ಲಾಕ್‌ಡೌನ್ ಸಡಿಲಿಕೆ ನಂತರ ರೋಡ್ ಟೆಸ್ಟಿಂಗ್‌ನಲ್ಲಿ ಕಾಣಿಸಿಕೊಂಡ ರೆನಾಲ್ಟ್ ಕಿಗರ್

ರೆನಾಲ್ಟ್ ಹೊಚ್ಚ ಹೊಸ ಕಿಗರ್ ಮಾದರಿಯು ಮುಂದಿನ ಕೆಲವೇ ದಿನಗಳಲ್ಲಿ ಬಿಡುಗಡೆಗೊಳ್ಳುವ ಸಿದ್ದತೆಯಲ್ಲಿದ್ದು, ಲಾಕ್‌ಡೌನ್ ಸಡಿಲಿಕೆಯ ನಂತರ ಹೊಸ ಕಾರಿನ ಎಂಜಿನ್ ಕಾರ್ಯಕ್ಷಮತೆ ಕುರಿತಾದ ರೋಡ್ ಟೆಸ್ಟಿಂಗ್ ಪ್ರಕ್ರಿಯೆಗೆ ಮರುಚಾಲನೆ ನೀಡಲಾಗಿದೆ.

ರೋಡ್ ಟೆಸ್ಟಿಂಗ್‌ನಲ್ಲಿ ಕಾಣಿಸಿಕೊಂಡ ರೆನಾಲ್ಟ್ ಕಿಗರ್

ಭಾರತದಲ್ಲಿ ಇದೇ ತಿಂಗಳು ಜೂನ್ ಅಥವಾ ಜುಲೈನಲ್ಲಿ ಬಿಡುಗಡೆಯ ಸಿದ್ದತೆಯಲ್ಲಿದ್ದ ಕಿಗರ್ ಕಂಪ್ಯಾಕ್ಟ್ ಎಸ್‌ಯುವಿ ಕಾರು ಕರೋನಾ ವೈರಸ್ ಪರಿಣಾಮ ಮುಂದೂಡಿಕೆ ಮಾಡಲಾಗಿದ್ದು, ಏಪ್ರಿಲ್ ಮತ್ತು ಮೇ ಅವಧಿಯಲ್ಲಿ ನಡೆಯಬೇಕಿದ್ದ ರೋಡ್ ಟೆಸ್ಟಿಂಗ್ ಪ್ರಕ್ರಿಯೆಗಳಿಗೆ ಇದೀಗ ಮರುಚಾಲನೆ ನೀಡಿರುವುದು ಹೊಸ ಕಾರಿನ ಬಿಡುಗಡೆಯಲ್ಲಿ ಮತ್ತಷ್ಟು ವಿಳಂಬವಾಗಲಿದೆ.

ರೋಡ್ ಟೆಸ್ಟಿಂಗ್‌ನಲ್ಲಿ ಕಾಣಿಸಿಕೊಂಡ ರೆನಾಲ್ಟ್ ಕಿಗರ್

ಸದ್ಯ ಹೊಸ ಕಾರನ್ನು ಹೆಚ್‌ಬಿಸಿ ಕೋಡ್‌ನೆಮ್ ಆಧಾರದ ಮೇಲೆ ರೋಡ್ ಟೆಸ್ಟಿಂಗ್ ಪ್ರಕ್ರಿಯೆಗಳನ್ನು ನಡೆಸಲಾಗುತ್ತಿದ್ದು, ಕಿಗರ್ ಹೆಸರನ್ನೇ ಅಧಿಕೃತವಾಗಿ ಕರೆಯುವುದು ಬಹುತೇಕ ಖಚಿತವಾಗಿದೆ.

ರೋಡ್ ಟೆಸ್ಟಿಂಗ್‌ನಲ್ಲಿ ಕಾಣಿಸಿಕೊಂಡ ರೆನಾಲ್ಟ್ ಕಿಗರ್

ಪ್ರಸ್ತುತ ಮಾರುಕಟ್ಟೆಯಲ್ಲಿರುವ ಡಸ್ಟರ್ ಕಾರಿಗಿಂತಲೂ ತುಸು ಸಣ್ಣ ಗಾತ್ರವನ್ನು ಹೊಂದಲಿರುವ ಕಿಗರ್ ಕಾರು ನಗರ ಪ್ರದೇಶದಲ್ಲಿನ ಸಂಚಾರಕ್ಕೆ ಸೂಕ್ತ ಆಯ್ಕೆಯಾಗಲಿದ್ದು, ಕೈಗೆಟುಕುವ ಬೆಲೆಯೊಂದಿಗೆ ಮಧ್ಯಮ ವರ್ಗದ ಗ್ರಾಹಕರ ಗಮನಸೆಳೆಯಲಿದೆ.

ರೋಡ್ ಟೆಸ್ಟಿಂಗ್‌ನಲ್ಲಿ ಕಾಣಿಸಿಕೊಂಡ ರೆನಾಲ್ಟ್ ಕಿಗರ್

ಇತರೆ ಕಂಪ್ಯಾಕ್ಟ್ ಎಸ್‌ಯುವಿ ಕಾರುಗಳಿಂತಲೂ ಕಿಗರ್ ಕಾರು ಕಡಿಮೆ ಬೆಲೆಯಲ್ಲಿ ಬಿಡುಗಡೆಯಾಗುವ ಸುಳಿವು ನೀಡಿದ್ದು, ಹ್ಯುಂಡೈ ವೆನ್ಯೂ, ಮಾರುತಿ ಸುಜುಕಿ ವಿಟಾರಾ ಬ್ರೆಝಾ, ಮಹೀಂದ್ರಾ ಎಕ್ಸ್‌ಯುವಿ300, ನಿಸ್ಸಾನ್ ಕಿಕ್ಸ್ ಕಾರುಗಳಿಗೆ ಪೈಪೋಟಿ ನೀಡಲಿರುವ ಹೊಸ ಕಾರ ಐದು ಆಸನ ಮಾದರಿಯಲ್ಲಿ ಬಿಡುಗಡೆಯಾಗಲಿದೆ. ಜೊತೆಗೆ ಹೊಸ ಕಾರಿನ ಎಂಜಿನ್ ಆಯ್ಕೆ ಆಕರ್ಷಕವಾಗಿದ್ದು, ಪರ್ಫಾಮೆನ್ಸ್ ಜೊತೆಗೆ ಇಂಧನ ದಕ್ಷತೆಗೂ ಹೆಚ್ಚಿನ ಒತ್ತು ನೀಡಲಾಗಿದೆ.

MOST READ: ಲಾಕ್‌ಡೌನ್ ಸಂಕಷ್ಟ: ಸೆಕೆಂಡ್ ಹ್ಯಾಂಡ್ ಕಾರು ಮಾರಾಟ ಉದ್ಯಮ ಆರಂಭಿಸಿದ ಫೋಕ್ಸ್‌ವ್ಯಾಗನ್

ರೋಡ್ ಟೆಸ್ಟಿಂಗ್‌ನಲ್ಲಿ ಕಾಣಿಸಿಕೊಂಡ ರೆನಾಲ್ಟ್ ಕಿಗರ್

ಹೊಸ ಕಿಗರ್ ಕಾರಿನಲ್ಲಿ ರೆನಾಲ್ಟ್ ಸಂಸ್ಥೆಯು ಹೊಸದಾಗಿ ಅಭಿವೃದ್ದಿಗೊಳಿಸಲಾಗುತ್ತಿರುವ 1.0-ಲೀಟರ್ ಟರ್ಬೋ ಪೆಟ್ರೋಲ್ ಎಂಜಿನ್ ಜೋಡಣೆ ಮಾಡುವ ಸಾಧ್ಯತೆಗಳಿದ್ದು, ಇದೇ ಎಂಜಿನ್ ಅನ್ನು ಮುಂಬರುವ ದಿನಗಳಲ್ಲಿ ಬಿಡುಗಡೆಗೆ ಸಿದ್ದವಾಗುತ್ತಿರುವ ಟ್ರೈಬರ್ ಟರ್ಬೋ ಆವೃತ್ತಿಯಲ್ಲೂ ಜೋಡಣೆ ಮಾಡಲು ನಿರ್ಧರಿಸಲಾಗಿದೆ.

ರೋಡ್ ಟೆಸ್ಟಿಂಗ್‌ನಲ್ಲಿ ಕಾಣಿಸಿಕೊಂಡ ರೆನಾಲ್ಟ್ ಕಿಗರ್

ಹೀಗಾಗಿ ಕಿಗರ್ ಕಾರು ಪೆಟ್ರೋಲ್ ಮಾದರಿಯಲ್ಲಿ ಮಾತ್ರವೇ ಮಾರಾಟವಾಗಲಿದ್ದು, ಪ್ರಸ್ತುತ ಮಾರುಕಟ್ಟೆಯಲ್ಲಿನ ಬೇಡಿಕೆಗೆ ಅನುಗುಣವಾಗಿ ಹಲವು ಪ್ರೀಮಿಯಂ ಸೌಲಭ್ಯಗಳನ್ನು ಹೊಂದಿರಲಿದೆ.

MOST READ: ರೂ.5 ಲಕ್ಷಕ್ಕಿಂತ ಕಡಿಮೆ ಬೆಲೆಯ ಜನಪ್ರಿಯ ಕಾರುಗಳಿವು

ರೋಡ್ ಟೆಸ್ಟಿಂಗ್‌ನಲ್ಲಿ ಕಾಣಿಸಿಕೊಂಡ ರೆನಾಲ್ಟ್ ಕಿಗರ್

ಹೊಸ ಕಾರಿನ ಬೆಲೆಯು ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 5.80 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ.8 ಲಕ್ಷ ಬೆಲೆಯೊಂದಿಗೆ ಖರೀದಿಗೆ ಲಭ್ಯವಾಗುವ ಸಾಧ್ಯತೆಗಳಿದ್ದು, ಕಿಗರ್ ಮತ್ತು ನಿಸ್ಸಾನ್ ಹೊಸ ಮ್ಯಾಗ್ನೆಟ್ ಕಾರು ಕೂಡಾ ಒಂದೇ ಮಾದರಿಯ ಎಂಜಿನ್ ಪಡೆದುಕೊಳ್ಳಲಿವೆ.

Most Read Articles

Kannada
English summary
Renault Kiger Spotted Testing Ahead Of Its India Launch. Read in Kannada.
Story first published: Saturday, June 6, 2020, 18:35 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X