Just In
- 44 min ago ಕಂಪನಿಗೆ 140ರ ಸಂಭ್ರಮ: ಕೇವಲ 140 ವಿಶೇಷ ಆವೃತ್ತಿಗಳು ನಿರ್ಮಾಣ: ಬುಕಿಂಗ್ ಆರಂಭ
- 2 hrs ago ಟಿವಿಎಸ್ ಐಕ್ಯೂಬ್ಗೆ ನಡುಕ ಶುರು!: ಸದ್ಯದಲ್ಲೇ ಕಡಿಮೆ ಬೆಲೆ ಮಾರುಕಟ್ಟೆಗೆ ಬಜಾಜ್ ಚೇತಕ್ ಎಲೆಕ್ಟ್ರಿಕ್
- 3 hrs ago ರಾಜ್ಯದಲ್ಲಿ ತಯಾರಾಗುವ ಟೊಯೊಟಾ ಇನ್ನೋವಾ ಹೈಕ್ರಾಸ್ಗೆ ಸೆಲೆಬ್ರಿಟಿಗಳು ಫಿಧಾ: ಈ ಕಾರು ಖರೀದಿಸಿದ ನಟಿ
- 3 hrs ago ಹ್ಯುಂಡೈನ ಈ ಕಾರಿಗೆ ಭಾರತದಲ್ಲಿ ಭರ್ಜರಿ ಡಿಸ್ಕೌಂಟ್: ಇದಕ್ಕಿಂತ ಉತ್ತಮ ಆಫರ್ ಸದ್ಯಕ್ಕಿಲ್ಲ!
Don't Miss!
- News Everest Fish Curry Masala: ಎವರೆಸ್ಟ್ ಫಿಶ್ ಕರಿ ಮಸಾಲೆ ಬ್ಯಾನ್: ಕಾರಣ ಇಲ್ಲಿದೆ
- Lifestyle ನೀವು ಸಹ ಈ ಶರ್ಬತ್ನ ರುಚಿ ಸವಿದಿದ್ದೀರಾ..? ಮರೆಯಾಯ್ತು ಈ ಹಳೆಯ ನೆನಪು
- Sports LSG vs CSK IPL 2024: ಲಕ್ನೋ vs ಚೆನ್ನೈ ಮಹಾಕದನ; ಟಾಸ್ ವರದಿ, ಆಡುವ 11ರ ಬಳಗ
- Movies 3ನೇ ಬಾರಿ ಜೊತೆಯಾದ್ರು ಶಿವಣ್ಣ- ಜಾಕಿ ಭಾವನಾ; ಯಾವ ಸಿನಿಮಾ ಗೊತ್ತಾ?
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಲಾಕ್ಡೌನ್ ಸಡಿಲಿಕೆ ನಂತರ ರೋಡ್ ಟೆಸ್ಟಿಂಗ್ನಲ್ಲಿ ಕಾಣಿಸಿಕೊಂಡ ರೆನಾಲ್ಟ್ ಕಿಗರ್
ರೆನಾಲ್ಟ್ ಹೊಚ್ಚ ಹೊಸ ಕಿಗರ್ ಮಾದರಿಯು ಮುಂದಿನ ಕೆಲವೇ ದಿನಗಳಲ್ಲಿ ಬಿಡುಗಡೆಗೊಳ್ಳುವ ಸಿದ್ದತೆಯಲ್ಲಿದ್ದು, ಲಾಕ್ಡೌನ್ ಸಡಿಲಿಕೆಯ ನಂತರ ಹೊಸ ಕಾರಿನ ಎಂಜಿನ್ ಕಾರ್ಯಕ್ಷಮತೆ ಕುರಿತಾದ ರೋಡ್ ಟೆಸ್ಟಿಂಗ್ ಪ್ರಕ್ರಿಯೆಗೆ ಮರುಚಾಲನೆ ನೀಡಲಾಗಿದೆ.
ಭಾರತದಲ್ಲಿ ಇದೇ ತಿಂಗಳು ಜೂನ್ ಅಥವಾ ಜುಲೈನಲ್ಲಿ ಬಿಡುಗಡೆಯ ಸಿದ್ದತೆಯಲ್ಲಿದ್ದ ಕಿಗರ್ ಕಂಪ್ಯಾಕ್ಟ್ ಎಸ್ಯುವಿ ಕಾರು ಕರೋನಾ ವೈರಸ್ ಪರಿಣಾಮ ಮುಂದೂಡಿಕೆ ಮಾಡಲಾಗಿದ್ದು, ಏಪ್ರಿಲ್ ಮತ್ತು ಮೇ ಅವಧಿಯಲ್ಲಿ ನಡೆಯಬೇಕಿದ್ದ ರೋಡ್ ಟೆಸ್ಟಿಂಗ್ ಪ್ರಕ್ರಿಯೆಗಳಿಗೆ ಇದೀಗ ಮರುಚಾಲನೆ ನೀಡಿರುವುದು ಹೊಸ ಕಾರಿನ ಬಿಡುಗಡೆಯಲ್ಲಿ ಮತ್ತಷ್ಟು ವಿಳಂಬವಾಗಲಿದೆ.
ಸದ್ಯ ಹೊಸ ಕಾರನ್ನು ಹೆಚ್ಬಿಸಿ ಕೋಡ್ನೆಮ್ ಆಧಾರದ ಮೇಲೆ ರೋಡ್ ಟೆಸ್ಟಿಂಗ್ ಪ್ರಕ್ರಿಯೆಗಳನ್ನು ನಡೆಸಲಾಗುತ್ತಿದ್ದು, ಕಿಗರ್ ಹೆಸರನ್ನೇ ಅಧಿಕೃತವಾಗಿ ಕರೆಯುವುದು ಬಹುತೇಕ ಖಚಿತವಾಗಿದೆ.
ಪ್ರಸ್ತುತ ಮಾರುಕಟ್ಟೆಯಲ್ಲಿರುವ ಡಸ್ಟರ್ ಕಾರಿಗಿಂತಲೂ ತುಸು ಸಣ್ಣ ಗಾತ್ರವನ್ನು ಹೊಂದಲಿರುವ ಕಿಗರ್ ಕಾರು ನಗರ ಪ್ರದೇಶದಲ್ಲಿನ ಸಂಚಾರಕ್ಕೆ ಸೂಕ್ತ ಆಯ್ಕೆಯಾಗಲಿದ್ದು, ಕೈಗೆಟುಕುವ ಬೆಲೆಯೊಂದಿಗೆ ಮಧ್ಯಮ ವರ್ಗದ ಗ್ರಾಹಕರ ಗಮನಸೆಳೆಯಲಿದೆ.
ಇತರೆ ಕಂಪ್ಯಾಕ್ಟ್ ಎಸ್ಯುವಿ ಕಾರುಗಳಿಂತಲೂ ಕಿಗರ್ ಕಾರು ಕಡಿಮೆ ಬೆಲೆಯಲ್ಲಿ ಬಿಡುಗಡೆಯಾಗುವ ಸುಳಿವು ನೀಡಿದ್ದು, ಹ್ಯುಂಡೈ ವೆನ್ಯೂ, ಮಾರುತಿ ಸುಜುಕಿ ವಿಟಾರಾ ಬ್ರೆಝಾ, ಮಹೀಂದ್ರಾ ಎಕ್ಸ್ಯುವಿ300, ನಿಸ್ಸಾನ್ ಕಿಕ್ಸ್ ಕಾರುಗಳಿಗೆ ಪೈಪೋಟಿ ನೀಡಲಿರುವ ಹೊಸ ಕಾರ ಐದು ಆಸನ ಮಾದರಿಯಲ್ಲಿ ಬಿಡುಗಡೆಯಾಗಲಿದೆ. ಜೊತೆಗೆ ಹೊಸ ಕಾರಿನ ಎಂಜಿನ್ ಆಯ್ಕೆ ಆಕರ್ಷಕವಾಗಿದ್ದು, ಪರ್ಫಾಮೆನ್ಸ್ ಜೊತೆಗೆ ಇಂಧನ ದಕ್ಷತೆಗೂ ಹೆಚ್ಚಿನ ಒತ್ತು ನೀಡಲಾಗಿದೆ.
MOST READ: ಲಾಕ್ಡೌನ್ ಸಂಕಷ್ಟ: ಸೆಕೆಂಡ್ ಹ್ಯಾಂಡ್ ಕಾರು ಮಾರಾಟ ಉದ್ಯಮ ಆರಂಭಿಸಿದ ಫೋಕ್ಸ್ವ್ಯಾಗನ್
ಹೊಸ ಕಿಗರ್ ಕಾರಿನಲ್ಲಿ ರೆನಾಲ್ಟ್ ಸಂಸ್ಥೆಯು ಹೊಸದಾಗಿ ಅಭಿವೃದ್ದಿಗೊಳಿಸಲಾಗುತ್ತಿರುವ 1.0-ಲೀಟರ್ ಟರ್ಬೋ ಪೆಟ್ರೋಲ್ ಎಂಜಿನ್ ಜೋಡಣೆ ಮಾಡುವ ಸಾಧ್ಯತೆಗಳಿದ್ದು, ಇದೇ ಎಂಜಿನ್ ಅನ್ನು ಮುಂಬರುವ ದಿನಗಳಲ್ಲಿ ಬಿಡುಗಡೆಗೆ ಸಿದ್ದವಾಗುತ್ತಿರುವ ಟ್ರೈಬರ್ ಟರ್ಬೋ ಆವೃತ್ತಿಯಲ್ಲೂ ಜೋಡಣೆ ಮಾಡಲು ನಿರ್ಧರಿಸಲಾಗಿದೆ.
ಹೀಗಾಗಿ ಕಿಗರ್ ಕಾರು ಪೆಟ್ರೋಲ್ ಮಾದರಿಯಲ್ಲಿ ಮಾತ್ರವೇ ಮಾರಾಟವಾಗಲಿದ್ದು, ಪ್ರಸ್ತುತ ಮಾರುಕಟ್ಟೆಯಲ್ಲಿನ ಬೇಡಿಕೆಗೆ ಅನುಗುಣವಾಗಿ ಹಲವು ಪ್ರೀಮಿಯಂ ಸೌಲಭ್ಯಗಳನ್ನು ಹೊಂದಿರಲಿದೆ.
MOST READ: ರೂ.5 ಲಕ್ಷಕ್ಕಿಂತ ಕಡಿಮೆ ಬೆಲೆಯ ಜನಪ್ರಿಯ ಕಾರುಗಳಿವು
ಹೊಸ ಕಾರಿನ ಬೆಲೆಯು ಎಕ್ಸ್ಶೋರೂಂ ಪ್ರಕಾರ ಆರಂಭಿಕವಾಗಿ ರೂ. 5.80 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ.8 ಲಕ್ಷ ಬೆಲೆಯೊಂದಿಗೆ ಖರೀದಿಗೆ ಲಭ್ಯವಾಗುವ ಸಾಧ್ಯತೆಗಳಿದ್ದು, ಕಿಗರ್ ಮತ್ತು ನಿಸ್ಸಾನ್ ಹೊಸ ಮ್ಯಾಗ್ನೆಟ್ ಕಾರು ಕೂಡಾ ಒಂದೇ ಮಾದರಿಯ ಎಂಜಿನ್ ಪಡೆದುಕೊಳ್ಳಲಿವೆ.