ ಹೊತ್ತಿಗೆ ಬಿಡುಗಡೆ ಮಾಡುವ ಯೋಜನೆಯಲ್ಲಿದ್ದು, ಹೊಸ ಕಾರು ಕಂಪ್ಯಾಕ್ಟ್ ಎಸ್‌ಯುವಿ ಕಾರು ಮಾದರಿಯಲ್ಲೇ ವಿಶೇಷ ತಂತ್ರಜ್ಞಾನ ಪ್ರೇರಣೆಯೊಂದಿಗೆ ಆಕರ್ಷಕ ಬೆಲೆಯೊಂದಿಗೆ ಬಿಡುಗಡೆಯಾಗುವ ನೀರಿಕ್ಷೆಯಲ್ಲಿದೆ.

ಬಿಡುಗಡೆಯ ಸನಿಹದಲ್ಲಿ ರೆನಾಲ್ಟ್ ಕಿಗರ್ ಕಂಪ್ಯಾಕ್ಟ್ ಎಸ್‌ಯುವಿ

ಹೊಸ ಕಾರನ್ನು ಸದ್ಯ ಹೆಚ್‌ಬಿಸಿ ಕೋಡ್‌ನೆಮ್ ಆಧಾರದ ಮೇಲೆ ರೋಡ್ ಟೆಸ್ಟಿಂಗ್ ಪ್ರಕ್ರಿಯೆಗಳನ್ನು ನಡೆಸಲಾಗುತ್ತಿದ್ದು, ಕಿಗರ್ ಹೆಸರನ್ನೇ ಅಧಿಕೃತವಾಗಿ ಕರೆಯುವುದು ಬಹುತೇಕ ಖಚಿತವಾಗಿದೆ.

ಬಿಡುಗಡೆಯ ಸನಿಹದಲ್ಲಿ ರೆನಾಲ್ಟ್ ಕಿಗರ್ ಕಂಪ್ಯಾಕ್ಟ್ ಎಸ್‌ಯುವಿ

ಪ್ರಸ್ತುತ ಮಾರುಕಟ್ಟೆಯಲ್ಲಿರುವ ಡಸ್ಟರ್ ಕಾರಿಗಿಂತಲೂ ತುಸು ಸಣ್ಣ ಗಾತ್ರವನ್ನು ಹೊಂದಲಿರುವ ಕಿಗರ್ ಕಾರು ನಗರ ಪ್ರದೇಶದಲ್ಲಿನ ಸಂಚಾರಕ್ಕೆ ಸೂಕ್ತ ಆಯ್ಕೆಯಾಗಲಿದ್ದು, ಕೈಗೆಟುಕುವ ಬೆಲೆಯೊಂದಿಗೆ ಮಧ್ಯಮ ವರ್ಗದ ಗ್ರಾಹಕರ ಗಮನಸೆಳೆಯಲಿದೆ.

ಬಿಡುಗಡೆಯ ಸನಿಹದಲ್ಲಿ ರೆನಾಲ್ಟ್ ಕಿಗರ್ ಕಂಪ್ಯಾಕ್ಟ್ ಎಸ್‌ಯುವಿ

ಹೊಸ ಕಾರಿನಲ್ಲಿ ಸದ್ಯ ಮಾರುಕಟ್ಟೆಯಲ್ಲಿರುವ ಟ್ರೈಬರ್ ಕಾರು ಮಾದರಿಗಳಿಂದಲೂ ಕೆಲವು ಇಂಟಿರಿಯರ್ ಫೀಚರ್ಸ್‌ಗಳನ್ನು ಎರವಲು ಪಡೆದುಕೊಳ್ಳಲಾಗಿದ್ದು, ಟಚ್‌ಸ್ಕ್ರೀನ್ ಇನ್ಪೋಟೈನ್‌ಮೆಂಟ್, ಕನೆಕ್ಟೆಡ್ ಫೀಚರ್ಸ್‌ಗಳಿಗಾಗಿ ಇನ್ಪೋಟೈನ್ ಸಿಸ್ಟಂನಲ್ಲಿ ಇ-ಸಿಮ್ ಅಳವಡಿಕೆ, ಡಿಜಿಟಲ್ ಇನ್‌ಸ್ಟ್ರುಮೆಂಟ್ ಕ್ಲಸ್ಟರ್ ಮತ್ತು ಮಲ್ಟಿ ಫಂಕ್ಷನ್ ಸ್ಟೀರಿಂಗ್ ವೀಲ್ಹ್ ಜೋಡಿಸಲಾಗಿದೆ.

ಬಿಡುಗಡೆಯ ಸನಿಹದಲ್ಲಿ ರೆನಾಲ್ಟ್ ಕಿಗರ್ ಕಂಪ್ಯಾಕ್ಟ್ ಎಸ್‌ಯುವಿ

ಜೊತೆಗೆ ಪ್ರಯಾಣಿಕ ಸುರಕ್ಷತೆಗೂ ಹೆಚ್ಚಿನ ಒತ್ತು ನೀಡಲಾಗಿದ್ದು, ಫ್ರಂಟ್ ಡ್ಯುಯಲ್ ಏರ್‌ಬ್ಯಾಗ್, ಎಬಿಎಸ್ ಜೊತೆ ಇಬಿಡಿ, ಫ್ರಂಟ್ ಡಿಸ್ಕ್ ಬ್ರೇಕ್, ಸೀಟ್ ಬೆಲ್ಟ್ ರಿಮೆಂಡರ್, ಸ್ಪೀಡ್ ಅಲರ್ಟ್, ಫ್ರಂಟ್ ಆ್ಯಂಡ್ ರಿಯರ್ ಪಾರ್ಕಿಂಗ್ ಸೆನ್ಸಾರ್ ಸೇರಿದಂತೆ ಹಲವು ಸುರಕ್ಷಾ ಸೌಲಭ್ಯಗಳಿವೆ.

ಬಿಡುಗಡೆಯ ಸನಿಹದಲ್ಲಿ ರೆನಾಲ್ಟ್ ಕಿಗರ್ ಕಂಪ್ಯಾಕ್ಟ್ ಎಸ್‌ಯುವಿ

ಈ ಮೂಲಕ ಕಂಪ್ಯಾಕ್ಟ್ ಎಸ್‌ಯುವಿ ಕಾರುಗಳಿಂತಲೂ ಕಿಗರ್ ಕಾರು ಕಡಿಮೆ ಬೆಲೆಯಲ್ಲಿ ಬಿಡುಗಡೆಯಾಗುವ ಸುಳಿವು ನೀಡಿದ್ದು, ಹ್ಯುಂಡೈ ವೆನ್ಯೂ, ಮಾರುತಿ ಸುಜುಕಿ ವಿಟಾರಾ ಬ್ರೆಝಾ, ಮಹೀಂದ್ರಾ ಎಕ್ಸ್‌ಯುವಿ300, ನಿಸ್ಸಾನ್ ಕಿಕ್ಸ್ ಕಾರುಗಳಿಗೆ ಪೈಪೋಟಿ ನೀಡಲಿರುವ ಹೊಸ ಕಾರ ಐದು ಆಸನ ಮಾದರಿಯಲ್ಲಿ ಬಿಡುಗಡೆಯಾಗಲಿದೆ. ಜೊತೆಗೆ ಹೊಸ ಕಾರಿನ ಎಂಜಿನ್ ಆಯ್ಕೆ ಆಕರ್ಷಕವಾಗಿದ್ದು, ಪರ್ಫಾಮೆನ್ಸ್ ಜೊತೆಗೆ ಇಂಧನ ದಕ್ಷತೆಗೂ ಹೆಚ್ಚಿನ ಒತ್ತು ನೀಡಲಾಗಿದೆ.

MOST READ: ರೂ.5 ಲಕ್ಷಕ್ಕಿಂತ ಕಡಿಮೆ ಬೆಲೆಯ ಜನಪ್ರಿಯ ಕಾರುಗಳಿವು

ಬಿಡುಗಡೆಯ ಸನಿಹದಲ್ಲಿ ರೆನಾಲ್ಟ್ ಕಿಗರ್ ಕಂಪ್ಯಾಕ್ಟ್ ಎಸ್‌ಯುವಿ

ಹೊಸ ಕಿಗರ್ ಕಾರಿನಲ್ಲಿ ರೆನಾಲ್ಟ್ ಸಂಸ್ಥೆಯು ಹೊಸದಾಗಿ ಅಭಿವೃದ್ದಿಗೊಳಿಸಲಾಗುತ್ತಿರುವ 1.0-ಲೀಟರ್ ಟರ್ಬೋ ಪೆಟ್ರೋಲ್ ಎಂಜಿನ್ ಜೋಡಣೆ ಮಾಡುವ ಸಾಧ್ಯತೆಗಳಿದ್ದು, ಇದೇ ಎಂಜಿನ್ ಅನ್ನು ಮುಂಬರುವ ದಿನಗಳಲ್ಲಿ ಬಿಡುಗಡೆಗೆ ಸಿದ್ದವಾಗುತ್ತಿರುವ ಟ್ರೈಬರ್ ಟರ್ಬೋ ಆವೃತ್ತಿಯಲ್ಲೂ ಜೋಡಣೆ ಮಾಡಲು ನಿರ್ಧರಿಸಲಾಗಿದೆ.

ಬಿಡುಗಡೆಯ ಸನಿಹದಲ್ಲಿ ರೆನಾಲ್ಟ್ ಕಿಗರ್ ಕಂಪ್ಯಾಕ್ಟ್ ಎಸ್‌ಯುವಿ

ಹೀಗಾಗಿ ಕಿಗರ್ ಕಾರು 5-ಸ್ಪೀಡ್ ಮ್ಯಾನುವಲ್ ಮತ್ತು 5-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಪ್ರೇರಿತ ಪೆಟ್ರೋಲ್ ಎಂಜಿನ್ ಮಾದರಿಯಲ್ಲಿ ಮಾತ್ರವೇ ಮಾರಾಟವಾಗಲಿದ್ದು, ಪ್ರಸ್ತುತ ಮಾರುಕಟ್ಟೆಯಲ್ಲಿನ ಬೇಡಿಕೆಗೆ ಅನುಗುಣವಾಗಿ ಹಲವು ಪ್ರೀಮಿಯಂ ಸೌಲಭ್ಯಗಳನ್ನು ಹೊಂದಿರಲಿದೆ.

MOST READ: ಪ್ರತಿ ಚಾರ್ಜ್‌ಗೆ 480 ಕಿ.ಮೀ ಮೈಲೇಜ್ ನೀಡುವ ಎಲೆಕ್ಟ್ರಿಕ್ ಎಸ್‌ಯುವಿ ಬಿಡುಗಡೆ ಮಾಡಲಿದೆ ನಿಸ್ಸಾನ್

ಬಿಡುಗಡೆಯ ಸನಿಹದಲ್ಲಿ ರೆನಾಲ್ಟ್ ಕಿಗರ್ ಕಂಪ್ಯಾಕ್ಟ್ ಎಸ್‌ಯುವಿ

ಹೊಸ ಕಾರಿನ ಬೆಲೆಯು ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 5.50 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 8 ಲಕ್ಷ ಬೆಲೆಯೊಂದಿಗೆ ಖರೀದಿಗೆ ಲಭ್ಯವಾಗುವ ಸಾಧ್ಯತೆಗಳಿದ್ದು, ಹೊಸ ಕಾರು ಸೆಪ್ಟೆಂಬರ್ ಅಥವಾ ಅಕ್ಟೋಬರ್ ಹೊತ್ತಿಗೆ ಖರೀದಿಗೆ ಲಭ್ಯವಿರಲಿದೆ.

Most Read Articles

Kannada
English summary
Renault Kiger Spied Testing Side Profile Details Revealed. Read in kannada.
Story first published: Saturday, July 4, 2020, 13:33 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X